2 ಅರಸುಗಳು 6:18 - ಕನ್ನಡ ಸಮಕಾಲಿಕ ಅನುವಾದ18 ಶತ್ರುಗಳು ಸಮೀಪಕ್ಕೆ ಬಂದಾಗ ಎಲೀಷನು, “ಯೆಹೋವ ದೇವರೇ, ನೀವು ದಯಮಾಡಿ ಈ ಜನರನ್ನು ಕುರುಡರನ್ನಾಗಿ ಮಾಡಿರಿ,” ಎಂದು ಪ್ರಾರ್ಥಿಸಿದನು. ಎಲೀಷನ ಮಾತಿನ ಹಾಗೆಯೇ ದೇವರು ಅವರನ್ನು ಕುರುಡರನ್ನಾಗಿ ಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಶತ್ರುಗಳಾದ ಅರಾಮ್ಯರು ಸಮೀಪಕ್ಕೆ ಬಂದಾಗ ಎಲೀಷನು, “ಸ್ವಾಮಿ, ಈ ಜನರನ್ನು ಕುರುಡರನ್ನಾಗಿ ಮಾಡು” ಎಂದು ಯೆಹೋವನನ್ನು ಪ್ರಾರ್ಥಿಸಿದನು. ಯೆಹೋವನು ಅವನ ಮೊರೆಯನ್ನು ಲಾಲಿಸಿ ಅವರನ್ನು ಕುರುಡರನ್ನಾಗಿ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಶತ್ರುಗಳು ಸಮೀಪಕ್ಕೆ ಬಂದಾಗ ಎಲೀಷನು, “ಸ್ವಾಮೀ, ಈ ಜನರನ್ನು ಕುರುಡರನ್ನಾಗಿ ಮಾಡಿ,” ಎಂದು ಸರ್ವೇಶ್ವರನನ್ನು ಪ್ರಾರ್ಥಿಸಿದನು. ಅವರು ಅವನ ಮೊರೆಯನ್ನು ಆಲಿಸಿ ಆ ಜನರನ್ನು ಕುರುಡರನ್ನಾಗಿ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಶತ್ರುಗಳು ಸಮೀಪಕ್ಕೆ ಬಂದಾಗ ಎಲೀಷನು - ಸ್ವಾಮೀ, ಈ ಜನರನ್ನು ಕುರುಡರನ್ನಾಗಿಮಾಡು ಎಂದು ಯೆಹೋವನನ್ನು ಪ್ರಾರ್ಥಿಸಿದನು. ಆತನು ಅವನ ಮೊರೆಯನ್ನು ಲಾಲಿಸಿ ಅವರನ್ನು ಕುರುಡರನ್ನಾಗಿ ಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಆ ಬೆಂಕಿಯಂತಿರುವ ಕುದುರೆಗಳು ಮತ್ತು ರಥಗಳು ಎಲೀಷನ ಬಳಿಗೆ ಇಳಿದುಬಂದವು. ಎಲೀಷನು ಯೆಹೋವನನ್ನು ಪ್ರಾರ್ಥಿಸಿ, “ಈ ಜನರನ್ನು ಕುರುಡರನ್ನಾಗಿ ಮಾಡಬೇಕೆಂದು ನಾನು ನಿನ್ನಲ್ಲಿ ಪ್ರಾರ್ಥಿಸುತ್ತೇನೆ” ಎಂದು ಹೇಳಿದನು. ಆಗ ಯೆಹೋವನು ಎಲೀಷನ ಪ್ರಾರ್ಥನೆಯಂತೆ ಅರಾಮ್ಯರ ಸೇನೆಯು ಕುರುಡರಾಗುವಂತೆ ಮಾಡಿದನು. ಅಧ್ಯಾಯವನ್ನು ನೋಡಿ |