Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 4:25 - ಕನ್ನಡ ಸಮಕಾಲಿಕ ಅನುವಾದ

25 ಕರ್ಮೆಲ್ ಬೆಟ್ಟದಲ್ಲಿರುವ ದೇವರ ಮನುಷ್ಯನ ಬಳಿಗೆ ಬಂದಳು. ಆಗ ದೇವರ ಮನುಷ್ಯನು ದೂರದಿಂದ ಅವಳು ಬರುವುದನ್ನು ಕಂಡನು. ಅವನು ತನ್ನ ಸೇವಕನಾದ ಗೇಹಜಿಗೆ, “ಇಗೋ, ಆ ಶೂನೇಮ್ಯಳು ಬರುತ್ತಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಹೀಗೆ ಆಕೆಯು ಪ್ರಯಾಣ ಮಾಡಿ ಕರ್ಮೆಲ್ ಬೆಟ್ಟದ ಮೇಲಿದ್ದ ದೇವರ ಮನುಷ್ಯನ ಬಳಿಗೆ ಬಂದಳು. ದೇವರ ಮನುಷ್ಯನು ಆಕೆಯನ್ನು ದೂರದಿಂದಲೇ ಕಂಡು ತನ್ನ ಸೇವಕನಾದ ಗೇಹಜಿಗೆ, “ಅಗೋ, ಅಲ್ಲಿ ಶೂನೇಮ್ಯಳು ಬರುತ್ತಿದ್ದಾಳೆ”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಹೀಗೆ ಆಕೆ ಪ್ರಯಾಣ ಮಾಡಿ ಕರ್ಮೆಲ್ ಬೆಟ್ಟದ ಮೇಲಿದ್ದ ದೈವಪುರುಷನ ಬಳಿಗೆ ಬಂದಳು. ಅವನು ಈಕೆಯನ್ನು ದೂರದಿಂದಲೇ ಕಂಡು ತನ್ನ ಸೇವಕನಾದ ಗೇಹಜಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಹೀಗೆ ಆಕೆಯು ಪ್ರಯಾಣಮಾಡಿ ಕರ್ಮೆಲ್‍ಬೆಟ್ಟದ ಮೇಲಿದ್ದ ದೇವರ ಮನುಷ್ಯನ ಬಳಿಗೆ ಬಂದಳು. ಅವನು ಈಕೆಯನ್ನು ದೂರದಿಂದಲೇ ಕಂಡು ತನ್ನ ಸೇವಕನಾದ ಗೇಹಜಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಆ ಸ್ತ್ರೀಯು ದೇವಮನುಷ್ಯನನ್ನು ಕಾಣಲು ಕರ್ಮೆಲ್ ಪರ್ವತಕ್ಕೆ ಹೋದಳು. ಶೂನೇಮಿನ ಸ್ತ್ರೀಯು ದೂರದಿಂದ ಬರುತ್ತಿರುವುದನ್ನು ಕಂಡ ಎಲೀಷನು ತನ್ನ ಸೇವಕನಾದ ಗೇಹಜಿಗೆ, “ನೋಡು, ಶೂನೇಮ್ಯಳಾದ ಸ್ತ್ರೀಯು ಬರುತ್ತಿದ್ದಾಳೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 4:25
10 ತಿಳಿವುಗಳ ಹೋಲಿಕೆ  

ಅವನು ಆ ಸ್ಥಳವನ್ನು ಬಿಟ್ಟು ಕರ್ಮೆಲ್ ಬೆಟ್ಟಕ್ಕೆ ಹೋದನು. ಅಲ್ಲಿಂದ ಸಮಾರ್ಯಕ್ಕೆ ಇಳಿದು ಹೋದನು.


ಅದು ಸಮೃದ್ಧಿಯಾಗಿ ಅರಳಿ, ಆನಂದ ಧ್ವನಿ ಎತ್ತಿ ಉಲ್ಲಾಸಿಸುವುದು. ಲೆಬನೋನಿನ ಘನತೆಯು ಮತ್ತು ಕರ್ಮೆಲ್, ಶಾರೋನಿನ ಗೌರವವು ಅದಕ್ಕೆ ಕೊಡಲಾಗುವುದು. ಅವರು ಯೆಹೋವ ದೇವರ ಮಹಿಮೆಯನ್ನು ಮತ್ತು ನಮ್ಮ ದೇವರ ಘನತೆಯನ್ನು ಕಾಣುವರು.


ಅಹಾಬನು ತಿಂದು, ಕುಡಿಯುವುದಕ್ಕೆ ಹೋದನು. ಎಲೀಯನು ಕರ್ಮೆಲಿನ ಶಿಖರವನ್ನು ಏರಿ, ನೆಲದ ಮೇಲೆ ಬಿದ್ದು, ತನ್ನ ಮೊಣಕಾಲಿನ ಮಧ್ಯೆ ತಲೆಯನ್ನಿಟ್ಟನು.


ಆದ್ದರಿಂದ ನೀನು ಕರ್ಮೆಲು ಬೆಟ್ಟದ ಬಳಿಯಲ್ಲಿ ಸಮಸ್ತ ಇಸ್ರಾಯೇಲನ್ನೂ, ಬಾಳನ ನಾನೂರ ಐವತ್ತು ಮಂದಿ ಪ್ರವಾದಿಗಳನ್ನೂ, ಈಜೆಬೆಲಳ ಮೇಜಿನ ಹತ್ತಿರ ಭೋಜನಮಾಡುವ ಅಶೇರನ ನಾನೂರು ಮಂದಿ ಪ್ರವಾದಿಗಳನ್ನೂ ನನ್ನ ಬಳಿಗೆ ಕೂಡಿಸು,” ಎಂದನು.


ಆಗ ಅವಳು ಕತ್ತೆಯ ಮೇಲೆ ತಡಿಯನ್ನು ಹಾಕಿಸಿ ತನ್ನ ಸೇವಕನಿಗೆ, “ನಡೆಸಿಕೊಂಡು ಹೋಗು. ನಾನು ನಿನಗೆ ಹೇಳುವವರೆಗೂ, ನನಗೋಸ್ಕರ ಸವಾರಿಯನ್ನು ನಿಧಾನಗೊಳಿಸಬೇಡ,” ಎಂದು ಹೇಳಿ,


ನೀನು ಅವಳನ್ನು ಎದುರುಗೊಳ್ಳಲು ಓಡಿಹೋಗಿ, ಅವಳಿಗೆ, ‘ನಿನಗೂ, ನಿನ್ನ ಗಂಡನಿಗೂ ಮಗನಿಗೂ ಕ್ಷೇಮವೇ? ಎಂದು ಕೇಳು,’ ” ಎಂದನು. ಅವಳು, “ಕ್ಷೇಮ” ಎಂದಳು.


ಅವಳು ಬೆಟ್ಟಕ್ಕೆ ದೇವರ ಮನುಷ್ಯನ ಬಳಿಗೆ ಬಂದು, ಅವನ ಪಾದಗಳನ್ನು ಹಿಡಿದಳು. ಆದರೆ ಅವಳನ್ನು ತಳ್ಳಿ ಹಾಕಲು ಗೇಹಜಿಯು ಹತ್ತಿರ ಬಂದದ್ದರಿಂದ ದೇವರ ಮನುಷ್ಯನು, “ಅವಳನ್ನು ಬಿಡು. ಏಕೆಂದರೆ ಅವಳ ಹೃದಯವು ಬಹಳ ನೋವಿನಿಂದ ತುಂಬಿದೆ. ಯೆಹೋವ ದೇವರು ಅದನ್ನು ನನಗೆ ತಿಳಿಸದೆ ಮರೆಮಾಡಿದ್ದಾರೆ,” ಎಂದನು.


ಆಗ ಅರಸನು ಒಬ್ಬ ಪ್ರಧಾನನನ್ನು, ಅವನ ಐವತ್ತು ಮಂದಿ ಸಿಪಾಯಿಗಳೊಡನೆ ಎಲೀಯನ ಬಳಿಗೆ ಕಳುಹಿಸಿದನು. ಪ್ರಧಾನನು ಅವನ ಬಳಿಗೆ ಹೋದಾಗ, ಇಗೋ, ಎಲೀಯನು ಬೆಟ್ಟದ ತುದಿಯಲ್ಲಿ ಕುಳಿತಿದ್ದನು. ಆಗ ಅವನು ಎಲೀಯನಿಗೆ, “ದೇವರ ಮನುಷ್ಯನೇ, ‘ಇಳಿದು ಬಾ,’ ಎಂದು ಅರಸನು ಹೇಳುತ್ತಾನೆ,” ಎಂದನು.


ದೇವರ ಮನುಷ್ಯನಾದ ಎಲೀಷನ ಸೇವಕನಾಗಿರುವ ಗೇಹಜಿಯು, “ನನ್ನ ಯಜಮಾನನು ಈ ಅರಾಮ್ಯನಾದ ನಾಮಾನನು ತೆಗೆದುಕೊಂಡು ಬಂದದ್ದನ್ನು ಅವನ ಕೈಯಿಂದ ತೆಗೆದುಕೊಳ್ಳದೆ ಸುಮ್ಮನೆ ಕಳುಹಿಸಿದ್ದಾನೆ. ಆದರೆ ಯೆಹೋವ ದೇವರ ಜೀವದಾಣೆ, ನಾನು ಅವನ ಹಿಂದೆ ಓಡಿಹೋಗಿ, ಅವನ ಕೈಯಿಂದ ಏನಾದರೂ ತೆಗೆದುಕೊಳ್ಳುವೆನು,” ಅಂದುಕೊಂಡನು.


ಅರಸನು ದೇವರ ಮನುಷ್ಯನ ಸೇವಕನಾದ ಗೇಹಜಿಯ ಸಂಗಡ ಮಾತನಾಡಿ, “ಎಲೀಷನು ಮಾಡಿದ ಎಲ್ಲಾ ದೊಡ್ಡ ಕ್ರಿಯೆಗಳನ್ನು ನನಗೆ ವಿವರಿಸು,” ಎಂದು ಅವನಿಗೆ ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು