Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 6:26 - ಕನ್ನಡ ಸಮಕಾಲಿಕ ಅನುವಾದ

26 ಇಸ್ರಾಯೇಲಿನ ಅರಸನು ಗೋಡೆಯ ಮೇಲೆ ಹಾದು ಹೋಗುತ್ತಿರುವಾಗ, ಒಬ್ಬ ಸ್ತ್ರೀಯು ಅವನನ್ನು ಕೂಗಿ, “ನನ್ನ ಯಜಮಾನನೇ, ಅರಸನೇ, ಸಹಾಯ ಮಾಡಿ,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಒಂದು ದಿನ ಇಸ್ರಾಯೇಲರ ಅರಸನು ಪೌಳಿಗೋಡೆಯ ಮೇಲೆ ಹಾದುಹೋಗುತ್ತಿರುವಾಗ, ಒಬ್ಬ ಸ್ತ್ರೀಯು, “ಅರಸನೇ, ನನ್ನ ಒಡೆಯನೇ, ನನ್ನನ್ನು ರಕ್ಷಿಸು” ಎಂದು ಮೊರೆಯಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಒಂದು ದಿನ ಇಸ್ರಯೇಲರ ಅರಸನು ಕೋಟೆಯ ಮೇಲೆ ತಿರುಗಾಡುತ್ತಿರುವಾಗ ಒಬ್ಬ ಮಹಿಳೆ, “ಅರಸರೇ, ನಮ್ಮ ಒಡೆಯರೇ, ನನ್ನನ್ನು ಕಾಪಾಡಿ,” ಎಂದು ಮೊರೆಯಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಒಂದು ದಿವಸ ಇಸ್ರಾಯೇಲ್ಯರ ಅರಸನು ಪೌಳಿಗೋಡೆಯ ಮೇಲೆ ಹಾದುಹೋಗುತ್ತಿರುವಾಗ ಒಬ್ಬ ಸ್ತ್ರೀಯು - ಅರಸೇ, ನನ್ನ ಒಡೆಯನೇ, ನನ್ನನ್ನು ರಕ್ಷಿಸು ಎಂದು ಮೊರೆಯಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಇಸ್ರೇಲಿನ ರಾಜನು ನಗರದ ಸುತ್ತಲಿನ ಗೋಡೆಯ ಮೇಲೆ ನಡೆಯುತ್ತಿರಲು ಸ್ತ್ರೀಯೊಬ್ಬಳು ಅವನನ್ನು, “ನನ್ನ ಪ್ರಭುವೇ, ರಾಜನೇ, ದಯವಿಟ್ಟು ನನಗೆ ಸಹಾಯಮಾಡು” ಎಂದು ಕೂಗಿಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 6:26
7 ತಿಳಿವುಗಳ ಹೋಲಿಕೆ  

ಹಾಗೆಯೇ ತೆಕೋವದ ಆ ಸ್ತ್ರೀಯು ಅರಸನ ಸಂಗಡ ಮಾತನಾಡಿದಳು. ಮೋರೆ ಕೆಳಗಾಗಿ ನೆಲಕ್ಕೆ ಬಿದ್ದು ವಂದಿಸಿ, “ಅರಸನೇ, ಸಹಾಯಮಾಡು,” ಎಂದಳು.


“ಇಸ್ರಾಯೇಲರೇ, ನಮಗೆ ಸಹಾಯಮಾಡಿರಿ! ನಮ್ಮ ಜನರಿಗೂ ನಮ್ಮ ನಿಯಮಕ್ಕೂ ಈ ಸ್ಥಳಕ್ಕೂ ವಿರೋಧವಾಗಿ ಎಲ್ಲಾ ಜನರಿಗೆ ಬೋಧಿಸುತ್ತಿರುವ ಮನುಷ್ಯನು ಇವನೇ. ಅಷ್ಟೇ ಅಲ್ಲ, ಗ್ರೀಕರನ್ನು ದೇವಾಲಯದೊಳಗೆ ಕರೆದುಕೊಂಡು ಬಂದು ಈ ಪವಿತ್ರ ಸ್ಥಳವನ್ನು ಭ್ರಷ್ಟಗೊಳಿಸಿದ್ದಾನೆ,” ಎಂದು ಕೂಗಿ ಹೇಳಿದರು.


ಅದೇ ಪಟ್ಟಣದಲ್ಲಿ ಒಬ್ಬ ವಿಧವೆಯಿದ್ದಳು. ಆಕೆ ಪದೇಪದೇ ಅವನ ಬಳಿಗೆ ಬಂದು, ‘ನನ್ನ ವಿರೋಧಿಯ ಎದುರಾಗಿ ನನಗೆ ನ್ಯಾಯ ದೊರಕಿಸಿಕೊಡು,’ ಎಂದು ಕೇಳಿಕೊಳ್ಳುತ್ತಿದ್ದಳು.


ವಿಚಾರಣೆಯ ದಿನದಲ್ಲಿಯೂ, ದೂರದಿಂದ ಬರುವ ನಾಶನದಲ್ಲಿಯೂ ನೀವು ಏನು ಮಾಡುವಿರಿ? ಸಹಾಯಕ್ಕಾಗಿ ನೀವು ಯಾರ ಬಳಿಗೆ ಓಡುವಿರಿ? ನಿಮ್ಮ ಐಶ್ವರ್ಯವನ್ನು ಎಲ್ಲಿ ಬಿಡುವಿರಿ?


ಆಗ ಸಮಾರ್ಯದಲ್ಲಿ ದೊಡ್ಡ ಬರವಿತ್ತು. ಒಂದು ಕತ್ತೆಯ ತಲೆಯು ಎಂಬತ್ತು ಶೆಕೆಲ್ ಬೆಳ್ಳಿಗೆ, ಸುಮಾರು ನೂರು ಗ್ರಾಂ ಪಾರಿವಾಳದ ಗೊಬ್ಬರವನ್ನು ಐದು ಶೆಕೆಲ್ ಬೆಳ್ಳಿಗೆ ಮಾರಲಾಗುವವರೆಗೂ ಅದನ್ನು ಮುತ್ತಿಗೆಹಾಕಿದನು.


ಅದಕ್ಕವನು, “ಯೆಹೋವ ದೇವರು ನಿನಗೆ ಸಹಾಯ ಮಾಡದೆ ಹೋದರೆ, ನಾನು ಎಲ್ಲಿಂದ ನಿನಗೆ ಸಹಾಯ ಮಾಡಲಿ? ಕಣದಿಂದಲೋ, ದ್ರಾಕ್ಷಿ ಆಲೆಯಿಂದಲೋ?” ಎಂದನು.


ಈಜಿಪ್ಟ್‌ದವರೆಲ್ಲಾ ಹಸಿದು, ಜನರು ಆಹಾರಕ್ಕಾಗಿ ಫರೋಹನ ಬಳಿಗೆ ಹೋಗಿ ಕೂಗಿಕೊಂಡಾಗ, ಫರೋಹನು ಎಲ್ಲಾ ಈಜಿಪ್ಟಿನವರಿಗೆ, “ಯೋಸೇಫನ ಬಳಿಗೆ ಹೋಗಿರಿ, ಅವನು ನಿಮಗೆ ಹೇಳುವುದನ್ನು ಮಾಡಿರಿ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು