Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 5:3 - ಕನ್ನಡ ಸಮಕಾಲಿಕ ಅನುವಾದ

3 ಅವಳು ತನ್ನ ಯಜಮಾನನಿಗೆ, “ನನ್ನ ಧಣಿಯು ಸಮಾರ್ಯದಲ್ಲಿರುವ ಪ್ರವಾದಿಯ ಬಳಿಯಲ್ಲಿರುತ್ತಿದ್ದರೆ, ಅವನು ಧಣಿಯ ಕುಷ್ಠರೋಗವನ್ನು ವಾಸಿಮಾಡುತ್ತಿದ್ದನು,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಕೆಯು ಒಂದು ದಿನ ತನ್ನ ಯಜಮಾನಿಯ ಬಳಿ, “ನಮ್ಮ ದಣಿಯು ಸಮಾರ್ಯದಲ್ಲಿರುವ ಪ್ರವಾದಿಯ ಹತ್ತಿರ ಇದ್ದಿದ್ದರೆ ಎಷ್ಟೋ ಒಳ್ಳೆಯದಾಗುತ್ತಿತ್ತು. ಅವನು ನನ್ನ ಯಜಮಾನನನ್ನು ಕುಷ್ಠರೋಗದಿಂದ ವಾಸಿಮಾಡುತ್ತಿದ್ದನು” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಒಂದು ದಿನ ಆಕೆ ತನ್ನ ಯಜಮಾನಿಗೆ, “ನಮ್ಮ ದಣಿಯವರು ಸಮಾರಿಯದಲ್ಲಿರುವ ಪ್ರವಾದಿಯ ಹತ್ತಿರ ಇದ್ದಿದ್ದರೆ ಎಷ್ಟೋ ಒಳ್ಳೇದಾಗುತ್ತಿತ್ತು; ಅವರು ಇವರನ್ನು ಈ ಚರ್ಮರೋಗದಿಂದ ಗುಣಪಡಿಸುತ್ತಿದ್ದರು,” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆಕೆಯು ಒಂದು ದಿವಸ ತನ್ನ ಯಜಮಾನಿಗೆ - ನಮ್ಮ ದಣಿಯು ಸಮಾರ್ಯದಲ್ಲಿರುವ ಪ್ರವಾದಿಯ ಹತ್ತಿರ ಇರುತ್ತಿದ್ದರೆ ಎಷ್ಟೋ ಒಳ್ಳೇದಾಗುತ್ತಿತ್ತು. ಅವನು ಇವನನ್ನು ಕುಷ್ಠರೋಗದಿಂದ ವಾಸಿಮಾಡುತ್ತಿದ್ದನು ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಈ ಹುಡುಗಿಯು ನಾಮಾನನ ಪತ್ನಿಗೆ, “ನನ್ನ ಒಡೆಯನಾದ ನಾಮಾನನು ಸಮಾರ್ಯದಲ್ಲಿ ವಾಸಿಸುವ ಪ್ರವಾದಿಯಾದ ಎಲೀಷನನ್ನು ಭೇಟಿಮಾಡಬೇಕೆಂದು ನಾನು ಆಶಿಸುತ್ತೇನೆ. ಆ ಪ್ರವಾದಿಯು ನಾಮಾನನ ಕುಷ್ಠರೋಗವನ್ನು ಗುಣಪಡಿಸಬಲ್ಲನು” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 5:3
9 ತಿಳಿವುಗಳ ಹೋಲಿಕೆ  

ಪೌಲನು, “ಅಲ್ಪ ಕಾಲದಲ್ಲಾಗಲಿ, ದೀರ್ಘಕಾಲದಲ್ಲಾಗಲಿ ನೀವಷ್ಟೇ ಅಲ್ಲ, ನನ್ನ ಮಾತುಗಳನ್ನು ಇಂದು ಆಲಿಸುತ್ತಿರುವ ಪ್ರತಿಯೊಬ್ಬರೂ ಈ ಬೇಡಿಗಳನ್ನು ಹೊರತು ನನ್ನಂತೆಯೇ ಆಗಬೇಕೆಂದು ದೇವರನ್ನು ಪ್ರಾರ್ಥಿಸುತ್ತೇನೆ,” ಎಂದನು.


ಮೋಶೆಯು ಅವನಿಗೆ, “ನನ್ನ ನಿಮಿತ್ತವಾಗಿ ನೀನು ಹೊಟ್ಟೆಕಿಚ್ಚು ಪಡುತ್ತೀಯೋ? ಯೆಹೋವ ದೇವರ ಜನರೆಲ್ಲಾ ಪ್ರವಾದಿಗಳಾಗಿದ್ದು, ಯೆಹೋವ ದೇವರು ತನ್ನ ಆತ್ಮವನ್ನು ಅವರ ಮೇಲೆ ಇಟ್ಟರೆ ಎಷ್ಟೋ ಒಳ್ಳೆಯದು,” ಎಂದನು.


ಈಗ ನೀವು ತೃಪ್ತರಾಗಿದ್ದೀರಿ! ಈಗಾಗಲೇ ಐಶ್ವರ್ಯವಂತರಾಗಿದ್ದೀರಿ. ನಮ್ಮ ಸಹಾಯವಿಲ್ಲದೆ ಆಳುತ್ತಿದ್ದೀರಿ. ನೀವು ನಿಜವಾಗಿಯೂ ಅರಸರಾಗಿದ್ದರೆ, ನಾವು ಸಹ ನಿಮ್ಮೊಂದಿಗೆ ಸೇರಿ ಆಳುತ್ತಿದ್ದೇವಲ್ಲವೇ?


ಕುರುಡರು ನೋಡುತ್ತಾರೆ, ಕುಂಟರು ನಡೆಯುತ್ತಾರೆ, ಕುಷ್ಠರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಮರಣಹೊಂದಿದವರು ಜೀವ ಪಡೆಯುತ್ತಾರೆ ಮತ್ತು ಬಡವರಿಗೆ ಸುವಾರ್ತೆ ಸಾರಲಾಗುತ್ತದೆ.


ಇಸ್ರಾಯೇಲಿನ ಅರಸನು ತನ್ನ ವಸ್ತ್ರಗಳನ್ನು ಹರಿದುಕೊಂಡನೆಂದು ದೇವರ ಮನುಷ್ಯನಾದ ಎಲೀಷನು ಕೇಳಿದಾಗ, “ನೀನು ನಿನ್ನ ವಸ್ತ್ರಗಳನ್ನು ಹರಿದುಕೊಂಡದ್ದೇನು? ಇಸ್ರಾಯೇಲಿನಲ್ಲಿ ಪ್ರವಾದಿ ಇದ್ದಾನೆಂದು ನಾಮಾನನು ತಿಳಿದುಕೊಳ್ಳುವಂತೆ ಅವನು ನನ್ನ ಬಳಿಗೆ ಬರಲಿ,” ಎಂದು ಅರಸನಿಗೆ ಹೇಳಿ ಕಳುಹಿಸಿದನು.


ಅರಾಮಿನವರು ಗುಂಪುಗುಂಪಾಗಿ ಹೊರಟು, ಇಸ್ರಾಯೇಲ್ ದೇಶದಿಂದ ಒಬ್ಬ ಹುಡುಗಿಯನ್ನು ಸೆರೆಯಾಗಿ ಹಿಡಿದುಕೊಂಡು ಬಂದರು. ಅವಳು ನಾಮಾನನ ಹೆಂಡತಿಗೆ ಸೇವಕಿಯಾದಳು.


ನಾಮಾನನು ಹೋಗಿ ಇಸ್ರಾಯೇಲ್ ದೇಶದ ಹುಡುಗಿಯು ಹೇಳಿದ್ದನ್ನು ತನ್ನ ಯಜಮಾನನಿಗೆ ತಿಳಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು