Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 8:8 - ಕನ್ನಡ ಸಮಕಾಲಿಕ ಅನುವಾದ

8 ಆಗ ಅರಸನು ಹಜಾಯೇಲನಿಗೆ, “ನೀನು ಕೈಯಲ್ಲಿ ಕಾಣಿಕೆಯನ್ನು ತೆಗೆದುಕೊಂಡುಹೋಗಿ ದೇವರ ಮನುಷ್ಯನನ್ನು ಎದುರುಗೊಂಡು, ಈ ವ್ಯಾಧಿಯಿಂದ ನಾನು ಗುಣವಾಗುವೆನೋ? ಎಂದು ಅವನಿಂದ ಯೆಹೋವ ದೇವರನ್ನು ವಿಚಾರಿಸು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅರಸನು ಹಜಾಯೇಲನಿಗೆ, “ನೀನು ಕಾಣಿಕೆಯನ್ನು ತೆಗೆದುಕೊಂಡು ದೇವರ ಮನುಷ್ಯನ ಬಳಿಗೆ ಹೋಗಿ ನನಗೆ ವಾಸಿಯಾಗುವುದೋ? ಇಲ್ಲವೋ ಎಂಬುದನ್ನು ಅವನ ಮುಖಾಂತರವಾಗಿ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸು” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅವನು ಹಜಾಯೇಲನನ್ನು ಕರೆದು, “ನೀನು ಕಾಣಿಕೆಯನ್ನು ತೆಗೆದುಕೊಂಡು ದೈವಪುರುಷನ ಬಳಿಗೆ ಹೋಗಿ ನನಗೆ ಗುಣ ಆಗುವುದೋ ಇಲ್ಲವೋ ಎಂಬುದನ್ನು ಅವನ ಮುಖಾಂತರ ಸರ್ವೇಶ್ವರನ ಸನ್ನಿಧಿಯಲ್ಲಿ ವಿಚಾರಿಸು,” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅವನಿಗೆ - ನೀನು ಕಾಣಿಕೆಯನ್ನು ತೆಗೆದುಕೊಂಡು ದೇವರ ಮನುಷ್ಯನ ಬಳಿಗೆ ಹೋಗಿ ನನಗೆ ವಾಸಿಯಾಗುವದೋ ಇಲ್ಲವೋ ಎಂಬದನ್ನು ಅವನ ಮುಖಾಂತರವಾಗಿ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸು ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆಗ ರಾಜನಾದ ಬೆನ್ಹದದನು ಹಜಾಯೇಲನಿಗೆ, “ದೇವಮನುಷ್ಯನನ್ನು ಕಾಣಲು ಒಂದು ಕಾಣಿಕೆಯನ್ನು ತೆಗೆದುಕೊಂಡು ಹೋಗು. ನಾನು ನನ್ನ ಕಾಯಿಲೆಯಿಂದ ಗುಣವಾಗುತ್ತೇನೆಯೇ ಇಲ್ಲವೇ ಎಂಬುದನ್ನು ತಿಳಿದುಕೊಳ್ಳಲು ಅವನು ಯೆಹೋವನಲ್ಲಿ ಪ್ರಾರ್ಥಿಸಲಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 8:8
11 ತಿಳಿವುಗಳ ಹೋಲಿಕೆ  

ಅಹಜ್ಯನು ಸಮಾರ್ಯದಲ್ಲಿದ್ದ ತನ್ನ ಮೇಲುಪ್ಪರಿಗೆಯ ಕಿಟಕಿಯೊಂದರಿಂದ ಬಿದ್ದು ಅಸ್ವಸ್ಥನಾಗಿದ್ದನು. ಅವನು ತನ್ನ ಸೇವಕರನ್ನು ಕರೆದು, “ಎಕ್ರೋನಿನ ದೇವರಾದ ‘ಬಾಳ್ ಜೆಬೂಬನ’ ಸನ್ನಿಧಿಗೆ ಹೋಗಿ, ನಾನು ಈ ಅಸ್ವಸ್ಥತೆಯಿಂದ ಗುಣವಾಗುವೆನೋ ಇಲ್ಲವೋ? ಎಂದು ವಿಚಾರಿಸಿ ಬನ್ನಿ,” ಎಂದು ಹೇಳಿ ಕಳುಹಿಸಿದನು.


ಆಗ ಯೆಹೋವ ದೇವರು ಅವನಿಗೆ, “ನೀನು ಬಂದ ಮಾರ್ಗದಲ್ಲಿ ದಮಸ್ಕದ ಮರುಭೂಮಿಗೆ ತಿರುಗಿಕೊಂಡು ಹೋಗಿ, ಅಲ್ಲಿ ತಲುಪಿದಾಗ, ಹಜಾಯೇಲನನ್ನು ಅರಾಮಿನ ಮೇಲೆ ಅರಸನಾಗಿರಲು ಅಭಿಷೇಕಿಸು.


ಆಗ ಸೌಲನು ತನ್ನ ಸೇವಕನಿಗೆ, “ನಾವು ಆ ಮನುಷ್ಯನ ಬಳಿಗೆ ಹೋದರೆ, ಏನು ತೆಗೆದುಕೊಂಡು ಹೋಗೋಣ? ನಮ್ಮ ಚೀಲಗಳಲ್ಲಿ ಇರುವ ರೊಟ್ಟಿ ಮುಗಿದು ಹೋಯಿತು. ದೇವರ ಮನುಷ್ಯನ ಬಳಿಗೆ ತೆಗೆದುಕೊಂಡು ಹೋಗಲು ತಕ್ಕ ಕಾಣಿಕೆ ಇಲ್ಲ. ನಮ್ಮ ಬಳಿಯಲ್ಲಿ ಏನಿದೆ?” ಎಂದನು.


ಆಮೇಲೆ ಅವರನ್ನು ಹೊರಗೆ ಕರೆದುಕೊಂಡು ಬಂದು, “ಮಹನೀಯರೇ, ನಾನು ರಕ್ಷಣೆ ಹೊಂದಲು ಏನು ಮಾಡಬೇಕು?” ಎಂದನು.


ಒಬ್ಬನು ಯೇಸುವಿಗೆ, “ಸ್ವಾಮಿ, ರಕ್ಷಣೆ ಹೊಂದುವವರು ಕೆಲವರೋ?” ಎಂದು ಕೇಳಲು, ಯೇಸು ಅವರಿಗೆ,


ಅರಾಮ್ಯರ ಅರಸನು, “ನೀನು ಹೋಗಿ ಬಾ. ನಾನು ಇಸ್ರಾಯೇಲಿನ ಅರಸನಿಗೆ ಪತ್ರವನ್ನು ಕಳುಹಿಸುವೆನು,” ಎಂದನು. ಅದರಂತೆ ನಾಮಾನನು 340 ಕಿಲೋಗ್ರಾಂ ಬೆಳ್ಳಿ, 64 ಕಿಲೋಗ್ರಾಂ ಬಂಗಾರ, ಹತ್ತು ಜೊತೆ ಬಟ್ಟೆಗಳನ್ನೂ ತೆಗೆದುಕೊಂಡು ಹೋದನು.


ಅವರು ಅರಸನಿಗೆ, “ಒಬ್ಬ ಮನುಷ್ಯನು ನಮಗೆ ಎದುರಾಗಿ ಬಂದು, ‘ನೀವು ನಿಮ್ಮನ್ನು ಕಳುಹಿಸಿದ ಅರಸನ ಬಳಿಗೆ ಹಿಂದಿರುಗಿ ಹೋಗಿ, ಯೆಹೋವ ದೇವರು ಹೇಳುವುದು ಏನೆಂದರೆ: ಇಸ್ರಾಯೇಲಿನಲ್ಲಿ ದೇವರು ಇಲ್ಲವೆ? ನೀನು ಎಕ್ರೋನಿನ ದೇವರಾದ ಬಾಳ್ ಜೆಬೂಬನನ್ನು ವಿಚಾರಿಸಲು ಜನರನ್ನು ಕಳುಹಿಸಿರುತ್ತೀ? ಇದರ ನಿಮಿತ್ತ, ನೀನು ಏರಿದ ಮಂಚದಿಂದ ಇಳಿಯದೆ, ನಿಶ್ಚಯವಾಗಿ ಸಾಯುವೆ,’ ಎಂಬುದಾಗಿ ಅವನಿಗೆ ಹೇಳಿರಿ, ಎಂದು ತಿಳಿಸಿದನು,” ಎಂದರು.


ಹಜಾಯೇಲನ ಖಡ್ಗಕ್ಕೆ ತಪ್ಪಿಸಿಕೊಂಡವರನ್ನು ಯೇಹುವು ಕೊಲ್ಲುವನು; ಯೇಹುವಿನ ಖಡ್ಗಕ್ಕೆ ತಪ್ಪಿಸಿಕೊಂಡವರನ್ನು ಎಲೀಷನು ಕೊಂದುಹಾಕುವನು.


ಅರಸನಿಗೆ, “ಯೆಹೋವ ದೇವರ ವಾಕ್ಯವನ್ನು ವಿಚಾರಿಸಲು ಇಸ್ರಾಯೇಲಿನಲ್ಲಿ ದೇವರಿಲ್ಲವೆಂಬ ಹಾಗೆ ನೀನು ಎಕ್ರೋನಿನ ದೇವರಾದ ಬಾಳ್ ಜೆಬೂಬನ್ನು ವಿಚಾರಿಸಲು ದೂತರನ್ನು ಕಳುಹಿಸಿದ ಕಾರಣ, ‘ನೀನು ಏರಿದ ಮಂಚದಿಂದ ಇಳಿಯದೆ ನಿಶ್ಚಯವಾಗಿ ಸಾಯುವೆ,’ ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು