2 ಅರಸುಗಳು 7:9 - ಕನ್ನಡ ಸಮಕಾಲಿಕ ಅನುವಾದ9 ಅನಂತರ ಅವರು, “ಇದು ಶುಭವಾರ್ತೆಯ ದಿವಸ, ನಾವು ಇದನ್ನು ಪ್ರಕಟಿಸದಿರುವುದು ಒಳ್ಳೆಯದಲ್ಲ. ಬೆಳಗಾಗುವವರೆಗೆ ತಡಮಾಡಿದರೆ, ಶಿಕ್ಷೆಗೆ ಪಾತ್ರರಾಗಬಹುದು. ಆದ್ದರಿಂದ ಹೋಗಿ ಅರಮನೆಯವರಿಗೆ ಈ ಸಂಗತಿಯನ್ನು ತಿಳಿಸೋಣ,” ಎಂದು ಮಾತನಾಡಿಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಅನಂತರ ಅವರು, “ಇದು ಶುಭವಾರ್ತೆಯ ದಿನವಾಗಿದೆ. ನಾವು ಇದನ್ನು ಪ್ರಕಟಿಸದಿರುವುದು ಒಳ್ಳೇಯದಲ್ಲ. ಬೆಳಗಾಗುವವರೆಗೆ ತಡಮಾಡಿದರೆ ಶಿಕ್ಷೆಗೆ ಪಾತ್ರರಾದೇವು. ಆದುದರಿಂದ ಹೋಗಿ ಅರಸನಿಗೆ ಈ ಸಂಗತಿ ತಿಳಿಸೋಣ” ಎಂದು ಮಾತನಾಡಿಕೊಂಡು ಅಲ್ಲಿಂದ ಹೊರಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಅನಂತರ ಅವರು, “ಇದು ಶುಭವಾರ್ತೆಯ ದಿವಸ; ನಾವು ಇದನ್ನು ಪ್ರಕಟಿಸದಿರುವುದು ಒಳ್ಳೆಯದಲ್ಲ. ಬೆಳಗಾಗುವವರೆಗೆ ತಡಮಾಡಿದರೆ ಶಿಕ್ಷೆಗೆ ಪಾತ್ರರಾಗಬಹುದು. ಆದುದರಿಂದ ಹೋಗಿ ಅರಮನೆಯವರಿಗೆ ಈ ಸಂಗತಿಯನ್ನು ತಿಳಿಸೋಣ,” ಎಂದು ಮಾತಾಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಅನಂತರ ಅವರು - ಇದು ಶುಭವಾರ್ತೆಯ ದಿವಸವಾಗಿದೆ; ನಾವು ಇದನ್ನು ಪ್ರಕಟಿಸದಿರುವದು ಒಳ್ಳೇದಲ್ಲ. ಬೆಳಗಾಗುವವರೆಗೆ ತಡಮಾಡಿದರೆ ಶಿಕ್ಷೆಗೆ ಪಾತ್ರರಾದೇವು. ಆದದರಿಂದ ಹೋಗಿ ಅರಮನೆಯವರಿಗೆ ಈ ಸಂಗತಿಯನ್ನು ತಿಳಿಸೋಣ ಎಂದು ಮಾತಾಡಿಕೊಂಡು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಆಗ ಆ ಕುಷ್ಠರೋಗಿಗಳು, “ನಾವು ತಪ್ಪು ಮಾಡುತ್ತಿದ್ದೇವೆ! ಈ ದಿನ ನಮಗೆ ಶುಭವಾರ್ತೆ ಸಿಕ್ಕಿದೆ. ಆದರೆ ನಾವು ನಿಶಬ್ಧದಿಂದ ಇದ್ದೇವೆ. ಸೂರ್ಯನು ಮೇಲಕ್ಕೇರಿ ಬರುವವರೆಗೆ ನಾವು ಸುಮ್ಮನಿದ್ದರೆ ನಮ್ಮನ್ನು ದಂಡಿಸಲಾಗುವುದು. ಈಗ ನಾವು ರಾಜನ ಮನೆಗೆ ಹೋಗಿ ಅಲ್ಲಿ ವಾಸಿಸುವ ಜನರಿಗೆ ಇದನ್ನು ತಿಳಿಸೋಣ” ಎಂದು ಮಾತನಾಡಿಕೊಂಡರು. ಅಧ್ಯಾಯವನ್ನು ನೋಡಿ |