Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 4:24 - ಕನ್ನಡ ಸಮಕಾಲಿಕ ಅನುವಾದ

24 ಆಗ ಅವಳು ಕತ್ತೆಯ ಮೇಲೆ ತಡಿಯನ್ನು ಹಾಕಿಸಿ ತನ್ನ ಸೇವಕನಿಗೆ, “ನಡೆಸಿಕೊಂಡು ಹೋಗು. ನಾನು ನಿನಗೆ ಹೇಳುವವರೆಗೂ, ನನಗೋಸ್ಕರ ಸವಾರಿಯನ್ನು ನಿಧಾನಗೊಳಿಸಬೇಡ,” ಎಂದು ಹೇಳಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ನಂತರ ಆಕೆಯು ಕತ್ತೆಗೆ ತಡಿ ಹಾಕಿಸಿ, ಅದರ ಮೇಲೆ ಕುಳಿತುಕೊಂಡು ಸೇವಕನಿಗೆ, “ಬೇಗ ಓಡಿಸು, ನಾನು ಅಪ್ಪಣೆಕೊಡುವವರೆಗೆ ನಿಲ್ಲಿಸಬೇಡ” ಎಂದು ಆಜ್ಞಾಪಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಆಕೆ, “ಚಿಂತೆಯಿಲ್ಲ,” ಎಂದು ಹೇಳಿ ಕತ್ತೆಗೆ ತಡಿಹಾಕಿಸಿ, ಕುಳಿತುಕೊಂಡು ಸೇವಕನಿಗೆ, “ಹೊಡೆ, ಓಡಿಸುತ್ತಾ ಹೋಗು; ನಾನು ಅಪ್ಪಣೆ ಮಾಡುವವರೆಗೂ ನಿಲ್ಲಿಸಬೇಡ,” ಎಂದು ಆಜ್ಞಾಪಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಆಕೆಯು ಚಿಂತೆಯಿಲ್ಲ ಎಂದು ಹೇಳಿ ಕತ್ತೆಗೆ ತಡಿಹಾಕಿಸಿ ಕೂತುಕೊಂಡು ಸೇವಕನಿಗೆ - ಹೊಡೆ, ಓಡಿಸುತ್ತಾ ಬಾ; ನಾನು ಅಪ್ಪಣೆ ಮಾಡುವವರೆಗೂ ನಿಲ್ಲಿಸಬೇಡ ಎಂದು ಆಜ್ಞಾಪಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ನಂತರ ಅವಳು ಒಂದು ತಡಿಯನ್ನು ಕತ್ತೆಯ ಮೇಲೆ ಹಾಕಿ ತನ್ನ ಸೇವಕನಿಗೆ, “ಬೇಗ ಬಾ! ನಾವು ವೇಗವಾಗಿ ಸವಾರಿ ಮಾಡಿಕೊಂಡು ಹೋಗೋಣ. ನಾನು ನಿನಗೆ ಹೇಳಿದಾಗ ನಿಧಾನಿಸು!” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 4:24
7 ತಿಳಿವುಗಳ ಹೋಲಿಕೆ  

ದೇವರ ಮನುಷ್ಯನು ರೊಟ್ಟಿ ತಿಂದು, ನೀರು ಕುಡಿದ ತುರುವಾಯ, ಅವನು ತಾನು ಕರೆದುತಂದ ಪ್ರವಾದಿಗೋಸ್ಕರ ಕತ್ತೆಗೆ ತಡಿ ಹಾಕಿದನು.


ಆದ್ದರಿಂದ ಅವನು ತನ್ನ ಮಕ್ಕಳಿಗೆ, “ಕತ್ತೆಗೆ ತಡಿ ಹಾಕಿರಿ,” ಎಂದನು. ಅವರು ಕತ್ತೆಗೆ ತಡಿ ಹಾಕಿದರು. ಅವನು ಅದರ ಮೇಲೆ ಏರಿ,


ಆಗ ಮೋಶೆಯು ತನ್ನ ಹೆಂಡತಿಯನ್ನೂ ಮಕ್ಕಳನ್ನೂ ಕರೆದುಕೊಂಡು ಅವರನ್ನು ಕತ್ತೆಯ ಮೇಲೆ ಕುಳ್ಳಿರಿಸಿ, ಈಜಿಪ್ಟ್ ದೇಶಕ್ಕೆ ಹಿಂದಿರುಗಿ ಬಂದನು. ಇದಲ್ಲದೆ ದೇವರ ಕೋಲನ್ನು ಕೈಯಲ್ಲಿ ತೆಗೆದುಕೊಂಡನು.


ಅಬ್ರಹಾಮನು ಬೆಳಿಗ್ಗೆ ಎದ್ದು, ತನ್ನ ಕತ್ತೆಗೆ ತಡಿ ಕಟ್ಟಿ, ತನ್ನ ಸೇವಕರಲ್ಲಿ ಇಬ್ಬರನ್ನೂ, ತನ್ನ ಮಗ ಇಸಾಕನನ್ನೂ, ದಹನಬಲಿಗಳಿಗಾಗಿ ಕಟ್ಟಿಗೆಗಳನ್ನೂ ತೆಗೆದುಕೊಂಡು, ದೇವರು ತನಗೆ ಹೇಳಿದ ಸ್ಥಳಕ್ಕೆ ಹೋದನು.


ಅದಕ್ಕೆ ಅವನು, “ಇದು ಅಮಾವಾಸ್ಯೆ ಅಲ್ಲ, ಸಬ್ಬತ್ ದಿನವೂ ಅಲ್ಲ. ನೀನು ಏಕೆ ಈ ಹೊತ್ತು ಅವನ ಬಳಿಗೆ ಹೋಗುತ್ತೀ?” ಎಂದನು. ಅದಕ್ಕವಳು, “ಅಡ್ಡಿಯೇನಿಲ್ಲ,” ಎಂದಳು.


ಕರ್ಮೆಲ್ ಬೆಟ್ಟದಲ್ಲಿರುವ ದೇವರ ಮನುಷ್ಯನ ಬಳಿಗೆ ಬಂದಳು. ಆಗ ದೇವರ ಮನುಷ್ಯನು ದೂರದಿಂದ ಅವಳು ಬರುವುದನ್ನು ಕಂಡನು. ಅವನು ತನ್ನ ಸೇವಕನಾದ ಗೇಹಜಿಗೆ, “ಇಗೋ, ಆ ಶೂನೇಮ್ಯಳು ಬರುತ್ತಿದ್ದಾಳೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು