Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 5:13 - ಕನ್ನಡ ಸಮಕಾಲಿಕ ಅನುವಾದ

13 ಆದರೆ ನಾಮಾನನ ಸೇವಕನು ಅವನ ಬಳಿಗೆ ಬಂದು, ಅವನ ಸಂಗಡ ಮಾತನಾಡಿ, “ನನ್ನ ತಂದೆಯೇ, ಪ್ರವಾದಿಯು ದೊಡ್ಡ ಕಾರ್ಯವನ್ನು ನಿನಗೆ ಹೇಳಿದ್ದರೆ, ನೀನು ಮಾಡುತ್ತಿದ್ದಿಲ್ಲವೋ? ಅವನು ನಿನಗೆ, ‘ಸ್ನಾನಮಾಡಿ ಶುದ್ಧನಾಗು’ ಎಂದು ಹೇಳಿದರಲ್ಲಿ ಅಡ್ಡಿ ಏನು?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆಗ ಅವನ ಸೇವಕರು ಹತ್ತಿರ ಬಂದು ಅವನಿಗೆ, “ಸ್ವಾಮೀ, ಪ್ರವಾದಿಯು ಒಂದು ಕಠಿಣವಾದ ಕೆಲಸ ಹೇಳಿದ್ದರೆ, ಅದನ್ನು ನೀವು ಮಾಡುತ್ತಿದ್ದಿರಲ್ಲವೇ? ಹಾಗಾದರೆ ‘ಸ್ನಾನಮಾಡಿ ಶುದ್ಧನಾಗು’ ಎಂದು ಹೇಳಿದರೆ ಯಾಕೆ ಅದರಂತೆ ಮಾಡಬಾರದು” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಆಗ ಅವನ ಸೇವಕರು ಹತ್ತಿರಬಂದು, “ಯಜಮಾನರೇ, ಪ್ರವಾದಿ ಒಂದು ಕಠಿಣವಾದ ಕೆಲಸವನ್ನು ಹೇಳಿದ್ದರೆ ಅದನ್ನು ಮಾಡುತ್ತಿದ್ದಿರಲ್ಲವೆ? ಹಾಗಾದರೆ ‘ಸ್ನಾನಮಾಡಿ, ಶುದ್ಧರಾಗುವಿರಿ’ ಎಂದು ಹೇಳಿದರೆ ಏಕೆ ಅದರಂತೆ ಮಾಡಬಾರದು?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆಗ ಅವನ ಸೇವಕರು ಹತ್ತಿರ ಬಂದು ಅವನಿಗೆ - ಅಪ್ಪನವರೇ, ಪ್ರವಾದಿಯು ಒಂದು ಕಠಿಣವಾದ ಕೆಲಸವನ್ನು ಹೇಳಿದ್ದರೆ ಅದನ್ನು ಮಾಡುತ್ತಿದ್ದಿರಲ್ಲಾ; ಹಾಗಾದರೆ ಸ್ನಾನಮಾಡಿ ಶುದ್ಧನಾಗು ಎಂದು ಹೇಳಿದರೆ ಯಾಕೆ ಅದರಂತೆ ಮಾಡಬಾರದು ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆಗ ನಾಮಾನನ ಸೇವಕರು ಅವನ ಬಳಿಗೆ ಬಂದು ಅವನಿಗೆ, “ತಂದೆಯೇ, ಪ್ರವಾದಿಯು ಒಂದು ಕಠಿಣವಾದ ಕಾರ್ಯವನ್ನು ಹೇಳಿದ್ದರೆ, ನೀವು ಅದನ್ನು ಮಾಡುತ್ತಿದ್ದಿರಿ! ಅಲ್ಲವೇ? ಹೀಗಿರಲು ಸುಲಭವಾದ ಒಂದು ಕಾರ್ಯವನ್ನು ಅವನು ನಿಮಗೆ ಹೇಳಿರುವಾಗ ನೀವು ಅವನಿಗೆ ವಿಧೇಯರಾಗಬಾರದೇಕೆ? ನೀವು ಸ್ನಾನಮಾಡಿದರೆ, ಶುಚಿಗೊಂಡು ಶುದ್ಧರಾಗುವಿರಿ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 5:13
31 ತಿಳಿವುಗಳ ಹೋಲಿಕೆ  

ಇಸ್ರಾಯೇಲಿನ ಅರಸನು ಅವರನ್ನು ಕಂಡಾಗ ಎಲೀಷನಿಗೆ, “ನನ್ನ ತಂದೆಯೇ, ನಾನು ಸಂಹರಿಸಲೋ, ಸಂಹರಿಸಲೋ?” ಎಂದನು.


ಅದಕ್ಕೆ ನಾನು, “ನನ್ನ ಒಡೆಯನೆ ನೀನೇ ಬಲ್ಲೆ!” ಎಂದು ಉತ್ತರಿಸಿದೆನು. ಅವನು ನನಗೆ, “ಇವರು ಆ ಮಹಾಸಂಕಟದಿಂದ ಹೊರಬಂದವರು. ಇವರು ತಮ್ಮ ನಿಲುವಂಗಿಗಳನ್ನು ಕುರಿಮರಿ ಆಗಿರುವವರ ರಕ್ತದಲ್ಲಿ ಅವುಗಳನ್ನು ಬೆಳ್ಳಗೆ ಮಾಡಿಕೊಂಡಿದ್ದಾರೆ!”


ಆಗ ಎಲೀಷನು ಮರಣಕರ ವ್ಯಾಧಿಯಿಂದ ಬಳಲುತ್ತಿದ್ದಾಗ, ಇಸ್ರಾಯೇಲಿನ ಅರಸನಾದ ಯೋವಾಷನು ಅವನ ಬಳಿಗೆ ಬಂದು, ಅವನ ಮೇಲೆ ಬಿದ್ದು, “ನನ್ನ ತಂದೆಯೇ, ನನ್ನ ತಂದೆಯೇ, ಇಸ್ರಾಯೇಲಿನ ರಥಗಳೂ ಕುದುರೆ ಸವಾರರು ಆಗಿದ್ದವನೇ!” ಎಂದು ಹೇಳುತ್ತಾ ಅತ್ತನು.


ಎಲೀಷನು ಅದನ್ನು ಕಂಡು, “ನನ್ನ ತಂದೆಯೇ, ನನ್ನ ತಂದೆಯೇ, ಇಸ್ರಾಯೇಲಿನ ರಥ ಮತ್ತು ಸಾರಥಿಯಾದ್ದಾತನೇ!” ಎಂದು ಕೂಗಿದನು. ಮತ್ತೆ ಅವನನ್ನು ಕಾಣಲಿಲ್ಲ. ಆಗ ಅವನು ತನ್ನ ವಸ್ತ್ರಗಳನ್ನು ತೆಗೆದು ಎರಡು ತುಂಡುತುಂಡಾಗಿ ಹರಿದನು.


ಈ ನೀರು ದೀಕ್ಷಾಸ್ನಾನವನ್ನು ಸೂಚಿಸುವಂತದ್ದಾಗಿದೆ. ಈ ದೀಕ್ಷಾಸ್ನಾನ ಕ್ರಿಸ್ತ ಯೇಸುವಿನ ಪುನರುತ್ಥಾನದ ಮೂಲಕ ಈಗ ನಮ್ಮನ್ನು ರಕ್ಷಿಸುತ್ತದೆ. ಅದು ಮೈಕೊಳೆಯನ್ನು ಹೋಗಲಾಡಿಸುವಂಥದಲ್ಲ. ಆದರೆ ಒಳ್ಳೆಯ ಮನಸ್ಸಾಕ್ಷಿಯು ಬೇಕೆಂದು ದೇವರನ್ನು ಬೇಡಿಕೊಳ್ಳುವಂಥದ್ದಾಗಿದೆ.


ಆದಕಾರಣ ಅಪರಾಧ ಮನಸ್ಸಾಕ್ಷಿಯೆಂದು ನಮ್ಮ ಮನಸ್ಸು ನಮಗೆ ಸಾಕ್ಷಿಹೇಳದಂತೆ ನಾವು ಹೃದಯವನ್ನು ಪ್ರೋಕ್ಷಿಸಿಕೊಂಡು ದೇಹವನ್ನು ಶುದ್ಧ ನೀರಿನಿಂದ ತೊಳೆದುಕೊಂಡು ಪರಿಪೂರ್ಣವಾದ ನಂಬಿಕೆಯುಳ್ಳವರಾಗಿಯೂ ಯಥಾರ್ಥ ಹೃದಯವುಳ್ಳವರಾಗಿಯೂ ದೇವರ ಸಮೀಪಕ್ಕೆ ಬರೋಣ.


ಅವರು ನಮ್ಮನ್ನು ರಕ್ಷಿಸಿದರು. ಹೇಗೆಂದರೆ, ನಾವು ಮಾಡಿದ ಪುಣ್ಯ ಕ್ರಿಯೆಗಳಿಂದಲ್ಲ, ಅವರ ಕರುಣೆಗೆ ಅನುಸಾರವಾಗಿ ಆತ್ಮಿಕವಾಗಿ ಹುಟ್ಟುವಂತೆ ಮಾಡಿ, ನಮ್ಮನ್ನು ತೊಳೆದೂ ಪವಿತ್ರಾತ್ಮ ದೇವರು ನೂತನ ಜೀವನವನ್ನು ಕೊಡುವುದರ ಮೂಲಕವೇ ಅವರು ನಮ್ಮನ್ನು ರಕ್ಷಿಸಿದರು.


ಈಗ ನೀನು ತಡಮಾಡುವುದೇಕೆ? ಎದ್ದೇಳು, ಅವರ ಹೆಸರನ್ನು ಕರೆದು, ದೀಕ್ಷಾಸ್ನಾನವನ್ನು ಹೊಂದಿ ನಿನ್ನ ಪಾಪಗಳನ್ನು ತೊಳೆದುಕೋ,’ ಎಂದನು.


ಏಕೆಂದರೆ, ನಿಮಗೆ ಕ್ರಿಸ್ತ ಯೇಸುವಿನಲ್ಲಿ ಹತ್ತು ಸಾವಿರ ಮಂದಿ ಪೋಷಕರು ಇದ್ದರೂ, ತಂದೆಗಳು ಬಹುಮಂದಿ ಇಲ್ಲ. ಸುವಾರ್ತೆಯ ಮೂಲಕ ಕ್ರಿಸ್ತ ಯೇಸುವಿನಲ್ಲಿ ನಾನು ನಿಮ್ಮ ತಂದೆಯಾದೆನು.


ದೇವರು ಜ್ಞಾನಿಗಳನ್ನು ನಾಚಿಕೆಪಡಿಸುವಂತೆ, ಈ ಲೋಕದ ಬುದ್ಧಿಹೀನರನ್ನು ಆರಿಸಿಕೊಂಡಿದ್ದಾರೆ. ದೇವರು ಬಲಿಷ್ಠರನ್ನು ನಾಚಿಕೆಪಡಿಸುವಂತೆ ಈ ಲೋಕದ ಬಲಹೀನರನ್ನು ಆರಿಸಿಕೊಂಡಿದ್ದಾರೆ.


ಈ ಪ್ರಪಂಚವು ತನ್ನ ಜ್ಞಾನದ ಮೂಲಕ ದೇವರನ್ನು ಅರಿತುಕೊಳ್ಳಲಿಲ್ಲ; ಆದ್ದರಿಂದ ದೇವರ ಜ್ಞಾನದಿಂದ, ನಂಬಿದವರನ್ನು ಪ್ರಸಂಗದ ಬುದ್ದಿಹೀನತೆಯಿಂದ ರಕ್ಷಿಸುವುದು ದೇವರಿಗೆ ಮೆಚ್ಚುಗೆಯಾಯಿತು.


ಪೇತ್ರನು ಯೇಸುವಿಗೆ, “ನೀವು ನನ್ನ ಪಾದಗಳನ್ನು ಎಂದಿಗೂ ತೊಳೆಯಬಾರದು,” ಎಂದನು. ಯೇಸು ಅವನಿಗೆ, “ನಾನು ನಿನ್ನ ಪಾದಗಳನ್ನು ತೊಳೆಯದಿದ್ದರೆ ನನ್ನೊಂದಿಗೆ ನಿನಗೆ ಪಾಲು ಇಲ್ಲ,” ಎಂದು ಹೇಳಿದರು.


ಭೂಮಿಯಲ್ಲಿ ಯಾರನ್ನೂ ‘ತಂದೆ’ ಎಂದು ಕರೆಯಬೇಡಿರಿ, ಪರಲೋಕದಲ್ಲಿ ಇರುವವರೇ ನಿಮ್ಮ ತಂದೆ.


“ಮಗನು ತಂದೆಯನ್ನೂ, ದಾಸನು ಯಜಮಾನನನ್ನೂ ಸನ್ಮಾನಿಸುತ್ತಾನೆ. ಹಾಗಾದರೆ ನಾನು ತಂದೆಯಾಗಿದ್ದರೆ ನನ್ನ ಸನ್ಮಾನವೆಲ್ಲಿ? ನಾನು ಯಜಮಾನನಾಗಿದ್ದರೆ ನನಗೆ ತೋರಿಸುವ ಭಯಭಕ್ತಿಯೆಲ್ಲಿ?” “ನನ್ನ ಹೆಸರನ್ನು ಅಸಡ್ಡೆ ಮಾಡುವ ಯಾಜಕರು ನೀವೇ ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. “ಆದರೆ ನೀವು, ‘ನಿಮ್ಮ ಹೆಸರನ್ನು ಯಾವುದರಲ್ಲಿ ನಾವು ಅಸಡ್ಡೆ ಮಾಡಿದ್ದೇವೆ?’ ಎಂದು ಕೇಳುತ್ತೀರಿ.”


“ನಿಮ್ಮನ್ನು ತೊಳೆದುಕೊಂಡು ಶುದ್ಧಮಾಡಿಕೊಳ್ಳಿರಿ. ನನ್ನ ಕಣ್ಣೆದುರಿನಿಂದ ನಿಮ್ಮ ದುಷ್ಟಕೃತ್ಯಗಳನ್ನು ತೆಗೆದುಹಾಕಿರಿ. ಕೆಟ್ಟದ್ದನ್ನು ನಿಲ್ಲಿಸಿಬಿಡಿರಿ.


ಹಿಸ್ಸೋಪಿನಿಂದ ನನ್ನನ್ನು ಶುಚಿಮಾಡಿರಿ, ಆಗ ನಾನು ಶುದ್ಧನಾಗುವೆನು. ನನ್ನನ್ನು ತೊಳೆಯಿರಿ, ಆಗ ಹಿಮಕ್ಕಿಂತ ಬೆಳ್ಳಗಾಗುವೆನು.


ನನ್ನ ಎಲ್ಲಾ ಅಪರಾಧಗಳಿಂದ ನನ್ನನ್ನು ತೊಳೆದುಬಿಡಿರಿ; ನನ್ನ ಪಾಪದಿಂದ ನನ್ನನ್ನು ಶುದ್ಧಮಾಡಿರಿ.


ಹಜಾಯೇಲನು ದಮಸ್ಕದಲ್ಲಿರುವ ಸಕಲ ಉತ್ತಮವಾದವುಗಳಲ್ಲಿ ನಲವತ್ತು ಒಂಟೆಗಳು ಹೊರುವಷ್ಟು ಕಾಣಿಕೆಗಳನ್ನು ತೆಗೆದುಕೊಂಡು, ಎಲೀಷನನ್ನು ಎದುರುಗೊಳ್ಳಲು ಹೋಗಿ, ಅವನ ಮುಂದೆ ಬಂದು ನಿಂತು, “ಅರಾಮಿನ ಅರಸನಾಗಿರುವ ನಿನ್ನ ಮಗ ಬೆನ್ಹದದನು, ‘ಈ ವ್ಯಾಧಿಯಿಂದ ಬದುಕುವೆನೋ?’ ಎಂದು ಕೇಳಲು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆ,” ಎಂದನು.


ಆಗ ಎಲೀಷನು, “ನೀನು ಹೋಗಿ ಯೊರ್ದನಿನಲ್ಲಿ ಏಳು ಸಾರಿ ಸ್ನಾನಮಾಡು, ಆಗ ನಿನ್ನ ಶರೀರವು ಮೊದಲಿನಂತೆ ಮಾರ್ಪಡುವುದು, ನೀನು ಶುದ್ಧನಾಗುವೆ,” ಎಂದು ಹೇಳಲು, ಅವನ ಬಳಿಗೆ ಸೇವಕನನ್ನು ಕಳುಹಿಸಿದನು.


ಅವಳು ತನ್ನ ಯಜಮಾನನಿಗೆ, “ನನ್ನ ಧಣಿಯು ಸಮಾರ್ಯದಲ್ಲಿರುವ ಪ್ರವಾದಿಯ ಬಳಿಯಲ್ಲಿರುತ್ತಿದ್ದರೆ, ಅವನು ಧಣಿಯ ಕುಷ್ಠರೋಗವನ್ನು ವಾಸಿಮಾಡುತ್ತಿದ್ದನು,” ಎಂದಳು.


ಆಗ ಅವನ ಸೇವಕರು ಅವನಿಗೆ, “ಇಸ್ರಾಯೇಲಿನ ಮನೆಯ ಅರಸರು ಕರುಣೆಯುಳ್ಳವರೆಂದು ನಾವು ಕೇಳಿದ್ದೇವೆ. ನಾವು ಗೋಣಿಯನ್ನು ಸೊಂಟಕ್ಕೆ ಕಟ್ಟಿಕೊಂಡು, ಹಗ್ಗಗಳನ್ನು ನಮ್ಮ ತಲೆಗೆ ಸುತ್ತಿಕೊಂಡು ಇಸ್ರಾಯೇಲಿನ ಅರಸನ ಬಳಿಗೆ ಹೋಗೋಣ. ಒಂದು ವೇಳೆ ಅವನು ನಿನ್ನ ಪ್ರಾಣವನ್ನು ರಕ್ಷಿಸುವನು,” ಎಂದರು.


ಆದರೆ ಅರಾಮಿನ ಅರಸನ ಸೇವಕರು ಅವನಿಗೆ, “ಅವರ ದೇವರುಗಳು, ಪರ್ವತಗಳ ದೇವರುಗಳು, ಆದ್ದರಿಂದ ಅವರು ನಮ್ಮನ್ನು ಜಯಿಸಿದರು. ನಾವು ಅವರ ಸಂಗಡ ಸಮಭೂಮಿಯಲ್ಲಿ ಯುದ್ಧಮಾಡಿದರೆ, ನಿಶ್ಚಯವಾಗಿ ನಾವು ಅವರಿಗಿಂತ ಬಲಶಾಲಿಗಳಾಗಿರುವೆವು.


ತನಗಿದ್ದ ಎರಡನೆಯ ರಥದಲ್ಲಿ ಅವನನ್ನು ಕೂಡಿಸಿದಾಗ, “ಈತನನ್ನು ನಮಸ್ಕರಿಸಿ ದಾರಿಮಾಡಿರಿ,” ಎಂದು ಪ್ರಕಟಿಸಿದನು. ಹೀಗೆ ಅವನನ್ನು ಈಜಿಪ್ಟ್ ದೇಶವನ್ನೆಲ್ಲಾ ಆಳುವವನನ್ನಾಗಿ ನೇಮಿಸಿದನು.


ಅವನಿಗೆ, “ಹೋಗು, ಸಿಲೋವ ಕೊಳದಲ್ಲಿ ತೊಳೆದುಕೋ,” ಎಂದರು. ಸಿಲೋವ ಎಂದರೆ, “ಕಳುಹಿಸಲಾದವನು” ಎಂದರ್ಥ. ಕುರುಡನು ಹೋಗಿ ಕಣ್ಣು ತೊಳೆದುಕೊಂಡು ದೃಷ್ಟಿಹೊಂದಿದವನಾಗಿ ಬಂದನು.


ಇದಲ್ಲದೆ ನನ್ನ ತಂದೆಯೇ, ಇಲ್ಲಿ ನೋಡು! ನನ್ನ ಕೈಯಲ್ಲಿರುವ ನಿನ್ನ ನಿಲುವಂಗಿಯ ತುಂಡನ್ನು ನೋಡು. ನಾನು ನಿನ್ನನ್ನು ಕೊಂದುಹಾಕದೆ, ನಿನ್ನ ನಿಲುವಂಗಿಯ ಅಂಚನ್ನು ಮಾತ್ರ ಕತ್ತರಿಸಿಕೊಂಡದ್ದರಿಂದ, ನನ್ನಲ್ಲಿ ಕೆಟ್ಟತನವೂ, ದ್ರೋಹವೂ ಇಲ್ಲವೆಂದು ಇದು ಸೂಚಿಸುತ್ತಿದೆ; ನಾನು ನಿನಗೆ ವಿರೋಧವಾಗಿ ತಪ್ಪುಮಾಡಲಿಲ್ಲವೆಂದು ತಿಳಿದುಕೋ. ಹೀಗಿದ್ದರೂ, ನೀನು ನನ್ನ ಪ್ರಾಣವನ್ನು ತೆಗೆಯಲು ಬೇಟೆಯಾಡುತ್ತೀ.


ಅದಕ್ಕವನು, “ನಾನು ತಿನ್ನುವುದಿಲ್ಲ,” ಎಂದನು. ಆದರೆ ಅವನ ದಾಸರೂ, ಆ ಸ್ತ್ರೀಯೂ ಅವನನ್ನು ಬಲವಂತ ಮಾಡಿದ್ದರಿಂದ, ಅವನು ಅವರ ಮಾತನ್ನು ಕೇಳಿ, ನೆಲವನ್ನು ಬಿಟ್ಟು ಎದ್ದು, ಮಂಚದ ಮೇಲೆ ಕುಳಿತುಕೊಂಡನು.


ಆಗ ಸೌಲನು ಸೇವಕನಿಗೆ, “ನಿನ್ನ ಮಾತು ಒಳ್ಳೆಯದು. ನಾವು ಹೋಗೋಣ ಬಾ,” ಎಂದನು. ದೇವರ ಮನುಷ್ಯನಿದ್ದ ಆ ಪಟ್ಟಣಕ್ಕೆ ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು