Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 5:21 - ಕನ್ನಡ ಸಮಕಾಲಿಕ ಅನುವಾದ

21 ಅದರಂತೆ ಗೇಹಜಿಯು ನಾಮಾನನ ಹಿಂದೆ ಹೋದನು. ನಾಮಾನನು ತನ್ನ ಹಿಂದೆ ಓಡಿ ಬರುವವನನ್ನು ಕಂಡಾಗ, ಅವನನ್ನು ಎದುರುಗೊಳ್ಳಲು ರಥದಿಂದ ಇಳಿದು ಅವನಿಗೆ, “ಎಲ್ಲಾ ಕ್ಷೇಮವೋ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ನಾಮಾನನು ತನ್ನ ಹಿಂದೆ ಓಡುತ್ತಾ ಬರುವ ಗೇಹಜಿಯನ್ನು ಕಂಡು ರಥದಿಂದ ಇಳಿದು ಅವನನ್ನು ಎದುರುಗೊಂಡು, “ಎಲ್ಲಾ ಕ್ಷೇಮವೋ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ನಾಮಾನನು ತನ್ನ ಹಿಂದೆ ಓಡುತ್ತಾ ಬರುವ ಗೇಹಜಿಯನ್ನು ಕಂಡು, ರಥದಿಂದಿಳಿದು, ಅವನನ್ನು ಎದುರುಗೊಂಡನು, “ಕ್ಷೇಮವೇ,” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ನಾಮಾನನು ತನ್ನ ಹಿಂದೆ ಓಡುತ್ತಾ ಬರುವ ಗೇಹಜಿಯನ್ನು ಕಂಡು ರಥದಿಂದಿಳಿದು ಅವನನ್ನು ಎದುರುಗೊಂಡು - ಕ್ಷೇಮವೋ ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ನಾಮಾನನ ಬಳಿಗೆ ಓಡಿದನು. ನಾಮಾನನು ತನ್ನ ಹಿಂದೆ ಓಡಿಬರುತ್ತಿರುವ ಒಬ್ಬನನ್ನು ನೋಡಿ ಗೇಹಜಿಯನ್ನು ಸಂಧಿಸಲು ರಥದಿಂದ ಇಳಿದನು. ನಾಮಾನನು, “ಎಲ್ಲವೂ ಕ್ಷೇಮವೇ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 5:21
7 ತಿಳಿವುಗಳ ಹೋಲಿಕೆ  

ಅವನು, “ಯಾರಾದರೊಬ್ಬರು ಅದನ್ನು ವಿವರಿಸದಿದ್ದರೆ ನನಗೆ ಅರ್ಥವಾಗುವುದು ಹೇಗೆ?” ಎಂದು ಹೇಳಿ, ರಥವನ್ನು ಹತ್ತಿ ತನ್ನೊಂದಿಗೆ ಕುಳಿತುಕೊಳ್ಳುವಂತೆ ಫಿಲಿಪ್ಪನನ್ನು ಆಮಂತ್ರಿಸಿದನು.


ನೀನು ಅವಳನ್ನು ಎದುರುಗೊಳ್ಳಲು ಓಡಿಹೋಗಿ, ಅವಳಿಗೆ, ‘ನಿನಗೂ, ನಿನ್ನ ಗಂಡನಿಗೂ ಮಗನಿಗೂ ಕ್ಷೇಮವೇ? ಎಂದು ಕೇಳು,’ ” ಎಂದನು. ಅವಳು, “ಕ್ಷೇಮ” ಎಂದಳು.


ದೇವರ ಮನುಷ್ಯನಾದ ಎಲೀಷನ ಸೇವಕನಾಗಿರುವ ಗೇಹಜಿಯು, “ನನ್ನ ಯಜಮಾನನು ಈ ಅರಾಮ್ಯನಾದ ನಾಮಾನನು ತೆಗೆದುಕೊಂಡು ಬಂದದ್ದನ್ನು ಅವನ ಕೈಯಿಂದ ತೆಗೆದುಕೊಳ್ಳದೆ ಸುಮ್ಮನೆ ಕಳುಹಿಸಿದ್ದಾನೆ. ಆದರೆ ಯೆಹೋವ ದೇವರ ಜೀವದಾಣೆ, ನಾನು ಅವನ ಹಿಂದೆ ಓಡಿಹೋಗಿ, ಅವನ ಕೈಯಿಂದ ಏನಾದರೂ ತೆಗೆದುಕೊಳ್ಳುವೆನು,” ಅಂದುಕೊಂಡನು.


ಅದಕ್ಕೆ ಗೇಹಜಿಯು, “ಎಲ್ಲಾ ಕ್ಷೇಮ. ಪ್ರವಾದಿಗಳ ಮಂಡಳಿಯಲ್ಲಿಯ ಇಬ್ಬರು ಯುವಕರು ಎಫ್ರಾಯೀಮ್ ಬೆಟ್ಟದಿಂದ ಈಗಲೇ ನನ್ನ ಬಳಿಗೆ ಬಂದಿದ್ದಾರೆ. ನೀನು ದಯಮಾಡಿ ಅವರಿಗೆ ಮೂರು ಸಾವಿರ ಬೆಳ್ಳಿ ನಾಣ್ಯಗಳನ್ನೂ, ಎರಡು ಜೊತೆ ಬಟ್ಟೆಗಳನ್ನೂ ಕೊಡಬೇಕೆಂದು ನಿನಗೆ ಹೇಳು ಎಂದು ನನ್ನ ಯಜಮಾನನು ಕಳುಹಿಸಿದ್ದಾನೆ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು