Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 4:20 - ಕನ್ನಡ ಸಮಕಾಲಿಕ ಅನುವಾದ

20 ಸೇವಕನು ಅವನನ್ನು ಅವನ ತಾಯಿಯ ಬಳಿಗೆ ಎತ್ತಿಕೊಂಡು ಹೋದನು. ಅವನು ಮಧ್ಯಾಹ್ನದವರೆಗೂ ಅವಳ ತೊಡೆಯ ಮೇಲೆ ಇದ್ದು ಅನಂತರ ಮರಣಹೊಂದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಸೇವಕನು ಹುಡುಗನನ್ನು ಅವನ ತಾಯಿಗೆ ತಂದು ಒಪ್ಪಿಸಿದನು. ಹುಡುಗನು ಮಧ್ಯಾಹ್ನದವರೆಗೂ ತಾಯಿಯ ತೊಡೆಯ ಮೇಲೆಯೇ ಇದ್ದು ಅನಂತರ ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಸೇವಕನು ಹುಡುಗನನ್ನು ಅವನ ತಾಯಿಗೆ ತಂದೊಪ್ಪಿಸಿದನು. ಹುಡುಗನು ಮಧ್ಯಾಹ್ನದವರೆಗೂ ತಾಯಿಯ ತೊಡೆಯ ಮೇಲೆಯೇ ಇದ್ದು ಅನಂತರ ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಸೇವಕನು ಹುಡುಗನನ್ನು ಅವನ ತಾಯಿಗೆ ತಂದೊಪ್ಪಿಸಿದನು. ಹುಡುಗನು ಮಧ್ಯಾಹ್ನದವರೆಗೂ ತಾಯಿಯ ತೊಡೆಯ ಮೇಲೆಯೇ ಇದ್ದುಕೊಂಡು ಅನಂತರ ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆ ಸೇವಕನು ಬಾಲಕನನ್ನು ಅವನ ತಾಯಿಯ ಬಳಿಗೆ ಕರೆದೊಯ್ದನು. ಬಾಲಕನು ಮಧ್ಯಾಹ್ನದವರೆಗೆ ತಾಯಿಯ ತೊಡೆಯ ಮೇಲೆ ಕುಳಿತಿದ್ದನು. ನಂತರ ಅವನು ಸತ್ತುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 4:20
14 ತಿಳಿವುಗಳ ಹೋಲಿಕೆ  

ಯೇಸು ಪಟ್ಟಣ ದ್ವಾರದ ಸಮೀಪಕ್ಕೆ ಬಂದಾಗ, ಸತ್ತು ಹೋಗಿದ್ದ ಒಬ್ಬನನ್ನು ಹೊತ್ತುಕೊಂಡು ಹೋಗುತ್ತಿದ್ದರು, ಅವನು ತನ್ನ ತಾಯಿಗೆ ಒಬ್ಬನೇ ಮಗನು, ಆಕೆಯು ವಿಧವೆಯಾಗಿದ್ದಳು. ಪಟ್ಟಣದ ಬಹಳ ಜನರು ಆಕೆಯೊಂದಿಗೆ ಇದ್ದರು.


ಆಗ ಯೇಸು ಸ್ಪಷ್ಟವಾಗಿ ಅವರಿಗೆ, “ಲಾಜರನು ಸತ್ತುಹೋಗಿದ್ದಾನೆ.


ಮಾರ್ಥಳನ್ನು ಅವಳ ಸಹೋದರಿಯನ್ನು ಮತ್ತು ಲಾಜರನನ್ನು ಯೇಸು ಪ್ರೀತಿಸುತ್ತಿದ್ದರು.


ಆದ್ದರಿಂದ ಅವನ ಸಹೋದರಿಯರು, “ಸ್ವಾಮೀ, ಇಗೋ, ನೀವು ಪ್ರೀತಿಸುವವನು ಅಸ್ವಸ್ಥನಾಗಿದ್ದಾನೆ,” ಎಂದು ಯೇಸುವಿಗೆ ಹೇಳಿ ಕಳುಹಿಸಿದರು.


ಹೀಗೆ ಅನೇಕ ಹೃದಯಗಳ ಆಲೋಚನೆಗಳು ಪ್ರಕಟವಾಗುವವು. ನಿನ್ನ ಸ್ವಂತ ಪ್ರಾಣವನ್ನು ಸಹ ಖಡ್ಗವು ತಿವಿಯುವುದು” ಎಂದನು.


ತಾಯಿ ತನ್ನ ಮಗುವನ್ನು ಆದರಿಸುವ ಪ್ರಕಾರವೇ, ನಾನು ನಿಮ್ಮನ್ನು ಆದರಿಸುವೆನು. ಯೆರೂಸಲೇಮಿನ ನಿಮಿತ್ತವೇ, ಆದರಣೆ ಪಡುವಿರಿ.”


“ತನ್ನ ಗರ್ಭದ ಮಗನ ಮೇಲೆ ಕರುಣಿಸದೆ ಒಬ್ಬ ಸ್ತ್ರೀ ತನ್ನ ಎದೆಹಾಲನ್ನು ಕುಡಿಯುವ ಕೂಸನ್ನು ಮರೆತಾಳೇ? ಹೌದು, ಅವಳು ಮರೆಯಬಹುದು, ಆದರೂ ನಾನು ನಿನ್ನನ್ನು ಮರೆಯುವುದಿಲ್ಲ.


ಸ್ವಲ್ಪ ಸಮಯದ ತರುವಾಯ, ಮನೆಯ ಯಜಮಾನಿಯಾದ ಆ ಸ್ತ್ರೀಯ ಮಗನು ಅಸ್ವಸ್ಥನಾದನು. ಕೊನೆಗೆ ರೋಗವು ಹೆಚ್ಚಾಗಿದ್ದುದರಿಂದ ಉಸಿರಾಡುವುದು ನಿಂತುಹೋಯಿತು.


ಯೋಸೇಫನು ಒಂದು ಕನಸನ್ನು ಕಂಡು ತನ್ನ ಸಹೋದರರಿಗೆ ತಿಳಿಸಿದಾಗ, ಅವರು ಅವನನ್ನು ಇನ್ನೂ ಹೆಚ್ಚಾಗಿ ದ್ವೇಷಿಸಿದರು.


ಯೋಸೇಫನು ಇಸ್ರಾಯೇಲನಿಗೆ ಮುಪ್ಪಿನ ವಯಸ್ಸಿನಲ್ಲಿ ಹುಟ್ಟಿದ ಮಗನಾಗಿದ್ದುದರಿಂದ ಅವನು ತನ್ನ ಎಲ್ಲಾ ಮಕ್ಕಳಿಗಿಂತ ಅವನನ್ನು ಹೆಚ್ಚು ಪ್ರೀತಿಮಾಡಿ, ಅವನಿಗೆ ಅನೇಕ ಬಣ್ಣಗಳ ಅಂಗಿಯನ್ನು ಹೊಲಿಸಿಕೊಟ್ಟನು.


ಆಗ ದೇವರು, “ನೀನು ಪ್ರೀತಿ ಮಾಡುವ ನಿನ್ನ ಒಬ್ಬನೇ ಮಗ ಇಸಾಕನನ್ನು ಈಗ ತೆಗೆದುಕೊಂಡು, ಮೊರೀಯಾ ದೇಶಕ್ಕೆ ಹೋಗಿ, ಅಲ್ಲಿ ನಾನು ನಿನಗೆ ಹೇಳುವ ಒಂದು ಬೆಟ್ಟದ ಮೇಲೆ ಅವನನ್ನು ದಹನಬಲಿಯಾಗಿ ಅರ್ಪಿಸು,” ಎಂದರು.


ಆಗ ಅವನು ತನ್ನ ತಂದೆಗೆ, “ನನ್ನ ತಲೆ, ನನ್ನ ತಲೆ,” ಎಂದನು. ತಂದೆಯು ತನ್ನ ಸೇವಕನಿಗೆ, “ಅವನನ್ನು ಅವನ ತಾಯಿಯ ಬಳಿಗೆ ಎತ್ತಿಕೊಂಡು ಹೋಗು,” ಎಂದನು.


ಆಗ ಅವಳು ಏರಿಹೋಗಿ, ಅವನನ್ನು ದೇವರ ಮನುಷ್ಯನ ಮಂಚದ ಮೇಲೆ ಮಲಗಿಸಿ ಬಾಗಿಲು ಮುಚ್ಚಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು