2 ಅರಸುಗಳು 6:33 - ಕನ್ನಡ ಸಮಕಾಲಿಕ ಅನುವಾದ33 ಎಲೀಷನು ಅವರೊಡನೆ ಮಾತನಾಡುತ್ತಿರುವಾಗಲೇ ಆ ದೂತನೂ ಅವನ ಹಿಂದಿನಿಂದ ಅರಸನೂ ಅಲ್ಲಿಗೆ ಬಂದರು. ಅರಸನು ಎಲೀಷನಿಗೆ, “ನೋಡು, ಈ ಆಪತ್ತು ಯೆಹೋವ ದೇವರಿಂದಲೇ ಬಂದದ್ದು. ಇನ್ನು ಮುಂದೆ ನಾನೇಕೆ ಅವರನ್ನು ನಂಬಿ ನಿರೀಕ್ಷಿಸಿಕೊಂಡಿರಬೇಕು?” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಅವನು ಅವರೊಡನೆ ಮಾತನಾಡುತ್ತಿರುವಾಗಲೇ, ಸೇವಕನು ಅರಸನೊಂದಿಗೆ ಬಂದನು. ಅರಸನು ಎಲೀಷನಿಗೆ, “ನೋಡು, ಈ ಆಪತ್ತು ಯೆಹೋವನಿಂದಲೇ ಬಂದದ್ದು, ಇನ್ನು ಮುಂದೆ ನಾನೇಕೆ ಆತನನ್ನು ನಿರೀಕ್ಷಿಸಿಕೊಂಡಿರಬೇಕು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಅವನು ಅವರೊಡನೆ ಮಾತಾಡುತ್ತಿರುವಾಗಲೇ ಆ ಆಳೂ ಅವನ ಹಿಂದಿನಿಂದ ಅರಸನೂ ಅಲ್ಲಿಗೆ ಬಂದರು. ಅರಸನು ಎಲೀಷನಿಗೆ, “ನೋಡು, ಈ ಆಪತ್ತು ಸರ್ವೇಶ್ವರನಿಂದಲೇ ಬಂದದ್ದು. ಇನ್ನು ಮುಂದೆ ನಾನೇಕೆ ಆತನನ್ನು ನಂಬಿ ನಿರೀಕ್ಷಿಸಿಕೊಂಡಿರಬೇಕು?” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ಅವನು ಅವರೊಡನೆ ಮಾತಾಡುತ್ತಿರುವಾಗಲೇ ಆಳೂ [ಅವನ ಹಿಂದಿನಿಂದ ಅರಸನೂ] ಅಲ್ಲಿಗೆ ಬಂದರು. ಅರಸನು ಎಲೀಷನಿಗೆ - ನೋಡು, ಈ ಆಪತ್ತು ಯೆಹೋವನಿಂದಲೇ ಬಂದದ್ದು. ಇನ್ನು ಮುಂದೆ ನಾನೇಕೆ ಆತನನ್ನು ನಿರೀಕ್ಷಿಸಿಕೊಂಡಿರಬೇಕು ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಎಲೀಷನು ಹಿರಿಯರೊಂದಿಗೆ ಇನ್ನೂ ಮಾತನಾಡುತ್ತಿರುವಾಗ ಸಂದೇಶಕನು ಅವನ ಬಳಿಗೆ ಬಂದನು. ಅವನ ಸಂದೇಶವು ಹೀಗಿತ್ತು: “ಈ ಆಪತ್ತು ಯೆಹೋವನಿಂದಲೇ ಬಂದಿದೆ! ನಾನೇಕೆ ಆತನನ್ನು ನಿರೀಕ್ಷಿಸಿಕೊಂಡಿರಬೇಕು?” ಅಧ್ಯಾಯವನ್ನು ನೋಡಿ |