Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 8:1 - ಕನ್ನಡ ಸಮಕಾಲಿಕ ಅನುವಾದ

1 ಎಲೀಷನು ತಾನು ಬದುಕಿಸಿದ ಹುಡುಗನ ತಾಯಿಗೆ, “ನೀನು, ನಿನ್ನ ಮನೆಯವರು ಎದ್ದು ಎಲ್ಲಿ ಇಳಿದುಕೊಳ್ಳುವ ಸ್ಥಳ ಉಂಟೋ ಅಲ್ಲಿ ಹೋಗಿ ವಾಸಿಸಿರಿ. ಏಕೆಂದರೆ ಯೆಹೋವ ದೇವರು ಬರವನ್ನು ಕಳುಹಿಸಲಿದ್ದಾರೆ. ಅದು ದೇಶದ ಮೇಲೆ ಏಳು ವರ್ಷದವರೆಗೂ ಬರುವುದು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಎಲೀಷನು ತಾನು ಬದುಕಿಸಿದ ಹುಡುಗನ ತಾಯಿಗೆ, “ಯೆಹೋವನು ಈ ದೇಶಕ್ಕೆ ಏಳು ವರ್ಷಗಳ ಕಾಲ ಕ್ಷಾಮವನ್ನು ಬರಮಾಡುವುದಕ್ಕಿದ್ದಾನೆ. ಆದುದರಿಂದ ನೀನು ನಿನ್ನ ಮನೆಯವರೊಡನೆ ಯಾವುದಾದರೊಂದು ಪರದೇಶಕ್ಕೆ ಹೋಗಿ ಅಲ್ಲಿ ವಾಸಿಸು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಎಲೀಷನು ತಾನು ಬದುಕಿಸಿದ ಹುಡುಗನ ತಾಯಿಗೆ, “ಸರ್ವೇಶ್ವರಸ್ವಾಮಿ ಈ ನಾಡಿಗೆ ಏಳು ವರ್ಷಗಳ ಬರಗಾಲವನ್ನು ಕಳುಹಿಸಲಿದ್ದಾರೆ. ಆದುದರಿಂದ ನೀನು ನಿನ್ನ ಮನೆಯವರೊಡನೆ ಯಾವುದಾದರೊಂದು ಪರದೇಶಕ್ಕೆ ಹೋಗಿ ಅಲ್ಲಿ ವಾಸಿಸು,” ಎಂದು ಭವಿಷ್ಯ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಎಲೀಷನು ತಾನು ಬದುಕಿಸಿದ ಹುಡುಗನ ತಾಯಿಗೆ - ಯೆಹೋವನು ಈ ದೇಶಕ್ಕೆ ಏಳು ವರುಷಗಳ ಬರವನ್ನು ಕಳುಹಿಸುವದಕ್ಕಿರುತ್ತಾನೆ. ಆದದರಿಂದ ನೀನು ನಿನ್ನ ಮನೆಯವರೊಡನೆ ಯಾವದಾದರೊಂದು ಪರದೇಶಕ್ಕೆ ಹೋಗಿ ಅಲ್ಲಿ ವಾಸಿಸು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಎಲೀಷನು ತಾನು ಮರಳಿ ಜೀವಿಸುವಂತೆ ಮಾಡಿದ ಬಾಲಕನ ತಾಯಿಯೊಂದಿಗೆ ಮಾತನಾಡಿದನು. ಎಲೀಷನು, “ನೀನು ಮತ್ತು ನಿನ್ನ ಕುಟುಂಬವು ಬೇರೆ ದೇಶಕ್ಕೆ ಹೋಗಬೇಕು. ಏಕೆಂದರೆ ಈ ದೇಶದಲ್ಲಿ ಬರಗಾಲವು ಏಳು ವರ್ಷಗಳವರೆಗೆ ಇರಬೇಕೆಂದು ಯೆಹೋವನು ತೀರ್ಮಾನಿಸಿದ್ದಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 8:1
31 ತಿಳಿವುಗಳ ಹೋಲಿಕೆ  

