Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 4:8 - ಕನ್ನಡ ಸಮಕಾಲಿಕ ಅನುವಾದ

8 ಒಂದು ದಿನ ಎಲೀಷನು ಶೂನೇಮಿಗೆ ಹೋದನು. ಅಲ್ಲಿ ಒಬ್ಬಳು ಶ್ರೀಮಂತ ಸ್ತ್ರೀಯು ಇದ್ದಳು. ಅವಳು ಅವನನ್ನು ಊಟ ಮಾಡಲು ಬಲವಂತ ಮಾಡಿದಳು. ಹಾಗೆಯೇ ಅವನು ಆ ಮಾರ್ಗವಾಗಿ ಹೋಗುವಾಗಲೆಲ್ಲಾ, ಅಲ್ಲಿ ಊಟ ಮಾಡಲು ಹೋಗುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಒಂದು ಸಾರಿ ಎಲೀಷನು ಶೂನೇಮಿಗೆ ಹೋದನು. ಅಲ್ಲಿ ಒಬ್ಬ ಕುಲೀನ ಸ್ತ್ರೀಯು ಅವನನ್ನು ತನ್ನ ಮನೆಯಲ್ಲಿ ಊಟಮಾಡಬೇಕೆಂದು ಒತ್ತಾಯಪಡಿಸಿದಳು. ಅಂದಿನಿಂದ ಅವನು ಆ ಮಾರ್ಗದಿಂದ ಹೋಗುವಾಗೆಲ್ಲಾ ಆ ಮನೆಯಲ್ಲೇ ಊಟಮಾಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಒಂದು ಸಾರಿ ಎಲೀಷನು ಶೂನೇಮಿಗೆ ಹೋದನು. ಅಲ್ಲಿ ಒಬ್ಬ ಶ್ರೀಮಂತ ಮಹಿಳೆ ಇದ್ದಳು. ಆಕೆ ಅವನನ್ನು ತನ್ನ ಮನೆಯಲ್ಲಿ ಊಟಮಾಡಬೇಕೆಂದು ಒತ್ತಾಯಪಡಿಸಿದಳು. ಅಂದಿನಿಂದ ಅವನು ಆ ಮಾರ್ಗವಾಗಿ ಹೋಗುವಾಗಲೆಲ್ಲಾ ಆ ಮನೆಯಲ್ಲೇ ಊಟಮಾಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಒಂದು ಸಾರಿ ಎಲೀಷನು ಶೂನೇವಿುಗೆ ಹೋದನು. ಅಲ್ಲಿನ ಒಬ್ಬ ಕುಲೀನ ಸ್ತ್ರೀಯು ಅವನನ್ನು ತನ್ನ ಮನೆಯಲ್ಲಿ ಊಟಮಾಡಬೇಕೆಂದು ಒತ್ತಾಯಪಡಿಸಿದಳು. ಅಂದಿನಿಂದ ಅವನು ಆ ಮಾರ್ಗದಿಂದ ಹೋಗುವಾಗೆಲ್ಲಾ ಆ ಮನೆಯಲ್ಲೇ ಊಟಮಾಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಒಂದು ದಿನ ಎಲೀಷನು ಶೂನೇಮಿಗೆ ಹೋದನು. ಪ್ರಮುಖಳಾದ ಸ್ತ್ರೀಯೊಬ್ಬಳು ಶೂನೇಮಿನಲ್ಲಿ ವಾಸಿಸುತ್ತಿದ್ದಳು. ಆ ಸ್ತ್ರೀಯು ತನ್ನ ಮನೆಯಲ್ಲಿ ಊಟಮಾಡಿಕೊಂಡು ಹೋಗುವಂತೆ ಎಲೀಷನನ್ನು ಕೇಳಿಕೊಂಡಳು. ಅಂದಿನಿಂದ ಎಲೀಷನು ಆ ಸ್ಥಳದ ಮೂಲಕ ಹೋಗುವಾಗಲೆಲ್ಲಾ ಅವಳ ಮನೆಯಲ್ಲಿ ಊಟಮಾಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 4:8
16 ತಿಳಿವುಗಳ ಹೋಲಿಕೆ  

ಅವರ ಮೇರೆಯು: ಇಜ್ರೆಯೇಲ್ ಕೆಸುಲೋತ್, ಶೂನೇಮ್,


ಆದರೆ ಅವರು ಯೇಸುವಿಗೆ, “ನಮ್ಮೊಂದಿಗೆ ಇರು, ಈಗ ಸಂಜೆಯಾಯಿತು. ಕತ್ತಲಾಯಿತು,” ಎಂದು ಹೇಳಿ, ಆತನನ್ನು ಬಲವಂತ ಮಾಡಿದರು. ಆಗ ಯೇಸು ಅವರೊಂದಿಗೆ ಇರುವುದಕ್ಕಾಗಿ ಹೋದರು.


ದೊಡ್ಡ ಮನುಷ್ಯರೇ ಬುದ್ಧಿವಂತರಲ್ಲ; ಮುದುಕರೇ ನ್ಯಾಯವನ್ನು ಬಲ್ಲವರಲ್ಲ.


ಅವನಿಗೆ ಏಳು ಸಾವಿರ ಕುರಿಗಳು, ಮೂರು ಸಾವಿರ ಒಂಟೆಗಳು, ಐನೂರು ಜೋಡಿ ಎತ್ತುಗಳು, ಐನೂರು ಕತ್ತೆಗಳು ಮತ್ತು ಅನೇಕ ಕೆಲಸಗಾರರಿದ್ದರು. ಅವನು ಪೂರ್ವದೇಶದ ಜನರೆಲ್ಲರಲ್ಲಿಯೇ ಹೆಚ್ಚು ಐಶ್ವರ್ಯವುಳ್ಳವನಾಗಿದ್ದನು.


ಅದಕ್ಕವನು ಅವರನ್ನು ಬಹಳವಾಗಿ ಬಲವಂತ ಮಾಡಿದ್ದರಿಂದ, ಅವರು ತಿರುಗಿಬಂದು ಅವನ ಮನೆಯೊಳಕ್ಕೆ ಪ್ರವೇಶಿಸಿದರು. ಅವನು ಅವರಿಗಾಗಿ ಔತಣ ಮಾಡಿಸಿ ಹುಳಿಯಿಲ್ಲದ ರೊಟ್ಟಿಗಳನ್ನು ಸಿದ್ಧಮಾಡಿದನು. ಅವರು ಊಟಮಾಡಿದರು.


ಹಾಗೆಯೇ ಅವರು ಸೌಂದರ್ಯವತಿಯಾದ ಹುಡುಗಿಗೋಸ್ಕರ ಇಸ್ರಾಯೇಲಿನ ಮೇರೆಗಳಲ್ಲೆಲ್ಲಾ ಹುಡುಕಿ, ಶೂನೇಮ್ಯಳಾದ ಅಬೀಷಗ್ ಎಂಬವಳನ್ನು ಕಂಡುಕೊಂಡು, ಅವಳನ್ನು ಅರಸನ ಬಳಿಗೆ ತಂದರು.


ಈ ಬರ್ಜಿಲ್ಲೈಯು ಎಂಬತ್ತು ವರ್ಷದವನಾಗಿ ಮಹಾವೃದ್ಧನಾಗಿದ್ದನು. ಅರಸನು ಮಹನಯಿಮಿನಲ್ಲಿ ವಾಸಿಸಿಸುವವರೆಗೂ ಇವನು ಅರಸನನ್ನು ಸಂರಕ್ಷಿಸಿದನು. ಏಕೆಂದರೆ ಅವನು ಬಹು ಸಿರಿವಂತ ಮನುಷ್ಯನಾಗಿದ್ದನು.


ಆಗ ಆ ಮುದುಕನು, “ನಿನಗೆ ಶುಭವಾಗಲಿ, ನಿನ್ನ ಕೊರತೆಯೆಲ್ಲಾ ನನ್ನ ಮೇಲೆ ಇರಲಿ, ಹೇಗಾದರೂ ಬೀದಿಯೊಳಗೆ ಇಳಿದುಕೊಳ್ಳಬೇಡ,” ಎಂದು ಹೇಳಿ


ಆಕೆಯೂ ಆಕೆಯ ಮನೆಯವರೂ ದೀಕ್ಷಾಸ್ನಾನ ಹೊಂದಿದಾಗ, “ನಾನು ಕರ್ತ ಯೇಸುವಿಗೆ ನಂಬಿಗಸ್ತಳೆಂದು ನೀವು ತೀರ್ಮಾನಿಸಿಕೊಂಡರೆ, ಬಂದು ನನ್ನ ಮನೆಯಲ್ಲಿ ತಂಗಿರಿ,” ಎಂದು ನಮ್ಮನ್ನು ಒತ್ತಾಯ ಮಾಡಿದಳು.


ಅವನು ಕರ್ತದೇವರ ದೃಷ್ಟಿಯಲ್ಲಿ ಮಹಾಪುರುಷನಾಗಿರುವನು. ದ್ರಾಕ್ಷಾರಸವನ್ನಾಗಲಿ, ಮದ್ಯವನ್ನಾಗಲಿ ಅವನು ಕುಡಿಯುವುದಿಲ್ಲ, ಅವನು ತಾಯಿಯ ಗರ್ಭದಿಂದಲೇ ಪವಿತ್ರಾತ್ಮ ಭರಿತನಾಗಿರುವನು.


ಮನವೊಲಿಸುವ ಮಾತುಗಳಿಂದ ಅವಳು ಅವನನ್ನು ದಾರಿ ತಪ್ಪಿಸಿ, ಅವಳು ತನ್ನ ಮೋಹಕ ಮಾತುಗಳಿಂದ ಅವನನ್ನು ಆಕರ್ಷಿಸುತ್ತಾಳೆ.


ಆ ಮಗುವು ಬೆಳೆದಾಗ ಒಂದು ದಿವಸ, ಅವನು ಬೆಳೆ ಕೊಯ್ಯುವವರ ಬಳಿಯಲ್ಲಿರುವ ತನ್ನ ತಂದೆಯ ಬಳಿಗೆ ಹೋದನು.


ಆಗ ಫಿಲಿಷ್ಟಿಯರ ಸೈನ್ಯ ಕೂಡಿಬಂದು ಶೂನೇಮಿನಲ್ಲಿ ದಂಡಿಳಿದರು. ಸೌಲನು ಸಮಸ್ತ ಇಸ್ರಾಯೇಲನ್ನು ಕೂಡಿಸಿಕೊಂಡು ಗಿಲ್ಬೋವದಲ್ಲಿ ದಂಡಿಳಿದನು.


“ಆಗ ಯಜಮಾನನು ಸೇವಕನಿಗೆ, ‘ನೀನು ಬೀದಿಗಳಿಗೂ ಓಣಿಗಳಿಗೂ ಹೊರಟುಹೋಗಿ ನನ್ನ ಮನೆ ತುಂಬುವಂತೆ, ಇಲ್ಲಿ ಬರುವುದಕ್ಕೆ ಕಂಡವರನ್ನು ಬಲವಂತಮಾಡು.


ಅದೇ ಪ್ರಕಾರ, ಎರಡು ಚಿನ್ನದ ನಾಣ್ಯಗಳನ್ನು ಹೊಂದಿದವನು ಸಹ ಇನ್ನು ಬೇರೆ ಎರಡು ಚಿನ್ನದ ನಾಣ್ಯಗಳನ್ನು ಸಂಪಾದಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು