2 ಅರಸುಗಳು 6:17 - ಕನ್ನಡ ಸಮಕಾಲಿಕ ಅನುವಾದ17 ಆಗ ಎಲೀಷನು, “ಯೆಹೋವ ದೇವರೇ, ನೀವು ದಯಮಾಡಿ ಇವನು ಕಾಣುವ ಹಾಗೆ ಇವನ ಕಣ್ಣುಗಳನ್ನು ತೆರೆಯಿರಿ,” ಎಂದು ಪ್ರಾರ್ಥಿಸಿದನು. ಯೆಹೋವ ದೇವರು ಆ ಯುವ ಸೇವಕನ ಕಣ್ಣುಗಳನ್ನು ತೆರೆದಾಗ, ಎಲೀಷನ ಸುತ್ತಲೂ ಬೆಟ್ಟದಲ್ಲಿ ಬೆಂಕಿಯ ರಥಗಳೂ, ಕುದುರೆಗಳೂ ತುಂಬಿರುವುದನ್ನು ಅವನು ಕಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 “ಯೆಹೋವನೇ, ಇವನು ನೋಡುವಂತೆ ಇವನ ಕಣ್ಣುಗಳನ್ನು ತೆರೆ” ಎಂದು ಪ್ರಾರ್ಥಿಸಲು ಯೆಹೋವನು ಅವನ ಕಣ್ಣುಗಳನ್ನು ತೆರೆದನು. ಆಗ ಎಲೀಷನ ರಕ್ಷಣೆಗಾಗಿ ಸುತ್ತಣ ಗುಡ್ಡಗಳಲ್ಲಿ ಬಂದು ನಿಂತಿದ್ದ ಅಗ್ನಿಮಯವಾದ ರಥಾರಥಾಶ್ವಗಳು ಆ ಸೇವಕನಿಗೆ ಕಂಡವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 “ಹೇ ಸರ್ವೇಶ್ವರಾ, ಇವನು ನೋಡುವಂತೆ ಇವನ ಕಣ್ಣುಗಳನ್ನು ತೆರೆಯಿರಿ,” ಎಂದು ಪ್ರಾರ್ಥಿಸಿದನು. ಸರ್ವೇಶ್ವರ ಅವನ ಕಣ್ಣುಗಳನ್ನು ತೆರೆದರು. ಆಗ ಎಲೀಷನ ರಕ್ಷಣೆಗಾಗಿ ಸುತ್ತಣ ಗುಡ್ಡಗಳಲ್ಲಿ ಬಂದು ನಿಂತಿದ್ದ ಅಗ್ನಿಮಯವಾದ ರಥರಥಾಶ್ವಗಳು ಆ ಸೇವಕನಿಗೆ ಕಂಡವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಯೆಹೋವನೇ, ಇವನು ನೋಡುವಂತೆ ಇವನ ಕಣ್ಣುಗಳನ್ನು ತೆರೆ ಎಂದು ಪ್ರಾರ್ಥಿಸಲು ಯೆಹೋವನು ಅವನ ಕಣ್ಣುಗಳನ್ನು ತೆರೆದನು. ಆಗ ಎಲೀಷನ ರಕ್ಷಣೆಗಾಗಿ ಸುತ್ತಣ ಗುಡ್ಡಗಳಲ್ಲಿ ಬಂದು ನಿಂತಿದ್ದ ಅಗ್ನಿಮಯವಾದ ರಥರಥಾಶ್ವಗಳು ಆ ಸೇವಕನಿಗೆ ಕಂಡವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ನಂತರ ಎಲೀಷನು ಪ್ರಾರ್ಥಿಸುತ್ತಾ, “ಯೆಹೋವನೇ, ನನ್ನ ಸೇವಕನ ಕಣ್ಣುಗಳನ್ನು ತೆರೆದು ಅವನು ನೋಡುವಂತೆ ಮಾಡೆಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ” ಎಂದು ಹೇಳಿದನು. ಯೆಹೋವನು ಸೇವಕನ ಕಣ್ಣುಗಳನ್ನು ತೆರೆದನು. ಆ ಸೇವಕನು ಪರ್ವತವನ್ನು ತುಂಬಿರುವ ಬೆಂಕಿಯಂತಿರುವ ಕುದುರೆಗಳನ್ನು ಮತ್ತು ರಥಗಳನ್ನು ನೋಡಿದನು. ಅವರೆಲ್ಲ ಎಲೀಷನ ಸುತ್ತಲೂ ಇದ್ದರು! ಅಧ್ಯಾಯವನ್ನು ನೋಡಿ |