Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 8:3 - ಕನ್ನಡ ಸಮಕಾಲಿಕ ಅನುವಾದ

3 ಏಳು ವರ್ಷ ಆದ ತರುವಾಯ, ಆ ಸ್ತ್ರೀಯು ಫಿಲಿಷ್ಟಿಯರ ದೇಶವನ್ನು ಬಿಟ್ಟು ತಿರುಗಿಬಂದು ತನ್ನ ಹೊಲಮನೆಗಳಿಗೋಸ್ಕರ ಅರಸನಿಗೆ ಮೊರೆಯಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಏಳು ವರ್ಷಗಳಾದ ನಂತರ ಆಕೆಯು ಫಿಲಿಷ್ಟಿಯರ ದೇಶದಿಂದ ಸ್ವದೇಶಕ್ಕೆ ಬಂದು, ಪರಾಧೀನವಾಗಿದ್ದ ತನ್ನ ಹೊಲಮನೆಗಳಿಗಾಗಿ ಮೊರೆಯಿಡುವುದಕ್ಕೋಸ್ಕರ ಅರಸನ ಬಳಿಗೆ ಹೋದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಏಳು ವರ್ಷಗಳಾದನಂತರ ಆಕೆ ಅಲ್ಲಿಂದ ಸ್ವಂತ ನಾಡಿಗೆ ಬಂದು, ಪರರ ಕೈವಶವಾಗಿದ್ದ ತನ್ನ ಹೊಲಮನೆಗಳಿಗಾಗಿ ಮೊರೆಯಿಡಲು ಅರಸನ ಬಳಿಗೆ ಬಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಏಳು ವರುಷಗಳಾದನಂತರ ಆಕೆಯು ಅಲ್ಲಿಂದ ಸ್ವದೇಶಕ್ಕೆ ಬಂದು ಪರಾಧೀನವಾಗಿದ್ದ ತನ್ನ ಹೊಲಮನೆಗಳಿಗಾಗಿ ಮೊರೆಯಿಡುವದಕ್ಕೋಸ್ಕರ ಅರಸನ ಬಳಿಗೆ ಹೋದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಏಳು ವರ್ಷಗಳು ಮುಗಿದ ನಂತರ ಆ ಸ್ತ್ರೀಯು ಫಿಲಿಷ್ಟಿಯರ ದೇಶದಿಂದ ಹಿಂದಿರುಗಿ ಬಂದಳು. ಆ ಸ್ತ್ರೀಯು ತನ್ನ ಮನೆಯನ್ನು ಮತ್ತು ಭೂಮಿಯನ್ನು ತನಗೆ ಮತ್ತೆ ಕೊಡಿಸುವಂತೆ ಕೇಳಲು ರಾಜನ ಬಳಿಗೆ ಹೋದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 8:3
10 ತಿಳಿವುಗಳ ಹೋಲಿಕೆ  

ಬಡವನ ಮತ್ತು ದರಿದ್ರನ ನ್ಯಾಯವನ್ನು ತೀರಿಸಿದನು. ಆಗ ಅವನಿಗೆ ಒಳ್ಳೆಯದಾಯಿತು. ನನ್ನನ್ನು ತಿಳಿದುಕೊಳ್ಳುವುದು ಇದೇ ಅಲ್ಲವೋ?” ಎಂದು ಯೆಹೋವ ದೇವರು ಹೇಳುತ್ತಾರೆ.


ಅರಸನು ಆ ಸ್ತ್ರೀಯನ್ನು ವಿಚಾರಿಸಿದಾಗ, ಅವಳು ವಿವರವಾಗಿ ಹೇಳಿದಳು. ಆಗ ಅರಸನು ಅವಳಿಗಾಗಿ ಒಬ್ಬ ಅಧಿಕಾರಿಯನ್ನು ನೇಮಿಸಿ, ಅವನಿಗೆ, “ಅವಳಿಗೆ ಸೇರಿದ ಎಲ್ಲವನ್ನು, ಅವಳು ದೇಶವನ್ನು ಬಿಟ್ಟ ದಿನದಿಂದ ಇಂದಿನವರೆಗೆ ಅವಳಿಗೆ ಸಲ್ಲತಕ್ಕ ಆ ಹೊಲದ ಆದಾಯವನ್ನೆಲ್ಲಾ ಅವಳಿಗೆ ಕೊಡಿಸು,” ಎಂದನು.


ಇಸ್ರಾಯೇಲಿನ ಅರಸನು ಗೋಡೆಯ ಮೇಲೆ ಹಾದು ಹೋಗುತ್ತಿರುವಾಗ, ಒಬ್ಬ ಸ್ತ್ರೀಯು ಅವನನ್ನು ಕೂಗಿ, “ನನ್ನ ಯಜಮಾನನೇ, ಅರಸನೇ, ಸಹಾಯ ಮಾಡಿ,” ಎಂದಳು.


ಅವನು ಗೇಹಜಿಗೆ, “ಇಗೋ, ನೀನು ಕಷ್ಟಪಟ್ಟು ನಮಗೋಸ್ಕರ ಉಪಕಾರಮಾಡಿದೆ. ನಾನು ನಿನಗೆ ಮಾಡಬೇಕಾದದ್ದೇನು? ನಿನಗೋಸ್ಕರ ಅರಸನ ಸಂಗಡಲಾದರೂ, ಸೈನ್ಯಾಧಿಪತಿಯ ಸಂಗಡಲಾದರೂ ಮಾತನಾಡಬೇಕೋ ಎಂದು ಆಕೆಗೆ ಕೇಳು,” ಎಂದನು. ಅದಕ್ಕವಳು, “ನಾನು ನನ್ನ ಜನರ ಮಧ್ಯದಲ್ಲಿ ಸುಖವಾಗಿದ್ದೇನೆ,” ಎಂದಳು.


ಹಾಗೆಯೇ ತೆಕೋವದ ಆ ಸ್ತ್ರೀಯು ಅರಸನ ಸಂಗಡ ಮಾತನಾಡಿದಳು. ಮೋರೆ ಕೆಳಗಾಗಿ ನೆಲಕ್ಕೆ ಬಿದ್ದು ವಂದಿಸಿ, “ಅರಸನೇ, ಸಹಾಯಮಾಡು,” ಎಂದಳು.


ಆಗ ಆ ಸ್ತ್ರೀಯು ಎದ್ದು ದೇವರ ಮನುಷ್ಯನ ಮಾತಿನ ಪ್ರಕಾರವೇ ಮಾಡಿ, ತನ್ನ ಮನೆಯವರ ಸಂಗಡ ಹೋಗಿ ಫಿಲಿಷ್ಟಿಯರ ದೇಶದಲ್ಲಿ ಏಳು ವರ್ಷ ವಾಸವಾಗಿದ್ದಳು.


ಅರಸನು ದೇವರ ಮನುಷ್ಯನ ಸೇವಕನಾದ ಗೇಹಜಿಯ ಸಂಗಡ ಮಾತನಾಡಿ, “ಎಲೀಷನು ಮಾಡಿದ ಎಲ್ಲಾ ದೊಡ್ಡ ಕ್ರಿಯೆಗಳನ್ನು ನನಗೆ ವಿವರಿಸು,” ಎಂದು ಅವನಿಗೆ ಹೇಳಿದನು.


ಆಕೆಯು ಇಬ್ಬರು ಸೊಸೆಯರೊಡನೆ ತಾನಿದ್ದ ಸ್ಥಳದಿಂದ ಯೆಹೂದ ದೇಶಕ್ಕೆ ಹೋಗಬೇಕೆಂದು ಹೊರಟಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು