Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 4:29 - ಕನ್ನಡ ಸಮಕಾಲಿಕ ಅನುವಾದ

29 ಎಲೀಷನು ಗೇಹಜಿಗೆ, “ನೀನು ನಿನ್ನ ಸಡಿಲವಾದ ಉಡುಪನ್ನು ನಡುವಿಗೆ ಕಟ್ಟಿಕೊಂಡು, ನನ್ನ ಕೋಲನ್ನು ನಿನ್ನ ಕೈಯಲ್ಲಿ ಹಿಡಿದುಕೊಂಡು ಹೋಗು. ನಿನಗೆ ಯಾವನಾದರೂ ಎದುರುಗೊಂಡರೆ, ಅವನನ್ನು ವಂದಿಸಬೇಡ; ಯಾವನಾದರೂ ನಿನ್ನನ್ನು ವಂದಿಸಿದರೆ, ಅವನಿಗೆ ಉತ್ತರ ಹೇಳಬೇಡ; ನನ್ನ ಕೋಲನ್ನು ಆ ಹುಡುಗನ ಮುಖದ ಮೇಲೆ ಹಾಕು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಆಗ ಎಲೀಷನು ಗೇಹಜಿಗೆ, “ನೀನು ನಡುಕಟ್ಟಿಕೊಂಡು, ನನ್ನ ಕೋಲನ್ನು ತೆಗೆದುಕೊಂಡು ಹೋಗಿ ಹುಡುಗನ ಮುಖದ ಮೇಲಿಡು, ಹೋಗುವಾಗ ದಾರಿಯಲ್ಲಿ ಯಾರನ್ನೂ ವಂದಿಸಬೇಡ, ಯಾರ ಅವರ ವಂದನೆಯನ್ನು ಸ್ವೀಕರಿಸಬೇಡ” ಎಂದು ಹೇಳಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಆಗ ಎಲೀಷನು ಗೇಹಜಿಗೆ, “ನೀನು ಹೋಗಿ, ನಡುಕಟ್ಟಿಕೊಂಡು, ನನ್ನ ಕೋಲನ್ನು ತೆಗೆದುಕೊಂಡು ಹೋಗಿ, ಆ ಹುಡುಗನ ಮುಖದ ಮೇಲಿಡು; ಹೋಗುವಾಗ ದಾರಿಯಲ್ಲಿ ಯಾರನ್ನೂ ವಂದಿಸಬೇಡ; ಯಾವ ವಂದನೆಯನ್ನೂ ಸ್ವೀಕರಿಸಬೇಡ," ಎಂದು ಹೇಳಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಆಗ ಎಲೀಷನು ಗೇಹಜಿಗೆ - ನೀನು ನಡು ಕಟ್ಟಿಕೊಂಡು ನನ್ನ ಕೋಲನ್ನು ತೆಗೆದುಕೊಂಡು ಹೋಗಿ ಹುಡುಗನ ಮೋರೆಯ ಮೇಲಿಡು; ಹೋಗುವಾಗ ದಾರಿಯಲ್ಲಿ ಯಾರನ್ನೂ ವಂದಿಸಬೇಡ; ಅವರ ವಂದನೆಯನ್ನೂ ಸ್ವೀಕರಿಸಬೇಡ ಎಂದು ಹೇಳಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಎಲೀಷನು ಗೇಹಜಿಗೆ, “ಹೊರಡಲು ಸಿದ್ಧನಾಗು. ನನ್ನ ಕೋಲನ್ನು ತೆಗೆದುಕೊಂಡು ಹೋಗು. ಯಾರ ಹತ್ತಿರವಾಗಲಿ ಮಾತನಾಡಲು ನಿಲ್ಲದಿರು! ನೀನು ಯಾರನ್ನಾದರೂ ಸಂಧಿಸಿದರೆ ಅವನಿಗೆ, ‘ಕ್ಷೇಮವಾಗಿರುವೆಯಾ?’ ಎಂದು ಕೇಳದಿರು. ಯಾರಾದರೂ ನಿನ್ನನ್ನು ‘ಕ್ಷೇಮವಾಗಿರುವೆಯಾ?’ ಎಂದು ಕೇಳಿದರೆ, ಅವನಿಗೆ ಉತ್ತರಿಸದಿರು. ಹೀಗೆ ನೀನು ಹೋಗಿ, ನನ್ನ ಕೋಲನ್ನು ಮಗುವಿನ ಮುಖದ ಮೇಲೆ ಇಡು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 4:29
15 ತಿಳಿವುಗಳ ಹೋಲಿಕೆ  

ಎಲೀಯನಿಂದ ಬಿದ್ದ ಹೊದಿಕೆಯನ್ನು ತೆಗೆದುಕೊಂಡು ನೀರನ್ನು ಹೊಡೆದು, “ಎಲೀಯನ ದೇವರಾದ ಯೆಹೋವ ದೇವರು ಎಲ್ಲಿ?” ಎಂದನು. ಅವನು ಹಾಗೆ ನೀರನ್ನು ಹೊಡೆದ ತರುವಾಯ, ಅದು ಬಲಗಡೆಗೂ ಎಡಗಡೆಗೂ ವಿಭಾಗವಾದದ್ದರಿಂದ, ಎಲೀಷನು ದಾಟಿಹೋದನು.


ಯೆಹೋವ ದೇವರ ಕೈ ಎಲೀಯನ ಮೇಲೆ ಇದ್ದುದರಿಂದ ಅವನು ತನ್ನ ಸಡಿಲವಾದ ಬಟ್ಟೆಗಳನ್ನು ನಡುಕಟ್ಟಿಕೊಂಡು ಇಜ್ರೆಯೇಲ್ ಪಟ್ಟಣದವರೆಗೂ ಅಹಾಬನಿಗೆ ಮುಂದಾಗಿ ಓಡಿದನು.


ನೀನು ನಿನ್ನ ಕೋಲನ್ನು ಎತ್ತಿ, ನಿನ್ನ ಕೈಯನ್ನು ಸಮುದ್ರದ ಮೇಲೆ ಚಾಚಿ, ಅದನ್ನು ವಿಭಾಗಿಸು. ಆಗ ಇಸ್ರಾಯೇಲರು ಸಮುದ್ರದ ಮಧ್ಯದಲ್ಲಿ ಒಣಗಿದ ನೆಲದ ಮೇಲೆ ಹೋಗುವರು.


ಹಣದ ಚೀಲವನ್ನಾಗಲಿ, ಪ್ರಯಾಣದ ಚೀಲವನ್ನಾಗಲಿ, ಪಾದರಕ್ಷೆಗಳನ್ನಾಗಲಿ ತೆಗೆದುಕೊಂಡು ಹೋಗಬೇಡಿರಿ; ದಾರಿಯಲ್ಲಿ ಯಾರನ್ನೂ ಕುಶಲ ವಿಚಾರ ಮಾಡಿಕೊಂಡಿರಬೇಡಿರಿ.


ಪ್ರವಾದಿಯಾದ ಎಲೀಷನು ಪ್ರವಾದಿಗಳ ಮಂಡಳಿಯಲ್ಲಿ ಒಬ್ಬನನ್ನು ಕರೆದು ಅವನಿಗೆ, “ನಡುವನ್ನು ಕಟ್ಟಿಕೊಂಡು ಈ ಎಣ್ಣೆಯ ಪಾತ್ರೆಯನ್ನು ನಿನ್ನ ಕೈಯಲ್ಲಿ ತೆಗೆದುಕೊಂಡು ಗಿಲ್ಯಾದಿನ ರಾಮೋತಿಗೆ ಹೋಗು.


ಹೀಗೆ ಪೌಲನನ್ನು ಮುಟ್ಟಿದ ಕೈವಸ್ತ್ರಗಳನ್ನೂ ಉಡುಪುಗಳನ್ನೂ ತೆಗೆದುಕೊಂಡುಹೋಗಿ ರೋಗಿಗಳಿಗೆ ಮುಟ್ಟಿಸಿದಾಗ ಅವರು ರೋಗಗಳಿಂದ ವಾಸಿಯಾಗುತ್ತಿದ್ದರು ಹಾಗೂ ಅವರಲ್ಲಿಯ ದುರಾತ್ಮಗಳು ಬಿಟ್ಟು ಹೋಗುತ್ತಿದ್ದವು.


ಯೇಸುವಿನ ನಾಮದಲ್ಲಿಟ್ಟ ವಿಶ್ವಾಸದಿಂದಲೇ ನೀವು ಕಂಡು ತಿಳಿದಿರುವ ಈ ಮನುಷ್ಯನು ಬಲಹೊಂದಿದ್ದಾನೆ. ಯೇಸುವಿನ ನಾಮವೂ ಅವರ ಮೂಲಕವಾಗಿ ಬರುವ ನಂಬಿಕೆಯೂ ಇವನಿಗೆ ಸಂಪೂರ್ಣ ಸ್ವಸ್ಥತೆಯನ್ನು ತಂದುಕೊಟ್ಟಿದೆ. ನೀವೆಲ್ಲರೂ ಇದನ್ನು ನೋಡಿದ್ದೀರಿ.


ಆದರೆ ಎಲೀಯನು ತನ್ನ ಹೊದಿಕೆಯನ್ನು ತೆಗೆದು ಮಡಿಸಿಕೊಂಡು, ನೀರನ್ನು ಹೊಡೆದನು. ಆಗ ಆ ನೀರು ಈ ಕಡೆ, ಆ ಕಡೆ ವಿಭಾಗವಾದುದರಿಂದ ಅವರಿಬ್ಬರೂ ಒಣಭೂಮಿಯ ಮೇಲೆ ದಾಟಿಹೋದರು.


ಆದರೆ ಈ ಕೋಲನ್ನು ನಿನ್ನ ಕೈಯಲ್ಲಿ ತೆಗೆದುಕೊಳ್ಳಬೇಕು. ಇದರಿಂದಲೇ ನೀನು ಸೂಚಕಕಾರ್ಯಗಳನ್ನು ಮಾಡುವೆ,” ಎಂದರು.


ಆದ್ದರಿಂದ, ನೀವು ನಿಮ್ಮ ಮನಸ್ಸನ್ನು ಸಿದ್ಧಮಾಡಿಕೊಂಡು, ಸ್ವಸ್ಥಚಿತ್ತರಾಗಿದ್ದು ಕ್ರಿಸ್ತ ಯೇಸು ಪ್ರತ್ಯಕ್ಷರಾಗುವಾಗ ನಿಮಗೆ ದೊರಕುವ ಕೃಪೆಯ ಮೇಲೆ ನಿಮ್ಮ ನಿರೀಕ್ಷೆಯನ್ನು ಅಂತ್ಯದವರೆಗೆ ಇಡಿರಿ.


ಸತ್ಯವೆಂಬ ನಡುಕಟ್ಟನ್ನು ಕಟ್ಟಿಕೊಂಡು, ನೀತಿಯೆಂಬ ಕವಚವನ್ನು ಧರಿಸಿಕೊಳ್ಳಿರಿ.


ಆಗ ಎಲೀಷನು ತನ್ನ ಸೇವಕನಾದ ಗೇಹಜಿಗೆ, “ನೀನು ಶೂನೇಮ್ಯಳನ್ನು ಕರೆ,” ಎಂದನು. ಅವನು ಅವಳನ್ನು ಕರೆದದ್ದರಿಂದ ಅವಳು ಎಲೀಷನ ಮುಂದೆ ಬಂದು ನಿಂತಳು.


ಆಕೆಯು ನಡುಕಟ್ಟಿ ಆಸಕ್ತಿಯಿಂದ ಕೆಲಸ ಮಾಡುತ್ತಾಳೆ. ತನ್ನ ಶಕ್ತಿಯುತ ತೋಳುಗಳಿಂದ ಕೆಲಸ ಮಾಡುತ್ತಾಳೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು