2 ಅರಸುಗಳು 4:42 - ಕನ್ನಡ ಸಮಕಾಲಿಕ ಅನುವಾದ42 ಬಾಳ್ ಶಾಲಿಷಾ ಊರಿನಿಂದ ಒಬ್ಬನು ದೇವರ ಮನುಷ್ಯನಿಗೆ ಪ್ರಥಮ ಫಲವಾದ ಜವೆಗೋಧಿಯ ಇಪ್ಪತ್ತು ರೊಟ್ಟಿಗಳನ್ನೂ ಒಂದು ಚೀಲ ತುಂಬಿದ ತೆನೆಗಳನ್ನೂ ತೆಗೆದುಕೊಂಡು ಬಂದನು. ಆಗ ಎಲೀಷನು, “ಜನರಿಗೆ ಕೊಡು ಅವರು ತಿನ್ನಲಿ,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201942 ಒಂದು ದಿನ ಬಾಳ್ ಷಾಲಿಷಾ ಊರಿನ ಒಬ್ಬ ಮನುಷ್ಯನು ಇಪ್ಪತ್ತು ಜವೆಗೋದಿಯ ರೊಟ್ಟಿಗಳನ್ನೂ, ಒಂದು ಚೀಲದ ತುಂಬಾ ಹಸೀ ತೆನೆಗಳನ್ನೂ, ಪ್ರಥಮಫಲದ ಕಾಣಿಕೆಯಾಗಿ ತೆಗೆದುಕೊಂಡು ಬಂದು ದೇವರ ಮನುಷ್ಯನಿಗೆ ಸಮರ್ಪಿಸಿದನು. ಎಲೀಷನು ತನ್ನ ಸೇವಕನಿಗೆ, “ಇದನ್ನು ಜನರಿಗೆ ಕೊಡು ಅವರು ಊಟಮಾಡಲಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)42 ಒಂದು ದಿನ ಬಾಳ್‍ಷಾಲಿಷಾ ಊರಿನ ಒಬ್ಬ ವ್ಯಕ್ತಿ, ಇಪ್ಪತ್ತು ಜವೆಗೋದಿಯ ರೊಟ್ಟಿಗಳನ್ನೂ ಒಂದು ಚೀಲ ತುಂಬಾ ಹಸೀ ತೆನೆಗಳನ್ನೂ ಪ್ರಥಮಫಲದ ಕಾಣಿಕೆಯಾಗಿ ತೆಗೆದುಕೊಂಡು ಬಂದು ದೈವಪುರುಷನಿಗೆ ಸಮರ್ಪಿಸಿದನು. ಎಲೀಷನು ತನ್ನ ಸೇವಕನಿಗೆ, “ಇದನ್ನು ಜನರಿಗೆ ಕೊಡು; ಅವರು ಊಟಮಾಡಲಿ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)42 ಒಂದು ದಿವಸ ಬಾಳ್‍ಷಾಲಿಷಾ ಊರಿನ ಒಬ್ಬ ಮನುಷ್ಯನು ಇಪ್ಪತ್ತು ಜವೆಗೋದಿಯ ರೊಟ್ಟಿಗಳನ್ನೂ ಒಂದು ಚೀಲತುಂಬಾ ಹಸೀ ತೆನೆಗಳನ್ನೂ ಪ್ರಥಮ ಫಲದ ಕಾಣಿಕೆಯಾಗಿ ತೆಗೆದುಕೊಂಡು ಬಂದು ದೇವರ ಮನುಷ್ಯನಿಗೆ ಸಮರ್ಪಿಸಿದನು. ಎಲೀಷನು ತನ್ನ ಸೇವಕನಿಗೆ - ಇದನ್ನು ಜನರಿಗೆ ಕೊಡು; ಅವರು ಊಟಮಾಡಲಿ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್42 ಬಾಳ್‌ಷಾಲಿಷಾದಿಂದ ಒಬ್ಬ ಮನುಷ್ಯನು ಪ್ರಥಮ ಸುಗ್ಗಿಯ ರೊಟ್ಟಿಗಳನ್ನು ದೇವಮನುಷ್ಯನಿಗೆ (ಎಲೀಷನಿಗೆ) ತೆಗೆದುಕೊಂಡು ಬಂದನು. ಇವನು ಇಪ್ಪತ್ತು ಜವೆಗೋಧಿ ರೊಟ್ಟಿಗಳನ್ನೂ ಒಂದು ಚೀಲದಲ್ಲಿ ಹಸೀ ತೆನೆಗಳನ್ನೂ ತಂದನು. ಆಗ ಎಲೀಷನು, “ಜನರಿಗೆ ಈ ಆಹಾರವನ್ನು ಕೊಡು, ಅವರು ತಿನ್ನಲಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |