Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 5:6 - ಕನ್ನಡ ಸಮಕಾಲಿಕ ಅನುವಾದ

6 ಅವನು ಇಸ್ರಾಯೇಲಿನ ಅರಸನ ಬಳಿಗೆ ಆ ಪತ್ರವನ್ನು ತೆಗೆದುಕೊಂಡು ಬಂದನು. ಅದರಲ್ಲಿ, “ಈ ಪತ್ರ ನಿನಗೆ ಸೇರುವಾಗ, ನಿನ್ನ ಸೇವಕನಾದ ನಾಮಾನನ ಕುಷ್ಠರೋಗವನ್ನು ವಾಸಿಮಾಡುವ ಹಾಗೆ ನಿನ್ನ ಬಳಿಗೆ ಕಳುಹಿಸಿದ್ದೇನೆ,” ಎಂದು ಬರೆದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಪತ್ರವನ್ನು ಇಸ್ರಾಯೇಲರ ಅರಸನಿಗೆ ಕೊಟ್ಟನು. ಅದರಲ್ಲಿ, “ನನ್ನ ಸೇವಕನಾದ ನಾಮಾನನನ್ನು ನಿನ್ನ ಬಳಿಗೆ ಕಳುಹಿಸಿದ್ದೇನೆ, ನೀನು ಅವನ ಕುಷ್ಠರೋಗವನ್ನು ವಾಸಿಮಾಡತಕ್ಕದ್ದೆಂದು ಈ ಪತ್ರದಿಂದ ತಿಳಿದುಕೋ” ಎಂಬುದಾಗಿ ಬರೆದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ತಂದ ಪತ್ರವನ್ನು ಇಸ್ರಯೇಲರ ಅರಸನಿಗೆ ಕೊಟ್ಟನು. ಅದರಲ್ಲಿ, “ನನ್ನ ಸೇವಕ ನಾಮಾನನನ್ನು ನಿಮ್ಮ ಬಳಿಗೆ ಕಳುಹಿಸಿದ್ದೇನೆ; ನೀವು ಅವನ ಚರ್ಮರೋಗವನ್ನು ವಾಸಿಮಾಡತಕ್ಕದ್ದೆಂದು ಈ ಪತ್ರದಿಂದ ತಿಳಿದುಕೊಳ್ಳಿ,” ಎಂಬುದಾಗಿ ಬರೆದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಸಮಾರ್ಯಕ್ಕೆ ಹೊರಟುಹೋಗಿ ಪತ್ರವನ್ನು ಇಸ್ರಾಯೇಲ್ಯರ ಅರಸನಿಗೆ ಕೊಟ್ಟನು. ಅದರಲ್ಲಿ - ನನ್ನ ಸೇವಕನಾದ ನಾಮಾನನನ್ನು ನಿನ್ನ ಬಳಿಗೆ ಕಳುಹಿಸಿದ್ದೇನೆ; ನೀನು ಅವನ ಕುಷ್ಠರೋಗವನ್ನು ವಾಸಿಮಾಡತಕ್ಕದೆಂದು ಈ ಪತ್ರದಿಂದ ತಿಳಿದುಕೋ ಎಂಬದಾಗಿ ಬರೆದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನಾಮಾನನು ಅರಾಮ್ಯರ ರಾಜನಿಂದ ಇಸ್ರೇಲ್ ರಾಜನಿಗೆ ಪತ್ರವೊಂದನ್ನು ತೆಗೆದುಕೊಂಡು ಹೋದನು. ಆ ಪತ್ರದಲ್ಲಿ, “…ನನ್ನ ಸೇವಕನಾದ ನಾಮಾನನನ್ನು ನಿಮ್ಮ ಬಳಿಗೆ ನಾನು ಕಳುಹಿಸುತ್ತಿದ್ದೇನೆ. ಅವನ ಕುಷ್ಠರೋಗವನ್ನು ಗುಣಪಡಿಸಿ” ಎಂದು ಬರೆದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 5:6
3 ತಿಳಿವುಗಳ ಹೋಲಿಕೆ  

ಅರಾಮ್ಯರ ಅರಸನು, “ನೀನು ಹೋಗಿ ಬಾ. ನಾನು ಇಸ್ರಾಯೇಲಿನ ಅರಸನಿಗೆ ಪತ್ರವನ್ನು ಕಳುಹಿಸುವೆನು,” ಎಂದನು. ಅದರಂತೆ ನಾಮಾನನು 340 ಕಿಲೋಗ್ರಾಂ ಬೆಳ್ಳಿ, 64 ಕಿಲೋಗ್ರಾಂ ಬಂಗಾರ, ಹತ್ತು ಜೊತೆ ಬಟ್ಟೆಗಳನ್ನೂ ತೆಗೆದುಕೊಂಡು ಹೋದನು.


ಇಸ್ರಾಯೇಲಿನ ಅರಸನು ಆ ಪತ್ರವನ್ನು ಓದಿದ ಮೇಲೆ ತನ್ನ ವಸ್ತ್ರಗಳನ್ನು ಹರಿದುಕೊಂಡು, “ಕೊಲ್ಲುವುದಕ್ಕೂ, ಬದುಕಿಸುವುದಕ್ಕೂ ನಾನು ದೇವರೋ? ಇವನ ಕುಷ್ಠರೋಗವನ್ನು ವಾಸಿ ಮಾಡುವುದಕ್ಕೆ ನನ್ನ ಬಳಿಗೆ ಕಳುಹಿಸಿದ್ದೇನು? ಇವನು ನನಗೆ ವಿರೋಧವಾಗಿ ಜಗಳಕ್ಕೆ ಕಾರಣ ಹುಡುಕುವುದನ್ನು ನೀವೇ ನೋಡಿರಿ,” ಎಂದನು.


“ನಿಮ್ಮ ಯಜಮಾನನ ಪುತ್ರರು ನಿಮ್ಮ ಬಳಿಯಲ್ಲಿ ಇದ್ದಾರೆ. ಇದಲ್ಲದೆ ರಥಗಳು, ಕುದುರೆಗಳು, ಕೋಟೆಗಳುಳ್ಳ ಪಟ್ಟಣ, ಆಯುಧಗಳು ನಿಮ್ಮ ಬಳಿಯಲ್ಲಿವೆ. ಆದ್ದರಿಂದ ಈ ಪತ್ರವು ನಿಮಗೆ ತಲುಪಿದ ತಕ್ಷಣ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು