Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 6:10 - ಕನ್ನಡ ಸಮಕಾಲಿಕ ಅನುವಾದ

10 ಹೀಗೆಯೇ ದೇವರ ಮನುಷ್ಯನು ತನ್ನನ್ನು ಎಚ್ಚರಿಸಿ, ತನಗೆ ಹೇಳಿದ ಸ್ಥಳಕ್ಕೆ ಇಸ್ರಾಯೇಲಿನ ಅರಸನು ಹೇಳಿ ಕಳುಹಿಸಿ, ತನ್ನ ಸೈನ್ಯವನ್ನು ಕರೆಯಿಸಿಕೊಂಡನು. ಹೀಗೆ ಅವನು ಹಲವು ಸಾರಿ ತಪ್ಪಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ದೇವರ ಮನುಷ್ಯನು ಸೂಚಿಸುವ ಎಲ್ಲಾ ಸ್ಥಳಗಳಿಗೂ ಇಸ್ರಾಯೇಲರ ಅರಸನು ಹೇಳಿ ಕಳುಹಿಸುತ್ತಿದ್ದನು. ಹೀಗೆ ಅವನು ಹಲವು ಸಾರಿ ಅರಾಮ್ಯರ ಅರಸನ ಕೈಗೆ ಸಿಕ್ಕದಂತೆ ತಪ್ಪಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಹೀಗೆ ಅವನು ಹಲವು ಸಾರಿ ಸಿರಿಯಾದ ಅರಸನ ಕೈಗೆ ಸಿಕ್ಕದಂತೆ ತಪ್ಪಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ದೇವರ ಮನುಷ್ಯನು ಸೂಚಿಸುವ ಎಲ್ಲಾ ಸ್ಥಳಗಳಿಗೂ ಇಸ್ರಾಯೇಲ್ಯರ ಅರಸನು ಹೇಳಿಕಳುಹಿಸುತ್ತಿದ್ದನು. ಹೀಗೆ ಅವನು ಹಲವು ಸಾರಿ ಅರಾಮ್ಯರ ಅರಸನ ಕೈಗೆ ಸಿಕ್ಕದಂತೆ ತಪ್ಪಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಇಸ್ರೇಲಿನ ರಾಜನು ತನ್ನ ಜನರಿಗೆ ಸಂದೇಶವೊಂದನ್ನು ಕಳುಹಿಸಿ, ದೇವಮನುಷ್ಯನು ಎಚ್ಚರವಾಗಿರಲು ತಿಳಿಸಿದ ಸ್ಥಳದಲ್ಲಿ ತಿರುಗಾಡದಿರುವಂತೆ ಸೂಚಿಸಿ ಕೆಲವು ಜನರನ್ನು ರಕ್ಷಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 6:10
17 ತಿಳಿವುಗಳ ಹೋಲಿಕೆ  

ನಂಬಿಕೆಯಿಂದಲೇ ನೋಹನು ಇನ್ನೂ ಕಾಣದಿದ್ದವುಗಳ ವಿಷಯವಾಗಿ ದೇವರಿಂದ ಎಚ್ಚರಿಕೆ ಪಡೆದು ಭಕ್ತಿಯಲ್ಲಿ ತನ್ನ ಮನೆಯವರ ರಕ್ಷಣೆಗಾಗಿ ನಾವೆಯನ್ನು ಸಿದ್ಧಮಾಡಿದನು. ಅವನು ಲೋಕದವರನ್ನು ಖಂಡಿಸಿ ತರುವಾಯ ನಂಬಿಕೆಗೆ ಅನುಸಾರವಾಗಿ ನಂಬಿಕೆಯಿಂದ ಬರುವ ನೀತಿಗೆ ಬಾಧ್ಯನಾದನು.


‘ಪೌಲನೇ, ಭಯಪಡಬೇಡ. ನೀನು ಕೈಸರನ ಮುಂದೆ ನಿಲ್ಲಬೇಕು. ಇಗೋ, ದೇವರು ನಿನ್ನೊಂದಿಗೆ ಪ್ರಯಾಣ ಮಾಡುತ್ತಿರುವವರ ಪ್ರಾಣಗಳನ್ನು ನಿನಗೆ ಉಳಿಸಿಕೊಟ್ಟಿದ್ದಾರೆ,’ ಎಂದನು.


ಆದರೆ ಫರಿಸಾಯರು ಹಾಗೂ ಸದ್ದುಕಾಯರಲ್ಲಿ ಅನೇಕರು ದೀಕ್ಷಾಸ್ನಾನಕ್ಕಾಗಿ ಬರುವುದನ್ನು ಕಂಡು, ಯೋಹಾನನು ಅವರಿಗೆ: “ಎಲೈ ಸರ್ಪಸಂತತಿಯವರೇ! ಮುಂದೆ ಬರುವ ಕೋಪಾಗ್ನಿಯಿಂದ ತಪ್ಪಿಸಿಕೊಳ್ಳಲು ನಿಮ್ಮನ್ನು ಎಚ್ಚರಿಸಿದವರು ಯಾರು?


ಅನಂತರ ಅವರು ಕನಸಿನಲ್ಲಿ ಹೆರೋದನ ಬಳಿಗೆ ಹಿಂತಿರುಗಬಾರದೆಂಬ ಎಚ್ಚರಿಕೆಯನ್ನು ಹೊಂದಿದ್ದರಿಂದ, ಬೇರೆ ದಾರಿಯಿಂದ ತಮ್ಮ ದೇಶಕ್ಕೆ ಹೊರಟು ಹೋದರು.


ಜಾಣನು ಕೇಡನ್ನು ಮುಂದಾಗಿ ಕಂಡು ಅಡಗಿಕೊಳ್ಳುತ್ತಾನೆ; ಆದರೆ ಮುಗ್ಧನು ಮುಂದೆ ಹೋಗಿ ಹಾನಿಗೆ ಈಡಾಗುತ್ತಾನೆ.


ಅವರು ಉದಯದಲ್ಲಿ ಎದ್ದು ತೆಕೋವದ ಮರುಭೂಮಿಗೆ ಹೊರಟರು. ಅವರು ಹೊರಟು ಹೋಗುತ್ತಿರುವಾಗ ಯೆಹೋಷಾಫಾಟನು ನಿಂತುಕೊಂಡು, “ಯೆಹೂದದವರೇ, ಯೆರೂಸಲೇಮಿನ ನಿವಾಸಿಗಳೇ, ನನ್ನ ಮಾತನ್ನು ಕೇಳಿರಿ. ನಿಮ್ಮ ದೇವರಾದ ಯೆಹೋವ ದೇವರನ್ನು ನಂಬಿ ಸ್ಥಿರವಾಗಿರಿ. ದೇವರ ಪ್ರವಾದಿಗಳನ್ನು ನಂಬಿರಿ, ಆಗ ಜಯ ಹೊಂದುವಿರಿ,” ಎಂದನು.


ಆಗ ಎಲೀಷನು ಮರಣಕರ ವ್ಯಾಧಿಯಿಂದ ಬಳಲುತ್ತಿದ್ದಾಗ, ಇಸ್ರಾಯೇಲಿನ ಅರಸನಾದ ಯೋವಾಷನು ಅವನ ಬಳಿಗೆ ಬಂದು, ಅವನ ಮೇಲೆ ಬಿದ್ದು, “ನನ್ನ ತಂದೆಯೇ, ನನ್ನ ತಂದೆಯೇ, ಇಸ್ರಾಯೇಲಿನ ರಥಗಳೂ ಕುದುರೆ ಸವಾರರು ಆಗಿದ್ದವನೇ!” ಎಂದು ಹೇಳುತ್ತಾ ಅತ್ತನು.


ಆಗ ಅವನು ಇಳಿದು ಹೋಗಿ ದೇವರ ಮನುಷ್ಯನ ಮಾತಿನ ಪ್ರಕಾರ ಯೊರ್ದನಿನಲ್ಲಿ ಏಳು ಸಾರಿ ಮುಳುಗಿದನು. ಆಗ ಅವನ ಶರೀರವು ಚಿಕ್ಕ ಮಗುವಿನ ಶರೀರದ ಹಾಗೆ ಮಾರ್ಪಟ್ಟಿತು, ಅವನು ಶುದ್ಧನಾದನು.


ಎಲೀಷನು ಅದನ್ನು ಕಂಡು, “ನನ್ನ ತಂದೆಯೇ, ನನ್ನ ತಂದೆಯೇ, ಇಸ್ರಾಯೇಲಿನ ರಥ ಮತ್ತು ಸಾರಥಿಯಾದ್ದಾತನೇ!” ಎಂದು ಕೂಗಿದನು. ಮತ್ತೆ ಅವನನ್ನು ಕಾಣಲಿಲ್ಲ. ಆಗ ಅವನು ತನ್ನ ವಸ್ತ್ರಗಳನ್ನು ತೆಗೆದು ಎರಡು ತುಂಡುತುಂಡಾಗಿ ಹರಿದನು.


ಅಹಾಬನು ಪ್ರಾಂತಗಳ ಪ್ರಧಾನರ ಕಿರಿಯ ಅಧಿಕಾರಿಗಳನ್ನು ಲೆಕ್ಕಮಾಡಿದಾಗ ಅವರು ಇನ್ನೂರ ಮೂವತ್ತೆರಡು ಜನರಿದ್ದರು. ಅವರ ತರುವಾಯ ಇಸ್ರಾಯೇಲರಾದ ಸೈನಿಕರನ್ನು ಲೆಕ್ಕಮಾಡಿದಾಗ ಏಳು ಸಾವಿರ ಜನರಿದ್ದರು.


ಆಗ ದೇವರ ಮನುಷ್ಯನು ಇಸ್ರಾಯೇಲಿನ ಅರಸನಿಗೆ, “ಅಂಥಾ ಸ್ಥಳವನ್ನು ಹಾದುಹೋಗದೆ ಜಾಗ್ರತೆಯಾಗಿ ಇರು. ಏಕೆಂದರೆ ಅರಾಮ್ಯರು ಅಲ್ಲಿಗೆ ಇಳಿದು ಬಂದಿದ್ದಾರೆ,” ಎಂದು ಹೇಳಿ ಕಳುಹಿಸಿದನು.


ಆದ್ದರಿಂದ ಅರಾಮ್ಯರ ಅರಸನ ಹೃದಯವು ಇದರ ನಿಮಿತ್ತ ಕಳವಳಗೊಂಡು, ಅವನು ತನ್ನ ಸೇವಕರನ್ನು ಕರೆದು ಅವರಿಗೆ, “ನಮ್ಮಲ್ಲಿ ಇಸ್ರಾಯೇಲಿನ ಅರಸನ ಕಡೆಯವನು ಯಾರು? ನೀವು ನನಗೆ ತಿಳಿಸುವುದಿಲ್ಲವೋ?” ಎಂದನು.


ಯೆಹೋವ ದೇವರು ತಿಳಿಸಿದ್ದರಿಂದಲೇ ಶತ್ರುಗಳು ನನಗೆ ವಿರುದ್ಧ ಹೂಡಿದ್ದ ಕುತಂತ್ರವು ನನಗೆ ಗೊತ್ತಾಯಿತು. ಅವರ ಕೃತ್ಯಗಳನ್ನು ನನಗೆ ತೋರಿಸಲಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು