Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 6:1 - ಕನ್ನಡ ಸಮಕಾಲಿಕ ಅನುವಾದ

1 ಪ್ರವಾದಿಗಳ ಮಂಡಳಿಯು ಎಲೀಷನಿಗೆ, “ಇಗೋ, ಈಗ ನಾವು ನಿನ್ನ ಸಂಗಡ ವಾಸವಾಗಿರುವ ಸ್ಥಳವು ನಮಗೆ ಇಕ್ಕಟ್ಟಾಗಿದೆ. ಅಪ್ಪಣೆಕೊಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಒಂದು ದಿನ ಪ್ರವಾದಿಮಂಡಳಿಯವರು ಎಲೀಷನಿಗೆ, “ನಾವು ನಿನ್ನ ಜೊತೆಯಲ್ಲಿ ವಾಸಿಸುತ್ತಿರುವ ಈ ಸ್ಥಳವು ಬಹಳ ಇಕ್ಕಟ್ಟಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಒಂದು ಸಾರಿ ಪ್ರವಾದಿಮಂಡಲಿಯವರು ಎಲೀಷನಿಗೆ, “ನಾವು ನಿನ್ನ ಜೊತೆಯಲ್ಲಿ ವಾಸಿಸುತ್ತಿರುವ ಈ ಸ್ಥಳ ಬಹಳ ಇಕ್ಕಟ್ಟಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಒಂದು ಸಾರಿ ಪ್ರವಾದಿಮಂಡಲಿಯವರು ಎಲೀಷನಿಗೆ - ನಾವು ನಿನ್ನ ಜೊತೆಯಲ್ಲಿ ವಾಸಿಸುತ್ತಿರವ ಈ ಸ್ಥಳವು ಬಲು ಇಕ್ಕಟ್ಟಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಪ್ರವಾದಿಗಳ ಗುಂಪು ಎಲೀಷನಿಗೆ, “ನಾವು ಈ ಸ್ಥಳದಲ್ಲಿಯೇ ವಾಸಮಾಡುತ್ತಿದ್ದೇವೆ. ಆದರೆ ಇದು ನಮಗೆ ತುಂಬಾ ಚಿಕ್ಕದಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 6:1
15 ತಿಳಿವುಗಳ ಹೋಲಿಕೆ  

ಆಗ ಬೇತೇಲಿನಲ್ಲಿರುವ ಪ್ರವಾದಿಗಳ ಗುಂಪು ಎಲೀಷನ ಬಳಿಗೆ ಬಂದು ಅವನಿಗೆ, “ಇಂದು ಯೆಹೋವ ದೇವರು ನಿನ್ನ ಯಜಮಾನನನ್ನು ನಿನ್ನಿಂದ ತೆಗೆದುಕೊಳ್ಳುವರೆಂದು ತಿಳಿದಿದ್ದೀಯೋ?” ಎಂದರು. ಅದಕ್ಕವನು, “ಹೌದು, ನಾನು ಕೂಡಾ ಬಲ್ಲೆ, ಸುಮ್ಮನೆ ಇರಿ,” ಎಂದನು.


ಪ್ರವಾದಿಗಳ ಗುಂಪಿನಲ್ಲಿದ್ದ ಒಬ್ಬ ಪ್ರವಾದಿಯ ಹೆಂಡತಿ ಎಲೀಷನಿಗೆ ಕೂಗಿ, “ನಿನ್ನ ದಾಸನಾದ ನನ್ನ ಗಂಡನು ಮರಣಹೊಂದಿದನು. ನಿನ್ನ ದಾಸನು ಯೆಹೋವ ದೇವರಿಗೆ ಭಯಪಡುವವನಾಗಿದ್ದನೆಂದು ನೀನು ಬಲ್ಲೆ. ಈಗ ಸಾಲಗಾರನು ನನ್ನ ಇಬ್ಬರು ಮಕ್ಕಳನ್ನು ತನಗೆ ದಾಸರಾಗಿ ತೆಗೆದುಕೊಳ್ಳಲು ಬಂದಿದ್ದಾನೆ,” ಎಂದಳು.


ಆದರೆ ಪ್ರವಾದಿಗಳ ಮಂಡಲಿಯಲ್ಲಿ ಒಬ್ಬನು ಯೆಹೋವ ದೇವರ ಮಾತಿನಿಂದ ತನ್ನ ಜೊತೆಗಾರನಿಗೆ, “ನೀನು ನಿನ್ನ ಆಯುಧದಿಂದ ನನ್ನನ್ನು ಹೊಡೆ,” ಎಂದನು. ಆದರೆ ಆ ಜೊತೆಗಾರನನ್ನು ಹೊಡೆಯಲೊಲ್ಲದೆ ಇದ್ದನು.


ಆದ್ದರಿಂದ ಸೌಲನು ದಾವೀದನನ್ನು ಹಿಡಿದುಕೊಂಡು ಬರಲು ದೂತರನ್ನು ಕಳುಹಿಸಿದನು. ಪ್ರವಾದಿಗಳ ಗುಂಪು ಪ್ರವಾದಿಸುವುದನ್ನೂ ಅವರ ಮೇಲೆ ಯಜಮಾನನಾಗಿರುವ ಸಮುಯೇಲನು ನಿಂತಿರುವುದನ್ನೂ ಕಂಡಾಗ, ದೇವರ ಆತ್ಮ ಸೌಲನ ದೂತರ ಮೇಲೆ ಬಂದಿತು, ಅವರೂ ಸಹ ಪ್ರವಾದಿಸಿದರು.


ಇದಲ್ಲದೆ ದಾನನ ಗೋತ್ರದ ಮೇರೆಯು ಅವರಿಗೆ ಸಾಲದ್ದರಿಂದ ಅವರು ಹೊರಟುಹೋಗಿ ಲೆಷೆಮಿನ ಮೇಲೆ ಖಡ್ಗದಿಂದ ಯುದ್ಧಮಾಡಿ, ಅದನ್ನು ಸೋಲಿಸಿ, ಸ್ವಾಧೀನಮಾಡಿಕೊಂಡರು. ಅವರು ಅದರಲ್ಲಿ ವಾಸವಾಗಿದ್ದು ಲೆಷೆಮಿಗೆ ತಮ್ಮ ತಂದೆಯಾದ ದಾನನ ಹೆಸರಿನ ಪ್ರಕಾರ ದಾನ್ ಎಂದು ಹೆಸರಿಟ್ಟರು.


ಯೋಸೇಫನ ಸಂತತಿಯರು ಯೆಹೋಶುವನಿಗೆ, “ಯೆಹೋವ ದೇವರು ನಮ್ಮನ್ನು ಈವರೆಗೂ ಆಶೀರ್ವದಿಸುತ್ತಾ ಬಂದದ್ದರಿಂದ, ನಾವು ಮಹಾ ಜನಾಂಗವಾಗಿದ್ದೇವೆ. ಹೀಗಿರುವಾಗ ನೀವು ನಮಗೆ ಸೊತ್ತಾಗಿ ಒಂದೇ ಒಂದು ಭಾಗವನ್ನು ಮಾತ್ರ ಪಾಲನ್ನಾಗಿ ಕೊಟ್ಟಿದ್ದು ಏಕೆ?” ಎಂದು ಕೇಳಿದರು.


“ದೇವರು ನಿನ್ನನ್ನು ಇಕ್ಕಟ್ಟಿನೊಳಗಿಂದ ಬಿಡಿಸುವರು; ಇಕ್ಕಟ್ಟಿಲ್ಲದ ವಿಶಾಲ ಸ್ಥಳವು ನಿನಗೆ ದೊರೆಯುವುದು; ನಿನ್ನ ಆದರಣೆಗಾಗಿ ನಿನ್ನ ಮೇಜು ಉತ್ತಮ ಆಹಾರಗಳಿಂದ ತುಂಬಿರುವುದು.


ಎಲೀಷನು ತಿರುಗಿ ಗಿಲ್ಗಾಲಿಗೆ ಬಂದಾಗ, ದೇಶದಲ್ಲಿ ಬರ ಉಂಟಾಗಿತ್ತು. ಪ್ರವಾದಿಗಳ ಮಂಡಳಿ ಅವನ ಮುಂದೆ ಕುಳಿತಿರುವಾಗ, ಅವನು ತನ್ನ ಸೇವಕನಿಗೆ, “ನೀನು ದೊಡ್ಡ ಗಡಿಗೆಯನ್ನು ಮೇಲಿಟ್ಟು, ಈ ಜನರಿಗೋಸ್ಕರ ಅಡಿಗೆ ಮಾಡು,” ಎಂದನು.


ಬೆಂಕಿಯ ಶಕ್ತಿಯನ್ನು ಆರಿಸಿದರು, ಕತ್ತಿಯ ಬಾಯಿಂದ ತಪ್ಪಿಸಿಕೊಂಡರು, ಬಲಹೀನತೆಯಿಂದ ಬಲಿಷ್ಠರಾದರು, ಯುದ್ಧದಲ್ಲಿ ಪರಾಕ್ರಮಶಾಲಿಗಳಾದರು, ಪರರ ಸೈನ್ಯಗಳನ್ನು ಓಡಿಸಿಬಿಟ್ಟರು,


ನಾವು ಯೊರ್ದನಿನವರೆಗೂ ಹೋಗಿ, ಪ್ರತಿ ಮನುಷ್ಯನು ಅಲ್ಲಿಂದ ಒಂದೊಂದು ತೊಲೆಯನ್ನು ತೆಗೆದುಕೊಂಡು ಬಂದು, ವಾಸವಾಗಿರುವುದಕ್ಕೆ ನಮಗೋಸ್ಕರ ಒಂದು ಸ್ಥಳವನ್ನು ಅಲ್ಲಿ ಮಾಡುವೆವು,” ಎಂದರು. ಅವನು, “ಹೋಗಿರಿ,” ಎಂದನು.


ಆಗ ಯೆರಿಕೋವಿನಲ್ಲಿರುವ ಪ್ರವಾದಿಗಳ ಗುಂಪು ಎಲೀಷನ ಬಳಿಗೆ ಬಂದು ಅವನಿಗೆ, “ಯೆಹೋವ ದೇವರು ಇಂದು ನಿನ್ನ ಯಜಮಾನನನ್ನು ನಿನ್ನ ಬಳಿಯಿಂದ ತೆಗೆದುಕೊಳ್ಳುವನೆಂದು ತಿಳಿದಿದ್ದೀಯೋ?” ಎಂದರು. ಅದಕ್ಕವನು, “ನಾನು ಕೂಡಾ ಬಲ್ಲೆ, ಸುಮ್ಮನೆ ಇರಿ,” ಎಂದನು.


ಪ್ರವಾದಿಗಳ ಗುಂಪಿನಲ್ಲಿ ಐವತ್ತು ಮಂದಿ ಹೋಗಿ ದೂರದಲ್ಲಿ ಎದುರಾಗಿ ನಿಂತರು. ಆದರೆ ಆ ಇಬ್ಬರು ಯೊರ್ದನ್ ನದಿ ಬಳಿಯಲ್ಲಿ ನಿಂತರು.


ಯೆರಿಕೋವಿನ ಬಳಿಯಲ್ಲಿ ಎದುರಾಗಿದ್ದ ಪ್ರವಾದಿಗಳ ಗುಂಪು ಅವನನ್ನು ಕಂಡಾಗ, “ಎಲೀಯನ ಆತ್ಮವು ಎಲೀಷನ ಮೇಲೆ ನಿಂತಿರುವುದು,” ಎಂದು ಹೇಳಿ, ಎದುರುಗೊಳ್ಳಲು ಬಂದು, ಅವನ ಮುಂದೆ ನೆಲದವರೆಗೂ ಅಡ್ಡಬಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು