2 ಅರಸುಗಳು 5:5 - ಕನ್ನಡ ಸಮಕಾಲಿಕ ಅನುವಾದ5 ಅರಾಮ್ಯರ ಅರಸನು, “ನೀನು ಹೋಗಿ ಬಾ. ನಾನು ಇಸ್ರಾಯೇಲಿನ ಅರಸನಿಗೆ ಪತ್ರವನ್ನು ಕಳುಹಿಸುವೆನು,” ಎಂದನು. ಅದರಂತೆ ನಾಮಾನನು 340 ಕಿಲೋಗ್ರಾಂ ಬೆಳ್ಳಿ, 64 ಕಿಲೋಗ್ರಾಂ ಬಂಗಾರ, ಹತ್ತು ಜೊತೆ ಬಟ್ಟೆಗಳನ್ನೂ ತೆಗೆದುಕೊಂಡು ಹೋದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಅರಾಮ್ಯರ ಅರಸನು ಅವನಿಗೆ, “ನೀನು ಅಲ್ಲಿಗೆ ಹೋಗಿ ಬಾ. ನಾನು ನಿನ್ನ ಕೈಯಲ್ಲಿ ಇಸ್ರಾಯೇಲರ ಅರಸನಿಗೆ ಒಂದು ಪತ್ರವನ್ನು ಕೊಡುತ್ತೇನೆ” ಎಂದನು. ನಾಮಾನನು ಹತ್ತು ತಲಾಂತು ಬೆಳ್ಳಿ, (ಮೂವತ್ತು ಸಾವಿರ) ಆರು ಸಾವಿರ ತೊಲೆ ಬಂಗಾರ, ಹತ್ತು ಜೊತೆ ಬಟ್ಟೆಗಳು ಇವುಗಳನ್ನು ತೆಗೆದುಕೊಂಡು ಸಮಾರ್ಯಕ್ಕೆ ಹೋಗಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಅವನು, “ನೀನು ಅಲ್ಲಿಗೆ ಹೋಗಿ ಬಾ; ನಾನು ನಿನ್ನ ಕೈಯಲ್ಲಿ ಇಸ್ರಯೇಲರ ಅರಸನಿಗೆ ಒಂದು ಪತ್ರವನ್ನು ಕೊಡುತ್ತೇನೆ,” ಎಂದನು. ನಾಮಾನನು ಮೂವತ್ತು ಸಾವಿರ ಬೆಳ್ಳಿ, ಆರು ಸಾವಿರ ಬಂಗಾರ ನಾಣ್ಯಗಳನ್ನೂ, ಹತ್ತು ದುಸ್ತು ಬಟ್ಟೆಗಳನ್ನೂ ತೆಗೆದುಕೊಂಡು ಸಮಾರಿಯಕ್ಕೆ ಹೋದನು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ನೀನು ಅಲ್ಲಿಗೆ ಹೋಗಿ ಬಾ; ನಾನು ನಿನ್ನ ಕೈಯಲ್ಲಿ ಇಸ್ರಾಯೇಲ್ಯರ ಅರಸನಿಗೆ ಒಂದು ಪತ್ರವನ್ನು ಕೊಡುತ್ತೇನೆ ಅಂದನು. ನಾಮಾನನು ಹತ್ತು ತಲಾಂತು ಬೆಳ್ಳಿ, ಆರು ಸಾವಿರ ತೊಲೆ ಬಂಗಾರ, ಹತ್ತು ದುಸ್ತು ಬಟ್ಟೆಗಳು ಇವುಗಳನ್ನು ತೆಗೆದುಕೊಂಡು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಆಗ ಅರಾಮ್ಯರ ರಾಜನು, “ಈಗಲೇ ಹೋಗು, ನಾನು ಇಸ್ರೇಲಿನ ರಾಜನಿಗೆ ಪತ್ರವೊಂದನ್ನು ಕಳುಹಿಸುತ್ತೇನೆ” ಎಂದು ಹೇಳಿದನು. ನಾಮಾನನು ಇಸ್ರೇಲಿಗೆ ಹೋದನು. ನಾಮಾನನು ಮುನ್ನೂರ ನಲವತ್ತು ಕಿಲೋಗ್ರಾಂ ಬೆಳ್ಳಿ, ಆರುಸಾವಿರ ಚಿನ್ನದ ನಾಣ್ಯಗಳನ್ನು ಮತ್ತು ಹತ್ತು ಥಾನು ಬಟ್ಟೆಗಳನ್ನು ಕಾಣಿಕೆಯಾಗಿ ತೆಗೆದುಕೊಂಡು ಹೋದನು. ಅಧ್ಯಾಯವನ್ನು ನೋಡಿ |