2 ಅರಸುಗಳು 7:17 - ಕನ್ನಡ ಸಮಕಾಲಿಕ ಅನುವಾದ17 ಆದರೆ ಅರಸನಿಗೆ ಹಸ್ತಕನಾದ ಆ ಅಧಿಕಾರಿಯನ್ನು ಅರಸನು ಪಟ್ಟಣದ ಬಾಗಿಲಿನ ಕಾವಲಿಗೆ ನೇಮಿಸಿದ್ದನು. ಅರಸನು ದೇವರ ಮನುಷ್ಯನ ಬಳಿಗೆ ಬಂದಾಗ, ದೇವರ ಮನುಷ್ಯನು ಹೇಳಿದ್ದ ಪ್ರಕಾರವೇ ಜನರು ಆ ಅಧಿಕಾರಿಯನ್ನು ಪಟ್ಟಣದ ಬಾಗಿಲಲ್ಲಿ ತುಳಿದುಹಾಕಿದ್ದರಿಂದ ಅವನು ಮರಣಹೊಂದಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಅರಸನು ತನ್ನ ಸಹವರ್ತಿಯಾದ ಸರದಾರನನ್ನು ಊರಬಾಗಿಲು ಕಾಯುವುದಕ್ಕಾಗಿ ಕಳುಹಿಸಿದ್ದರಿಂದ, ಅವನು ಜನರಿಂದ ತುಳಿಯಲ್ಪಟ್ಟು ಸತ್ತು ಹೋದನು. ಹೀಗೆ ದೇವರ ಮನುಷ್ಯನು ಅರಸನ ಜೊತೆಯಲ್ಲಿ, ತನ್ನ ಬಳಿಗೆ ಬಂದಿದ್ದ ಆ ಸರದಾರನಿಗೆ ಹೇಳಿದ ಮಾತು ನೆರವೇರಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಅರಸನು ತನ್ನ ಹಸ್ತಕನಾದ ಸರದಾರನನ್ನು ಊರ ದ್ವಾರಪಾಲಕರ ನಾಯಕನನ್ನಾಗಿ ಕಳುಹಿಸಿದ್ದನು. ಅವನು ಜನರ ತುಳಿತಕ್ಕೆ ಸಿಕ್ಕಿ ಸತ್ತನು. ಹೀಗೆ ಆ ದೈವಪುರುಷನು ಅರಸನ ಜೊತೆಯಲ್ಲಿ ತನ್ನ ಬಳಿಗೆ ಬಂದಿದ್ದ ಆ ಸರದಾರನಿಗೆ ಹೇಳಿದ ಮಾತು ನೆರವೇರಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಅರಸನು ತನ್ನ ಹಸ್ತಕನಾದ ಸರದಾರನನ್ನು ಊರು ಬಾಗಲು ಕಾಯುವದಕ್ಕಾಗಿ ಕಳುಹಿಸಿದಲ್ಲಿ ಅವನು ಜನರಿಂದ ತುಳಿಯಲ್ಪಟ್ಟು ಸತ್ತನು. ಹೀಗೆ ದೇವರ ಮನುಷ್ಯನು ಅರಸನ ಜೊತೆಯಲ್ಲಿ ತನ್ನ ಬಳಿಗೆ ಬಂದಿದ್ದ ಆ ಸರದಾರನಿಗೆ ಹೇಳಿದ ಮಾತು ನೆರವೇರಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ರಾಜನು ತನಗೆ ಆಪ್ತನಾಗಿದ್ದ ಅಧಿಕಾರಿಯನ್ನು ಪಟ್ಟಣದ ಬಾಗಿಲನ್ನು ಕಾಯಲು ಆರಿಸಿಕೊಂಡನು. ಆದರೆ ಜನರು ಶತ್ರುಗಳ ಪಾಳೆಯದಲ್ಲಿದ್ದ ಆಹಾರವನ್ನು ಪಡೆಯಲು ಓಡಿಹೋಗುವಾಗ ಅವನು ಜನರ ತುಳಿತಕ್ಕೆ ಸಿಕ್ಕಿಕೊಂಡು ಸತ್ತುಹೋದನು. ರಾಜನು ಎಲೀಷನ ಮನೆಗೆ ಬಂದಿದ್ದಾಗ, ದೇವಮನುಷ್ಯನು ಹೇಳಿದಂತೆಯೇ ಈ ಸಂಗತಿಗಳೆಲ್ಲಾ ಸಂಭವಿಸಿದವು. ಅಧ್ಯಾಯವನ್ನು ನೋಡಿ |
ಎಲೀಷನು ಊರಿನ ಹಿರಿಯರೊಡನೆ ತನ್ನ ಮನೆಯಲ್ಲಿ ಕುಳಿತುಕೊಂಡಿದ್ದನು. ಅರಸನು ತನ್ನ ಹತ್ತಿರ ಇದ್ದ ಒಬ್ಬ ದೂತನನ್ನು ಕಳುಹಿಸಿದನು. ಅವನು ಇನ್ನೂ ಸ್ವಲ್ಪ ದೂರದಲ್ಲಿರುವಾಗಲೇ ಎಲೀಷನು ಹಿರಿಯರಿಗೆ, “ನೋಡಿರಿ, ಆ ಕೊಲೆಗಾರನ ಮಗನು ನನ್ನ ತಲೆಯನ್ನು ಹಾರಿಸುವುದಕ್ಕೆ ದೂತನನ್ನು ಕಳುಹಿಸಿದ್ದಾನೆ. ದೂತನು ಇಲ್ಲಿಗೆ ಬಂದ ಕೂಡಲೇ ನೀವು ಬಾಗಿಲನ್ನು ಮುಚ್ಚಿ, ಅವನು ಒಳಗೆ ಬಾರದಂತೆ ಅದನ್ನು ಒತ್ತಿಹಿಡಿಯಿರಿ. ಅವನ ಹಿಂದೆಯೇ ಬರುತ್ತಿರುವ ಅವನೊಡೆಯನ ಕಾಲಿನ ಸಪ್ಪಳ ಕೇಳಿಸುತ್ತಿದೆಯಲ್ಲವೇ?” ಎಂದು ಹೇಳಿದನು.