2 ಅರಸುಗಳು 4:39 - ಕನ್ನಡ ಸಮಕಾಲಿಕ ಅನುವಾದ39 ಅವರಲ್ಲಿ ಒಬ್ಬನು ಪಲ್ಯವನ್ನು ತರಲು ಅಡವಿಗೆ ಹೋಗಿ, ಅಡವಿಯ ಬಳ್ಳಿಯನ್ನು ಕಂಡು, ಅಡವಿಯ ಕಾಯಿಗಳನ್ನು ತನ್ನ ಉಡಿಯ ತುಂಬ ಕೂಡಿಸಿಕೊಂಡು ಬಂದು, ಅವುಗಳನ್ನು ಕೊಯ್ದು ಗಡಿಗೆಯಲ್ಲಿ ಹಾಕಿದನು. ಅವು ಏನೆಂದು ಯಾರಿಗೂ ತಿಳಿದಿರಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201939 ಒಬ್ಬನು ಯಾವುದಾದರೊಂದು ತರಕಾರಿ ಸಿಕ್ಕೀತೆಂದು ಕಾಡಿಗೆ ಹೋಗಿ ಅಲ್ಲಿ ಒಂದು ಕಾಡುಬಳ್ಳಿಯನ್ನು ಕಂಡು ಅದನ್ನು ಕಿತ್ತು ಉಡಿಯಲ್ಲಿ ತುಂಬಿಕೊಂಡು, ಅದರ ಕಾಯಿಗಳನ್ನು ಕಿತ್ತುಕೊಂಡು ಬಂದು ತುಂಡು ತುಂಡು ಮಾಡಿ ಆ ಪಾತ್ರೆಯೊಳಗೆ ಹಾಕಿದನು. ಅದು ಎಂಥ ಕಾಯಿಯೆಂಬುದು ಯಾರಿಗೂ ಗೊತ್ತಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)39 ಅವರಲ್ಲಿ ಒಬ್ಬನು ಯಾವುದಾದರೊಂದು ತರಕಾರಿ ಸಿಕ್ಕೀತೆಂದು ಕಾಡಿಗೆ ಹೋಗಿ, ಅಲ್ಲಿ ಒಂದು ಕಾಡುಬಳ್ಳಿಯನ್ನು ಕಂಡು, ಉಡಿತುಂಬಾ ಅದರ ಕಾಯಿಗಳನ್ನು ಕಿತ್ತುಕೊಂಡುಬಂದು, ತುಂಡು ತುಂಡುಮಾಡಿ ಆ ಪಾತ್ರೆಯೊಳಗೆ ಹಾಕಿದನು. ಅದು ಎಂಥ ಕಾಯಿಯೆಂಬುದು ಯಾರಿಗೂ ಗೊತ್ತಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)39 ಒಬ್ಬನು ಯಾವದಾದರೊಂದು ಪಲ್ಯ ಸಿಕ್ಕೀತೆಂದು ಕಾಡಿಗೆ ಹೋಗಿ ಅಲ್ಲಿ ಒಂದು ಕಾಡುಬಳ್ಳಿಯನ್ನು ಕಂಡು ಉಡಿತುಂಬಾ ಅದರ ಕಾಯಿಗಳನ್ನು ಕಿತ್ತುಕೊಂಡು ಬಂದು ತುಂಡುತುಂಡುಮಾಡಿ ಆ ಪಾತ್ರೆಯೊಳಗೆ ಹಾಕಿದನು. ಅದು ಎಂಥ ಕಾಯಿಯೆಂಬದು ಯಾರಿಗೂ ಗೊತ್ತಿರಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್39 ಒಬ್ಬನು ಅಡಿಗೆಯ ಸೊಪ್ಪಿಗಾಗಿ ತೋಟಕ್ಕೆ ಹೋದನು. ಅಲ್ಲಿ ಅವನು ಒಂದು ಕಾಡುಬಳ್ಳಿಯಿಂದ ಕಾಡುಸೋರೆ ಕಾಯಿಗಳನ್ನು ಕಿತ್ತುಕೊಂಡು, ಅವುಗಳನ್ನು ತನ್ನ ಮೇಲಂಗಿಯ ಜೇಬಿನಲ್ಲಿ ತುಂಬಿಸಿಕೊಂಡನು. ನಂತರ ಅವನು ಬಂದು, ಆ ಕಾಡುಸೋರೆ ಕಾಯಿಗಳನ್ನು ಪಾತ್ರೆಯಲ್ಲಿ ಹಾಕಿದನು. ಆದರೆ ಪ್ರವಾದಿಗಳ ಗುಂಪಿಗೆ ಅವು ಯಾವ ಜಾತಿಯ ಸೋರೆಕಾಯಿಗಳೆಂಬುದು ತಿಳಿದಿರಲಿಲ್ಲ. ಅಧ್ಯಾಯವನ್ನು ನೋಡಿ |