2 ಅರಸುಗಳು 8:9 - ಕನ್ನಡ ಸಮಕಾಲಿಕ ಅನುವಾದ9 ಹಜಾಯೇಲನು ದಮಸ್ಕದಲ್ಲಿರುವ ಸಕಲ ಉತ್ತಮವಾದವುಗಳಲ್ಲಿ ನಲವತ್ತು ಒಂಟೆಗಳು ಹೊರುವಷ್ಟು ಕಾಣಿಕೆಗಳನ್ನು ತೆಗೆದುಕೊಂಡು, ಎಲೀಷನನ್ನು ಎದುರುಗೊಳ್ಳಲು ಹೋಗಿ, ಅವನ ಮುಂದೆ ಬಂದು ನಿಂತು, “ಅರಾಮಿನ ಅರಸನಾಗಿರುವ ನಿನ್ನ ಮಗ ಬೆನ್ಹದದನು, ‘ಈ ವ್ಯಾಧಿಯಿಂದ ಬದುಕುವೆನೋ?’ ಎಂದು ಕೇಳಲು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆ,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಹಜಾಯೇಲನು ದಮಸ್ಕದ ಶ್ರೇಷ್ಠ ವಸ್ತುಗಳಲ್ಲಿ ನಲವತ್ತು ಒಂಟೆಗಳು ಹೊರುವಷ್ಟು ಕಾಣಿಕೆಗಳನ್ನು ತೆಗೆದುಕೊಂಡು ಎಲೀಷನ ಬಳಿಗೆ ಹೋಗಿ ಅವನ ಮುಂದೆ ನಿಂತು, “ನಿನ್ನ ಮಗನೂ ಅರಾಮ್ಯರ ಅರಸನೂ ಆದ ಬೆನ್ಹದದನು ತನಗೆ ಸ್ವಸ್ಥವಾಗುವದೋ, ಇಲ್ಲವೋ ಎಂಬುದನ್ನು ವಿಚಾರಿಸುವುದಕ್ಕಾಗಿ ನನ್ನನ್ನು ನಿನ್ನ ಬಳಿ ಕಳುಹಿಸಿದ್ದಾನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಹಜಾಯೇಲನು ದಮಸ್ಕದ ಶ್ರೇಷ್ಠವಸ್ತುಗಳಲ್ಲಿ, ನಾಲ್ವತ್ತು ಒಂಟೆಗಳು ಹೊರುವಷ್ಟನ್ನು ತೆಗೆದುಕೊಂಡು, ಎಲೀಷನ ಬಳಿಗೆ ಹೋಗಿ ಅವನ ಮುಂದೆ ನಿಂತು, “ನಿಮ್ಮ ಕುಮಾರ, ಸಿರಿಯಾದವರ ಅರಸನಾದ ಬೆನ್ಹದದರು, ತಮಗೆ ಗುಣವಾಗುವುದೋ ಇಲ್ಲವೋ ಎಂಬುದನ್ನು ವಿಚಾರಿಸುವುದಕ್ಕಾಗಿ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಹಜಾಯೇಲನು ದಮಸ್ಕದ ಶ್ರೇಷ್ಠವಸ್ತುಗಳಲ್ಲಿ ನಾಲ್ವತ್ತು ಒಂಟೆಗಳು ಹೊರುವಷ್ಟನ್ನು ತೆಗೆದುಕೊಂಡು ಎಲೀಷನ ಬಳಿಗೆ ಹೋಗಿ ಅವನ ಮುಂದೆ ನಿಂತು - ನಿನ್ನ ಮಗನೂ ಅರಾಮ್ಯರ ಅರಸನೂ ಆದ ಬೆನ್ಹದದನು ತನಗೆ ಸ್ವಸ್ಥವಾಗುವದೋ ಇಲ್ಲವೋ ಎಂಬದನ್ನು ವಿಚಾರಿಸುವದಕ್ಕಾಗಿ ನನ್ನನ್ನು ನಿನ್ನ ಹತ್ತಿರ ಕಳುಹಿಸಿದ್ದಾನೆ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಹಜಾಯೇಲನು ತನ್ನೊಡನೆ ಕಾಣಿಕೆಯನ್ನು ತೆಗೆದುಕೊಂಡು ಎಲೀಷನನ್ನು ಭೇಟಿಮಾಡಲು ಹೋದನು. ಅವನು ದಮಸ್ಕದಿಂದ ಎಲ್ಲಾ ವಿಧವಾದ ಉತ್ತಮ ವಸ್ತುಗಳನ್ನು ನಲವತ್ತು ಒಂಟೆಗಳ ಮೇಲೆ ಹೇರಿಸಿಕೊಂಡು ಹೋದನು. ಹಜಾಯೇಲನು ಎಲೀಷನ ಬಳಿಗೆ ಹೋಗಿ, “ನಿನ್ನ ಹಿಂಬಾಲಕನೂ ಅರಾಮ್ಯರ ರಾಜನೂ ಆದ ಬೆನ್ಹದದನು ನನ್ನನ್ನು ನಿನ್ನ ಬಳಿಗೆ ಕಳುಹಿಸಿದನು. ತನ್ನ ಕಾಯಿಲೆಯು ವಾಸಿಯಾಗುತ್ತದೆಯೇ ಇಲ್ಲವೇ ಎಂಬುದನ್ನು ಅವನು ನಿನ್ನಿಂದ ತಿಳಿದುಕೊಳ್ಳಬೇಕೆಂದಿದ್ದಾನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |