Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 5:7 - ಕನ್ನಡ ಸಮಕಾಲಿಕ ಅನುವಾದ

7 ಇಸ್ರಾಯೇಲಿನ ಅರಸನು ಆ ಪತ್ರವನ್ನು ಓದಿದ ಮೇಲೆ ತನ್ನ ವಸ್ತ್ರಗಳನ್ನು ಹರಿದುಕೊಂಡು, “ಕೊಲ್ಲುವುದಕ್ಕೂ, ಬದುಕಿಸುವುದಕ್ಕೂ ನಾನು ದೇವರೋ? ಇವನ ಕುಷ್ಠರೋಗವನ್ನು ವಾಸಿ ಮಾಡುವುದಕ್ಕೆ ನನ್ನ ಬಳಿಗೆ ಕಳುಹಿಸಿದ್ದೇನು? ಇವನು ನನಗೆ ವಿರೋಧವಾಗಿ ಜಗಳಕ್ಕೆ ಕಾರಣ ಹುಡುಕುವುದನ್ನು ನೀವೇ ನೋಡಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಇಸ್ರಾಯೇಲರ ಅರಸನು ಪತ್ರವನ್ನು ಓದಿದ ಕೂಡಲೆ ಬಟ್ಟೆಗಳನ್ನು ಹರಿದುಕೊಂಡು, ತನ್ನ ಪರಿವಾರದವರಿಗೆ, “ಅವನು ಕಳುಹಿಸಿದ ಮನುಷ್ಯನನ್ನು ಕುಷ್ಠರೋಗದಿಂದ ವಾಸಿಮಾಡಬೇಕಂತೆ. ಇದು ಎಂಥ ಅಪ್ಪಣೆ! ನಾನೇನು ದೇವರೋ? ಜೀವದಾನಮಾಡುವುದಕ್ಕಾಗಲಿ, ಸಾಯಿಸುವುದಕ್ಕಾಗಲಿ ನನಗೆ ಸಾಮರ್ಥ್ಯ ಉಂಟೋ? ಇವನು ನನ್ನೊಡನೆ ಜಗಳವಾಡುವುದಕ್ಕೆ ಕಾರಣ ಹುಡುಕುತ್ತಿದ್ದಾನಲ್ಲವೇ ನೀವೇ ಆಲೋಚಿಸಿ ನೋಡಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಇಸ್ರಯೇಲರ ಅರಸನು ಈ ಪತ್ರವನ್ನು ಓದಿದ ಕೂಡಲೆ, ಸಿಟ್ಟಿನಿಂದ ಬಟ್ಟೆಗಳನ್ನು ಹರಿದುಕೊಂಡು, ತನ್ನ ಪರಿವಾರದವರಿಗೆ, “ತಾನು ಕಳುಹಿಸಿದ ವ್ಯಕ್ತಿಯನ್ನು ಚರ್ಮರೋಗದಿಂದ ನಾನು ವಾಸಿಮಾಡಬೇಕಂತೆ! ಇದು ಎಂಥ ಅಪ್ಪಣೆ; ನಾನೇನು ದೇವರೋ? ಜೀವದಾನ ಮಾಡುವುದಕ್ಕಾಗಲಿ ಜೀವಹರಣ ಮಾಡುವುದಕ್ಕಾಗಲಿ ನನಗೆ ಸಾಮರ್ಥ್ಯವುಂಟೇ? ಇವನು ನನ್ನೊಡನೆ ಯುದ್ಧಮಾಡುವುದಕ್ಕೆ ನೆಪ ಹುಡುಕುತ್ತಾನಲ್ಲದೆ ಮತ್ತೇನು? ನೀವೇ ಆಲೋಚಿಸಿ ನೋಡಿ,” ಎಂದು ಹೇಳೀದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಇಸ್ರಾಯೇಲ್ಯರ ಅರಸನು ಪತ್ರವನ್ನು ಓದಿದ ಕೂಡಲೆ ಬಟ್ಟೆಗಳನ್ನು ಹರಿದುಕೊಂಡು ತನ್ನ ಪರಿವಾರದವರಿಗೆ - ತಾನು ಕಳುಹಿಸಿದ ಮನುಷ್ಯನನ್ನು ಕುಷ್ಠರೋಗದಿಂದ ವಾಸಿಮಾಡಬೇಕಂತೆ; ಇದು ಎಂಥ ಅಪ್ಪಣೆ! ನಾನೇನು ದೇವರೋ? ಜೀವದಾನ ಮಾಡುವದಕ್ಕಾಗಲಿ ಸಾಯಿಸುವದಕ್ಕಾಗಲಿ ನನಗೆ ಸಾಮರ್ಥ್ಯವುಂಟೋ? ಇವನು ನನ್ನೊಡನೆ ಜಗಳವಾಡುವದಕ್ಕೆ ಕಾರಣ ಹುಡುಕುತ್ತಾನಲ್ಲದೆ ಮತ್ತೇನು? ನೀವೇ ಆಲೋಚಿಸಿ ನೋಡಿರಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಇಸ್ರೇಲಿನ ರಾಜನು ಪತ್ರವನ್ನು ಓದಿದಾಗ, ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡು, “ನಾನು ದೇವರೇನು? ಇಲ್ಲ! ಹುಟ್ಟು ಮತ್ತು ಸಾವುಗಳ ಮೇಲೆ ನನಗೆ ಯಾವ ಶಕ್ತಿಯೂ ಇಲ್ಲ. ಹೀಗಿರುವಾಗ ಅರಾಮ್ಯರ ರಾಜನು ಕುಷ್ಠರೋಗಪೀಡಿತನಾದ ಮನುಷ್ಯನನ್ನು ನನ್ನ ಬಳಿಗೆ ಗುಣಪಡಿಸಲು ಏಕೆ ಕಳುಹಿಸಿದನು? ಇದರ ಬಗ್ಗೆ ನೀವೇ ಯೋಚಿಸಿರಿ. ಇದು ಒಂದು ಕುತಂತ್ರವೆಂಬುದು ನಿಮಗೇ ತಿಳಿಯುತ್ತದೆ. ಅರಾಮ್ಯರ ರಾಜನು ಯುದ್ಧವನ್ನು ಆರಂಭಿಸಲು ಪ್ರಯತ್ನಿಸುತ್ತಿದ್ದಾನೆ!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 5:7
19 ತಿಳಿವುಗಳ ಹೋಲಿಕೆ  

“ಯೆಹೋವ ದೇವರು ಮರಣ ತರುವವರೂ, ಬದುಕಿಸುವವರೂ ಆಗಿದ್ದಾರೆ. ಪಾತಾಳಕ್ಕೆ ಇಳಿಯುವಂತೆ ಮಾಡುತ್ತಾರೆ, ಮೇಲಕ್ಕೆ ತರುತ್ತಾರೆ.


ಆಗ ಇಸ್ರಾಯೇಲಿನ ಅರಸನು ದೇಶದ ಹಿರಿಯರನ್ನೆಲ್ಲಾ ಕರೆಯಿಸಿ ಅವರಿಗೆ, “ಇವನು ಎಂಥಾ ಕೇಡನ್ನು ಹುಡುಕುತ್ತಾನೆ, ಎಂದು ನೋಡಿರಿ. ಏಕೆಂದರೆ ಅವನು ನನ್ನ ಹೆಂಡತಿಯರಿಗೋಸ್ಕರವೂ, ನನ್ನ ಮಕ್ಕಳಿಗೋಸ್ಕರವೂ, ನನ್ನ ಬೆಳ್ಳಿಗೋಸ್ಕರವೂ, ನನ್ನ ಬಂಗಾರಕ್ಕೋಸ್ಕರವೂ ನನ್ನ ಬಳಿಗೆ ಕಳುಹಿಸಿದಾಗ, ನಾನು ಕೊಡುವುದಿಲ್ಲವೆಂದು ಅವನಿಗೆ ಹೇಳಲಿಲ್ಲ,” ಎಂದನು.


ಅದಕ್ಕೆ ಯಾಕೋಬನು ರಾಹೇಲಳ ಮೇಲೆ ಕೋಪಿಸಿಕೊಂಡು, “ನಿನಗೆ ಗರ್ಭ ಫಲವನ್ನು ಕೊಡುವ ದೇವರ ಸ್ಥಾನದಲ್ಲಿ ನಾನಿದ್ದೇನೋ?” ಎಂದನು.


“ನಾನು ಇರುವಾತನೇ ಆಗಿದ್ದೇನೆ! ನನ್ನ ಹಾಗೆ ಬೇರೆ ದೇವರು ಇಲ್ಲವೆಂದು ಈಗ ನೋಡಿರಿ. ನಾನೇ ಸಾಯಿಸುತ್ತೇನೆ, ಬದುಕಿಸುತ್ತೇನೆ, ಗಾಯಮಾಡುತ್ತೇನೆ, ನಾನೇ ಗುಣಪಡಿಸುತ್ತೇನೆ. ನನ್ನ ಕೈಯಿಂದ ತಪ್ಪಿಸುವವನು ಯಾರೂ ಇಲ್ಲ.


ಏಕೆಂದರೆ ಯೇಸುವಿನ ಮಾತಿನಲ್ಲಿ ಏನನ್ನಾದರೂ ಕಂಡುಹಿಡಿದು ಅವರ ಮೇಲೆ ತಪ್ಪು ಹೊರಿಸಬೇಕೆಂದು ಹೊಂಚಿನೋಡುತ್ತಿದ್ದರು.


ಬನ್ನಿರಿ, ನಾವು ಯೆಹೋವ ದೇವರ ಕಡೆಗೆ ತಿರುಗಿಕೊಳ್ಳೋಣ. ಅವರು ನಮ್ಮನ್ನು ಗಾಯಗೊಳಿಸಿದ್ದಾರೆ, ಅವರೇ ನಮ್ಮನ್ನು ಸ್ವಸ್ಥ ಮಾಡುವರು. ಅವರು ಹೊಡೆದಿದ್ದಾನೆ, ಅವರೇ ನಮ್ಮನ್ನು ಕಟ್ಟುವರು.


ಅರಸನು ಕೇಳುವ ಸಂಗತಿಯು ಕಷ್ಟಕರವಾದದ್ದು. ಮಾನವರ ಮಧ್ಯದಲ್ಲಿ ವಾಸಿಸದ ದೇವರುಗಳೇ ಹೊರತು, ಬೇರಾರೂ ಇದನ್ನು ಅರಸನ ಸನ್ನಿಧಿಯಲ್ಲಿ ತಿಳಿಸಲಾರರು.”


ಆದರೆ ಅಪೊಸ್ತಲರಾದ ಬಾರ್ನಬ ಮತ್ತು ಪೌಲರು ಇದನ್ನು ಕೇಳಿದಾಗ, ತಮ್ಮ ಬಟ್ಟೆಗಳನ್ನು ಹರಿದುಕೊಂಡು ಜನಸಮೂಹದ ಕಡೆಗೆ ಓಡಿಬಂದು ಕೂಗಿ ಹೇಳಿದ್ದೇನೆಂದರೆ:


ಆಗ ಮಹಾಯಾಜಕನು ತನ್ನ ಬಟ್ಟೆಗಳನ್ನು ಹರಿದುಕೊಂಡು, “ಈತನು ದೇವದೂಷಣೆ ಮಾಡಿದ್ದಾನೆ. ನಮಗೆ ಇನ್ನು ಹೆಚ್ಚಿನ ಸಾಕ್ಷಿಗಳು ಏತಕ್ಕೆ? ನೋಡಿ, ಈಗ ಈತನ ದೇವದೂಷಣೆಯನ್ನು ನೀವೇ ಕೇಳಿದ್ದೀರಲ್ಲಾ


ಈ ವಾಕ್ಯಗಳನ್ನೆಲ್ಲಾ ಕೇಳಿದ ಅರಸನಾದರೂ, ಅವರ ಸೇವಕರಾದ ಒಬ್ಬರಾದರೂ ಹೆದರಲಿಲ್ಲ.


ಆಗ ಅರಮನೆಯ ಮೇಲ್ವಿಚಾರಕನಾದ ಹಿಲ್ಕೀಯನ ಮಗ ಎಲ್ಯಾಕೀಮನೂ, ಕಾರ್ಯದರ್ಶಿಯಾದ ಶೆಬ್ನನೂ, ದಾಖಲೆಗಾರನಾದ ಆಸಾಫನ ಮಗ ಯೋವ ಎಂಬವನೂ ತಮ್ಮ ಬಟ್ಟೆಗಳನ್ನು ಹರಿದುಕೊಂಡು ಹಿಜ್ಕೀಯನ ಬಳಿಗೆ ಬಂದು ಸೈನ್ಯಾಧಿಕಾರಿಯಾದ ರಬ್ಷಾಕೆ ಹೇಳಿದ ಮಾತುಗಳನ್ನು ಅವನಿಗೆ ತಿಳಿಸಿದರು.


ಅಲ್ಲಿ ಅರಸನು ಪದ್ಧತಿಯ ಪ್ರಕಾರ ಕಂಬದ ಬಳಿಯಲ್ಲಿ ನಿಂತಿದ್ದನು. ಪ್ರಧಾನರೂ, ತುತೂರಿ ಊದುವವರೂ ಅರಸನ ಬಳಿಯಲ್ಲಿ ನಿಂತಿದ್ದರು. ಇದಲ್ಲದೆ ದೇಶದ ಜನರೆಲ್ಲರೂ ಸಂತೋಷಪಟ್ಟು ತುತೂರಿಗಳನ್ನು ಊದುತ್ತಿದ್ದರು. ಇದನ್ನು ಕಂಡ ಕೂಡಲೆ ಅತಲ್ಯಳು ತನ್ನ ವಸ್ತ್ರಗಳನ್ನು ಹರಿದುಕೊಂಡು, “ದ್ರೋಹ! ದ್ರೋಹ!” ಎಂದು ಕೂಗಿದಳು.


ಅವರಿಗೆ ಜ್ಞಾನವಿದ್ದಿದ್ದರೆ ಈ ವಿಷಯಗಳನ್ನೆಲ್ಲಾ ಗ್ರಹಿಸುತ್ತಿದ್ದರು, ತಮ್ಮ ಕಡೆಕಾಲದಲ್ಲಿ ದುರವಸ್ಥೆ ಪ್ರಾಪ್ತವಾಗುವದೆಂದು ತಿಳಿದುಕೊಳ್ಳುತ್ತಿದ್ದರು.


ಇದಲ್ಲದೆ ಕಾನಾನ್ ದೇಶವನ್ನು ಸಂಚರಿಸಿ ನೋಡಿದವರಲ್ಲಿದ್ದ ನೂನನ ಮಗ ಯೆಹೋಶುವನೂ, ಯೆಫುನ್ನೆಯ ಮಗ ಕಾಲೇಬನೂ ತಮ್ಮ ವಸ್ತ್ರಗಳನ್ನು ಹರಿದುಕೊಂಡು,


ರೂಬೇನನು ಗುಂಡಿಯ ಬಳಿಗೆ ತಿರುಗಿ ಬಂದಾಗ, ಯೋಸೇಫನು ಗುಂಡಿಯಲ್ಲಿ ಇಲ್ಲದ್ದರಿಂದ, ತನ್ನ ವಸ್ತ್ರಗಳನ್ನು ಹರಿದುಕೊಂಡನು.


ಅವನು ಇಸ್ರಾಯೇಲಿನ ಅರಸನ ಬಳಿಗೆ ಆ ಪತ್ರವನ್ನು ತೆಗೆದುಕೊಂಡು ಬಂದನು. ಅದರಲ್ಲಿ, “ಈ ಪತ್ರ ನಿನಗೆ ಸೇರುವಾಗ, ನಿನ್ನ ಸೇವಕನಾದ ನಾಮಾನನ ಕುಷ್ಠರೋಗವನ್ನು ವಾಸಿಮಾಡುವ ಹಾಗೆ ನಿನ್ನ ಬಳಿಗೆ ಕಳುಹಿಸಿದ್ದೇನೆ,” ಎಂದು ಬರೆದಿತ್ತು.


ಯೋಸೇಫನು ಅವರಿಗೆ, “ಭಯಪಡಬೇಡಿರಿ, ನಾನು ದೇವರ ಸ್ಥಾನದಲ್ಲಿ ಇದ್ದೇನೋ?


ಆಗ ದಾವೀದನೂ, ಅವನ ಸಂಗಡ ಇದ್ದ ಸಮಸ್ತ ಜನರೂ ತಮ್ಮ ವಸ್ತ್ರಗಳನ್ನು ಹರಿದುಕೊಂಡು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು