Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 7:5 - ಕನ್ನಡ ಸಮಕಾಲಿಕ ಅನುವಾದ

5 ಹಾಗೆಯೇ ಸಂಜೆಯಲ್ಲಿ ಎದ್ದು, ಅರಾಮ್ಯರ ಪಾಳೆಯಕ್ಕೆ ಹೋಗಲು ಅವರು ಅರಾಮ್ಯರ ಪಾಳೆಯದ ಅಂಚಿಗೆ ಬಂದಾಗ, ಅಲ್ಲಿ ಯಾರೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅವರು ಸಾಯಂಕಾಲವಾಗಲು ಅರಾಮ್ಯರ ಪಾಳೆಯಕ್ಕೆ ಹೊರಟರು. ಅವರು ಪಾಳೆಯದ ಅಂಚಿಗೆ ಬಂದಾಗ ಅಲ್ಲಿ ಒಬ್ಬನೂ ಕಾಣಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಸಾಯಂಕಾಲವಾದಾಗ ಅವರು ಸಿರಿಯಾದವರ ಪಾಳೆಯಕ್ಕೆ ಹೊರಟರು; ಪಾಳೆಯದ ಅಂಚಿಗೆ ಬಂದಾಗ ಅಲ್ಲಿ ಒಬ್ಬನೂ ಕಾಣಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಸಾಯಂಕಾಲವಾಗಲು ಅರಾಮ್ಯರ ಪಾಳೆಯಕ್ಕೆ ಹೊರಟರು. ಅವರು ಪಾಳೆಯದ ಅಂಚಿಗೆ ಬಂದಾಗ ಅಲ್ಲಿ ಒಬ್ಬನೂ ಕಾಣಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಅಂದು ಸಂಜೆ ಆ ನಾಲ್ವರು ಕುಷ್ಠರೋಗಿಗಳು ಅರಾಮ್ಯರ ಪಾಳೆಯಕ್ಕೆ ಹೋದರು. ಅವರು ಪಾಳೆಯದ ಹೊರ ಅಂಚಿಗೆ ಬಂದರು. ಅಲ್ಲಿ ಜನರೇ ಇರಲಿಲ್ಲ!

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 7:5
10 ತಿಳಿವುಗಳ ಹೋಲಿಕೆ  

ನಿಮಗೆ ವಿರೋಧವಾಗಿ ಏಳುವ ನಿಮ್ಮ ಶತ್ರುಗಳನ್ನು ಯೆಹೋವ ದೇವರು ನಿಮ್ಮ ಮುಂದೆಯೇ ಸೋಲಿಸಿಬಿಡುವರು. ಅವರು ಒಂದೇ ಮಾರ್ಗದಲ್ಲಿ ನಿಮಗೆ ವಿರೋಧವಾಗಿ ಹೊರಟು ಬಂದರೂ, ಏಳು ಮಾರ್ಗಗಳಿಂದ ಓಡಿಹೋಗುವರು.


“ಅವರ ಮಧ್ಯದಲ್ಲಿರುವ ರಾಜಪುತ್ರನು ಹೆಗಲ ಮೇಲೆ ಹೊರೆಯನ್ನು ಹೊತ್ತುಕೊಂಡು ಮುಸ್ಸಂಜೆಯಲ್ಲಿ ಹೊರಟು ಹೋಗುವನು. ಅವರು ಗೋಡೆಯನ್ನು ಕೊರೆದು, ಆ ಕಿಂಡಿಯ ಮೂಲಕ ತಮ್ಮ ಸಲಕರಣೆಗಳನ್ನು ಹೊರಗೆ ಸಾಗಿಸುವರು. ಅವನು ತನ್ನ ಕಣ್ಣುಗಳಿಂದ ನೆಲವನ್ನು ನೋಡದ ಹಾಗೆ ಮುಖವನ್ನು ಮುಚ್ಚಿಕೊಳ್ಳುವನು.


ಆಗ ದಾವೀದನು ಅವರ ಮೇಲೆ ಬೆಳಗಿನಜಾವದಿಂದ ಮಾರನೆಯ ದಿವಸದ ಸಾಯಂಕಾಲದವರೆಗೂ ದಾಳಿಮಾಡುತ್ತಾ ಇದ್ದನು. ಆದರೆ ಅವರಲ್ಲಿ ಒಂಟೆಗಳ ಮೇಲೆ ಏರಿ ಓಡಿ ಹೋದ ನಾನೂರು ಮಂದಿ ಯುವಜನರ ಹೊರತು ಒಬ್ಬನಾದರೂ ತಪ್ಪಿಸಿಕೊಳ್ಳಲಿಲ್ಲ.


ಇಸ್ರಾಯೇಲ್ ರಕ್ಷಣಾಬಂಡೆ ಅವರನ್ನು ಮಾರಿ, ಯೆಹೋವ ದೇವರು ಅವರನ್ನು ಕೈಬಿಟ್ಟ ಹೊರತು, ಒಬ್ಬನು ಹೇಗೆ ಸಾವಿರ ಮಂದಿಯನ್ನು ಹಿಂದಟ್ಟುವನು? ಇಬ್ಬರು ಹೇಗೆ ಹತ್ತು ಸಾವಿರ ಮಂದಿಯನ್ನು ಓಡಿಸುವರು?


ಮನೆಯ ಹೊರಗೆ ಖಡ್ಗವೂ ಒಳಗೆ ಭಯವೂ ಇವರಲ್ಲಿರುವುವು. ಪ್ರಾಯಸ್ಥರೂ ಕನ್ನಿಕೆಯರೂ ನರೆಕೂದಲಿನವರೂ ಹಾಲು ಕುಡಿಯುವ ಕೂಸುಗಳೂ ಖಡ್ಗಗಳಿಗೆ ಸಂಹಾರವಾಗುವರು.


“ ‘ಪಶುಗಳ ಚೊಚ್ಚಲ ಮರಿ ಯೆಹೋವ ದೇವರದಾದ್ದರಿಂದ ಅದನ್ನೂ ಹರಕೆಯಾಗಿ ಕೊಡಬಾರದು. ಅದು ಎತ್ತಾಗಲಿ ಇಲ್ಲವೆ ಕುರಿಯಾಗಲಿ, ಅದು ಯೆಹೋವ ದೇವರದೇ.


ಆದರೆ ನೀನು ನೇಮಿಸಿದ ಕ್ರಯವನ್ನು ಕೊಡದಷ್ಟು ಅವನು ಬಡವನಾಗಿದ್ದರೆ, ಅವನನ್ನು ಯಾಜಕನ ಮುಂದೆ ನಿಲ್ಲಿಸಬೇಕು. ಯಾಜಕನು ಅವನಿಗೆ ಕ್ರಯವನ್ನು ನೇಮಿಸಬೇಕು. ಪ್ರಮಾಣ ಮಾಡಿದವನ ಸಂಪತ್ತಿಗೆ ತಕ್ಕಂತೆ ಯಾಜಕನು ಅವನಿಗೆ ಕ್ರಯವನ್ನು ನಿರ್ಣಯಿಸಬೇಕು.


ನಾವು ಇಲ್ಲಿಯೇ ಇದ್ದರೆ, ಪಟ್ಟಣದಲ್ಲಿ ಬರವಿರುವುದರಿಂದ ಅಲ್ಲಿ ಸಾಯುತ್ತೇವೆ. ಇಲ್ಲಿ ನಾವು ಕುಳಿತಿದ್ದರೂ ಹಾಗೆಯೇ ಸಾಯುತ್ತೇವೆ. ಆದ್ದರಿಂದ ನಾವು ಅರಾಮ್ಯರ ಪಾಳೆಯಕ್ಕೆ ಹೋಗಿ ಅವರಿಗೆ ಶರಣಾಗೋಣ. ಅವರು ನಮ್ಮನ್ನು ಬದುಕಿಸಿದರೆ ಬದುಕುವೆವು, ಅವರು ನಮ್ಮನ್ನು ಕೊಲ್ಲುವುದಾದರೆ ಕೊಲ್ಲಲಿ,” ಎಂದುಕೊಂಡರು.


ಏಕೆಂದರೆ ಯೆಹೋವ ದೇವರು ಪಾಳೆಯದಲ್ಲಿರುವ ಅರಾಮ್ಯರಿಗೆ ರಥಗಳ, ಕುದುರೆಗಳ ಮತ್ತು ಮಹಾ ಸೈನ್ಯದ ಶಬ್ದವೂ ಕೇಳಿಸುವಂತೆ ಮಾಡಿದ್ದರಿಂದ ಅವರು ಒಬ್ಬರಿಗೊಬ್ಬರು, “ಇಸ್ರಾಯೇಲಿನ ಅರಸನು ಹಿತ್ತಿಯರ ಅರಸರನ್ನೂ, ಈಜಿಪ್ಟಿನ ಅರಸರನ್ನೂ ನಮ್ಮ ಮೇಲೆ ದಾಳಿಮಾಡಲು ಅವರನ್ನು ಕೂಲಿಗೆ ಕರೆದಿದ್ದಾನೆ,” ಎಂದುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು