Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 6:7 - ಕನ್ನಡ ಸಮಕಾಲಿಕ ಅನುವಾದ

7 ಪ್ರವಾದಿಯು, “ನೀನು ತೆಗೆದುಕೋ,” ಎಂದನು. ಹಾಗೆಯೇ ಅವನು ತನ್ನ ಕೈಯನ್ನು ಚಾಚಿ ಅದನ್ನು ತೆಗೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಎಲೀಷನು “ಅದನ್ನು ತೆಗೆದುಕೋ” ಎಂದು ಆಜ್ಞಾಪಿಸಲು ಆ ಮನುಷ್ಯನು ಕೈಚಾಚಿ ಅದನ್ನು ತೆಗೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಎಲೀಷನು, “ಅದನ್ನು ತೆಗೆದುಕೋ,” ಎಂದು ಆಜ್ಞಾಪಿಸಲು ಆ ವ್ಯಕ್ತಿ ಕೈಚಾಚಿ ಅದನ್ನು ತೆಗೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಎಲೀಷನು ಅದನ್ನು ತೆಗೆದುಕೋ ಎಂದು ಆಜ್ಞಾಪಿಸಲು ಆ ಮನುಷ್ಯನು ಕೈಚಾಚಿ ಅದನ್ನು ತೆಗೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಎಲೀಷನು, “ಕೊಡಲಿಯನ್ನು ಎತ್ತಿಕೊ” ಎಂದು ಹೇಳಿದನು. ಆ ಮನುಷ್ಯನು ಅಲ್ಲಿಗೆ ಹೋಗಿ, ಕೊಡಲಿಯನ್ನು ತೆಗೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 6:7
7 ತಿಳಿವುಗಳ ಹೋಲಿಕೆ  

ಆಗ ಅವನು ಗೇಹಜಿಯನ್ನು ಕರೆದು ಅವನಿಗೆ, “ಶೂನೇಮ್ಯಳನ್ನು ಕರೆ,” ಎಂದನು. ಗೇಹಜಿಯು ಅವಳನ್ನು ಕರೆದನು. ಅವಳು ಎಲೀಷನ ಬಳಿಗೆ ಬಂದಾಗ ಅವನು, “ನಿನ್ನ ಪುತ್ರನನ್ನು ತೆಗೆದುಕೊಂಡು ಹೋಗು,” ಎಂದನು.


ಅವಳು ಬಂದು ದೇವರ ಮನುಷ್ಯನಿಗೆ ತಿಳಿಸಿದಳು. ಅವನು, “ನೀನು ಹೋಗಿ ಆ ಎಣ್ಣೆಯನ್ನು ಮಾರಿ ನಿನ್ನ ಸಾಲವನ್ನು ತೀರಿಸಿ, ಮಿಕ್ಕದ್ದರಿಂದ ನೀನೂ, ನಿನ್ನ ಮಕ್ಕಳು ಜೀವನ ಮಾಡಿರಿ,” ಎಂದನು.


ಪೇತ್ರನು ಆಕೆಯ ಕೈಯನ್ನು ಹಿಡಿದು ಆಕೆ ಎದ್ದು ನಿಂತುಕೊಳ್ಳುವಂತೆ ಮಾಡಿದನು. ಅನಂತರ ದೇವಭಕ್ತರನ್ನೂ ವಿಧವೆಯರನ್ನೂ ಕರೆದು ಜೀವಂತಳಾದ ಆಕೆಯನ್ನು ಅವರಿಗೆ ಒಪ್ಪಿಸಿಕೊಟ್ಟನು.


ಆಗ ಸತ್ತವನು ಎದ್ದು ಕುಳಿತುಕೊಂಡು ಮಾತನಾಡಲಾರಂಭಿಸಿದನು. ಯೇಸು ಅವನನ್ನು ಅವನ ತಾಯಿಗೆ ಒಪ್ಪಿಸಿದರು.


ಯೆಹೋವ ದೇವರು ಮೋಶೆಗೆ, “ನಿನ್ನ ಕೈಚಾಚಿ, ಅದರ ಬಾಲವನ್ನು ಹಿಡಿ,” ಎಂದಾಗ, ಅವನು ಕೈಚಾಚಿ ಅದನ್ನು ಹಿಡಿದ ಕೂಡಲೇ, ಅದು ಅವನ ಕೈಯಲ್ಲಿ ಕೋಲಾಯಿತು.


ದೇವರ ಮನುಷ್ಯನು, “ಅದು ಎಲ್ಲಿ ಬಿತ್ತು?” ಎಂದನು. ಅವನು ಎಲೀಷನಿಗೆ ಸ್ಥಳವನ್ನು ತೋರಿಸಿದ ತರುವಾಯ, ಎಲೀಷನು ಒಂದು ಕಟ್ಟಿಗೆಯನ್ನು ಕಡಿದು ಅಲ್ಲಿ ಹಾಕಿದ್ದರಿಂದ ಆ ಕಬ್ಬಿಣವು ತೇಲಿತು.


ಅರಾಮ್ಯರ ಅರಸನು ಇಸ್ರಾಯೇಲಿನ ಮೇಲೆ ಯುದ್ಧ ಮಾಡುತ್ತಿದ್ದನು. ಇಂಥಿಂಥ ಸ್ಥಳದಲ್ಲಿ ತನ್ನ ದಂಡು ಇಳಿಯಬೇಕೆಂದು ತನ್ನ ಸೇವಕರ ಸಂಗಡ ಯೋಚನೆ ಮಾಡಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು