Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 8:28 - ಕನ್ನಡ ಸಮಕಾಲಿಕ ಅನುವಾದ

28 ಅಹಜ್ಯನು ಅಹಾಬನ ಮಗ ಯೋರಾಮನ ಸಂಗಡ ಗಿಲ್ಯಾದಿನ ರಾಮೋತಿಗೆ ಅರಾಮಿನ ಅರಸನಾದ ಹಜಾಯೇಲನ ಮೇಲೆ ಯುದ್ಧಮಾಡಲು ಹೋದನು. ಆದರೆ ಅರಾಮ್ಯರು ಯೋರಾಮನನ್ನು ಹೊಡೆದು ಗಾಯಗೊಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಇದಲ್ಲದೆ ಅಹಜ್ಯನು ಅರಾಮ್ಯರ ಅರಸನಾದ ಹಜಾಯೇಲನೊಡನೆ ಯುದ್ಧಮಾಡುವುದಕ್ಕಾಗಿ ಅಹಾಬನ ಮಗನಾದ ಯೋರಾಮನ ಜೊತೆಯಲ್ಲಿ ರಾಮೋತ್ ಗಿಲ್ಯಾದಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಇದಲ್ಲದೆ, ಇವನು ಸಿರಿಯಾದವರ ಅರಸನಾದ ಹಜಾಯೇಲನೊಡನೆ ಯುದ್ಧಮಾಡುವುದಕ್ಕಾಗಿ ಅಹಾಬನ ಮಗ ಯೋರಾಮನ ಜೊತೆಯಲ್ಲಿ ರಾಮೋತ್ ಗಿಲ್ಯಾದಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಇದಲ್ಲದೆ ಇವನು ಅರಾಮ್ಯರ ಅರಸನಾದ ಹಜಾಯೇಲನೊಡನೆ ಯುದ್ಧಮಾಡುವದಕ್ಕಾಗಿ ಅಹಾಬನ ಮಗನಾದ ಯೋರಾಮನ ಜೊತೆಯಲ್ಲಿ ರಾಮೋತ್ ಗಿಲ್ಯಾದಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಅಹಜ್ಯನು ಅಹಾಬನ ಮಗನಾದ ಯೋರಾಮನ ಜೊತೆಯಲ್ಲಿ ಅರಾಮ್ಯರ ರಾಜನಾದ ಹಜಾಯೇಲನ ವಿರುದ್ಧ ಯುದ್ಧಮಾಡಲು ರಾಮೋತ್‌ಗಿಲ್ಯಾದಿಗೆ ಹೋದನು. ಅರಾಮ್ಯರು ಯೋರಾಮನನ್ನು ಗಾಯಗೊಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 8:28
18 ತಿಳಿವುಗಳ ಹೋಲಿಕೆ  

ಅಹಜ್ಯನು ಇವರ ಯೋಚನೆಯ ಪ್ರಕಾರ ನಡೆದು, ಗಿಲ್ಯಾದಿನ ರಾಮೋತಿಗೆ ಅರಾಮಿನ ಅರಸನಾದ ಹಜಾಯೇಲನ ಮೇಲೆ ಯುದ್ಧಮಾಡಲು ಇಸ್ರಾಯೇಲಿನ ಅರಸನಾಗಿರುವ ಅಹಾಬನ ಮಗ ಯೋರಾಮನ ಸಂಗಡ ಹೋದನು. ಆದರೆ ಅರಾಮ್ಯರು ಯೋರಾಮನನ್ನು ಹೊಡೆದು ಗಾಯಗೊಳಿಸಿದರು.


ಆಗ ಪ್ರವಾದಿ ಹನಾನೀಯ ಮಗ ಯೇಹುವು ಅವನನ್ನು ಎದುರುಗೊಂಡು, ಅರಸನಾದ ಯೆಹೋಷಾಫಾಟನಿಗೆ ಅವನು, “ದುಷ್ಟನಿಗೆ ಸಹಾಯ ಕೊಡುವವನಾಗಿ ಯೆಹೋವ ದೇವರನ್ನು ದ್ವೇಷಮಾಡುವವರನ್ನು ಪ್ರೀತಿಮಾಡಬಹುದೋ? ಆದಕಾರಣ ನಿನ್ನ ಮೇಲೆ ಯೆಹೋವ ದೇವರ ಸನ್ನಿಧಿಯಿಂದ ಕೋಪಾಗ್ನಿ ಇದೆ.


ಆದ್ದರಿಂದ ರಥಗಳ ಅಧಿಪತಿಗಳು ಯೆಹೋಷಾಫಾಟನನ್ನು ಕಂಡಾಗ, “ಇವನೇ ಇಸ್ರಾಯೇಲಿನ ಅರಸನು,” ಎಂದು ಹೇಳಿ ಅವನ ಸಂಗಡ ಯುದ್ಧಮಾಡುವುದಕ್ಕೆ ತಿರುಗಿಕೊಂಡರು. ಆದರೆ ಯೆಹೋಷಾಫಾಟನು ಕೂಗಿಕೊಂಡನು. ಆಗ ಯೆಹೋವ ದೇವರು ಅವನಿಗೆ ಸಹಾಯಮಾಡಿ, ಶತ್ರುಗಳನ್ನು ಅವನ ಕಡೆಯಿಂದ ತೊಲಗಿಸಿದರು.


ಆದರೆ ಅರಸನಾದ ಯೋರಾಮನು ಅರಾಮಿನ ಅರಸನಾದ ಹಜಾಯೇಲನ ಸಂಗಡ ಯುದ್ಧಮಾಡುವಾಗ, ಅರಾಮ್ಯರು ತನ್ನನ್ನು ಹೊಡೆದ ಗಾಯವನ್ನು ಸ್ವಸ್ಥಮಾಡಿಕೊಳ್ಳುವ ನಿಮಿತ್ತ ಇಜ್ರೆಯೇಲಿಗೆ ಹೋಗಿದ್ದನು. ಆಗ ಯೇಹುವು, “ನಿಮಗೆ ಮನಸ್ಸಿದ್ದರೆ ಇದನ್ನು ಇಜ್ರೆಯೇಲಿಗೆ ಹೋಗಿ ತಿಳಿಸಲು ಪಟ್ಟಣದಿಂದ ಯಾರೂ ತಪ್ಪಿಸಿಕೊಂಡು ಹೊರಡದೆ ಇರಲಿ,” ಎಂದನು.


ಆದರೆ ಮಾರನೆಯ ದಿವಸದಲ್ಲಿ, ಅವನು ದಪ್ಪ ಬಟ್ಟೆಯನ್ನು ತೆಗೆದುಕೊಂಡು ನೀರಿನಲ್ಲಿ ಅದ್ದಿ, ಅರಸನ ಮುಖದ ಮೇಲೆ ಹಾಕಿದ್ದರಿಂದ ಅವನು ಮರಣಹೊಂದಿದನು. ಹಜಾಯೇಲನು ಅವನಿಗೆ ಬದಲಾಗಿ ಅರಸನಾದನು.


ಇದಲ್ಲದೆ ಅವನು ಹೋಗಿ, “ಮೋವಾಬಿನ ಅರಸನು ನನಗೆ ವಿರೋಧವಾಗಿ ತಿರುಗಿಬಿದ್ದನು. ನೀನು ನನ್ನ ಸಂಗಡ ಮೋವಾಬಿನ ಮೇಲೆ ಯುದ್ಧಮಾಡಲು ಬರುವೆಯೋ?” ಎಂದು ಯೆಹೂದದ ಅರಸನಾದ ಯೆಹೋಷಾಫಾಟನಿಗೆ ಹೇಳಿ ಕಳುಹಿಸಿದನು. ಅದಕ್ಕವನು, “ನಾನು ಬರುವೆನು, ನಾನು ನಿನ್ನವನೇ, ನನ್ನ ಜನರು ನಿನ್ನ ಜನರೇ, ಹಾಗೆಯೇ ನನ್ನ ಕುದುರೆಗಳು ನಿನ್ನ ಕುದುರೆಗಳೇ,” ಎಂದನು.


ಹೀಗೆಯೇ ಇಸ್ರಾಯೇಲಿನ ಅರಸನೂ, ಯೆಹೂದದ ಅರಸನಾದ ಯೆಹೋಷಾಫಾಟನೂ ಗಿಲ್ಯಾದಿನ ರಾಮೋತಿಗೆ ಹೋದರು.


ಹಜಾಯೇಲನ ಖಡ್ಗಕ್ಕೆ ತಪ್ಪಿಸಿಕೊಂಡವರನ್ನು ಯೇಹುವು ಕೊಲ್ಲುವನು; ಯೇಹುವಿನ ಖಡ್ಗಕ್ಕೆ ತಪ್ಪಿಸಿಕೊಂಡವರನ್ನು ಎಲೀಷನು ಕೊಂದುಹಾಕುವನು.


ಬೆನ್ ಗೆಬೆರ್ ಗಿಲ್ಯಾದಿನ ರಾಮೋತ್ ಎಂಬ ಊರಿಗೆ ಅಧಿಕಾರಿಯಾಗಿದ್ದನು. ಈ ಗಿಲ್ಯಾದಿನ ಪ್ರಾಂತದಲ್ಲಿ ಮನಸ್ಸೆಯ ಮಗ ಯಾಯೀರನ ಗ್ರಾಮಗಳಿಗೂ, ಬಾಷಾನಿನಲ್ಲಿ ಪೌಳಿ ಗೋಡೆಗಳಿಂದಲೂ, ಕಬ್ಬಿಣದ ಅಗುಳಿಗಳಿಂದಲೂ ಭದ್ರಮಾಡಲಾಗಿದ್ದ ಅರವತ್ತು ಪಟ್ಟಣಗಳಲ್ಲಿದ್ದ ಅರ್ಗೋಬ್ ಪ್ರದೇಶಕ್ಕೂ ಅಧಿಕಾರಿಯಾಗಿದ್ದನು.


ಗಾದ್ಯರ ಗೋತ್ರದಲ್ಲಿ, ಅಕಸ್ಮಾತ್ತಾಗಿ ಕೊಲೆ ಮಾಡಿದವನಿಗೆ ಆಶ್ರಯ ಪಟ್ಟಣವಾದ ಗಿಲ್ಯಾದಿನ ರಾಮೋತನ್ನೂ, ಮಹನಯಿಮನ್ನೂ,


ಆದ್ದರಿಂದ ಅರಸನಾದ ಯೋರಾಮನು ಅರಾಮ್ಯ ದೇಶದ ಅರಸನಾದ ಹಜಾಯೇಲನ ಮೇಲೆ ಯುದ್ಧಮಾಡಿದಾಗ, ರಾಮೋತಿನಲ್ಲಿ ಅರಾಮ್ಯರು ತನ್ನನ್ನು ಹೊಡೆದ ಗಾಯಗಳನ್ನು ಗುಣಪಡಿಸಿಕೊಳ್ಳುವುದಕ್ಕೆ ಇಜ್ರೆಯೇಲ್ ಪಟ್ಟಣಕ್ಕೆ ತಿರುಗಿಹೋದನು. ಆಗ ಅಹಾಬನ ಮಗ ಯೋರಾಮನು ಇಜ್ರೆಯೇಲಿನಲ್ಲಿ ಅಸ್ವಸ್ಥನಾಗಿದ್ದುದರಿಂದ ಯೆಹೂದದ ಅರಸನಾಗಿರುವ ಯೆಹೋರಾಮನ ಮಗ ಅಹಜ್ಯನು ಅವನನ್ನು ನೋಡಲು ಹೋದನು.


ಪ್ರವಾದಿಯಾದ ಎಲೀಷನು ಪ್ರವಾದಿಗಳ ಮಂಡಳಿಯಲ್ಲಿ ಒಬ್ಬನನ್ನು ಕರೆದು ಅವನಿಗೆ, “ನಡುವನ್ನು ಕಟ್ಟಿಕೊಂಡು ಈ ಎಣ್ಣೆಯ ಪಾತ್ರೆಯನ್ನು ನಿನ್ನ ಕೈಯಲ್ಲಿ ತೆಗೆದುಕೊಂಡು ಗಿಲ್ಯಾದಿನ ರಾಮೋತಿಗೆ ಹೋಗು.


ಹೀಗೆಯೇ ನಿಂಷಿಯ ಮಗ ಯೆಹೋಷಾಫಾಟನ ಮಗ ಯೇಹುವು ಯೋರಾಮನಿಗೆ ವಿರೋಧವಾಗಿ ಒಳಸಂಚು ಮಾಡಿದನು. ಅರಾಮ್ಯರ ಅರಸನಾದ ಹಜಾಯೇಲನ ನಿಮಿತ್ತ ಯೋರಾಮನೂ, ಸಮಸ್ತ ಇಸ್ರಾಯೇಲರೂ ಗಿಲ್ಯಾದಿನ ರಾಮೋತಿನಲ್ಲಿ ಕಾಯುತ್ತಿದ್ದರು.


ಯೆರಿಕೋವಿನ ಪೂರ್ವದಲ್ಲಿರುವ ಯೊರ್ದನ್ ನದಿ ಆಚೆ ರೂಬೇನನ ಗೋತ್ರಕ್ಕಿರುವ ಸಮ ಭೂಮಿಯ ಅರಣ್ಯದಲ್ಲಿರುವ ಬೆಚೆರನ್ನು ಗಾದನ ಗೋತ್ರಕ್ಕೆ ಗಿಲ್ಯಾದಿನ ರಾಮೋತನ್ನೂ, ಮನಸ್ಸೆಯ ಗೋತ್ರಕ್ಕೆ ಬಾಷಾನಿನಲ್ಲಿರುವ ಗೋಲಾನನ್ನೂ ಕೊಟ್ಟರು.


ಯೇಹುವು ರಥದ ಮೇಲೆ ಏರಿ ಇಜ್ರೆಯೇಲಿಗೆ ಹೋದನು. ಏಕೆಂದರೆ ಯೋರಾಮನು ಅಲ್ಲಿ ವಿಶ್ರಾಂತಿಯಲ್ಲಿದ್ದನು. ಇದಲ್ಲದೆ ಯೋರಾಮನನ್ನು ನೋಡುವುದಕ್ಕೆ ಯೆಹೂದದ ಅರಸನಾದ ಅಹಜ್ಯನು ಅಲ್ಲಿಗೆ ಬಂದಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು