Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 6:23 - ಕನ್ನಡ ಸಮಕಾಲಿಕ ಅನುವಾದ

23 ಆಗ ಅವರಿಗೋಸ್ಕರ ದೊಡ್ಡ ಔತಣ ಮಾಡಿಸಿದನು. ಅವರು ತಿಂದು ಕುಡಿದ ತರುವಾಯ ಅವರನ್ನು ಕಳುಹಿಸಿಬಿಟ್ಟನು. ಅವರು ತಮ್ಮ ಯಜಮಾನನ ಬಳಿಗೆ ಹೋದರು. ಅರಾಮ್ಯರ ದಂಡುಗಳು ಇಸ್ರಾಯೇಲ್ ದೇಶದ ಮೇಲೆ ಮತ್ತೆ ದಾಳಿಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆಗ ಅರಸನು ಅವರಿಗಾಗಿ ಒಂದು ದೊಡ್ಡ ಔತಣವನ್ನು ಮಾಡಿಸಿ ಅವರು ಅನ್ನ ಪಾನಗಳನ್ನು ತೆಗೆದುಕೊಂಡಾದ ಮೇಲೆ ಅವರನ್ನು ಅವರ ಯಜಮಾನನ ಬಳಿಗೆ ಕಳುಹಿಸಿದನು. ಅಂದಿನಿಂದ ಸುಲಿಗೆ ಮಾಡುವ ಅರಾಮ್ಯರ ಗುಂಪುಗಳು ಇಸ್ರಾಯೇಲರ ಪ್ರಾಂತ್ಯದೊಳಗೆ ಮತ್ತೆ ಬರಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಆಗ ಅರಸನು ಅವರಿಗಾಗಿ ಒಂದು ದೊಡ್ಡ ಔತಣವನ್ನು ಮಾಡಿಸಿ, ಅವರು ಅನ್ನಪಾನಗಳನ್ನು ತೆಗೆದುಕೊಂಡ ಮೇಲೆ, ಅವರನ್ನು ಅವರ ಯಜಮಾನನ ಬಳಿಗೆ ಕಳುಹಿಸಿದನು. ಅಂದಿನಿಂದ ಸುಲಿಗೆಮಾಡುವ ಸಿರಿಯಾದ ಗುಂಪುಗಳು ಇಸ್ರಯೇಲರ ಪ್ರಾಂತದೊಳಗೆ ಮತ್ತೆ ಬರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಆಗ ಅರಸನು ಅವರಿಗೋಸ್ಕರ ದೊಡ್ಡ ಔತಣವನ್ನು ಮಾಡಿಸಿ ಅವರು ಅನ್ನಪಾನಗಳನ್ನು ತೆಗೆದುಕೊಂಡ ಮೇಲೆ ಅವರನ್ನು ಅವರ ಯಜಮಾನನ ಬಳಿಗೆ ಕಳುಹಿಸಿದನು. ಅಂದಿನಿಂದ ಸುಲಿಗೆಮಾಡುವ ಅರಾಮ್ಯರ ಗುಂಪುಗಳು ಇಸ್ರಾಯೇಲ್ಯರ ಪ್ರಾಂತದೊಳಗೆ ತಿರಿಗಿ ಬರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಇಸ್ರೇಲಿನ ರಾಜನು ಅರಾಮ್ಯರ ಸೇನೆಗೆ ಆಹಾರವನ್ನು ಹೇರಳವಾಗಿ ಸಿದ್ಧಪಡಿಸಿದನು. ಅರಾಮ್ಯರ ಸೇನೆಯು ಊಟಮಾಡಿ, ನೀರನ್ನು ಕುಡಿದರು. ನಂತರ ಇಸ್ರೇಲಿನ ರಾಜನು ಅರಾಮ್ಯರ ಸೇನೆಗೆ ತಮ್ಮ ಒಡೆಯನ ಬಳಿಗೆ ಹೋಗಲು ಆಜ್ಞಾಪಿಸಿದನು. ಅಂದಿನಿಂದ ಇಸ್ರೇಲ್ ದೇಶದ ಮೇಲೆ ಧಾಳಿಮಾಡಲು ಯಾವ ಸೈನಿಕರನ್ನೂ ಅರಾಮ್ಯರು ಕಳುಹಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 6:23
10 ತಿಳಿವುಗಳ ಹೋಲಿಕೆ  

ಅರಾಮಿನವರು ಗುಂಪುಗುಂಪಾಗಿ ಹೊರಟು, ಇಸ್ರಾಯೇಲ್ ದೇಶದಿಂದ ಒಬ್ಬ ಹುಡುಗಿಯನ್ನು ಸೆರೆಯಾಗಿ ಹಿಡಿದುಕೊಂಡು ಬಂದರು. ಅವಳು ನಾಮಾನನ ಹೆಂಡತಿಗೆ ಸೇವಕಿಯಾದಳು.


ಯೆಹೋವ ದೇವರು ಬಾಬಿಲೋನಿಯರನ್ನೂ, ಅರಾಮ್ಯರನ್ನೂ, ಮೋವಾಬ್ಯರನ್ನೂ, ಅಮ್ಮೋನಿಯರನ್ನೂ ಅವನ ಮೇಲೆ ಕಳುಹಿಸಿದನು. ಯೆಹೋವ ದೇವರು ಪ್ರವಾದಿಗಳಾದ ತನ್ನ ಸೇವಕರ ಮುಖಾಂತರ ಹೇಳಿದ ಮಾತಿನ ಪ್ರಕಾರ, ಯೆಹೂದವನ್ನು ನಾಶಮಾಡುವಂತೆ ಅದರ ಮೇಲೆ ಅವರನ್ನು ಬರಮಾಡಿದನು.


ಆದರೆ ನಿಮ್ಮ ವೈರಿಗಳನ್ನು ಪ್ರೀತಿಸಿರಿ, ಅವರಿಗೆ ಒಳ್ಳೆಯದನ್ನು ಮಾಡಿರಿ. ಏನನ್ನೂ ತಿರುಗಿ ನಿರೀಕ್ಷಿಸದೆ ಸಾಲ ಕೊಡಿರಿ, ಆಗ ನಿಮ್ಮ ಪ್ರತಿಫಲ ದೊಡ್ಡದಾಗಿರುವುದು. ನೀವು ಮಹೋನ್ನತ ದೇವರ ಮಕ್ಕಳಾಗಿರುವಿರಿ, ಅವರು ಕೃತಜ್ಞತೆಯಿಲ್ಲದವರಿಗೂ ಕೆಟ್ಟವರಿಗೂ ದಯೆಯುಳ್ಳವರಾಗಿದ್ದಾರೆ.


ನಿಮ್ಮ ಸ್ವಂತದವರನ್ನು ಮಾತ್ರ ವಂದಿಸಿದರೆ ಹೆಚ್ಚೇನು ಮಾಡಿದ ಹಾಗಾಯಿತು? ಯೆಹೂದ್ಯರಲ್ಲದವರು ಸಹ ಹಾಗೆಯೇ ಮಾಡುತ್ತಾರಲ್ಲವೇ?


ಆಗ ಎಫ್ರಾಯೀಮ್ಯರಲ್ಲಿ ಮುಖಂಡರಾಗಿದ್ದವರು ಎದ್ದು ಸೆರೆಯವರನ್ನು ತೆಗೆದುಕೊಂಡು, ಅವರಲ್ಲಿ ಬೆತ್ತಲೆಯಾದವರಿಗೆ ಕೊಳ್ಳೆಯ ವಸ್ತ್ರಗಳನ್ನು ಉಡಿಸಿ ತೊಡಿಸಿ, ಅವರಿಗೆ ಕೆರಗಳನ್ನು ಕೊಟ್ಟು ಉಣ್ಣುವುದಕ್ಕೂ, ಕುಡಿಯುವುದಕ್ಕೂ ಕೊಟ್ಟು, ಅವರ ತಲೆಗಳಿಗೆ ಎಣ್ಣೆಯನ್ನು ಹಚ್ಚಿ, ಅವರಲ್ಲಿ ಇರುವ ಬಲಹೀನರನ್ನು ಕತ್ತೆಗಳ ಮೇಲೆ ಏರಿಸಿ, ಯೆರಿಕೋವೆಂಬ ಖರ್ಜೂರದ ಪಟ್ಟಣಕ್ಕೆ ಅವರ ಸಹೋದರರ ಬಳಿಗೆ ತೆಗೆದುಕೊಂಡು ಬಂದರು. ಆಗ ಅವರು ಸಮಾರ್ಯಕ್ಕೆ ಹಿಂದಿರುಗಿದರು.


“ಶಾಂತವಾಗಿರಿ, ನಾನೇ ದೇವರಾಗಿದ್ದೇನೆಂದು ತಿಳಿದುಕೊಳ್ಳಿರಿ; ಜನಾಂಗಗಳಲ್ಲಿ ಉನ್ನತನಾಗಿರುವೆನು; ಭೂಮಿಯಲ್ಲಿ ಉನ್ನತನಾಗಿರುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು