Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 6:32 - ಕನ್ನಡ ಸಮಕಾಲಿಕ ಅನುವಾದ

32 ಎಲೀಷನು ಊರಿನ ಹಿರಿಯರೊಡನೆ ತನ್ನ ಮನೆಯಲ್ಲಿ ಕುಳಿತುಕೊಂಡಿದ್ದನು. ಅರಸನು ತನ್ನ ಹತ್ತಿರ ಇದ್ದ ಒಬ್ಬ ದೂತನನ್ನು ಕಳುಹಿಸಿದನು. ಅವನು ಇನ್ನೂ ಸ್ವಲ್ಪ ದೂರದಲ್ಲಿರುವಾಗಲೇ ಎಲೀಷನು ಹಿರಿಯರಿಗೆ, “ನೋಡಿರಿ, ಆ ಕೊಲೆಗಾರನ ಮಗನು ನನ್ನ ತಲೆಯನ್ನು ಹಾರಿಸುವುದಕ್ಕೆ ದೂತನನ್ನು ಕಳುಹಿಸಿದ್ದಾನೆ. ದೂತನು ಇಲ್ಲಿಗೆ ಬಂದ ಕೂಡಲೇ ನೀವು ಬಾಗಿಲನ್ನು ಮುಚ್ಚಿ, ಅವನು ಒಳಗೆ ಬಾರದಂತೆ ಅದನ್ನು ಒತ್ತಿಹಿಡಿಯಿರಿ. ಅವನ ಹಿಂದೆಯೇ ಬರುತ್ತಿರುವ ಅವನೊಡೆಯನ ಕಾಲಿನ ಸಪ್ಪಳ ಕೇಳಿಸುತ್ತಿದೆಯಲ್ಲವೇ?” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಎಲೀಷನು ಊರಿನ ಹಿರಿಯರೊಡನೆ ತನ್ನ ಮನೆಯಲ್ಲಿ ಕುಳಿತುಕೊಂಡಿದ್ದನು. ಅರಸನು ತನ್ನ ಹತ್ತಿರವಿದ್ದ ಒಬ್ಬ ಆಳನ್ನು ಕಳುಹಿಸಿದನು. ಅವನು ಇನ್ನೂ ದೂರದಲ್ಲಿರುವಾಗಲೇ ಎಲೀಷನು ಹಿರಿಯರಿಗೆ, “ನೋಡಿರಿ, ಆ ಕೊಲೆಗಾರನ ಮಗನು ನನ್ನ ತಲೆಯನ್ನು ಹಾರಿಸುವುದಕ್ಕೆ ಆಳನ್ನು ಕಳುಹಿಸಿದ್ದಾನೆ. ಆಳು ಇಲ್ಲಿಗೆ ಬಂದ ಕೂಡಲೆ ನೀವು ಬಾಗಿಲನ್ನು ಮುಚ್ಚಿ ಅವನು ಒಳಗೆ ಬಾರದಂತೆ ಅದನ್ನು ಒತ್ತಿ ಹಿಡಿಯಿರಿ. ಅವನ ಹಿಂದೆಯೇ ಬರುತ್ತಿರುವ ಅವನ ಒಡೆಯನ ಕಾಲಿನ ಸಪ್ಪಳವು ಕೇಳಿಸುತ್ತಿದೆಯಲ್ಲಾ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಎಲೀಷನು ಊರಿನ ಹಿರಿಯರೊಡನೆ ತನ್ನ ಮನೆಯಲ್ಲಿ ಕುಳಿತುಕೊಂಡಿದ್ದನು. ಅರಸನು ತನ್ನ ಹತ್ತಿರ ಇದ್ದ ಒಬ್ಬ ಆಳನ್ನು ಕಳುಹಿಸಿದನು. ಅವನು ಇನ್ನೂ ದೂರದಲ್ಲಿರುವಾಗಲೇ ಎಲೀಷನು ಹಿರಿಯರಿಗೆ, “ನೋಡಿ, ಆ ಕೊಲೆಗಾರನ ಮಗನು ನನ್ನ ತಲೆಯನ್ನು ಹಾರಿಸುವುದಕ್ಕೆ ಆಳನ್ನು ಕಳುಹಿಸಿದ್ದಾನೆ. ಆಳು ಇಲ್ಲಿಗೆ ಬಂದ ಕೂಡಲೆ ನೀವು ಬಾಗಿಲನ್ನು ಮುಚ್ಚಿ ಅವನು ಒಳಗೆ ಬಾರದಂತೆ ಅದನ್ನು ಒತ್ತಿಹಿಡಿಯಿರಿ; ಅವನ ಹಿಂದೆಯೇ ಬರುತ್ತಿರುವ ಅವನೊಡೆಯನ ಕಾಲು ಸಪ್ಪಳ ಕೇಳಿಸುತ್ತಿದೆಯಲ್ಲವೆ?” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಎಲೀಷನು ಊರಿನ ಹಿರಿಯರೊಡನೆ ತನ್ನ ಮನೆಯಲ್ಲಿ ಕೂತುಕೊಂಡಿದ್ದನು; ಅರಸನು ತನ್ನ ಹತ್ತಿರವಿದ್ದ ಒಬ್ಬ ಆಳನ್ನು ಕಳುಹಿಸಿದನು. ಅವನು ಇನ್ನೂ ದೂರದಲ್ಲಿರುವಾಗಲೇ ಎಲೀಷನು ಹಿರಿಯರಿಗೆ - ನೋಡಿರಿ, ಆ ಕೊಲೆಗಾರನ ಮಗನು ನನ್ನ ತಲೆಯನ್ನು ಹಾರಿಸುವದಕ್ಕೆ ಆಳನ್ನು ಕಳುಹಿಸಿದ್ದಾನೆ. ಆಳು ಇಲ್ಲಿಗೆ ಬಂದ ಕೂಡಲೆ ನೀವು ಬಾಗಲನ್ನು ಮುಚ್ಚಿ ಅವನು ಒಳಗೆ ಬಾರದಂತೆ ಅದನ್ನು ಒತ್ತಿಹಿಡಿಯಿರಿ; ಅವನ ಹಿಂದೆಯೇ ಬರುತ್ತಿರುವ ಅವನೊಡೆಯನ ಕಾಲು ಸಪ್ಪಳವು ಕೇಳಿಸುತ್ತದಲ್ಲಾ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ರಾಜನು ಎಲೀಷನ ಬಳಿಗೆ ಒಬ್ಬ ಸಂದೇಶಕನನ್ನು ಕಳುಹಿಸಿದನು. ಎಲೀಷನು ತನ್ನ ಮನೆಯಲ್ಲಿ ಕುಳಿತಿದ್ದನು; ಹಿರಿಯರು ಅವನೊಂದಿಗೆ ಕುಳಿತಿದ್ದರು. ಸಂದೇಶಕನು ಬರುವುದಕ್ಕೆ ಮುಂಚೆಯೇ ಎಲೀಷನು ಹಿರಿಯರಿಗೆ, “ನೋಡಿ, ನನ್ನ ತಲೆಯನ್ನು ಕತ್ತರಿಸಿಹಾಕಲು ಕೊಲೆಗಾರನ (ಇಸ್ರೇಲಿನ ರಾಜ) ಮಗ ಜನರನ್ನು ಕಳುಹಿಸಿದ್ದಾನೆ! ಆ ಸಂದೇಶಕನು ಬಂದಾಗ ಬಾಗಿಲನ್ನು ಮುಚ್ಚಿಬಿಡಿ! ಅವನು ಒಳಗೆ ಪ್ರವೇಶಿಸದಂತೆ ಬಾಗಿಲನ್ನು ಹಿಡಿದುಕೊಳ್ಳಿ! ಅವನ ಹಿಂದೆ ಬರುತ್ತಿರುವ ಅವನ ಒಡೆಯನ ಕಾಲ ಸಪ್ಪಳವು ನನಗೆ ಕೇಳಿಸುತ್ತಿದೆ!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 6:32
16 ತಿಳಿವುಗಳ ಹೋಲಿಕೆ  

ಏಳನೆಯ ವರ್ಷದ, ಐದನೆಯ ತಿಂಗಳಿನ, ಹತ್ತನೆಯ ದಿನದಲ್ಲಿ ಇಸ್ರಾಯೇಲಿನ ಹಿರಿಯರಲ್ಲಿ ಕೆಲವರು ಯೆಹೋವ ದೇವರ ಬಳಿಗೆ ವಿಚಾರಣೆಗಾಗಿ ಬಂದು ನನ್ನ ಮುಂದೆ ಕುಳಿತುಕೊಂಡರು.


ಆಮೇಲೆ ಇಸ್ರಾಯೇಲಿನ ಹಿರಿಯರಲ್ಲಿ ಕೆಲವರು ನನ್ನ ಬಳಿಗೆ ಬಂದು ನನ್ನ ಮುಂದೆ ಕುಳಿತುಕೊಂಡರು.


ಆರನೆಯ ವರ್ಷದ ಆರನೆಯ ತಿಂಗಳಿನ, ಐದನೆಯ ದಿನದಲ್ಲಿ ನಾನೂ, ಯೆಹೂದದ ಹಿರಿಯರೂ ನನ್ನ ಮನೆಯಲ್ಲಿ ಕುಳಿತುಕೊಂಡಿರುವಾಗ, ಅಲ್ಲಿ ಸಾರ್ವಭೌಮ ಯೆಹೋವ ದೇವರ ಹಸ್ತ ನನ್ನ ಮೇಲೆ ಸ್ಪರ್ಶವಾಯಿತು.


ಈಜೆಬೆಲಳು ಯೆಹೋವ ದೇವರ ಪ್ರವಾದಿಗಳನ್ನು ಕೊಲ್ಲುತ್ತಿದ್ದಾಗ, ಓಬದ್ಯನು ನೂರು ಮಂದಿ ಪ್ರವಾದಿಗಳನ್ನು ತೆಗೆದುಕೊಂಡು, ಐವತ್ತು ಮಂದಿಯಾಗಿ ಅವರನ್ನು ಗವಿಯಲ್ಲಿ ಬಚ್ಚಿಟ್ಟು, ಅವರಿಗೆ ಆಹಾರವನ್ನೂ, ನೀರನ್ನೂ ಕೊಟ್ಟು, ಅವರನ್ನು ಸಂರಕ್ಷಣೆ ಮಾಡುತ್ತಾ ಇದ್ದನು.


‘ನೀನು ದೇವರನ್ನೂ, ಅರಸನನ್ನೂ ದೂಷಿಸಿದಿ,’ ಎಂದು ಅವನಿಗೆ ವಿರೋಧವಾಗಿ ಸಾಕ್ಷಿ ಹೇಳಲು ಅವನ ಮುಂದೆ ದುಷ್ಟರಾದ ಇಬ್ಬರು ಮನುಷ್ಯರನ್ನು ಕೂರಿಸಿರಿ. ತರುವಾಯ ಅವನನ್ನು ಹೊರಗೆ ತೆಗೆದುಕೊಂಡುಹೋಗಿ ಅವನು ಸಾಯುವ ಹಾಗೆ ಕಲ್ಲೆಸೆಯಿರಿ,” ಎಂದು ಬರೆದಿತ್ತು.


ಅದಕ್ಕೆ ಯೇಸು ಅವರಿಗೆ, “ಇಗೋ, ‘ನಾನು ಈ ದಿವಸ ಮತ್ತು ನಾಳೆ ದೆವ್ವಗಳನ್ನು ಓಡಿಸುತ್ತೇನೆ ಸ್ವಸ್ಥಮಾಡುತ್ತೇನೆ, ಮೂರನೆಯ ದಿನದಲ್ಲಿ ನಾನು ಸಿದ್ಧಿಗೆ ಬರುತ್ತೇನೆ,’ ಎಂದು ನೀವು ಹೋಗಿ ಆ ನರಿಗೆ ಹೇಳಿರಿ.


ಶ್ರದ್ಧೆ ಇರುವ ನನ್ನ ಭಕ್ತರಂತೆ ಅವರು ನಿನ್ನ ಬಳಿಗೆ ಬಂದು ಜನರು ಕುಳಿತುಕೊಳ್ಳುವ ಹಾಗೆ ನಿನ್ನ ಮುಂದೆ ಕುಳಿತುಕೊಳ್ಳುವರು. ಅವರು ನಿನ್ನ ವಾಕ್ಯಗಳನ್ನು ಕೇಳುವರು. ಆದರೆ ಅವರು ಅವುಗಳನ್ನು ಪಾಲಿಸುವುದಿಲ್ಲ. ಅವರು ತಮ್ಮ ಬಾಯಿಂದ ಹೆಚ್ಚಾದ ಪ್ರೀತಿಯನ್ನು ತೋರಿಸುವರು. ಆದರೆ ಅವರ ಹೃದಯವು ಅನ್ಯಾಯದ ಲಾಭದ ಕಡೆಗೆ ಹೋಗುವುದು.


ಅವನ ಸೇವಕರಲ್ಲಿ ಒಬ್ಬನು, “ನನ್ನ ಒಡೆಯನೇ, ಅರಸನೇ, ಯಾವನೂ ಇಲ್ಲ. ಆದರೆ ಇಸ್ರಾಯೇಲಿನಲ್ಲಿರುವ ಪ್ರವಾದಿಯಾದ ಎಲೀಷನು ನಿನ್ನ ಮಲಗುವ ಕೋಣೆಯಲ್ಲಿ ನೀನು ಹೇಳುವ ಮಾತುಗಳನ್ನು ಸಹ ಇಸ್ರಾಯೇಲಿನ ಅರಸನಿಗೆ ಹೇಳುತ್ತಾನೆ,” ಎಂದನು.


ಆಗ ದುಷ್ಟರಾದ ಇಬ್ಬರು ಮನುಷ್ಯರು ಬಂದು ಅವನಿಗೆದುರಾಗಿ ಕುಳಿತುಕೊಂಡರು. ಈ ದುಷ್ಟಜನರ ಸಮ್ಮುಖದಲ್ಲಿ ನಾಬೋತನಿಗೆ ವಿರೋಧವಾಗಿ, “ಈ ನಾಬೋತನು ದೇವರನ್ನೂ, ಅರಸನನ್ನೂ ದೂಷಿಸಿದನು,” ಎಂದು ಸಾಕ್ಷಿ ಹೇಳಿದರು. ಆಗ ನಾಬೋತನನ್ನು ಪಟ್ಟಣದ ಹೊರಗೆ ಕರೆದುಕೊಂಡು ಹೋಗಿ, ಅವನು ಸಾಯುವ ಹಾಗೆ ಅವರು ಅವನಿಗೆ ಕಲ್ಲೆಸೆದರು.


ಅನಂತರ ಅವಳು ಬಾಗಿಲಲ್ಲಿ ಪ್ರವೇಶಿಸುವಾಗ, ಅಹೀಯನು ಅವಳ ಹೆಜ್ಜೆಗಳ ಶಬ್ದ ಕೇಳುತ್ತಲೇ ಅವನು, “ಯಾರೊಬ್ಬಾಮನ ಪತ್ನಿಯೇ ಒಳಗೆ ಬಾ, ನೀನು ಮತ್ತೊಬ್ಬಳಂತೆ ತೋರಿಸಿಕೊಳ್ಳುವುದು ಏಕೆ? ನಾನು ಕಠಿಣವಾದವುಗಳನ್ನು ತಿಳಿಸಲು ನನಗೆ ಅಪ್ಪಣೆಯಾಗಿದೆ.


ಆದರೆ ಎಲೀಷನು ಅವನಿಗೆ, “ಆ ಮನುಷ್ಯನು ನಿನ್ನನ್ನು ಎದುರುಗೊಳ್ಳಲು ತನ್ನ ರಥದಿಂದ ಇಳಿದು ನಿನ್ನ ಬಳಿಗೆ ಬಂದಾಗ, ನನ್ನ ಹೃದಯವು ನಿನ್ನ ಸಂಗಡ ಹೋಗಲಿಲ್ಲವೋ? ಹಣವನ್ನೂ, ವಸ್ತ್ರಗಳನ್ನೂ, ದ್ರವ್ಯವನ್ನೂ, ಹಿಪ್ಪೆಯ ತೋಪುಗಳನ್ನೂ, ದ್ರಾಕ್ಷಿಯ ತೋಟಗಳನ್ನೂ, ಕುರಿದನಗಳನ್ನೂ, ದಾಸದಾಸಿಯರನ್ನೂ ಪಡೆದುಕೊಳ್ಳುವುದಕ್ಕೆ ಇದು ಸಮಯವೋ?


ಆದರೆ ಅರಸನಿಗೆ ಹಸ್ತಕನಾದ ಆ ಅಧಿಕಾರಿಯನ್ನು ಅರಸನು ಪಟ್ಟಣದ ಬಾಗಿಲಿನ ಕಾವಲಿಗೆ ನೇಮಿಸಿದ್ದನು. ಅರಸನು ದೇವರ ಮನುಷ್ಯನ ಬಳಿಗೆ ಬಂದಾಗ, ದೇವರ ಮನುಷ್ಯನು ಹೇಳಿದ್ದ ಪ್ರಕಾರವೇ ಜನರು ಆ ಅಧಿಕಾರಿಯನ್ನು ಪಟ್ಟಣದ ಬಾಗಿಲಲ್ಲಿ ತುಳಿದುಹಾಕಿದ್ದರಿಂದ ಅವನು ಮರಣಹೊಂದಿದನು.


ಯೆಹೂದದ ಅರಸ ಚಿದ್ಕೀಯನು ಯೆರೆಮೀಯನಿಗೆ, “ನೀನು ಪ್ರವಾದನೆ ಮಾಡುತ್ತಾ, ‘ಯೆಹೋವ ದೇವರೇ ಹೀಗೆಂದಿದ್ದಾರೆ: ನಾನು ಈ ನಗರವನ್ನು ಬಾಬಿಲೋನಿಯದ ಅರಸನ ಕೈಗೆ ಸಿಕ್ಕಿಸುವೆನು. ಅವನು ಇದನ್ನು ವಶಪಡಿಸಿಕೊಳ್ಳುವನು.


ನೀನು ಅವನಿಗೆ, ‘ನೀನು ಕೊಂದುಹಾಕಿ ಸ್ವಾಧೀನ ಮಾಡಿಕೊಂಡಿಯಲ್ಲಾ. ಆದ್ದರಿಂದ ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲಿಯೇ ನಿನ್ನ ರಕ್ತವನ್ನು ನಿಶ್ಚಯವಾಗಿ ನೆಕ್ಕುವುವು,’ ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದನು.


ಯೆಹೋವ ದೇವರು ತಿಳಿಸಿದ್ದರಿಂದಲೇ ಶತ್ರುಗಳು ನನಗೆ ವಿರುದ್ಧ ಹೂಡಿದ್ದ ಕುತಂತ್ರವು ನನಗೆ ಗೊತ್ತಾಯಿತು. ಅವರ ಕೃತ್ಯಗಳನ್ನು ನನಗೆ ತೋರಿಸಲಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು