Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 5:2 - ಕನ್ನಡ ಸಮಕಾಲಿಕ ಅನುವಾದ

2 ಅರಾಮಿನವರು ಗುಂಪುಗುಂಪಾಗಿ ಹೊರಟು, ಇಸ್ರಾಯೇಲ್ ದೇಶದಿಂದ ಒಬ್ಬ ಹುಡುಗಿಯನ್ನು ಸೆರೆಯಾಗಿ ಹಿಡಿದುಕೊಂಡು ಬಂದರು. ಅವಳು ನಾಮಾನನ ಹೆಂಡತಿಗೆ ಸೇವಕಿಯಾದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅರಾಮ್ಯರು ಒಂದು ಸಾರಿ ಸುಲಿಗೆ ಮಾಡುವುದಕ್ಕೋಸ್ಕರ ಇಸ್ರಾಯೇಲರ ಪ್ರಾಂತ್ಯಕ್ಕೆ ಹೋಗಿ ಬರುವಾಗ ಅಲ್ಲಿನ ಒಬ್ಬ ಹುಡುಗಿಯನ್ನು ಹಿಡಿದುಕೊಂಡು ಬಂದಿದ್ದರು. ಆಕೆಯು ನಾಮಾನನ ಹೆಂಡತಿಗೆ ಸೇವಕಿಯಾದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಸಿರಿಯಾದವರು, ಒಮ್ಮೆ ಸುಲಿಗೆಗಾಗಿ ಇಸ್ರಯೇಲರ ಪ್ರಾಂತ್ಯಕ್ಕೆ ಹೋಗಿಬರುವಾಗ, ಅಲ್ಲಿನ ಒಬ್ಬ ಹುಡುಗಿಯನ್ನು ಹಿಡಿದುಕೊಂಡು ಬಂದರು. ಆಕೆ ನಾಮಾನನ ಹೆಂಡತಿಗೆ ದಾಸಿಯಾದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅರಾಮ್ಯರು ಒಂದು ಸಾರಿ ಸುಲಿಗೆಮಾಡುವದಕ್ಕೋಸ್ಕರ ಇಸ್ರಾಯೇಲ್ಯರ ಪ್ರಾಂತಕ್ಕೆ ಹೋಗಿ ಬರುವಾಗ ಅಲ್ಲಿನ ಒಬ್ಬ ಹುಡುಗಿಯನ್ನು ಹಿಡಿದುಕೊಂಡು ಬಂದರು; ಆಕೆಯು ನಾಮಾನನ ಹೆಂಡತಿಗೆ ದಾಸಿಯಾದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಅರಾಮ್ಯರು ಇಸ್ರೇಲಿನಲ್ಲಿ ಹೋರಾಡಲು ಸೈನಿಕರ ಅನೇಕ ಗುಂಪುಗಳನ್ನು ಕಳುಹಿಸಿದರು. ಸೈನಿಕರು ಜನರನ್ನು ತಮ್ಮ ಗುಲಾಮರಂತೆ ಹಿಡಿದುತಂದರು. ಒಂದು ಸಲ ಚಿಕ್ಕ ಹುಡುಗಿಯೊಬ್ಬಳನ್ನು ಇಸ್ರೇಲ್ ದೇಶದಿಂದ ಹಿಡಿದುತಂದರು. ಈ ಚಿಕ್ಕ ಹುಡುಗಿಯು ನಾಮಾನನ ಪತ್ನಿಗೆ ಸೇವಕಿಯಾದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 5:2
6 ತಿಳಿವುಗಳ ಹೋಲಿಕೆ  

ಆಗ ಅವರಿಗೋಸ್ಕರ ದೊಡ್ಡ ಔತಣ ಮಾಡಿಸಿದನು. ಅವರು ತಿಂದು ಕುಡಿದ ತರುವಾಯ ಅವರನ್ನು ಕಳುಹಿಸಿಬಿಟ್ಟನು. ಅವರು ತಮ್ಮ ಯಜಮಾನನ ಬಳಿಗೆ ಹೋದರು. ಅರಾಮ್ಯರ ದಂಡುಗಳು ಇಸ್ರಾಯೇಲ್ ದೇಶದ ಮೇಲೆ ಮತ್ತೆ ದಾಳಿಮಾಡಲಿಲ್ಲ.


ಅನಂತರ ಎಲೀಷನು ಮೃತನಾದನು. ಅವನ ಶವವನ್ನು ಸಮಾಧಿಮಾಡಿದರು. ವರ್ಷದ ಆರಂಭದಲ್ಲಿ ಮೋವಾಬ್ಯರ ದಂಡುಗಳು ದೇಶದಲ್ಲಿ ಪ್ರವೇಶಿಸಿದವು.


ಇಗೋ, ದಾಸರ ಕಣ್ಣುಗಳು ತಮ್ಮ ಯಜಮಾನರ ಕೈಯನ್ನು ನೋಡುವ ಪ್ರಕಾರ, ಮತ್ತು ದಾಸಿಯ ಕಣ್ಣುಗಳು ತನ್ನ ಯಜಮಾನಿಯ ಕೈಯನ್ನೂ ನೋಡುವ ಪ್ರಕಾರ, ನಮ್ಮ ಕಣ್ಣುಗಳು ನಮ್ಮ ಯೆಹೋವ ದೇವರು, ನಮ್ಮನ್ನು ಕರುಣಿಸುವವರೆಗೆ ನಿರೀಕ್ಷೆಯಿಂದ ನೋಡುತ್ತಿರುವುದು.


ಹಾಗೆಯೇ ಅಬೀಮೆಲೆಕನೂ, ಅವನ ಸಂಗಡ ಇದ್ದ ಸಮಸ್ತ ಜನರೂ ರಾತ್ರಿಯಲ್ಲಿ ಎದ್ದು, ಶೆಕೆಮಿಗೆ ವಿರೋಧವಾಗಿ ನಾಲ್ಕು ಗುಂಪಾಗಿ ಹೊಂಚಿಕಾಯುತ್ತಿದ್ದರು.


ಅವಳು ತನ್ನ ಯಜಮಾನನಿಗೆ, “ನನ್ನ ಧಣಿಯು ಸಮಾರ್ಯದಲ್ಲಿರುವ ಪ್ರವಾದಿಯ ಬಳಿಯಲ್ಲಿರುತ್ತಿದ್ದರೆ, ಅವನು ಧಣಿಯ ಕುಷ್ಠರೋಗವನ್ನು ವಾಸಿಮಾಡುತ್ತಿದ್ದನು,” ಎಂದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು