Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 7:2 - ಕನ್ನಡ ಸಮಕಾಲಿಕ ಅನುವಾದ

2 ಆಗ ಅರಸನಿಗೆ ಹಸ್ತಕನಾದ ಅಧಿಕಾರಿಯು ದೇವರ ಮನುಷ್ಯನಿಗೆ ಉತ್ತರವಾಗಿ, “ಇಗೋ, ಯೆಹೋವ ದೇವರು ಆಕಾಶದಲ್ಲಿ ಕಿಟಕಿಗಳನ್ನು ಮಾಡಿದರೆ, ಈ ಕಾರ್ಯ ಸಂಭವಿಸುವುದೋ?” ಎಂದನು. ಅದಕ್ಕವನು, “ನೀನು ನಿನ್ನ ಕಣ್ಣುಗಳಿಂದ ಅದನ್ನು ನೋಡುವೆ, ಆದರೆ ಅದರಲ್ಲಿ ಯಾವುದನ್ನೂ ತಿನ್ನುವುದಿಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಇದನ್ನು ಕೇಳಿ ಅರಸನ ಸಮೀಪವರ್ತಿಯಾದ ಸರದಾರನು ದೇವರ ಮನುಷ್ಯನಿಗೆ, “ಯೆಹೋವನು ಆಕಾಶದಲ್ಲಿ ಕಿಂಡಿಗಳನ್ನು ಕೊರೆದರೂ ಇದು ಸಂಭವಿಸಲಾರದು” ಎನ್ನಲು ಎಲೀಷನು ಅವನಿಗೆ, “ಅದು ಸಂಭವಿಸುವುದನ್ನು ನೀನು ಕಣ್ಣಾರೆ ಕಾಣುವಿ, ಆದರೆ ನೀನು ಅದನ್ನು ಅನುಭವಿಸುವುದಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಇದನ್ನು ಕೇಳಿ ಅರಸನ ಹಸ್ತಕನಾದ ಸರದಾರನು ದೈವಪುರುಷನಿಗೆ, “ಸರ್ವೇಶ್ವರ ಆಕಾಶದಲ್ಲಿ ದ್ವಾರಗಳನ್ನು ಮಾಡಿದರೂ ಇದು ಸಂಭವಿಸಲಾರದು,” ಎಂದನು. ಅದಕ್ಕೆ ಎಲೀಷನು, “ಅದು ಸಂಭವಿಸುವುದನ್ನು ನೀನು ಕಣ್ಣಾರೆ ಕಾಣುವೆ; ಆದರೆ ಅದನ್ನು ಅನುಭವಿಸಲಾರೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಇದನ್ನು ಕೇಳಿ ಅರಸನ ಹಸ್ತಕನಾದ ಸರದಾರನು ದೇವರ ಮನುಷ್ಯನಿಗೆ - ಯೆಹೋವನು ಆಕಾಶದಲ್ಲಿ ದ್ವಾರಗಳನ್ನು ಮಾಡಿದರೂ ಇದು ಸಂಭವಿಸಲಾರದು ಅನ್ನಲು ಎಲೀಷನು ಅವನಿಗೆ - ಅದು ಸಂಭವಿಸುವದನ್ನು ನೀನು ಕಣ್ಣಾರೆ ಕಾಣುವಿ, ಆದರೆ ಅದನ್ನು ಅನುಭವಿಸುವದಿಲ್ಲ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆಗ ರಾಜನಿಗೆ ಆಪ್ತನಾಗಿದ್ದ ಅಧಿಕಾರಿಯು ದೇವಮನುಷ್ಯನಿಗೆ, “ಯೆಹೋವನು ಪರಲೋಕಕ್ಕೆ ಕಿಟಕಿಗಳನ್ನು ಮಾಡಿಸಿದರೂ ಇದು ಸಂಭವಿಸುವುದಿಲ್ಲ!” ಎಂದು ಉತ್ತರಿಸಿದನು. ಎಲೀಷನು, “ನೀನು ನಿನ್ನ ಸ್ವಂತ ಕಣ್ಣುಗಳಿಂದಲೇ ಇದನ್ನು ನೋಡುವೆ. ಆದರೆ ಆ ಆಹಾರದಲ್ಲಿ ಯಾವುದನ್ನೂ ನೀನು ತಿನ್ನುವುದಿಲ್ಲ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 7:2
17 ತಿಳಿವುಗಳ ಹೋಲಿಕೆ  

ನನ್ನ ಆಲಯದಲ್ಲಿ ಆಹಾರ ಇರುವಂತೆ ಹತ್ತನೆಯ ಪಾಲುಗಳನ್ನೆಲ್ಲಾ ಬೊಕ್ಕಸಕ್ಕೆ ತನ್ನಿರಿ. ನಾನು ನಿಮಗೆ ಪರಲೋಕದ ಮಹಾದ್ವಾರಗಳನ್ನು ತೆರೆದು, ಸ್ಥಳ ಹಿಡಿಸಲಾರದಷ್ಟು ನಿಮಗೆ ಆಶೀರ್ವಾದವನ್ನು ಸುರಿಸದಿರುವೆನೋ, ಇಲ್ಲವೋ ಎಂಬುದನ್ನು ನೀವು ಈಗ ನನ್ನನ್ನು ಪರೀಕ್ಷಿಸಿ ನೋಡಿರಿ?” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ನೋಹನ ಜೀವನದ ಆರುನೂರು ವರ್ಷದ ಎರಡನೆಯ ತಿಂಗಳಿನ ಹದಿನೇಳನೆಯ ದಿವಸದಲ್ಲಿಯೇ ಮಹಾಸಾಗರದ ಸೆಲೆಗಳು ಒಡೆದವು. ಆಕಾಶದ ಪ್ರವಾಹದ ದ್ವಾರಗಳು ತೆರೆದವು.


ನಾವು ಅಪನಂಬಿಗಸ್ತರಾಗಿದ್ದರೂ ಅವರು ನಂಬಿಗಸ್ತರಾಗಿಯೇ ಉಳಿದಿರುವರು. ಅವರು ತಮ್ಮ ಸ್ವಭಾವವನ್ನು ತಾವೇ ನಿರಾಕರಿಸಲಾರರು.


ಅವರಲ್ಲಿ ಕೆಲವರು ನಂಬದೆ ಹೋಗಿದ್ದರೇನು? ಅವರ ಅಪನಂಬಿಕೆಯು ದೇವರ ಪ್ರಾಮಾಣಿಕತೆಯನ್ನು ರದ್ದುಗೊಳಿಸುವುದೇ?


ಅವರು ತಿರುಗಿಬಿದ್ದು ದೇವರನ್ನು ಪರೀಕ್ಷಿಸಿದರು. ಇಸ್ರಾಯೇಲರ ಪರಿಶುದ್ಧರಿಗೆ ಬೇಸರಗೊಳಿಸಿದರು.


ಎಫ್ರಾಯೀಮಿನ ರಾಜಧಾನಿ ಸಮಾರ್ಯ. ಸಮಾರ್ಯದ ರಾಜಧಾನಿ ರೆಮಲ್ಯನ ಮಗನು. ನೀವು ನಂಬದೆ ಹೋದರೆ ನೀವು ನಿಜವಾಗಿಯೂ ನೆಲೆಗೊಳ್ಳುವುದಿಲ್ಲ,’ ಎಂದು ಹೇಳುತ್ತಾರೆ.”


ಅವರು ಉದಯದಲ್ಲಿ ಎದ್ದು ತೆಕೋವದ ಮರುಭೂಮಿಗೆ ಹೊರಟರು. ಅವರು ಹೊರಟು ಹೋಗುತ್ತಿರುವಾಗ ಯೆಹೋಷಾಫಾಟನು ನಿಂತುಕೊಂಡು, “ಯೆಹೂದದವರೇ, ಯೆರೂಸಲೇಮಿನ ನಿವಾಸಿಗಳೇ, ನನ್ನ ಮಾತನ್ನು ಕೇಳಿರಿ. ನಿಮ್ಮ ದೇವರಾದ ಯೆಹೋವ ದೇವರನ್ನು ನಂಬಿ ಸ್ಥಿರವಾಗಿರಿ. ದೇವರ ಪ್ರವಾದಿಗಳನ್ನು ನಂಬಿರಿ, ಆಗ ಜಯ ಹೊಂದುವಿರಿ,” ಎಂದನು.


ಈ ಕಾರ್ಯವನ್ನು ಯೆಹೋವ ದೇವರು ನಿನ್ನ ಸೇವಕನಿಗೆ ಮನ್ನಿಸಲಿ. ಏನೆಂದರೆ, ನನ್ನ ಯಜಮಾನನು ಅಡ್ಡ ಬೀಳುವುದಕ್ಕೆ ರಿಮ್ಮೋನನ ದೇವಸ್ಥಾನಕ್ಕೆ ಹೋಗಿ, ಅವನು ನನ್ನ ಕೈಯ ಮೇಲೆ ಆತುಕೊಳ್ಳುವಾಗ, ರಿಮ್ಮೋನನ ದೇವಸ್ಥಾನದಲ್ಲಿ ನಾನು ಬಾಗಿದರೆ, ಯೆಹೋವ ದೇವರು ನಿನ್ನ ಸೇವಕನಿಗೆ ಈ ಕಾರ್ಯವನ್ನು ಮನ್ನಿಸಲಿ,” ಎಂದನು.


ಪಿಸ್ಗಾದ ತುದಿಗೆ ಏರಿ, ಪಶ್ಚಿಮಕ್ಕೂ, ಉತ್ತರಕ್ಕೂ, ದಕ್ಷಿಣಕ್ಕೂ, ಪೂರ್ವಕ್ಕೂ ಕಣ್ಣೆತ್ತಿ ಅದನ್ನು ಕಣ್ಣಾರೆ ನೋಡು. ಈ ಯೊರ್ದನನ್ನು ನೀನು ದಾಟಿ ಹೋಗುವುದಿಲ್ಲ.


ಯೆಹೋವ ದೇವರು ಹೀಗೆ ಹೇಳುತ್ತಾರೆ, ಇಗೋ, ನಾನು ನೆಹೆಲಾಮ್ಯನಾದ ಶೆಮಾಯನನ್ನೂ, ಅವನ ಸಂತಾನವನ್ನೂ ದಂಡಿಸುತ್ತೇನೆ. ಈ ಜನರೊಳಗೆ ವಾಸಿಸುವುದಕ್ಕೆ ಅವನಿಗೆ ಒಬ್ಬನೂ ಇರುವುದಿಲ್ಲ. ನಾನು ನನ್ನ ಜನರಿಗೆ ಮಾಡುವ ಒಳ್ಳೆಯದನ್ನು ಅವನು ನೋಡುವುದಿಲ್ಲವೆಂದು ಯೆಹೋವ ದೇವರು ಹೇಳುತ್ತಾರೆ. ಏಕೆಂದರೆ ಅವನು ಯೆಹೋವ ದೇವರಿಗೆ ವಿರೋಧವಾಗಿ ಬೋಧಿಸಿದ್ದಾನೆ.’ ”


ಈ ಸಮಸ್ತ ಜನರಿಗೆ ಕೊಡುವುದಕ್ಕೆ ಮಾಂಸವು ನನಗೆ ಎಲ್ಲಿಂದ ದೊರಕುವುದು? ‘ನಮಗೆ ತಿನ್ನಲು ಮಾಂಸವನ್ನು ಕೊಡು,’ ಎಂದು ನನ್ನ ಬಳಿಗೆ ಬಂದು ಅಳುತ್ತಿದ್ದಾರೆ.


ದೇವರು ಮನುಷ್ಯನಂತೆ ಸುಳ್ಳಾಡುವವರಲ್ಲ. ನರಪುತ್ರರಂತೆ ಮನಸ್ಸನ್ನು ಬದಲಾಯಿಸಿಕೊಳ್ಳುವವರಲ್ಲ. ಅವರು ನುಡಿದದ್ದನ್ನು ಮಾಡದಿರುವರೇ? ವಾಗ್ದಾನ ಮಾಡಿದ್ದನ್ನು ಅವರು ನೆರವೇರಿಸದಿರುವರೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು