Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 4:14 - ಕನ್ನಡ ಸಮಕಾಲಿಕ ಅನುವಾದ

14 ಎಲೀಷನು ಗೇಹಜಿಗೆ, “ಅವಳಿಗೋಸ್ಕರ ಮಾಡಬೇಕಾದದ್ದೇನು?” ಎಂದನು. ಅದಕ್ಕೆ ಗೇಹಜಿಯು, “ಅವಳಿಗೆ ಮಕ್ಕಳಿಲ್ಲ. ಅವಳ ಗಂಡನು ವೃದ್ಧನಾಗಿದ್ದಾನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆ ಮೇಲೆ ಎಲೀಷನು ಗೇಹಜಿಗೆ, “ನಾವು ಆಕೆಗೆ ಯಾವ ಉಪಕಾರವನ್ನು ಮಾಡಬಹುದು” ಎಂದು ಕೇಳಲು ಅವನು, “ಆಕೆಗೆ ಮಗನಿಲ್ಲ, ಗಂಡನು ಮುದುಕನಾಗಿದ್ದಾನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಆಮೇಲೆ ಎಲೀಷನು ಗೇಹಜಿಯನ್ನು, “ನಾವು ಆಕೆಗೆ ಯಾವ ಉಪಕಾರ ಮಾಡಬಹುದು?” ಎಂದು ಕೇಳಿದನು. ಅವನು, “ಆಕೆಗೆ ಮಗನಿಲ್ಲ, ಗಂಡನು ಮುದುಕನಾಗಿದ್ದಾನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆಮೇಲೆ ಎಲೀಷನು ಗೇಹಜಿಯನ್ನು - ನಾವು ಆಕೆಗೆ ಯಾವ ಉಪಕಾರವನ್ನು ಮಾಡಬಹುದು ಎಂದು ಕೇಳಲು ಅವನು - ಆಕೆಗೆ ಮಗನಿಲ್ಲ, ಗಂಡನು ಮುದುಕನಾಗಿದ್ದಾನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಎಲೀಷನು ಗೇಹಜಿಗೆ, “ನಾನು ಅವಳಿಗೆ ಏನು ಮಾಡಲಿ?” ಎಂದು ಕೇಳಿದನು. ಗೇಹಜಿಯು, “ನನಗೆ ತಿಳಿದಿದೆ! ಅವಳಿಗೆ ಮಕ್ಕಳಿಲ್ಲ, ಅವಳ ಗಂಡ ಮುದುಕನಾಗಿದ್ದಾನೆ” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 4:14
11 ತಿಳಿವುಗಳ ಹೋಲಿಕೆ  

ಆದರೆ ಎಲಿಸಬೇತಳು ಬಂಜೆಯಾದುದರಿಂದ ಅವರಿಗೆ ಮಕ್ಕಳಿರಲಿಲ್ಲ, ಇದಲ್ಲದೆ ಅವರಿಬ್ಬರೂ ಬಹಳ ವಯಸ್ಸಾದವರಾಗಿದ್ದರು.


ಆಗ ಅವಳ ಗಂಡ ಎಲ್ಕಾನನು ಅವಳಿಗೆ, “ಹನ್ನಳೇ, ಏಕೆ ಅಳುತ್ತೀ? ಏಕೆ ಊಟಮಾಡದೆ ಇದ್ದೀ? ನಿನ್ನ ಮನ ಏಕೆ ಕುಂದಿದೆ? ಹತ್ತು ಮಂದಿ ಪುತ್ರರಿಗಿಂತ ನಾನು ನಿನಗೆ ಹೆಚ್ಚಲ್ಲವೆ?” ಎಂದನು.


ಆದರೆ ಚೊರ್ಗದವನಾದ ದಾನನ ಗೋತ್ರದ ಮಾನೋಹ ಎಂಬ ಒಬ್ಬ ಮನುಷ್ಯನಿದ್ದನು. ಅವನ ಹೆಂಡತಿಯು ಮಕ್ಕಳನ್ನು ಹೆರದೆ, ಬಂಜೆಯಾಗಿದ್ದಳು.


ಆದರೆ ಆಕೆಯು ಬಂಜೆಯಾಗಿದ್ದುದರಿಂದ ಇಸಾಕನು ತನ್ನ ಹೆಂಡತಿಗೋಸ್ಕರ ಯೆಹೋವ ದೇವರನ್ನು ಬೇಡಿಕೊಂಡನು. ಯೆಹೋವ ದೇವರು ಅವನ ಬೇಡಿಕೆಯನ್ನು ಪೂರೈಸಿದರು. ಆದ್ದರಿಂದ ಅವನ ಹೆಂಡತಿ ರೆಬೆಕ್ಕಳು ಗರ್ಭಿಣಿಯಾದಳು.


ಅವನಿಗೆ ಇಬ್ಬರು ಹೆಂಡತಿಯರು. ಒಬ್ಬಳ ಹೆಸರು ಹನ್ನ, ಮತ್ತೊಬ್ಬಳ ಹೆಸರು ಪೆನಿನ್ನ. ಪೆನಿನ್ನಳಿಗೆ ಮಕ್ಕಳಿದ್ದರು. ಆದರೆ ಹನ್ನಳಿಗೆ ಮಕ್ಕಳಿರಲಿಲ್ಲ.


ರಾಹೇಲಳು ತಾನು ಯಾಕೋಬನಿಗೆ ಮಕ್ಕಳನ್ನು ಹೆರಲಿಲ್ಲ ಎಂದು ತಿಳಿದಾಗ, ಆಕೆಯು ತನ್ನ ಸಹೋದರಿಯ ಮೇಲೆ ಹೊಟ್ಟೆಕಿಚ್ಚು ಪಟ್ಟು ಯಾಕೋಬನಿಗೆ, “ನನಗೆ ಮಕ್ಕಳನ್ನು ಕೊಡು, ಇಲ್ಲದಿದ್ದರೆ ನಾನು ಸಾಯುತ್ತೇನೆ,” ಎಂದಳು.


ಅಬ್ರಹಾಮನು ಅಡ್ಡಬಿದ್ದು ನಕ್ಕು, “ನೂರು ವರ್ಷದವನಿಗೆ ಮಗುವು ಹುಟ್ಟುವುದುಂಟೇ? ತೊಂಬತ್ತು ವರ್ಷದವಳಾದ ಸಾರಳು ಹೆರುವುದುಂಟೋ?” ಎಂದು ತನ್ನ ಹೃದಯದಲ್ಲಿ ಅಂದುಕೊಂಡನು.


ಅವನು ಗೇಹಜಿಗೆ, “ಇಗೋ, ನೀನು ಕಷ್ಟಪಟ್ಟು ನಮಗೋಸ್ಕರ ಉಪಕಾರಮಾಡಿದೆ. ನಾನು ನಿನಗೆ ಮಾಡಬೇಕಾದದ್ದೇನು? ನಿನಗೋಸ್ಕರ ಅರಸನ ಸಂಗಡಲಾದರೂ, ಸೈನ್ಯಾಧಿಪತಿಯ ಸಂಗಡಲಾದರೂ ಮಾತನಾಡಬೇಕೋ ಎಂದು ಆಕೆಗೆ ಕೇಳು,” ಎಂದನು. ಅದಕ್ಕವಳು, “ನಾನು ನನ್ನ ಜನರ ಮಧ್ಯದಲ್ಲಿ ಸುಖವಾಗಿದ್ದೇನೆ,” ಎಂದಳು.


ಪ್ರವಾದಿಯು, “ಅವಳನ್ನು ಕರೆ,” ಎಂದನು. ಗೇಹಜಿಯು ಅವಳನ್ನು ಕರೆದಾಗ ಅವಳು ಬಾಗಿಲಲ್ಲೇ ನಿಂತಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು