2 ಅರಸುಗಳು 5:16 - ಕನ್ನಡ ಸಮಕಾಲಿಕ ಅನುವಾದ16 ಆದರೆ ಪ್ರವಾದಿಯು, “ನಾನು ಯಾರ ಮುಂದೆ ನಿಲ್ಲುತ್ತೇನೋ ಆ ಯೆಹೋವ ದೇವರ ಜೀವದಾಣೆ, ನಾನು ಏನೂ ತೆಗೆದುಕೊಳ್ಳುವುದಿಲ್ಲ,” ಎಂದನು. ಅವನು ತೆಗೆದುಕೊಳ್ಳಬೇಕೆಂದು ಬಲವಂತ ಮಾಡಿದರೂ, “ಬೇಡ,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಅದಕ್ಕೆ ಎಲೀಷನು, “ನಾನು ಸೇವೆಮಾಡುತ್ತಿರುವ ನನ್ನ ದೇವರು ನಿಜವಾಗಿಯೂ ಜೀವಿಸುವ ದೇವರಾದದರಿಂದ ನಿನ್ನಿಂದ ಏನೂ ತೆಗೆದುಕೊಳ್ಳುವುದಿಲ್ಲ” ಎಂದನು. ನಾಮಾನನು ಎಷ್ಟು ಒತ್ತಾಯಪಡಿಸಿದರೂ ಅವನು ಕಾಣಿಕೆಯನ್ನು ತೆಗೆದುಕೊಳ್ಳಲೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಅದಕ್ಕೆ ಎಲೀಷನು, “ನಾನು ಸನ್ನಿಧಿಸೇವೆ ಮಾಡುತ್ತಿರುವ ಸರ್ವೇಶ್ವರನಾಣೆ, ನಿನ್ನಿಂದ ಏನೂ ತೆಗೆದುಕೊಳ್ಳುವುದಿಲ್ಲ,” ಎಂದನು. ನಾಮಾನನು ಎಷ್ಟು ಒತ್ತಾಯಪಡಿಸಿದರೂ ಅವನು ತೆಗೆದುಕೊಳ್ಳಲೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಅದಕ್ಕೆ ಎಲೀಷನು - ನಾನು ಸನ್ನಿಧಿ ಸೇವೆಮಾಡುತ್ತಿರುವ ಯೆಹೋವನಾಣೆ, ನಿನ್ನಿಂದ ಏನೂ ತೆಗೆದುಕೊಳ್ಳುವದಿಲ್ಲ ಅಂದನು. ನಾಮಾನನು ಎಷ್ಟು ಒತ್ತಾಯಪಡಿಸಿದರೂ ಅವನು ತೆಗೆದುಕೊಳ್ಳಲೇ ಇಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಆದರೆ ಎಲೀಷನು, “ನಾನು ಯೆಹೋವನ ಸೇವೆ ಮಾಡುತ್ತೇನೆ. ಯೆಹೋವನಾಣೆಯಾಗಿ ಪ್ರಮಾಣ ಮಾಡುತ್ತೇನೆ, ನಾನು ಯಾವ ಕಾಣಿಕೆಯನ್ನು ಸ್ವೀಕರಿಸುವುದಿಲ್ಲ” ಎಂದು ಹೇಳಿದನು. ಎಲೀಷನು ಕಾಣಿಕೆಯನ್ನು ಸ್ವೀಕರಿಸುವಂತೆ ನಾಮಾನನು ಬಹಳ ಪ್ರಯತ್ನಿಸಿದನು. ಆದರೆ ಎಲೀಷನು ನಿರಾಕರಿಸಿದನು. ಅಧ್ಯಾಯವನ್ನು ನೋಡಿ |