2 ಅರಸುಗಳು 5:18 - ಕನ್ನಡ ಸಮಕಾಲಿಕ ಅನುವಾದ18 ಈ ಕಾರ್ಯವನ್ನು ಯೆಹೋವ ದೇವರು ನಿನ್ನ ಸೇವಕನಿಗೆ ಮನ್ನಿಸಲಿ. ಏನೆಂದರೆ, ನನ್ನ ಯಜಮಾನನು ಅಡ್ಡ ಬೀಳುವುದಕ್ಕೆ ರಿಮ್ಮೋನನ ದೇವಸ್ಥಾನಕ್ಕೆ ಹೋಗಿ, ಅವನು ನನ್ನ ಕೈಯ ಮೇಲೆ ಆತುಕೊಳ್ಳುವಾಗ, ರಿಮ್ಮೋನನ ದೇವಸ್ಥಾನದಲ್ಲಿ ನಾನು ಬಾಗಿದರೆ, ಯೆಹೋವ ದೇವರು ನಿನ್ನ ಸೇವಕನಿಗೆ ಈ ಕಾರ್ಯವನ್ನು ಮನ್ನಿಸಲಿ,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಆದರೆ ಈ ವಿಷಯದಲ್ಲಿ ಯೆಹೋವನು ನನ್ನನ್ನು ಕ್ಷಮಿಸಲಿ, ನನ್ನ ಒಡೆಯನು ಆರಾಧನೆಗೋಸ್ಕರ ರಿಮ್ಮೋನನ ದೇವಸ್ಥಾನಕ್ಕೆ ಹೋಗಿ ನನ್ನ ಕೈಹಿಡಿದು ಆ ದೇವತೆಗೆ ನಮಸ್ಕಾರ ಮಾಡುವಾಗ ನಾನೂ ನಮಸ್ಕಾರ ಮಾಡಬೇಕಾಗುವುದು. ಈ ಒಂದು ವಿಷಯದಲ್ಲಿ ಮಾತ್ರ ಯೆಹೋವನು ನನಗೆ ಕ್ಷಮೆಯನ್ನು ಅನುಗ್ರಹಿಸಬೇಕು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಆದರೆ ಈ ವಿಷಯದಲ್ಲಿ ಸರ್ವೇಶ್ವರ ನನ್ನನ್ನು ಕ್ಷಮಿಸಲಿ; ನನ್ನ ಒಡೆಯ ಆರಾಧನೆಗೋಸ್ಕರ ರಿಮ್ಮೋನನ ದೇವಸ್ಥಾನಕ್ಕೆ ಹೋಗಿ, ನನ್ನ ಕೈಹಿಡಿದು, ಆ ದೇವತೆಗೆ ನಮಸ್ಕಾರ ಮಾಡುವಾಗ ನಾನೂ ನಮಸ್ಕಾರ ಮಾಡಬೇಕಾಗುವುದು. ಈ ಒಂದು ವಿಷಯದಲ್ಲಿ ಮಾತ್ರ ಸರ್ವೇಶ್ವರ ನನಗೆ ಕ್ಷಮೆಯನ್ನು ಅನುಗ್ರಹಿಸಬೇಕು,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಆದರೆ ಈ ವಿಷಯದಲ್ಲಿ ಯೆಹೋವನು ನನ್ನನ್ನು ಕ್ಷವಿುಸಲಿ; ನನ್ನ ಒಡೆಯನು ಆರಾಧನೆಗೋಸ್ಕರ ರಿಮ್ಮೋನನ ದೇವಸ್ಥಾನಕ್ಕೆ ಹೋಗಿ ನನ್ನ ಕೈಹಿಡಿದು ಆ ದೇವತೆಗೆ ನಮಸ್ಕಾರ ಮಾಡುವಾಗ ನಾನೂ ನಮಸ್ಕಾರ ಮಾಡಬೇಕಾಗುವದು. ಈ ಒಂದು ವಿಷಯದಲ್ಲಿ ಮಾತ್ರ ಯೆಹೋವನು ನನಗೆ ಕ್ಷಮೆಯನ್ನು ಅನುಗ್ರಹಿಸಬೇಕು ಅನ್ನಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಆದರೆ ಈ ವಿಷಯದಲ್ಲಿ ಯೆಹೋವನು ನನ್ನನ್ನು ಕ್ಷಮಿಸಲಿ. ನನ್ನ ಒಡೆಯನಾದ ಅರಾಮ್ಯರ ರಾಜನು ಸುಳ್ಳುದೇವರಾದ ರಿಮ್ಮೋನನನ್ನು ಪೂಜಿಸಲು ಅವನ ಆಲಯಕ್ಕೆ ಹೋಗಿ ನನ್ನ ಕೈಹಿಡಿದು ಆ ದೇವರಿಗೆ ನಮಸ್ಕಾರ ಮಾಡುವಾಗ ನಾನೂ ನಮಸ್ಕಾರ ಮಾಡಬೇಕಾಗುವುದು. ಈ ಒಂದು ವಿಷಯದಲ್ಲಿ ಯೆಹೋವನು ನನಗೆ ಕ್ಷಮೆಯನ್ನು ಅನುಗ್ರಹಿಸಬೇಕು” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |