2 ಅರಸುಗಳು 6:19 - ಕನ್ನಡ ಸಮಕಾಲಿಕ ಅನುವಾದ19 ಆಗ ಎಲೀಷನು ಅವರಿಗೆ, “ಇದು ಆ ಮಾರ್ಗವಲ್ಲ, ಇದು ಆ ಪಟ್ಟಣವಲ್ಲ, ನನ್ನ ಹಿಂದೆ ಬನ್ನಿರಿ. ನೀವು ಹುಡುಕುವ ಮನುಷ್ಯರ ಬಳಿಗೆ ನಿಮ್ಮನ್ನು ಬರಮಾಡುವೆನು,” ಎಂದು ಹೇಳಿ ಅವರನ್ನು ಸಮಾರ್ಯಕ್ಕೆ ನಡೆಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಆಗ ಎಲೀಷನು ಅವರಿಗೆ, “ನೀವು ಹೋಗಬೇಕೆಂದಿದ್ದ ಪಟ್ಟಣವೂ, ದಾರಿಯೂ ಇದಲ್ಲ, ನನ್ನ ಜೊತೆಯಲ್ಲಿ ಬನ್ನಿರಿ, ನೀವು ಹುಡುಕುತ್ತಿರುವ ಮನುಷ್ಯನ ಬಳಿಗೆ ನಿಮ್ಮನ್ನು ಕರೆದುಕೊಂಡು ಹೋಗುತ್ತೇನೆ” ಎಂದು ಹೇಳಿ ಅವರನ್ನು ಸಮಾರ್ಯಕ್ಕೆ ಕರೆದುಕೊಂಡು ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಆಗ ಎಲೀಷನು, “ನೀವು ಹೋಗಬೇಕೆಂದಿದ್ದ ಪಟ್ಟಣವೂ ದಾರಿಯೂ ಇದಲ್ಲ; ನನ್ನ ಜೊತೆಯಲ್ಲೇ ಬನ್ನಿ, ನೀವು ಹುಡುಕುತ್ತಿರುವ ವ್ಯಕ್ತಿಯ ಬಳಿಗೆ ನಿಮ್ಮನ್ನು ಕರೆದುಕೊಂಡು ಹೋಗುತ್ತೇನೆ,” ಎಂದು ಹೇಳಿ ಅವರನ್ನು ಸಮಾರಿಯಕ್ಕೆ ಕರೆದುಕೊಂಡು ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಆಗ ಎಲೀಷನು ಅವರಿಗೆ - ನೀವು ಹೋಗಬೇಕೆಂದಿದ್ದ ಪಟ್ಟಣವೂ ದಾರಿಯೂ ಇದಲ್ಲ; ನನ್ನ ಜೊತೆಯಲ್ಲಿ ಬನ್ನಿರಿ, ನೀವು ಹುಡುಕುತ್ತಿರುವ ಮನುಷ್ಯನ ಬಳಿಗೆ ನಿಮ್ಮನ್ನು ಕರಕೊಂಡು ಹೋಗುತ್ತೇನೆ ಎಂದು ಹೇಳಿ ಅವರನ್ನು ಸಮಾರ್ಯಕ್ಕೆ ಕರಕೊಂಡು ಹೋದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಎಲೀಷನು ಅರಾಮ್ಯರ ಸೇನೆಗೆ, “ಇದು ಸರಿಯಾದ ಮಾರ್ಗವಲ್ಲ, ಇದು ಸರಿಯಾದ ನಗರವೂ ಅಲ್ಲ. ನನ್ನನ್ನು ಹಿಂಬಾಲಿಸಿ. ನೀವು ಹುಡುಕುತ್ತಿರುವ ಮನುಷ್ಯನ ಬಳಿಗೆ ನಾನು ನಿಮ್ಮನ್ನು ಕರೆದೊಯ್ಯುತ್ತೇನೆ” ಎಂದು ಹೇಳಿದನು. ನಂತರ ಎಲೀಷನು ಅರಾಮ್ಯರ ಸೇನೆಯನ್ನು ಸಮಾರ್ಯಕ್ಕೆ ನಡೆಸಿಕೊಂಡು ಬಂದನು. ಅಧ್ಯಾಯವನ್ನು ನೋಡಿ |