Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 5:8 - ಕನ್ನಡ ಸಮಕಾಲಿಕ ಅನುವಾದ

8 ಇಸ್ರಾಯೇಲಿನ ಅರಸನು ತನ್ನ ವಸ್ತ್ರಗಳನ್ನು ಹರಿದುಕೊಂಡನೆಂದು ದೇವರ ಮನುಷ್ಯನಾದ ಎಲೀಷನು ಕೇಳಿದಾಗ, “ನೀನು ನಿನ್ನ ವಸ್ತ್ರಗಳನ್ನು ಹರಿದುಕೊಂಡದ್ದೇನು? ಇಸ್ರಾಯೇಲಿನಲ್ಲಿ ಪ್ರವಾದಿ ಇದ್ದಾನೆಂದು ನಾಮಾನನು ತಿಳಿದುಕೊಳ್ಳುವಂತೆ ಅವನು ನನ್ನ ಬಳಿಗೆ ಬರಲಿ,” ಎಂದು ಅರಸನಿಗೆ ಹೇಳಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಇಸ್ರಾಯೇಲರ ಅರಸನು ತನ್ನ ಬಟ್ಟೆಗಳನ್ನು ಹರಿದುಕೊಂಡನೆಂಬುದನ್ನು ದೇವರ ಮನುಷ್ಯನಾದ ಎಲೀಷನು ಕೇಳಿ ದೂತರ ಮುಖಾಂತರವಾಗಿ ಅವನಿಗೆ, “ನೀನು, ನಿನ್ನ ಬಟ್ಟೆಗಳನ್ನು ಹರಿದುಕೊಂಡದ್ದೇಕೆ? ಅವನನ್ನು ನನ್ನ ಬಳಿಗೆ ಕಳುಹಿಸು, ಇಸ್ರಾಯೇಲರಲ್ಲಿ ಒಬ್ಬ ಪ್ರವಾದಿಯಿದ್ದಾನೆಂಬುದು ಅವನಿಗೆ ಗೊತ್ತಾಗಲಿ” ಎಂದು ಹೇಳಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಇಸ್ರಯೇಲರ ಅರಸನು ಸಿಟ್ಟಿನಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡನೆಂಬುದನ್ನು ದೈವಪುರುಷ ಎಲೀಷನು ಕೇಳಿದನು. ದೂತರ ಮುಖಾಂತರ ಅವನಿಗೆ, “ನೀವು ನಿಮ್ಮ ಬಟ್ಟೆಗಳನ್ನು ಹರಿದುಕೊಂಡದ್ದೇಕೆ? ಅವನನ್ನು ನನ್ನ ಬಳಿಗೆ ಕಳುಹಿಸಿ; ಇಸ್ರಯಲರಲ್ಲಿ ಒಬ್ಬ ಪ್ರವಾದಿ ಇದ್ದಾನೆಂಬುದು ಅವನಿಗೆ ಗೊತ್ತಾಗಲಿ,” ಎಂದು ಹೇಳಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಇಸ್ರಾಯೇಲ್ಯರ ಅರಸನು ತನ್ನ ಬಟ್ಟೆಗಳನ್ನು ಹರಿದುಕೊಂಡನೆಂಬದನ್ನು ದೇವರ ಮನುಷ್ಯನಾದ ಎಲೀಷನು ಕೇಳಿ ದೂತರ ಮುಖಾಂತರವಾಗಿ ಅವನಿಗೆ - ನೀನು ನಿನ್ನ ಬಟ್ಟೆಗಳನ್ನು ಹರಿದುಕೊಂಡದ್ದೇಕೆ? ಅವನನ್ನು ನನ್ನ ಬಳಿಗೆ ಕಳುಹಿಸು; ಇಸ್ರಾಯೇಲ್ಯರಲ್ಲಿ ಒಬ್ಬ ಪ್ರವಾದಿಯಿದ್ದಾನೆಂಬದು ಅವನಿಗೆ ಗೊತ್ತಾಗಲಿ ಎಂದು ಹೇಳಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಇಸ್ರೇಲಿನ ರಾಜನು ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡನೆಂಬುದು ದೇವಮನುಷ್ಯನಾದ ಎಲೀಷನಿಗೆ ತಿಳಿಯಿತು. ಎಲೀಷನು ರಾಜನಿಗೆ ಈ ಸಂದೇಶವನ್ನು ಕಳುಹಿಸಿದನು: “ನೀನು ನಿನ್ನ ಬಟ್ಟೆಗಳನ್ನು ಹರಿದುಕೊಂಡಿದ್ದು ಏಕೆ? ನಾಮಾನನು ನನ್ನ ಬಳಿಗೆ ಬರಲಿ. ಇಸ್ರೇಲಿನಲ್ಲಿ ಒಬ್ಬ ಪ್ರವಾದಿ ಇದ್ದಾನೆಂಬುದು ಅವನಿಗೆ ತಿಳಿಯುತ್ತದೆ!”

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 5:8
14 ತಿಳಿವುಗಳ ಹೋಲಿಕೆ  

ಯೆಹೂದ್ಯರಲ್ಲದವರಾಗಿರುವ ನಿಮ್ಮೊಂದಿಗೆ ಮಾತನಾಡುತ್ತಿದ್ದೇನೆ. ನಾನು ಯೆಹೂದ್ಯರಲ್ಲದವರಿಗೆ ಅಪೊಸ್ತಲನಾಗಿರುವಷ್ಟರ ಮಟ್ಟಿಗೆ ನನ್ನ ಸೇವೆಯನ್ನು ಪ್ರಭಾವಗೊಳಿಸುತ್ತೇನೆ.


ಪ್ರವಾದಿಯಿಂದ ಯೆಹೋವ ದೇವರು ಇಸ್ರಾಯೇಲರನ್ನು ಈಜಿಪ್ಟಿನೊಳಗಿಂದ ಬರಮಾಡಿ, ಆ ಪ್ರವಾದಿಯಿಂದಲೇ ಆತನು ಅವರನ್ನು ಕಾಪಾಡಿದರು.


ಅವರು ಕೇಳಲಿ ಅಥವಾ ಕೇಳದೇ ಇರಲಿ, ಏಕೆಂದರೆ ಅವರು ತಿರುಗಿಬೀಳುವ ಜನರು, ಆದರೆ ತಮ್ಮೊಳಗೆ ಪ್ರವಾದಿ ಇರುವನೆಂದು ತಿಳಿದುಕೊಂಡರೆ ಸಾಕು.


ಆಗ ನಾಮಾನನೂ, ಅವನ ಸಮಸ್ತ ಸೈನ್ಯವೂ ದೇವರ ಮನುಷ್ಯನ ಬಳಿಗೆ ತಿರುಗಿ ಬಂದರು. ಅವನು ಪ್ರವಾದಿಯ ಮುಂದೆ ಬಂದು ನಿಂತು, “ಇಸ್ರಾಯೇಲಿನಲ್ಲಿರುವ ದೇವರ ಹೊರತು ಭೂಮಿಯಲ್ಲೆಲ್ಲೂ ಬೇರೆ ದೇವರು ಇಲ್ಲವೆಂದು ನಾನು ಬಲ್ಲೆನು. ಆದಕಾರಣ ನೀನು ದಯಮಾಡಿ ನಿನ್ನ ಸೇವಕನಿಂದ ಕಾಣಿಕೆಯನ್ನು ತೆಗೆದುಕೋ,” ಎಂದನು.


ಇಸ್ರಾಯೇಲಿನ ಅರಸನು ಆ ಪತ್ರವನ್ನು ಓದಿದ ಮೇಲೆ ತನ್ನ ವಸ್ತ್ರಗಳನ್ನು ಹರಿದುಕೊಂಡು, “ಕೊಲ್ಲುವುದಕ್ಕೂ, ಬದುಕಿಸುವುದಕ್ಕೂ ನಾನು ದೇವರೋ? ಇವನ ಕುಷ್ಠರೋಗವನ್ನು ವಾಸಿ ಮಾಡುವುದಕ್ಕೆ ನನ್ನ ಬಳಿಗೆ ಕಳುಹಿಸಿದ್ದೇನು? ಇವನು ನನಗೆ ವಿರೋಧವಾಗಿ ಜಗಳಕ್ಕೆ ಕಾರಣ ಹುಡುಕುವುದನ್ನು ನೀವೇ ನೋಡಿರಿ,” ಎಂದನು.


ಅವಳು ತನ್ನ ಯಜಮಾನನಿಗೆ, “ನನ್ನ ಧಣಿಯು ಸಮಾರ್ಯದಲ್ಲಿರುವ ಪ್ರವಾದಿಯ ಬಳಿಯಲ್ಲಿರುತ್ತಿದ್ದರೆ, ಅವನು ಧಣಿಯ ಕುಷ್ಠರೋಗವನ್ನು ವಾಸಿಮಾಡುತ್ತಿದ್ದನು,” ಎಂದಳು.


ಅವರು ಅರಸನಿಗೆ, “ಒಬ್ಬ ಮನುಷ್ಯನು ನಮಗೆ ಎದುರಾಗಿ ಬಂದು, ‘ನೀವು ನಿಮ್ಮನ್ನು ಕಳುಹಿಸಿದ ಅರಸನ ಬಳಿಗೆ ಹಿಂದಿರುಗಿ ಹೋಗಿ, ಯೆಹೋವ ದೇವರು ಹೇಳುವುದು ಏನೆಂದರೆ: ಇಸ್ರಾಯೇಲಿನಲ್ಲಿ ದೇವರು ಇಲ್ಲವೆ? ನೀನು ಎಕ್ರೋನಿನ ದೇವರಾದ ಬಾಳ್ ಜೆಬೂಬನನ್ನು ವಿಚಾರಿಸಲು ಜನರನ್ನು ಕಳುಹಿಸಿರುತ್ತೀ? ಇದರ ನಿಮಿತ್ತ, ನೀನು ಏರಿದ ಮಂಚದಿಂದ ಇಳಿಯದೆ, ನಿಶ್ಚಯವಾಗಿ ಸಾಯುವೆ,’ ಎಂಬುದಾಗಿ ಅವನಿಗೆ ಹೇಳಿರಿ, ಎಂದು ತಿಳಿಸಿದನು,” ಎಂದರು.


ಸ್ತ್ರೀಯು ಎಲೀಯನಿಗೆ, “ನೀನು ದೇವರ ಮನುಷ್ಯನೆಂದೂ, ನಿನ್ನ ಬಾಯಲ್ಲಿರುವ ಯೆಹೋವ ದೇವರ ವಾಕ್ಯವು ಸತ್ಯವೆಂದೂ ಇದರಿಂದ ಈಗ ತಿಳಿದಿದ್ದೇನೆ,” ಎಂದಳು.


ದಾವೀದನು ಯೋವಾಬನಿಗೂ, ಅವನ ಸಂಗಡವಿದ್ದ ಸಮಸ್ತ ಜನರಿಗೂ, “ನೀವು ನಿಮ್ಮ ವಸ್ತ್ರಗಳನ್ನು ಹರಿದುಕೊಂಡು, ಗೋಣಿತಟ್ಟುಗಳನ್ನು ಉಟ್ಟುಕೊಂಡು, ಅಬ್ನೇರನ ಮುಂದೆ ಗೋಳಾಡಿರಿ,” ಎಂದನು. ಅರಸನಾದ ದಾವೀದನು ತಾನೇ ಅವನ ಶವದ ಪೆಟ್ಟಿಗೆಯ ಹಿಂದೆ ಹೋದನು.


ಆಗ ನಿನ್ನ ದಾಸರಾದ ಇವರೆಲ್ಲರೂ ನನ್ನ ಬಳಿಗೆ ಬಂದು, ನನಗೆ ಅಡ್ಡಬಿದ್ದು, ನನಗೆ ನೀನೂ, ನಿನ್ನನ್ನು ಹಿಂಬಾಲಿಸುವ ಜನರೆಲ್ಲರೂ, ‘ಹೊರಗೆ ಹೋಗಿರಿ,’ ಎಂದು ಹೇಳುವರು. ತರುವಾಯ ನಾನು ಹೊರಗೆ ಹೋಗುವೆನು,” ಎಂದು ಹೇಳಿ ಮೋಶೆಯು ಕೋಪಾವೇಶವುಳ್ಳವನಾಗಿ ಫರೋಹನ ಬಳಿಯಿಂದ ಹೊರಟುಹೋದನು.


ಅದಕ್ಕವನು, “ಇಗೋ, ಈ ಪಟ್ಟಣದಲ್ಲಿ ದೇವರ ಮನುಷ್ಯನು ಒಬ್ಬನಿದ್ದಾನೆ, ಅವನು ಘನವುಳ್ಳ ಮನುಷ್ಯನು. ಅವನು ಹೇಳುವುದೆಲ್ಲಾ ನಿಶ್ಚಯವಾಗಿ ಆಗುವುದು. ಈಗ ನಾವು ಅಲ್ಲಿಗೆ ಹೋಗೋಣ. ಒಂದು ವೇಳೆ ಅವನು ನಾವು ಹೋಗಬೇಕೆಂದಿರುವ ನಮ್ಮ ಮಾರ್ಗವನ್ನು ತಿಳಿಸುವನು,” ಎಂದನು.


ಆದರೆ ದೇವರ ವಾಕ್ಯವು ದೇವರ ಮನುಷ್ಯನಾಗಿರುವ ಶೆಮಾಯನಿಗೆ ಉಂಟಾಗಿ,


ಹಾಗೆಯೇ ನಾಮಾನನು ತನ್ನ ಕುದುರೆಗಳ ಸಂಗಡ, ತನ್ನ ರಥದ ಸಂಗಡ ಬಂದು, ಎಲೀಷನ ಮನೆಯ ಬಾಗಿಲ ಬಳಿಯಲ್ಲಿ ನಿಂತನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು