Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 6:9 - ಕನ್ನಡ ಸಮಕಾಲಿಕ ಅನುವಾದ

9 ಆಗ ದೇವರ ಮನುಷ್ಯನು ಇಸ್ರಾಯೇಲಿನ ಅರಸನಿಗೆ, “ಅಂಥಾ ಸ್ಥಳವನ್ನು ಹಾದುಹೋಗದೆ ಜಾಗ್ರತೆಯಾಗಿ ಇರು. ಏಕೆಂದರೆ ಅರಾಮ್ಯರು ಅಲ್ಲಿಗೆ ಇಳಿದು ಬಂದಿದ್ದಾರೆ,” ಎಂದು ಹೇಳಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ದೇವರ ಮನುಷ್ಯನು ಇಸ್ರಾಯೇಲರ ಅರಸನಿಗೆ, “ಜಾಗರೂಕತೆಯಿಂದಿರಿ, ನೀವು ಇಂಥಿಂಥ ಸ್ಥಳದಲ್ಲಿ ಹೋಗಬಾರದು. ಅಲ್ಲಿ ಅರಾಮ್ಯರು ಅಡಗಿಕೊಂಡಿದ್ದಾರೆ” ಎಂದು ತಿಳಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಆದರೆ ದೈವಪುರುಷನು, ಪ್ರತೀಸಾರಿ ಇಸ್ರಯೇಲರ ಅರಸನಿಗೆ, “ಜಾಗರೂಕತೆಯಿಂದಿರಿ! ನೀವು ಇಂಥಿಂಥ ಸ್ಥಳದಲ್ಲಿ ಹಾಯಬಾರದು, ಅಲ್ಲಿ ಸಿರಿಯಾದವರು ಅಡಗಿಕೊಂಡಿದ್ದಾರೆ,” ಎಂದು ತಿಳಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ದೇವರ ಮನುಷ್ಯನು ಇಸ್ರಾಯೇಲ್ಯರ ಅರಸನಿಗೆ - ಜಾಗರೂಕತೆಯಿಂದಿರ್ರಿ; ನೀವು ಇಂಥಿಂಥ ಸ್ಥಳದಲ್ಲಿ ಹಾಯಬಾರದು, ಅಲ್ಲಿ ಅರಾಮ್ಯರು ಅಡಗಿಕೊಂಡಿದ್ದಾರೆ ಎಂದು ತಿಳಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆದರೆ ದೇವಮನುಷ್ಯನು (ಎಲೀಷನು) ಇಸ್ರೇಲಿನ ರಾಜನಿಗೆ ಒಂದು ಸಂದೇಶವನ್ನು ಕಳುಹಿಸಿ, “ನೀವು ಜಾಗರೂಕರಾಗಿರಿ! ನೀವು ಆ ಜಾಗದಲ್ಲಿ ತಿರುಗಾಡದಿರಿ! ಅರಾಮ್ಯರ ಸೈನಿಕರು ಅಲ್ಲಿ ಅಡಗಿದ್ದಾರೆ!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 6:9
15 ತಿಳಿವುಗಳ ಹೋಲಿಕೆ  

ನಿಶ್ಚಯವಾಗಿ ತನ್ನ ಸೇವಕರಾದ ಪ್ರವಾದಿಗಳಿಗೆ ತನ್ನ ಯೋಜನೆಗಳನ್ನು ತಿಳಿಸದೆ, ಸಾರ್ವಭೌಮ ಯೆಹೋವ ದೇವರು ಏನನ್ನೂ ಮಾಡುವುದಿಲ್ಲ.


ಇದು ಕ್ರಿಸ್ತ ಯೇಸುವಿನ ಪ್ರಕಟನೆ. ಶೀಘ್ರವೇ ಸಂಭವಿಸಲಿಕ್ಕಿರುವ ಸಂಗತಿಗಳನ್ನು ತಮ್ಮ ದಾಸರಿಗೆ ತೋರಿಸುವುದಕ್ಕಾಗಿ ದೇವರಿಂದ ಈ ಪ್ರಕಟನೆಯನ್ನು ಹೊಂದಿದರು. ಇದಲ್ಲದೆ ದೇವರು ತಮ್ಮ ದೇವದೂತನನ್ನು ಕಳುಹಿಸಿ, ಅವನ ಮುಖಾಂತರ ಆ ಸಂಗತಿಗಳನ್ನು ತಮ್ಮ ದಾಸನಾದ ಯೋಹಾನನಿಗೆ ತಿಳಿಸಿದರು.


ಅವನ ಸೇವಕರಲ್ಲಿ ಒಬ್ಬನು, “ನನ್ನ ಒಡೆಯನೇ, ಅರಸನೇ, ಯಾವನೂ ಇಲ್ಲ. ಆದರೆ ಇಸ್ರಾಯೇಲಿನಲ್ಲಿರುವ ಪ್ರವಾದಿಯಾದ ಎಲೀಷನು ನಿನ್ನ ಮಲಗುವ ಕೋಣೆಯಲ್ಲಿ ನೀನು ಹೇಳುವ ಮಾತುಗಳನ್ನು ಸಹ ಇಸ್ರಾಯೇಲಿನ ಅರಸನಿಗೆ ಹೇಳುತ್ತಾನೆ,” ಎಂದನು.


ಅವಳು ಬೆಟ್ಟಕ್ಕೆ ದೇವರ ಮನುಷ್ಯನ ಬಳಿಗೆ ಬಂದು, ಅವನ ಪಾದಗಳನ್ನು ಹಿಡಿದಳು. ಆದರೆ ಅವಳನ್ನು ತಳ್ಳಿ ಹಾಕಲು ಗೇಹಜಿಯು ಹತ್ತಿರ ಬಂದದ್ದರಿಂದ ದೇವರ ಮನುಷ್ಯನು, “ಅವಳನ್ನು ಬಿಡು. ಏಕೆಂದರೆ ಅವಳ ಹೃದಯವು ಬಹಳ ನೋವಿನಿಂದ ತುಂಬಿದೆ. ಯೆಹೋವ ದೇವರು ಅದನ್ನು ನನಗೆ ತಿಳಿಸದೆ ಮರೆಮಾಡಿದ್ದಾರೆ,” ಎಂದನು.


ಆಗ ದೇವರ ಮನುಷ್ಯನೊಬ್ಬನು ಬಂದು ಇಸ್ರಾಯೇಲಿನ ಅರಸನಿಗೆ, “ಯೆಹೋವ ದೇವರು ತಗ್ಗುಗಳ ದೇವರಾಗಿರದೆ ಪರ್ವತಗಳ ದೇವರಾಗಿದ್ದನೆಂಬುದಾಗಿ ಅರಾಮ್ಯರು ಹೇಳಿದ್ದರಿಂದ, ‘ನಾನು ಯೆಹೋವ ದೇವರಾಗಿದ್ದೇನೆಂದು ನೀವು ತಿಳಿಯುವ ಹಾಗೆ ಆ ದೊಡ್ಡ ಸಮೂಹವನ್ನೆಲ್ಲಾ ನಿನ್ನ ಕೈಯಲ್ಲಿ ಒಪ್ಪಿಸುವೆನು,’ ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದನು.


ಆಗ, ಒಬ್ಬ ಪ್ರವಾದಿಯು ಇಸ್ರಾಯೇಲಿನ ಅರಸನಾದ ಅಹಾಬನ ಬಳಿಗೆ ಬಂದು, “ಈ ದೊಡ್ಡ ಗುಂಪನ್ನು ನೋಡಿದೆಯೋ? ನಾನೇ ಯೆಹೋವ ದೇವರೆಂದು ನೀನು ತಿಳಿಯುವ ಹಾಗೆ ಈ ಹೊತ್ತು ಅದನ್ನು ನಿನ್ನ ಕೈಯಲ್ಲಿ ಒಪ್ಪಿಸಿ ಕೊಡುವೆನೆಂದು ಯೆಹೋವ ದೇವರು ಹೇಳುತ್ತಾರೆ,” ಎಂದನು.


ಪ್ರವಾದಿಗಳ ಗುಂಪಿನಲ್ಲಿದ್ದ ಒಬ್ಬ ಪ್ರವಾದಿಯ ಹೆಂಡತಿ ಎಲೀಷನಿಗೆ ಕೂಗಿ, “ನಿನ್ನ ದಾಸನಾದ ನನ್ನ ಗಂಡನು ಮರಣಹೊಂದಿದನು. ನಿನ್ನ ದಾಸನು ಯೆಹೋವ ದೇವರಿಗೆ ಭಯಪಡುವವನಾಗಿದ್ದನೆಂದು ನೀನು ಬಲ್ಲೆ. ಈಗ ಸಾಲಗಾರನು ನನ್ನ ಇಬ್ಬರು ಮಕ್ಕಳನ್ನು ತನಗೆ ದಾಸರಾಗಿ ತೆಗೆದುಕೊಳ್ಳಲು ಬಂದಿದ್ದಾನೆ,” ಎಂದಳು.


ಅವಳು ಬಂದು ದೇವರ ಮನುಷ್ಯನಿಗೆ ತಿಳಿಸಿದಳು. ಅವನು, “ನೀನು ಹೋಗಿ ಆ ಎಣ್ಣೆಯನ್ನು ಮಾರಿ ನಿನ್ನ ಸಾಲವನ್ನು ತೀರಿಸಿ, ಮಿಕ್ಕದ್ದರಿಂದ ನೀನೂ, ನಿನ್ನ ಮಕ್ಕಳು ಜೀವನ ಮಾಡಿರಿ,” ಎಂದನು.


ಅರಾಮ್ಯರ ಅರಸನು ಇಸ್ರಾಯೇಲಿನ ಮೇಲೆ ಯುದ್ಧ ಮಾಡುತ್ತಿದ್ದನು. ಇಂಥಿಂಥ ಸ್ಥಳದಲ್ಲಿ ತನ್ನ ದಂಡು ಇಳಿಯಬೇಕೆಂದು ತನ್ನ ಸೇವಕರ ಸಂಗಡ ಯೋಚನೆ ಮಾಡಿಕೊಂಡನು.


ಹೀಗೆಯೇ ದೇವರ ಮನುಷ್ಯನು ತನ್ನನ್ನು ಎಚ್ಚರಿಸಿ, ತನಗೆ ಹೇಳಿದ ಸ್ಥಳಕ್ಕೆ ಇಸ್ರಾಯೇಲಿನ ಅರಸನು ಹೇಳಿ ಕಳುಹಿಸಿ, ತನ್ನ ಸೈನ್ಯವನ್ನು ಕರೆಯಿಸಿಕೊಂಡನು. ಹೀಗೆ ಅವನು ಹಲವು ಸಾರಿ ತಪ್ಪಿಸಿಕೊಂಡನು.


ಯೆಹೋವ ದೇವರು ತಿಳಿಸಿದ್ದರಿಂದಲೇ ಶತ್ರುಗಳು ನನಗೆ ವಿರುದ್ಧ ಹೂಡಿದ್ದ ಕುತಂತ್ರವು ನನಗೆ ಗೊತ್ತಾಯಿತು. ಅವರ ಕೃತ್ಯಗಳನ್ನು ನನಗೆ ತೋರಿಸಲಾಯಿತು.


ದೇವರು ವಂಚಕರ ಯೋಜನೆಗಳನ್ನು ಭಂಗಪಡಿಸುತ್ತಾರೆ. ಕುಯುಕ್ತಿಯುಳ್ಳವರ ಕೈಗಳು ಯಾವುದೇ ಯಶಸ್ಸನ್ನು ಸಾಧಿಸದಂತೆ ಮಾಡುತ್ತಾರೆ.


ಯೆಹೋವ ದೇವರು ಜನಾಂಗಗಳ ಆಲೋಚನೆಯನ್ನು ವ್ಯರ್ಥ ಮಾಡುವರು; ಜನರ ದುರುದ್ದೇಶಗಳನ್ನು ನಿಷ್ಪಲ ಮಾಡುತ್ತಾರೆ.


ಯೆಹೋವ ದೇವರ ಕಣ್ಣುಗಳು ತಿಳುವಳಿಕೆಯನ್ನು ಕಾಯುತ್ತವೆ; ಅವರು ದ್ರೋಹಿಯ ಮಾತುಗಳನ್ನು ಕೆಡವಿ ಹಾಕುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು