2 ಅರಸುಗಳು 7:10 - ಕನ್ನಡ ಸಮಕಾಲಿಕ ಅನುವಾದ10 ಹಾಗೆಯೇ ಅವರು ಬಂದು ಪಟ್ಟಣದ ಬಾಗಿಲು ಕಾಯುವವನನ್ನು ಕರೆದು ಅವನಿಗೆ, “ನಾವು ಅರಾಮ್ಯರ ಪಾಳೆಯಕ್ಕೆ ಹೋಗಿ ಬಂದೆವು, ಅಲ್ಲಿ ಯಾರೂ ಕಾಣಿಸಲಿಲ್ಲ, ಮನುಷ್ಯರ ಶಬ್ದವೇ ಕೇಳಿಸಲಿಲ್ಲ. ಕತ್ತೆ ಕುದುರೆಗಳನ್ನು ಅಲ್ಲಲ್ಲಿ ಕಟ್ಟಿಹಾಕಲಾಗಿತ್ತು ಡೇರೆಗಳು ಇದ್ದ ಹಾಗೆಯೇ ಇವೆ,” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಊರಬಾಗಿಲಿಗೆ ಬಂದು ಕಾವಲುಗಾರರಿಗೆ, “ನಾವು ಅರಾಮ್ಯರ ಪಾಳೆಯಕ್ಕೆ ಹೋಗಿದ್ದೆವು. ಅಲ್ಲಿ ನಮಗೆ ಯಾರೂ ಕಾಣಿಸಲಿಲ್ಲ, ಮನುಷ್ಯರ ಶಬ್ದವೇ ಕೇಳಿಸಲಿಲ್ಲ. ಕತ್ತೆ ಕುದುರೆಗಳನ್ನು ಅಲ್ಲಲ್ಲಿ ಕಟ್ಟಿಹಾಕಲಾಗಿತ್ತು ಡೇರೆಗಳು ಇದ್ದ ಹಾಗೆಯೇ ಇವೆ” ಎಂದು ಕೂಗಿ ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಅಲ್ಲಿಂದ ಹೊರಟು ಊರಬಾಗಿಲಿಗೆ ಬಂದು, ಕಾವಲುಗಾರರಿಗೆ, “ನಾವು ಸಿರಿಯಾದವರ ಪಾಳೆಯಕ್ಕೆ ಹೋಗಿದ್ದೆವು; ಅಲ್ಲಿ ನಮಗೆ ಯಾರೂ ಕಾಣಿಸಲಿಲ್ಲ, ಮನುಷ್ಯಶಬ್ದವೇ ಕೇಳಿಸಲಿಲ್ಲ. ಕತ್ತೆಕುದುರೆಗಳನ್ನು ಅಲ್ಲಲ್ಲಿ ಕಟ್ಟಲಾಗಿದೆ. ಡೇರೆಗಳು ಇದ್ದ ಹಾಗೆಯೇ ಇರುತ್ತವೆ,” ಎಂದು ಕೂಗಿ ತಿಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಅಲ್ಲಿಂದ ಹೊರಟು ಊರುಬಾಗಲಿಗೆ ಬಂದು ಕಾಯುವವರಿಗೆ - ನಾವು ಅರಾಮ್ಯರ ಪಾಳೆಯಕ್ಕೆ ಹೋಗಿದ್ದೆವು. ಅಲ್ಲಿ ನಮಗೆ ಯಾರೂ ಕಾಣಿಸಲಿಲ್ಲ, ಮನುಷ್ಯ ಶಬ್ದವೇ ಕೇಳಿಸಲಿಲ್ಲ. ಕತ್ತೆಕುದುರೆಗಳು ಅಲ್ಲಲ್ಲಿ ಕಟ್ಟಲ್ಪಟ್ಟಿರುತ್ತವೆ, ಡೇರೆಗಳು ಇದ್ದ ಹಾಗೆಯೇ ಇರುತ್ತವೆ ಎಂದು ಕೂಗಿ ತಿಳಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಈ ಕುಷ್ಠರೋಗಿಗಳು ನಗರದ ಬಾಗಿಲಿಗೆ ಬಂದು ದ್ವಾರಪಾಲಕರನ್ನು ಕರೆದು, “ನಾವು ಅರಾಮ್ಯರ ಪಾಳೆಯಕ್ಕೆ ಹೋಗಿದ್ದೆವು. ಆದರೆ ನಾವು ಜನರ ಧ್ವನಿಯನ್ನು ಕೇಳಲೇ ಇಲ್ಲ. ಅಲ್ಲಿ ಜನರ ಸುಳಿವಿಲ್ಲ. ಕುದುರೆಗಳು ಮತ್ತು ಹೇಸರಕತ್ತೆಗಳು ಕಟ್ಟಿಹಾಕಿದಂತೆಯೇ ಇವೆ. ಗುಡಾರಗಳಿನ್ನೂ ಯಥಾಸ್ಥಿತಿಯಲ್ಲಿವೆ. ಆದರೆ ಸೈನಿಕರೆಲ್ಲರೂ ಹೊರಟುಹೋಗಿದ್ದಾರೆ” ಎಂದು ಹೇಳಿದರು. ಅಧ್ಯಾಯವನ್ನು ನೋಡಿ |