Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 6:14 - ಕನ್ನಡ ಸಮಕಾಲಿಕ ಅನುವಾದ

14 ಆದ್ದರಿಂದ ಅರಾಮ್ಯರ ಅರಸನು ಅಲ್ಲಿಗೆ ಕುದುರೆಗಳನ್ನೂ ರಥಗಳನ್ನೂ ಮಹಾಸೈನ್ಯವನ್ನೂ ಕಳುಹಿಸಿದನು. ಅವರು ರಾತ್ರಿಯಲ್ಲಿ ಬಂದು ಪಟ್ಟಣವನ್ನು ಸುತ್ತಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆಗ ಅರಸನು ರಥರಥಾಶ್ವ ಸಹಿತವಾದ ಮಹಾಸೈನ್ಯವನ್ನು ದೋತಾನಿಗೆ ಕಳುಹಿಸಿದನು. ಸೈನ್ಯದವರು ರಾತ್ರಿಯಲ್ಲಿ ಆ ಪಟ್ಟಣವನ್ನು ಸಮೀಪಿಸಿ ಅದಕ್ಕೆ ಮುತ್ತಿಗೆ ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಆ ಪ್ರವಾದಿ ದೋತಾನಿನಲ್ಲಿರುತ್ತಾನೆಂದು ತಿಳಿದುಕೊಂಡು ರಥರಥಾಶ್ವಸಹಿತವಾದ ಮಹಾಸೈನ್ಯವನ್ನು ಅಲ್ಲಿಗೆ ಕಳುಹಿಸಿದನು. ಸೈನ್ಯದವರು ರಾತ್ರಿಯಲ್ಲೇ ಆ ಪಟ್ಟಣವನ್ನು ಸಮೀಪಿಸಿ, ಅದಕ್ಕೆ ಮುತ್ತಿಗೆ ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ರಥರಥಾಶ್ವಸಹಿತವಾದ ಮಹಾಸೈನ್ಯವನ್ನು ಅಲ್ಲಿಗೆ ಕಳುಹಿಸಿದನು. ಸೈನ್ಯದವರು ರಾತ್ರಿಯಲ್ಲಿ ಆ ಪಟ್ಟಣವನ್ನು ಸಮೀಪಿಸಿ ಅದಕ್ಕೆ ಮುತ್ತಿಗೆಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆಗ ಅರಾಮ್ಯರ ರಾಜನು ಕುದುರೆಗಳನ್ನು, ರಥಗಳನ್ನು ಮತ್ತು ದೊಡ್ಡ ಸೇನೆಯನ್ನು ದೋತಾನಿಗೆ ಕಳುಹಿಸಿದನು. ಅವರು ರಾತ್ರಿಯಲ್ಲಿ ಬಂದು ನಗರವನ್ನು ಸುತ್ತುವರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 6:14
10 ತಿಳಿವುಗಳ ಹೋಲಿಕೆ  

ಅದೇ ಗಳಿಗೆಯಲ್ಲಿ ಯೇಸು ಜನಸಮೂಹಕ್ಕೆ, “ಒಬ್ಬ ಕಳ್ಳನನ್ನು ಹಿಡಿಯುವುದಕ್ಕೆ ಬರುವಂತೆ ಖಡ್ಗಗಳೊಂದಿಗೆ ದೊಣ್ಣೆಗಳೊಂದಿಗೆ ನನ್ನನ್ನು ಹಿಡಿಯುವುದಕ್ಕಾಗಿ ಬಂದಿರಾ? ನಾನು ದಿನಾಲು ನಿಮ್ಮ ಸಂಗಡ ದೇವಾಲಯದಲ್ಲಿ ಕುಳಿತುಕೊಂಡು ಬೋಧಿಸುತ್ತಿದ್ದಾಗ, ನೀವು ನನ್ನನ್ನು ಹಿಡಿಯಲಿಲ್ಲ.


ಯೇಸು ಇನ್ನೂ ಮಾತನಾಡುತ್ತಿರುವಾಗಲೇ, ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಯೂದನು ಬಂದನು. ಮುಖ್ಯಯಾಜಕರ ಮತ್ತು ಜನರ ಹಿರಿಯರ ಕಡೆಯಿಂದ ಬಂದಿದ್ದ ಜನರ ದೊಡ್ಡ ಸಮೂಹವು ಖಡ್ಗ ದೊಣ್ಣೆಗಳನ್ನು ಹಿಡಿದುಕೊಂಡು ಅವನೊಂದಿಗಿತ್ತು.


ಅಸ್ಸೀರಿಯದ ಅರಸನು ತನ್ನ ಅತಿ ಪ್ರಮುಖ ಅಧಿಕಾರಿಯನ್ನೂ, ಮುಖ್ಯ ನಾಯಕರನ್ನೂ, ಸೈನ್ಯಾಧಿಕಾರಿಯನ್ನೂ ಲಾಕೀಷಿನಿಂದ ದೊಡ್ಡ ಸೈನ್ಯದೊಂದಿಗೆ ರಬ್ಷಾಕೆ ಎಂಬವನನ್ನೂ ಯೆರೂಸಲೇಮಿನಲ್ಲಿದ್ದ ಹಿಜ್ಕೀಯನ ಬಳಿಗೆ ಕಳುಹಿಸಿದನು. ಅವರು ಯೆರೂಸಲೇಮಿಗೆ ಬಂದು ಅಗಸರ ಹೊಲದ ಮಾರ್ಗದಲ್ಲಿ ಮೇಲಿನ ಕೆರೆಯ ಕಾಲುವೆಯ ಸಮೀಪದಲ್ಲಿ ನಿಂತುಕೊಂಡರು.


ಆಗ ಸೌಲನು ಸಮಸ್ತ ಇಸ್ರಾಯೇಲಿನಲ್ಲಿ ಶ್ರೇಷ್ಠರಾದ ಮೂರು ಸಾವಿರ ಸೈನಿಕರನ್ನು ತೆಗೆದುಕೊಂಡು ದಾವೀದನನ್ನೂ, ಅವನ ಜನರನ್ನೂ ಹುಡುಕಲು ಕಾಡುಮೇಕೆಗಳಿರುವ ಬಂಡೆಗಳಿಗೆ ಹೋದನು.


ಸೌಲನು ಬೆಟ್ಟದ ಇನ್ನೊಂದು ಕಡೆಯಲ್ಲಿ ಹೋದನು. ದಾವೀದನೂ, ಅವನ ಜನರೂ ಬೆಟ್ಟದ ಆ ಕಡೆಯಲ್ಲಿ ಹೋದರು. ಸೌಲನಿಗೆ ಭಯಪಟ್ಟು ತಪ್ಪಿಸಿಕೊಂಡು ಹೋಗಲು ದಾವೀದನು ತ್ವರೆಪಡುತ್ತಿದ್ದರು. ಆಗ ಸೌಲನೂ, ಅವನ ಜನರೂ ಅವರನ್ನು ಹಿಡಿಯುವಂತೆ ಸುತ್ತಿಕೊಂಡರು.


“ಸೈನ್ಯಗಳು ಯೆರೂಸಲೇಮಿಗೆ ಮುತ್ತಿಗೆ ಹಾಕುವುದನ್ನು ನೀವು ಕಾಣುವಾಗ ಅದು ಹಾಳಾಗುವ ಕಾಲವು ಸಮೀಪಿಸಿದೆ ಎಂದು ತಿಳಿದುಕೊಳ್ಳಿರಿ.


ಆಗ ಅರಾಮ್ಯರ ಅರಸನು, “ನಾನು ಅವನನ್ನು ಹಿಡಿಯುವ ಹಾಗೆ ನೀವು ಹೋಗಿ ಅವನು ಎಲ್ಲಿದ್ದಾನೋ ನೋಡಿರಿ,” ಎಂದನು. ಅವನು ದೋತಾನಿನಲ್ಲಿದ್ದಾನೆಂದು ಅವನಿಗೆ ತಿಳಿಸಿದರು.


ದೇವರ ಮನುಷ್ಯನ ಸೇವಕನು ಉದಯದಲ್ಲಿ ಎದ್ದು ಹೊರಗೆ ಹೊರಟಾಗ, ಕುದುರೆಗಳೂ ರಥಗಳೂ ಉಳ್ಳ ಸೈನ್ಯ ಪಟ್ಟಣವನ್ನು ಸುತ್ತಿಕೊಂಡಿರುವುದನ್ನು ಕಂಡು ಎಲೀಷನಿಗೆ, “ಅಯ್ಯೋ! ನನ್ನ ಯಜಮಾನನೇ, ನಾವು ಏನು ಮಾಡುವುದು?” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು