Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 8:5 - ಕನ್ನಡ ಸಮಕಾಲಿಕ ಅನುವಾದ

5 ಗೇಹಜಿಯು ಸತ್ತ ಹುಡುಗನನ್ನು ಹೇಗೆ ಎಲೀಷನು ಬದುಕಿಸಿದನೆಂದು ಅರಸನಿಗೆ ವಿವರವಾಗಿ ಹೇಳುತ್ತಿರುವಾಗಲೇ, ಎಲೀಷನು ಬದುಕಿಸಿದ ಹುಡುಗನ ತಾಯಿಯು ತನ್ನ ಹೊಲಮನೆಗೋಸ್ಕರ, ಮೊರೆಯಿಡಲು ಅರಸನ ಬಳಿಗೆ ಬಂದಳು. ಕೂಡಲೆ ಗೇಹಜಿಯು, “ನನ್ನ ಒಡೆಯನೇ, ಅರಸನೇ, ಇವಳೇ ಆ ಸ್ತ್ರೀಯು, ಎಲೀಷನು ಬದುಕಿಸಿದ ಆ ಹುಡುಗನು ಇವನೇ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಎಲೀಷನು ಸತ್ತ ಹುಡುಗನಿಗೆ ಜೀವದಾನಮಾಡಿದ ಸಂಗತಿಯನ್ನು ಗೇಹಜಿಯು ಅರಸನಿಗೆ ವಿವರಿಸುತ್ತಿರುವಾಗಲೇ ಜೀವದಾನಹೊಂದಿದ ಹುಡುಗನ ತಾಯಿಯು ತನ್ನ ಹೊಲಮನೆಗಳಿಗಾಗಿ ಮೊರೆಯಿಡುವುದಕ್ಕೋಸ್ಕರ ಅರಸನ ಬಳಿಗೆ ಬಂದಳು. ಕೂಡಲೇ ಗೇಹಜಿಯು, “ನನ್ನ ಒಡೆಯನೇ, ಎಲೀಷನು ಬದುಕಿಸಿದ ಹುಡುಗನು ಇವನೇ; ಈಕೆಯು ಇವನ ತಾಯಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಎಲೀಷನು ಸತ್ತ ಹುಡುಗನಿಗೆ ಜೀವದಾನಮಾಡಿದ ಸಂಗತಿಯನ್ನು ಗೇಹಜಿಯು ವಿವರಿಸುತ್ತಿರುವಾಗಲೇ, ಜೀವದಾನಹೊಂದಿದ ಹುಡುಗನ ತಾಯಿ ತನ್ನ ಹೊಲಮನೆಗಳಿಗಾಗಿ ಮೊರೆಯಿಡಲು ಅರಸನ ಬಳಿಗೆ ಬಂದಳು. ಕೂಡಲೆ ಗೇಹಜಿಯು, “ಅರಸರೇ, ನನ್ನ ಒಡೆಯರೇ, ಎಲೀಷನು ಬದುಕಿಸಿದ ಹುಡುಗನು ಇವನೇ; ಈಕೆ ಇವನ ತಾಯಿ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಎಲೀಷನು ಸತ್ತ ಹುಡುಗನಿಗೆ ಜೀವದಾನಮಾಡಿದ ಸಂಗತಿಯನ್ನು ಗೇಹಜಿಯು ವಿವರಿಸುತ್ತಿರುವಾಗಲೇ ಜೀವದಾನಹೊಂದಿದ ಹುಡುಗನ ತಾಯಿಯು ತನ್ನ ಹೊಲಮನೆಗಳಿಗಾಗಿ ಮೊರೆಯಿಡುವದಕ್ಕೋಸ್ಕರ ಅರಸನ ಬಳಿಗೆ ಬಂದಳು. ಕೂಡಲೆ ಗೇಹಜಿಯು - ಅರಸನೇ, ನನ್ನ ಒಡೆಯನೇ, ಎಲೀಷನು ಬದುಕಿಸಿದ ಹುಡುಗನು ಇವನೇ; ಈಕೆಯು ಇವನ ತಾಯಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಎಲೀಷನು ಸತ್ತಬಾಲಕನಿಗೆ ಮತ್ತೆ ಜೀವವನ್ನು ಬರುವಂತೆ ಮಾಡಿದ್ದರ ಬಗ್ಗೆ ಗೇಹಜಿಯು ರಾಜನಿಗೆ ಹೇಳುತ್ತಿದ್ದನು. ಎಲೀಷನು ಮರಳಿ ಜೀವಬರಿಸಿದ ಬಾಲಕನ ತಾಯಿಯು ಆ ಸಮಯದಲ್ಲಿ ರಾಜನ ಬಳಿಗೆ ಹೋದಳು. ತನ್ನ ಮನೆಯನ್ನು ಮತ್ತು ಭೂಮಿಯನ್ನು ತನಗೆ ಕೊಡಿಸಬೇಕೆಂದು ಕೇಳಿಕೊಳ್ಳಲು ಆಕೆ ಬಂದಿದ್ದಳು. ಗೇಹಜಿಯು, “ನನ್ನ ಒಡೆಯನೇ, ರಾಜನೇ, ಇವಳೇ ಆ ಸ್ತ್ರೀಯು! ಎಲೀಷನು ಮರಳಿ ಜೀವಬರಿಸಿದ ಬಾಲಕನು ಇವನೇ!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 8:5
16 ತಿಳಿವುಗಳ ಹೋಲಿಕೆ  

ಅವನು ಆಮೇಲೆ ಎದ್ದು ಕೋಣೆಯಲ್ಲಿ ಸ್ವಲ್ಪ ಅತ್ತಿತ್ತ ತಿರುಗಾಡಿ, ಪುನಃ ಅವನ ಮೇಲೆ ಬೋರಲು ಬಿದ್ದನು. ಆಗ ಆ ಹುಡುಗನು ಏಳು ಸಾರಿ ಸೀತು ಕಣ್ಣುಗಳನ್ನು ತೆರೆದನು.


ಹಾಗಾದರೆ, ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಪರವಾಗಿ ಇದ್ದರೆ ನಮ್ಮನ್ನು ವಿರೋಧಿಸುವವರು ಯಾರು?


ನಾನು ಮತ್ತೆ ಸೂರ್ಯನ ಕೆಳಗೆ ನೋಡಿದ್ದೇನೆಂದರೆ, ವೇಗಿಗಳಿಗೆ ಓಟವೂ ಪರಾಕ್ರಮಶಾಲಿಗಳಿಗೆ ಯುದ್ಧವೂ ಜ್ಞಾನಿಗಳಿಗೆ ಆಹಾರವೂ ವಿವೇಕಿಗಳಿಗೆ ಐಶ್ವರ್ಯವೂ ಪ್ರವೀಣರಿಗೆ ದಯೆಯೂ ಸಿಗುವುದು ಎಂಬ ನಿಶ್ಚಯ ಇಲ್ಲ. ಏಕೆಂದರೆ ಕಾಲವೂ ಅವಕಾಶವೂ ಅವರೆಲ್ಲರಿಗೆ ಒಳಪಟ್ಟಿರುತ್ತವೆ.


ಒಬ್ಬ ಮನುಷ್ಯನ ಹೃದಯವು ಅವನ ಮಾರ್ಗವನ್ನು ಕಲ್ಪಿಸುತ್ತದೆ, ಆದರೆ ಯೆಹೋವ ದೇವರು ಅವನ ಹೆಜ್ಜೆಗಳನ್ನು ಸ್ಥಾಪಿಸುತ್ತಾರೆ.


ಅರಸರಾಗಿರುವ ನನ್ನ ದೇವರೇ, ನಿಮ್ಮನ್ನು ಘನಪಡಿಸುವೆನು; ನಿಮ್ಮ ಹೆಸರನ್ನು ಎಂದೆಂದಿಗೂ ಸ್ತುತಿಸುವೆನು.


ಆಗ ಅವನ ಹೆಂಡತಿಯಾದ ಜೆರೆಷಳೂ ಅವನ ಸಮಸ್ತ ಸ್ನೇಹಿತರೂ ಅವನಿಗೆ, “ಅರಸನ ಅಪ್ಪಣೆಯನ್ನು ಪಡೆದು ಮೊರ್ದೆಕೈಯನ್ನು ಬೆಳಿಗ್ಗೆ ಗಲ್ಲಿಗೇರಿಸಲು ಇಪ್ಪತ್ತು ಮೀಟರ್ ಉದ್ದದ ಒಂದು ಗಲ್ಲುಮರವನ್ನು ಮಾಡು. ತರುವಾಯ ಅರಸನ ಸಂಗಡ ಔತಣಕ್ಕೆ ಹೋಗಿ ಸಂತೋಷವಾಗಿರು,” ಎಂದರು. ಈ ಸಲಹೆ ಹಾಮಾನನಿಗೆ ಮೆಚ್ಚಿಕೆಯಾದದ್ದರಿಂದ ಗಲ್ಲುಮರವನ್ನು ಸಿದ್ಧಮಾಡಿಸಿದನು.


ಇಸ್ರಾಯೇಲಿನ ಅರಸನು ಗೋಡೆಯ ಮೇಲೆ ಹಾದು ಹೋಗುತ್ತಿರುವಾಗ, ಒಬ್ಬ ಸ್ತ್ರೀಯು ಅವನನ್ನು ಕೂಗಿ, “ನನ್ನ ಯಜಮಾನನೇ, ಅರಸನೇ, ಸಹಾಯ ಮಾಡಿ,” ಎಂದಳು.


ಅವನ ಸೇವಕರಲ್ಲಿ ಒಬ್ಬನು, “ನನ್ನ ಒಡೆಯನೇ, ಅರಸನೇ, ಯಾವನೂ ಇಲ್ಲ. ಆದರೆ ಇಸ್ರಾಯೇಲಿನಲ್ಲಿರುವ ಪ್ರವಾದಿಯಾದ ಎಲೀಷನು ನಿನ್ನ ಮಲಗುವ ಕೋಣೆಯಲ್ಲಿ ನೀನು ಹೇಳುವ ಮಾತುಗಳನ್ನು ಸಹ ಇಸ್ರಾಯೇಲಿನ ಅರಸನಿಗೆ ಹೇಳುತ್ತಾನೆ,” ಎಂದನು.


ಆಗ ಸೌಲನು ದಾವೀದನ ಸ್ವರವನ್ನು ತಿಳಿದುಕೊಂಡು, “ನನ್ನ ಪುತ್ರನಾದ ದಾವೀದನೇ, ಇದು ನಿನ್ನ ಸ್ವರವಲ್ಲವೋ?” ಎಂದನು. ದಾವೀದನು, “ಅರಸನಾದ ನನ್ನ ಒಡೆಯನೇ, ನನ್ನ ಧ್ವನಿಯೇ ಹೌದು,” ಎಂದನು.


ರೂತಳು ಹೊಲದಲ್ಲಿ ಕೊಯ್ಯುವವರ ಹಿಂದೆ ಹೋಗಿ ತೆನೆಗಳನ್ನು ಆಯ್ದುಕೊಳ್ಳುತ್ತಿದ್ದಳು. ಆ ಹೊಲದ ಭಾಗ ಎಲೀಮೆಲೆಕನ ಕುಲದವನಾದ ಬೋವಜನದಾಗಿತ್ತು.


ಆಗ ಎಲೀಷನು ತನ್ನ ಸೇವಕನಾದ ಗೇಹಜಿಗೆ, “ನೀನು ಶೂನೇಮ್ಯಳನ್ನು ಕರೆ,” ಎಂದನು. ಅವನು ಅವಳನ್ನು ಕರೆದದ್ದರಿಂದ ಅವಳು ಎಲೀಷನ ಮುಂದೆ ಬಂದು ನಿಂತಳು.


ಅರಸನು ಆ ಸ್ತ್ರೀಯನ್ನು ವಿಚಾರಿಸಿದಾಗ, ಅವಳು ವಿವರವಾಗಿ ಹೇಳಿದಳು. ಆಗ ಅರಸನು ಅವಳಿಗಾಗಿ ಒಬ್ಬ ಅಧಿಕಾರಿಯನ್ನು ನೇಮಿಸಿ, ಅವನಿಗೆ, “ಅವಳಿಗೆ ಸೇರಿದ ಎಲ್ಲವನ್ನು, ಅವಳು ದೇಶವನ್ನು ಬಿಟ್ಟ ದಿನದಿಂದ ಇಂದಿನವರೆಗೆ ಅವಳಿಗೆ ಸಲ್ಲತಕ್ಕ ಆ ಹೊಲದ ಆದಾಯವನ್ನೆಲ್ಲಾ ಅವಳಿಗೆ ಕೊಡಿಸು,” ಎಂದನು.


ಅರಾಮಿನ ಅರಸನಾದ ಬೆನ್ಹದದನು ತನ್ನ ಸೈನ್ಯವನ್ನೆಲ್ಲಾ ಕೂಡಿಸಿದನು. ಅವನ ಬಳಿಯಲ್ಲಿ ಕುದುರೆಗಳೂ ರಥಗಳೂ ಸಹಿತವಾಗಿ ಮೂವತ್ತೆರಡು ಮಂದಿ ಅರಸರಿದ್ದರು. ಅವನು ಹೋಗಿ ಸಮಾರ್ಯವನ್ನು ಮುತ್ತಿಗೆ ಹಾಕಿ, ಅದರ ಮೇಲೆ ಯುದ್ಧಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು