2 ಅರಸುಗಳು 5:25 - ಕನ್ನಡ ಸಮಕಾಲಿಕ ಅನುವಾದ25 ಆಗ ಗೇಹಜಿಯು ಒಳಗೆ ಪ್ರವೇಶಿಸಿ, ತನ್ನ ಯಜಮಾನನ ಮುಂದೆ ನಿಂತನು. ಎಲೀಷನು ಅವನಿಗೆ, “ಗೇಹಜಿಯೇ, ಎಲ್ಲಿಗೆ ಹೋಗಿ ಬಂದೆ?” ಎಂದನು. ಅದಕ್ಕೆ ಗೇಹಜಿಯು, “ನಿನ್ನ ಸೇವಕನು ಎಲ್ಲಿಗೂ ಹೋಗಲಿಲ್ಲ,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ನಂತರ ಗೇಹಜಿಯು ತನ್ನ ಯಜಮಾನನ ಬಳಿಗೆ ಬಂದನು. ಎಲೀಷನು ಅವನನ್ನು, “ಗೇಹಜಿಯೇ, ಎಲ್ಲಿಗೆ ಹೋಗಿ ಬಂದಿರುವೆ?” ಎಂದು ಕೇಳಿದನು. ಅದಕ್ಕೆ ಅವನು, “ನಿನ್ನ ಸೇವಕನಾದ ನಾನು ಎಲ್ಲಿಯೂ ಹೋಗಲಿಲ್ಲ” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಅವರು ಹೋದನಂತರ, ಇವನು ತನ್ನ ಯಜಮಾನನ ಬಳಿಗೆ ಬಂದನು. ಎಲೀಷನು ಅವನನ್ನು, “ಗೇಹಜಿಯೇ, ಎಲ್ಲಿಗೆ ಹೋಗಿ ಬಂದೆ?” ಎಂದು ಕೇಳಿದನು. ಅದಕ್ಕೆ ಅವನು, “ನಿಮ್ಮ ಸೇವಕನಾದ ನಾನು ಎಲ್ಲಿಯೂ ಹೋಗಲಿಲ್ಲ,” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಅವರು ಹೋದನಂತರ ಇವನು ತನ್ನ ಯಜಮಾನನ ಬಳಿಗೆ ಬಂದನು. ಎಲೀಷನು ಅವನನ್ನು - ಗೇಹಜಿಯೇ, ಎಲ್ಲಿಗೆ ಹೋಗಿ ಬಂದಿ ಎಂದು ಕೇಳಿದನು. ಅದಕ್ಕೆ ಅವನು - ನಿನ್ನ ಸೇವಕನಾದ ನಾನು ಎಲ್ಲಿಯೂ ಹೋಗಲಿಲ್ಲ ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಗೇಹಜಿಯು ಒಳಗೆ ಬಂದು ತನ್ನ ಒಡೆಯನಾದ ಎಲೀಷನ ಮುಂದೆ ನಿಂತುಕೊಂಡನು. ಎಲೀಷನು ಗೇಹಜಿಗೆ, “ನೀನು ಎಲ್ಲಿಗೆ ಹೋಗಿದ್ದೆ?” ಎಂದು ಕೇಳಿದನು. ಗೇಹಜಿಯು, “ನಾನು ಎಲ್ಲಿಗೂ ಹೋಗಿರಲಿಲ್ಲ” ಎಂದನು. ಅಧ್ಯಾಯವನ್ನು ನೋಡಿ |