ಇದಲ್ಲದೆ ನಾನು ಭೂಮಿಯ ಮೇಲೆಯೂ ಬೆಟ್ಟಗಳ ಮೇಲೆಯೂ ಧಾನ್ಯದ ಮೇಲೆಯೂ ಹೊಸ ದ್ರಾಕ್ಷಾರಸದ ಮೇಲೆಯೂ ಎಣ್ಣೆಯ ಮೇಲೆಯೂ ಭೂಮಿಯ ಹುಟ್ಟುವಳಿಯ ಮೇಲೆಯೂ ಮನುಷ್ಯರ ಮೇಲೆಯೂ ಪಶುಗಳ ಮೇಲೆಯೂ ಕೈಕಸುಬುಗಳ ಮೇಲೆಯೂ ಬರಗಾಲವನ್ನು ತಂದಿದ್ದೇನೆ.”


ದೇವರು ಕ್ಷಾಮವನ್ನು ದೇಶದಲ್ಲಿ ಅನುಮತಿಸಿದರು. ಆಹಾರದ ಒದಗುವಿಕೆಯನ್ನು ಸ್ವಲ್ಪಕಾಲ ನಿಲ್ಲಿಸಿದ್ದರು.


ನ್ಯಾಯಸ್ಥಾಪಕರು ಆಳುತ್ತಿದ್ದ ಆ ದಿನಗಳಲ್ಲಿ ಇಸ್ರಾಯೇಲ್ ದೇಶದೊಳಗೆ ಬರ ಉಂಟಾಗಿದ್ದಾಗ, ಯೆಹೂದದ ಬೇತ್ಲೆಹೇಮಿನವನಾದ ಒಬ್ಬ ಮನುಷ್ಯನು ತನ್ನ ಹೆಂಡತಿ ಮತ್ತು ತನ್ನ ಇಬ್ಬರು ಪುತ್ರರೊಂದಿಗೆ ಮೋವಾಬ್ ದೇಶದಲ್ಲಿ ಸ್ವಲ್ಪ ಕಾಲ ವಾಸಮಾಡಬೇಕೆಂದು ಹೋದನು.


ಆ ಮಗುವು ಬೆಳೆದಾಗ ಒಂದು ದಿವಸ, ಅವನು ಬೆಳೆ ಕೊಯ್ಯುವವರ ಬಳಿಯಲ್ಲಿರುವ ತನ್ನ ತಂದೆಯ ಬಳಿಗೆ ಹೋದನು.


ಆಗ ಆ ದೇಶದಲ್ಲಿ ಬರ ಉಂಟಾದದ್ದರಿಂದ, ಅಬ್ರಾಮನು ಈಜಿಪ್ಟಿನಲ್ಲಿ ಕೆಲವು ಸಮಯ ಇರಲು ಇಳಿದು ಹೋದನು. ಏಕೆಂದರೆ ಬರವು ಆ ದೇಶದಲ್ಲಿ ಘೋರವಾಗಿತ್ತು.


ನಿಮಗೆ ಸತ್ಯವನ್ನು ಹೇಳುತ್ತೇನೆ: ಎಲೀಯನ ದಿವಸಗಳಲ್ಲಿ ಮೂರು ವರ್ಷ ಆರು ತಿಂಗಳು ಮಳೆ ಬಾರದೆ ದೇಶದಲ್ಲೆಲ್ಲಾ ದೊಡ್ಡ ಬರ ಉಂಟಾದಾಗ, ಇಸ್ರಾಯೇಲಿನಲ್ಲಿ ಅನೇಕ ವಿಧವೆಯರು ಇದ್ದರು.


ಎಲೀಯನು ಅಹಾಬನಿಗೆ ತನ್ನನ್ನು ಪ್ರಕಟಿಸಿಕೊಳ್ಳಲು ಹೋದನು. ಆದರೆ ಸಮಾರ್ಯದಲ್ಲಿ ಬರವು ಘೋರವಾಗಿತ್ತು.


ಗಿಲ್ಯಾದಿನ ಪ್ರವಾಸಿಗಳಲ್ಲಿ ತಿಷ್ಬೀಯ ಊರಿನವನಾದ ಎಲೀಯನು ಅಹಾಬನಿಗೆ, “ನಾನು ಸನ್ನಿಧಿಸೇವೆ ಮಾಡುತ್ತಿರುವ ಇಸ್ರಾಯೇಲ್ ದೇವರಾದ ಯೆಹೋವ ದೇವರ ಜೀವದಾಣೆ, ನನ್ನ ಮಾತಿನ ಪ್ರಕಾರ ಸೂಚಿಸಿದ ಹೊರತು ಇಂದಿನಿಂದ ಕೆಲವು ವರ್ಷಗಳವರೆಗೆ ಮಂಜಾಗಲಿ ಅಥವಾ ಮಳೆಯಾಗಲಿ ಬೀಳುವುದಿಲ್ಲ,” ಎಂದನು.


ನಾನು ನಿಮ್ಮ ಅನ್ನಾಧಾರವನ್ನು ಮುರಿದುಹಾಕಿದಾಗ, ಹತ್ತು ಸ್ತ್ರೀಯರು ನಿಮ್ಮ ರೊಟ್ಟಿಯನ್ನು ಒಂದೇ ಒಲೆಯಲ್ಲಿ ಸುಟ್ಟು, ತೂಕದ ಪ್ರಕಾರ ನಿಮಗೆ ರೊಟ್ಟಿಯನ್ನು ಕೊಡುವರು. ನೀವು ಅದನ್ನು ತಿನ್ನುವಿರಿ, ನಿಮಗೆ ತೃಪ್ತಿಯಾಗುವುದಿಲ್ಲ.


ಅವರಲ್ಲೊಬ್ಬ ಅಗಬ ಎಂಬವನು ಪವಿತ್ರಾತ್ಮ ಪ್ರೇರಿತನಾಗಿ ಎದ್ದು ನಿಂತುಕೊಂಡು ಲೋಕಕ್ಕೆಲ್ಲಾ ಭೀಕರ ಕ್ಷಾಮ ಬರುವುದೆಂದು ತಿಳಿಸಿದನು. ಇದು ಕ್ಲೌದ್ಯನ ಆಳ್ವಿಕೆಯಲ್ಲಿ ಸಂಭವಿಸಿತು.


ಏಕೆಂದರೆ ಪವಿತ್ರ ವೇದದಲ್ಲಿ ಬರೆದಿರುವವುಗಳೆಲ್ಲವೂ ನೆರವೇರಲು, ಇವು ದಂಡನೆಯ ದಿವಸಗಳಾಗಿವೆ.


ವಿವಿಧ ಕಡೆಗಳಲ್ಲಿ ಮಹಾಭೂಕಂಪಗಳೂ ಬರಗಳೂ ವ್ಯಾಧಿಗಳೂ ಇರುವುವು. ಭಯ ಹುಟ್ಟಿಸುವ ಘಟನೆಗಳೂ ಆಕಾಶದಿಂದ ಮಹಾಸೂಚನೆಗಳೂ ಆಗುವುವು.


ಏಕೆಂದರೆ ಇಗೋ, ನನ್ನ ಹೆಸರಿನಿಂದ ಕರೆಯಲಾಗಿರುವ ಪಟ್ಟಣದ ಮೇಲೆ ನಾನು ಕೇಡನ್ನು ತರಿಸುವುದಕ್ಕೆ ಆರಂಭ ಮಾಡುತ್ತೇನೆ. ಹಾಗಾದರೆ ನೀವು ಸಂಪೂರ್ಣ ದಂಡನೆಗೆ ತಪ್ಪಿಸಿಕೊಂಡೀರೋ? ತಪ್ಪಿಸಿಕೊಳ್ಳುವುದಿಲ್ಲ. ಏಕೆಂದರೆ ನಾನು ಭೂನಿವಾಸಿಗಳೆಲ್ಲರ ಮೇಲೆ ಖಡ್ಗವನ್ನು ಕರೆಯುತ್ತೇನೆಂದು ಸೇನಾಧೀಶ್ವರ ಯೆಹೋವ ದೇವರು ನುಡಿಯುತ್ತಾರೆ.’


ದೇವರು ಫಲವುಳ್ಳ ಭೂಮಿಯನ್ನು ಬಂಜರಾಗುವಂತೆ ಮಾಡಿದರು. ಇದಕ್ಕೆಲ್ಲ ಕಾರಣ ಅದರ ನಿವಾಸಿಗಳ ಕೆಟ್ಟತನವೇ ಆಗಿತ್ತು.


ಹಾಗೆಯೇ ಗಾದನು ದಾವೀದನ ಬಳಿಗೆ ಬಂದು ಅವನಿಗೆ, “ನಿನ್ನ ದೇಶದಲ್ಲಿ ಮೂರು ವರುಷ ಕ್ಷಾಮ ಉಂಟಾಗಬೇಕೋ? ಇಲ್ಲವೆ ನಿನ್ನ ಶತ್ರುಗಳು ನಿನ್ನನ್ನು ಬೆನ್ನಟ್ಟಿ ಮೂರು ತಿಂಗಳವರೆಗೆ ಓಡಿಸಿಬಿಡಬೇಕೋ? ಇಲ್ಲವೆ ಮೂರು ದಿವಸಗಳವರೆಗೆ ಘೋರವ್ಯಾಧಿ ಉಂಟಾಗಬೇಕೋ? ಈಗ ನನ್ನನ್ನು ಕಳುಹಿಸಿದವರಿಗೆ ನಾನು ಏನು ಉತ್ತರ ತೆಗೆದುಕೊಂಡು ಹೋಗಬೇಕು? ಯೋಚಿಸಿನೋಡು,” ಎಂದನು.


ದಾವೀದನ ದಿವಸಗಳಲ್ಲಿ ವರ್ಷದಿಂದ ವರ್ಷಕ್ಕೆ ಮೂರು ವರ್ಷ ಬರ ಉಂಟಾಗಿತ್ತು. ಆಗ ದಾವೀದನು ಯೆಹೋವ ದೇವರನ್ನು ವಿಚಾರಿಸಿದನು. ಆಗ ಯೆಹೋವ ದೇವರು, “ಸೌಲನು ಗಿಬ್ಯೋನ್ಯರನ್ನು ಕೊಂದುಹಾಕಿದ್ದರಿಂದ ಅವನಿಗೋಸ್ಕರವೂ ರಕ್ತಾಪರಾಧವುಳ್ಳ ಅವನ ಮನೆಗೋಸ್ಕರವೂ ಈ ಬರ ಬಂದಿದೆ,” ಎಂದು ಹೇಳಿದರು.


ದೇಶದಲ್ಲಿ ಪ್ರವಾಸಮಾಡುವುದಕ್ಕಾಗಿ ಬಂದಿದ್ದೇವೆ. ಏಕೆಂದರೆ ಕಾನಾನ್ ದೇಶದಲ್ಲಿ ಕ್ಷಾಮವು ಕಠಿಣವಾಗಿರುವುದರಿಂದ, ನಿನ್ನ ದಾಸರ ಮಂದೆಗಳಿಗೆ ಹುಲ್ಲುಗಾವಲು ಇಲ್ಲ. ಹೀಗಿರುವುದರಿಂದ ನಿನ್ನ ದಾಸರು ಗೋಷೆನ್ ಪ್ರಾಂತದ ನಿವಾಸಿಗಳಾಗುವಂತೆ ಮಾಡಬೇಕೆಂದು ನಿನ್ನನ್ನು ಕೇಳಿಕೊಳ್ಳುತ್ತೇವೆ,” ಎಂದರು.


ಇದಲ್ಲದೆ ಆ ಕನಸು ಫರೋಹನಿಗೆ ಎರಡು ಸಾರಿ ಬಿದ್ದುದರಿಂದ, ಆ ಕಾರ್ಯವು ದೇವರಿಂದ ಸ್ಥಿರಪಡಿಸಲಾಗಿದೆ. ಆದ್ದರಿಂದ ದೇವರು ಅದನ್ನು ಬೇಗನೆ ನೆರವೇರಿಸುವರು.


ಆಗ ಯೋಸೇಫನು ಫರೋಹನಿಗೆ, “ಫರೋಹನ ಎರಡು ಕನಸುಗಳ ವಿಷಯ ಒಂದೇ, ದೇವರು ಮಾಡಲಿರುವುದನ್ನು ಫರೋಹನಿಗೆ ತಿಳಿಸಿದ್ದಾರೆ.


ಅಬ್ರಹಾಮನ ದಿನಗಳಲ್ಲಿ ಬಂದ ಮೊದಲನೆಯ ಬರವಲ್ಲದೆ, ದೇಶದಲ್ಲಿ ಮತ್ತೊಂದು ಬರವು ಬಂದಿತು. ಆಗ ಇಸಾಕನು ಗೆರಾರಿನಲ್ಲಿದ್ದ ಫಿಲಿಷ್ಟಿಯರ ಅರಸನಾದ ಅಬೀಮೆಲೆಕನ ಬಳಿಗೆ ಹೋದನು.


ಯೋಸೇಫನು ಹೇಳಿದಂತೆ ಬರುವುದಕ್ಕಿದ್ದ ಬರಗಾಲದ ಏಳು ವರ್ಷಗಳು ಆರಂಭವಾದವು. ಆಗ ಎಲ್ಲಾ ದೇಶಗಳಲ್ಲಿ ಬರಗಾಲವಿತ್ತು. ಆದರೆ ಈಜಿಪ್ಟ್ ದೇಶದಲ್ಲೆಲ್ಲಾ ಆಹಾರವಿತ್ತು.


ಎಲೀಷನು ತಿರುಗಿ ಗಿಲ್ಗಾಲಿಗೆ ಬಂದಾಗ, ದೇಶದಲ್ಲಿ ಬರ ಉಂಟಾಗಿತ್ತು. ಪ್ರವಾದಿಗಳ ಮಂಡಳಿ ಅವನ ಮುಂದೆ ಕುಳಿತಿರುವಾಗ, ಅವನು ತನ್ನ ಸೇವಕನಿಗೆ, “ನೀನು ದೊಡ್ಡ ಗಡಿಗೆಯನ್ನು ಮೇಲಿಟ್ಟು, ಈ ಜನರಿಗೋಸ್ಕರ ಅಡಿಗೆ ಮಾಡು,” ಎಂದನು.


ಆ ಪ್ರಕಾರವೇ ಅವನಿಗೆ ಸಂಭವಿಸಿತು. ಬಾಗಿಲಲ್ಲಿ ಜನರು ಅವನನ್ನು ತುಳಿದಿದ್ದರಿಂದ ಅವನು ಮರಣಹೊಂದಿದನು.


ಆಗ ಆ ಸ್ತ್ರೀಯು ಎದ್ದು ದೇವರ ಮನುಷ್ಯನ ಮಾತಿನ ಪ್ರಕಾರವೇ ಮಾಡಿ, ತನ್ನ ಮನೆಯವರ ಸಂಗಡ ಹೋಗಿ ಫಿಲಿಷ್ಟಿಯರ ದೇಶದಲ್ಲಿ ಏಳು ವರ್ಷ ವಾಸವಾಗಿದ್ದಳು.


ಆಗ ಅವನು ಗೇಹಜಿಯನ್ನು ಕರೆದು ಅವನಿಗೆ, “ಶೂನೇಮ್ಯಳನ್ನು ಕರೆ,” ಎಂದನು. ಗೇಹಜಿಯು ಅವಳನ್ನು ಕರೆದನು. ಅವಳು ಎಲೀಷನ ಬಳಿಗೆ ಬಂದಾಗ ಅವನು, “ನಿನ್ನ ಪುತ್ರನನ್ನು ತೆಗೆದುಕೊಂಡು ಹೋಗು,” ಎಂದನು.


“ಪ್ರತಿಯೊಂದು ಪಟ್ಟಣದಲ್ಲಿ ಬರಿದಾದ ಹೊಟ್ಟೆಗಳನ್ನು ನಿಮಗೆ ಕೊಟ್ಟಿದ್ದೇನೆ. ಪ್ರತಿಯೊಂದು ಪಟ್ಟಣದಲ್ಲಿ ಆಹಾರದ ಕೊರತೆಯಿದೆ. ಆದರೂ ನೀವು ನನ್ನ ಕಡೆಗೆ ಹಿಂದಿರುಗಿಕೊಳ್ಳಲಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು