Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 8:21 - ಕನ್ನಡ ಸಮಕಾಲಿಕ ಅನುವಾದ

21 ಆದ್ದರಿಂದ ಯೆಹೋರಾಮನು ತನ್ನ ಬಳಿಯಲ್ಲಿದ್ದ ಎಲ್ಲಾ ರಥಬಲವನ್ನು ತೆಗೆದುಕೊಂಡು ಚಾಯೀರಿಗೆ ಹೋಗಿ, ರಾತ್ರಿಯಲ್ಲಿ ಎದ್ದು, ತನ್ನನ್ನೂ ತನ್ನ ರಥಗಳ ಅಧಿಪತಿಗಳನ್ನೂ ಎದೋಮ್ಯರನ್ನು ಸೋಲಿಸಿದನು. ಅವನ ಸೈನಿಕರು ತಮ್ಮ ತಮ್ಮ ಡೇರೆಗಳಿಗೆ ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆಗ ಯೆಹೋರಾಮನು ತನ್ನ ಎಲ್ಲಾ ರಥಬಲಸಹಿತವಾಗಿ ಯೊರ್ದನ್ ನದಿಯನ್ನು ದಾಟಿ ಚಾಯೀರಿಮಿಗೆ ಹೋದನು. ಎದೋಮ್ಯರು ಬಂದು ಅವನನ್ನು ಸುತ್ತಿಕೊಳ್ಳಲು ಅವನು ರಾತ್ರಿಯಲ್ಲಿ ಎದ್ದು ಅವರನ್ನು ಅವರ ರಥಬಲದ ಅಧಿಪತಿಗಳನ್ನು ಸೋಲಿಸಿ ಪಾರಾದನು. ಅವನ ಸೈನ್ಯದವರು ತಮ್ಮ ತಮ್ಮ ನಿವಾಸಗಳಿಗೆ ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಆಗ ಯೆಹೋರಾಮನು ತನ್ನ ಎಲ್ಲಾ ರಥಬಲಸಹಿತವಾಗಿ ಜೋರ್ಡನ್ ಹೊಳೆಯನ್ನು ದಾಟಿ ಚಾಯೀರಿಗೆ ಹೋದನು. ಎದೋಮ್ಯರು ಬಂದು ಅವನನ್ನು ಸುತ್ತಿಕೊಂಡರು. ಅವನು ರಾತ್ರಿಯಲ್ಲೆದ್ದು ಅವರನ್ನೂ ಅವರ ರಥಬಲದ ಅಧಿಪತಿಗಳನ್ನೂ ಸೋಲಿಸಿ ಪಾರಾದನು. ಅವನ ಸೈನ್ಯದವರೂ ತಮ್ಮ ತಮ್ಮ ನಿವಾಸಗಳಿಗೆ ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಆಗ ಯೆಹೋರಾಮನು ತನ್ನ ಎಲ್ಲಾ ರಥಬಲಸಹಿತವಾಗಿ ಯೊರ್ದನ್ ಹೊಳೆಯನ್ನು ದಾಟಿ ಚಾಯೀರಿಗೆ ಹೋದನು. ಎದೋಮ್ಯರು ಬಂದು ಅವನನ್ನು ಸುತ್ತಿಕೊಳ್ಳಲು ಅವನು ರಾತ್ರಿಯಲ್ಲೆದ್ದು ಅವರನ್ನೂ ಅವರ ರಥಬಲದ ಅಧಿಪತಿಗಳನ್ನೂ ಸೋಲಿಸಿ ಪಾರಾದನು. ಅವನ ಸೈನ್ಯದವರೂ ತಮ್ಮತಮ್ಮ ನಿವಾಸಗಳಿಗೆ ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಆಗ ಯೆಹೋರಾಮನು ಮತ್ತು ಅವನ ರಥಗಳೆಲ್ಲ ಚಾಯೀರಿಗೆ ಹೋದವು. ಎದೋಮಿನ ಸೇನೆಯು ಅವರನ್ನು ಸುತ್ತುವರಿಯಿತು. ಯೆಹೋರಾಮನು ತನ್ನ ಅಧಿಕಾರಿಗಳೊಂದಿಗೆ ಅವರನ್ನು ರಾತ್ರಿಯಲ್ಲಿ ಮುತ್ತಿಗೆ ಹಾಕಿ ತಪ್ಪಿಸಿಕೊಂಡರು. ಆದರೆ ಅವನ ಸೈನಿಕರು ತಮ್ಮ ಗುಡಾರಗಳಿಗೆ ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 8:21
4 ತಿಳಿವುಗಳ ಹೋಲಿಕೆ  

ಅವರು ಅಬ್ಷಾಲೋಮನನ್ನು ತೆಗೆದುಕೊಂಡು, ಅಡವಿಯಲ್ಲಿರುವ ಒಂದು ದೊಡ್ಡ ಗುಂಡಿಯಲ್ಲಿ ಹಾಕಿ, ಅವನ ಮೇಲೆ ದೊಡ್ಡ ಕಲ್ಲಿನ ಕುಪ್ಪೆಯನ್ನು ಹಾಕಿದರು. ಆದರೆ ಇಸ್ರಾಯೇಲರೆಲ್ಲರೂ ತಮ್ಮ ಗುಡಾರಗಳಿಗೆ ಓಡಿಹೋದರು.


“ಸೈನ್ಯಗಳು ಯೆರೂಸಲೇಮಿಗೆ ಮುತ್ತಿಗೆ ಹಾಕುವುದನ್ನು ನೀವು ಕಾಣುವಾಗ ಅದು ಹಾಳಾಗುವ ಕಾಲವು ಸಮೀಪಿಸಿದೆ ಎಂದು ತಿಳಿದುಕೊಳ್ಳಿರಿ.


ಆಗ ಅರಸನು ಎದ್ದು ಹೋಗಿ ಬಾಗಿಲಲ್ಲಿ ಕುಳಿತನು. “ಅರಸನು ಬಾಗಿಲಲ್ಲಿ ಕುಳಿತಿದ್ದಾನೆ,” ಎಂದು ಸಮಸ್ತ ಸೈನಿಕರಿಗೆ ತಿಳಿದಿದ್ದರಿಂದ, ಸೈನಿಕರೆಲ್ಲರೂ ಅರಸನ ಎದುರಿಗೆ ಬಂದರು. ಆದರೆ ಇಸ್ರಾಯೇಲರು ಮಧ್ಯದಲ್ಲಿ ತಮ್ಮ ತಮ್ಮ ಮನೆಗಳಿಗೆ ಹೋದರು.


ಅವನು ಉಪ್ಪಿನ ತಗ್ಗಿನಲ್ಲಿ ಎದೋಮ್ಯರಾದ ಹತ್ತು ಸಾವಿರ ಜನರನ್ನು ಸೋಲಿಸಿ, ಯುದ್ಧದಲ್ಲಿ ಸೆಲ ದುರ್ಗವನ್ನು ವಶಪಡಿಸಿಕೊಂಡು, ಅದಕ್ಕೆ ಯೊಕ್ತೆಯೇಲ್ ಎಂದು ಹೆಸರಿಟ್ಟನು. ಅದಕ್ಕೆ ಇಂದಿನವರೆಗೂ ಇದೇ ಹೆಸರಿರುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು