2 ಅರಸುಗಳು 5:17 - ಕನ್ನಡ ಸಮಕಾಲಿಕ ಅನುವಾದ17 ನಾಮಾನನು, “ಹಾಗಾದರೆ ಎರಡು ಹೇಸರಗತ್ತೆಗಳು ಹೊರತಕ್ಕ ಮಣ್ಣು ನಿನ್ನ ಸೇವಕನಿಗೆ ಕೊಡುವಂತೆ ಮಾಡು. ಏಕೆಂದರೆ ನಿನ್ನ ಸೇವಕನು ಇನ್ನು ಮೇಲೆ ಯೆಹೋವ ದೇವರಿಗೆ ಹೊರತಾಗಿ ಅನ್ಯ ದೇವರುಗಳಿಗೆ ದಹನಬಲಿಯನ್ನಾಗಲಿ, ಯಜ್ಞವನ್ನಾಗಲಿ ಅರ್ಪಿಸನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಆಗ ನಾಮಾನನು ಎಲೀಷನಿಗೆ, “ನೀನು ನನ್ನ ಕಾಣಿಕೆಯನ್ನು ಸ್ವೀಕರಿಸದಿದ್ದರೆ, ನಿನ್ನ ಸೇವಕನಾದ ನನಗೆ ಎರಡು ಹೇಸರಗತ್ತೆಯ ಹೊರುವಷ್ಟು ಮಣ್ಣನ್ನು ಕೊಡಿಸಬೇಕೆಂದು ಬೇಡಿಕೊಳ್ಳುತ್ತೇನೆ. ನಾನು ಇನ್ನು ಮುಂದೆ ಎಲ್ಲಾ ದೇವತೆಗಳನ್ನು ಬಿಟ್ಟು ಯೆಹೋವನೊಬ್ಬನಿಗೇ ಸರ್ವಾಂಗಹೋಮಯಜ್ಞಗಳನ್ನು ಸಮರ್ಪಿಸಬೇಕೆಂದಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಆಗ ಅವನು ಎಲೀಷನಿಗೆ, “ತಾವು ಏನನ್ನೂ ಸ್ವೀಕರಿಸದಿದ್ದರೆ ತಮ್ಮ ಸೇವಕನಾದ ನನಗೆ ಎರಡು ಹೇಸರಕತ್ತೆಗಳು ಹೊರುವಷ್ಟು ಮಣ್ಣನ್ನು ಕೊಡಿಸಬೇಕೆಂದು ಬೇಡಿಕೊಳ್ಳುತ್ತೇನೆ. ನಾನು ಇನ್ನು ಮುಂದೆ ಎಲ್ಲಾ ದೇವತೆಗಳನ್ನು ಬಿಟ್ಟು ಸರ್ವೇಶ್ವರಸ್ವಾಮಿ ಒಬ್ಬರಿಗೇ ದಹನಬಲಿಗಳನ್ನು ಸಮರ್ಪಿಸಬೇಕೆಂದಿರುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಆಗ ಅವನು ಎಲೀಷನಿಗೆ - ನೀನು ನನ್ನದನ್ನು ಸ್ವೀಕರಿಸದಿದ್ದರೆ ನಿನ್ನ ಸೇವಕನಾದ ನನಗೆ ಎರಡು ಹೇಸರಕತ್ತೆಗಳು ಹೊರುವಷ್ಟು ಮಣ್ಣನ್ನು ಕೊಡಿಸಬೇಕೆಂದು ಬೇಡಿಕೊಳ್ಳುತ್ತೇನೆ. ನಾನು ಇನ್ನು ಮುಂದೆ ಎಲ್ಲಾ ದೇವತೆಗಳನ್ನು ಬಿಟ್ಟು ಯೆಹೋವನೊಬ್ಬನಿಗೇ ಸರ್ವಾಂಗಹೋಮಯಜ್ಞಗಳನ್ನು ಸಮರ್ಪಿಸಬೇಕೆಂದಿರುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಆಗ ನಾಮಾನನು, “ನೀನು ಈ ಕಾಣಿಕೆಯನ್ನು ಸ್ವೀಕರಿಸದಿದ್ದರೆ, ಕೊನೆಯಪಕ್ಷ ನನಗಾಗಿ ಈ ಕಾರ್ಯವನ್ನು ಮಾಡು. ನನ್ನ ಎರಡು ಹೇಸರಕತ್ತೆಗಳ ಮೇಲಿನ ಬುಟ್ಟಿಗಳು ತುಂಬುವಷ್ಟು ಇಸ್ರೇಲಿನ ಮಣ್ಣನ್ನು ನನಗೆ ಕೊಡಿಸಬೇಕೆಂದು ಬೇಡುತ್ತೇನೆ. ಏಕೆಂದರೆ ಇತರ ದೇವರುಗಳಿಗೆ ನಾನು ಮತ್ತೆ ಎಂದೆಂದಿಗೂ ಸರ್ವಾಂಗಹೋಮವನ್ನಾಗಲಿ ಯಜ್ಞಗಳನ್ನಾಗಲಿ ಅರ್ಪಿಸುವುದಿಲ್ಲ. ನಾನು ಯೆಹೋವನಿಗೆ ಮಾತ್ರ ಯಜ್ಞಗಳನ್ನು ಅರ್ಪಿಸುತ್ತೇನೆ! ಅಧ್ಯಾಯವನ್ನು ನೋಡಿ |