Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 9:14 - ಕನ್ನಡ ಸಮಕಾಲಿಕ ಅನುವಾದ

14 ಹೀಗೆಯೇ ನಿಂಷಿಯ ಮಗ ಯೆಹೋಷಾಫಾಟನ ಮಗ ಯೇಹುವು ಯೋರಾಮನಿಗೆ ವಿರೋಧವಾಗಿ ಒಳಸಂಚು ಮಾಡಿದನು. ಅರಾಮ್ಯರ ಅರಸನಾದ ಹಜಾಯೇಲನ ನಿಮಿತ್ತ ಯೋರಾಮನೂ, ಸಮಸ್ತ ಇಸ್ರಾಯೇಲರೂ ಗಿಲ್ಯಾದಿನ ರಾಮೋತಿನಲ್ಲಿ ಕಾಯುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಹೀಗೆ ನಿಂಷಿಯ ಮೊಮ್ಮಗನೂ ಯೆಹೋಷಾಫಾಟನ ಮಗನೂ ಆದ ಯೇಹುವು ಯೋರಾಮನಿಗೆ ವಿರುದ್ಧವಾಗಿ ಒಳಸಂಚುಮಾಡಿದನು. ಅರಾಮ್ಯರ ಅರಸನಾದ ಹಜಾಯೇಲನು ರಾಮೋತ್ ಗಿಲ್ಯಾದಿಗೆ ವಿರುದ್ಧವಾಗಿ ಬರಲು ಯೋರಾಮನು ಅದನ್ನು ಕಾಪಾಡುವುದಕ್ಕಾಗಿ ಎಲ್ಲಾ ಇಸ್ರಾಯೇಲರ ಸಹಿತವಾಗಿ ಹೋಗಿ ಅದಕ್ಕೆ ಕಾವಲುದಂಡುಗಳನ್ನು ಇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಹೀಗೆ ನಿಂಷಿಯ ಮೊಮ್ಮಗನೂ ಯೆಹೋಷಾಫಾಟನ ಮಗನೂ ಆದ ಯೇಹುವು ಯೋರಾಮನಿಗೆ ಒಳಸಂಚು ಮಾಡಿದನು. (ಸಿರಿಯಾದವರ ಅರಸನಾದ ಹಜಾಯೇಲನು ರಾಮೋತ್ ಗಿಲ್ಯಾದಿಗೆ ಮುತ್ತಿಗೆ ಹಾಕಿದನು. ಯೋರಾಮನು ಅದನ್ನು ಕಾಪಾಡುವುದಕ್ಕಾಗಿ ಎಲ್ಲಾ ಇಸ್ರಯೇಲರ ