Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 4:33 - ಕನ್ನಡ ಸಮಕಾಲಿಕ ಅನುವಾದ

33 ಅವನು ಒಳಗೆ ಪ್ರವೇಶಿಸಿ, ಯಾರೂ ಒಳಗೆ ಬಾರದಂತೆ ಬಾಗಿಲು ಮುಚ್ಚಿಕೊಂಡು, ಯೆಹೋವ ದೇವರನ್ನು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಎಲೀಷನು ಒಳಗೆ ಹೋಗಿ ಕೋಣೆಯ ಬಾಗಿಲನ್ನು ಮುಚ್ಚಿಕೊಂಡು ಯೆಹೋವನನ್ನು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಯಾರೂ ಒಳಗೆ ಬಾರದಂತೆ ಆ ಕೋಣೆಯ ಬಾಗಿಲನ್ನು ಮುಚ್ಚಿಕೊಂಡು ಸರ್ವೇಶ್ವರನನ್ನು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಯಾರೂ ಒಳಗೆ ಬಾರದಂತೆ ಆ ಕೋಣೆಯ ಬಾಗಲನ್ನು ಮುಚ್ಚಿಕೊಂಡು ಯೆಹೋವನನ್ನು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಎಲೀಷನು ಕೊಠಡಿಯಲ್ಲಿ ಪ್ರವೇಶಿಸಿ ಬಾಗಿಲನ್ನು ಮುಚ್ಚಿದನು. ಈಗ ಎಲೀಷ ಮತ್ತು ಮಗು ಮಾತ್ರ ಕೊಠಡಿಯಲ್ಲಿದ್ದರು. ನಂತರ ಎಲೀಷನು ಯೆಹೋವನಲ್ಲಿ ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 4:33
12 ತಿಳಿವುಗಳ ಹೋಲಿಕೆ  

ಆದರೆ ನೀನು ಪ್ರಾರ್ಥನೆ ಮಾಡುವಾಗ, ನಿನ್ನ ಕೋಣೆಯೊಳಗೆ ಹೋಗಿ, ಬಾಗಿಲನ್ನು ಮುಚ್ಚಿ ಅದೃಶ್ಯವಾಗಿರುವ ನಿನ್ನ ತಂದೆಗೆ ಪ್ರಾರ್ಥನೆ ಸಲ್ಲಿಸು. ಆಗ ರಹಸ್ಯದಲ್ಲಿ ನಡೆಯುವುದನ್ನು ಕಾಣುವ ನಿನ್ನ ತಂದೆ ನಿನಗೆ ಪ್ರತಿಫಲ ಕೊಡುವರು.


ನೀನು ಒಳಗೆ ಪ್ರವೇಶಿಸಿ, ನೀನೂ, ನಿನ್ನ ಪುತ್ರರೂ ಬಾಗಿಲು ಮುಚ್ಚಿಕೊಂಡು, ಆ ಪಾತ್ರೆಗಳಲ್ಲೆಲ್ಲಾ ಎಣ್ಣೆ ಹೊಯ್ದು ತುಂಬಿದ್ದನ್ನು ಒಂದು ಕಡೆ ಇಡು,” ಎಂದನು.


ಪೇತ್ರನು ಅವರೆಲ್ಲರನ್ನು ಕೋಣೆಯಿಂದ ಹೊರಗೆ ಕಳುಹಿಸಿ, ಮೊಣಕಾಲೂರಿ ಪ್ರಾರ್ಥನೆಮಾಡಿ ಮೃತ ಸ್ತ್ರೀಯ ಕಡೆಗೆ ತಿರುಗಿಕೊಂಡು, “ತಬಿಥಾ, ಏಳು,” ಎಂದು ಹೇಳಿದನು. ಆಕೆ ತನ್ನ ಕಣ್ಣು ತೆರೆದು ಪೇತ್ರನನ್ನು ಕಂಡು ಎದ್ದು ಕುಳಿತುಕೊಂಡಳು.


ಯೇಸು ಯಾಯೀರನ ಮನೆಯೊಳಕ್ಕೆ ಬಂದಾಗ ಪೇತ್ರ, ಯಾಕೋಬ ಯೋಹಾನ ಮತ್ತು ಹುಡುಗಿಯ ತಂದೆತಾಯಿಗಳ ಹೊರತು ಯಾರನ್ನೂ ಒಳಗೆ ಬರಗೊಡಲಿಲ್ಲ.


ಅವರು ಸಮಾರ್ಯಕ್ಕೆ ಬಂದಾಗ, ಎಲೀಷನು, “ಯೆಹೋವ ದೇವರೇ, ಇವರು ಕಾಣುವಂತೆ ಇವರ ಕಣ್ಣುಗಳನ್ನು ತೆರೆಯಿರಿ,” ಎಂದನು. ಆಗ ಯೆಹೋವ ದೇವರು ಅವರ ಕಣ್ಣುಗಳನ್ನು ತೆರೆದರು. ಅವರು ನೋಡಿದಾಗ ಸಮಾರ್ಯದ ಮಧ್ಯದಲ್ಲಿದ್ದರು.


ಆಗ ನಾಮಾನನು ಕೋಪಗೊಂಡು ಹೊರಟುಹೋಗಿ, “ಅವನು ನಿಶ್ಚಯವಾಗಿ ನನ್ನ ಬಳಿಗೆ ಹೊರಟುಬಂದು, ತನ್ನ ದೇವರಾದ ಯೆಹೋವ ದೇವರ ಹೆಸರನ್ನು ಕರೆದು, ನನ್ನ ಚರ್ಮದ ಮೇಲೆ ತನ್ನ ಕೈಯನ್ನಾಡಿಸಿ, ಕುಷ್ಠರೋಗವನ್ನು ವಾಸಿಮಾಡುವನೆಂದು, ನಾನು ನೆನಸಿದೆ.


ಎಲೀಷನು ಆ ಮನೆಯನ್ನು ಮುಟ್ಟಿದಾಗ, ಸತ್ತ ಹುಡುಗನನ್ನು ತನ್ನ ಮಂಚದ ಮೇಲೆ ಇಟ್ಟಿರುವುದನ್ನು ಕಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು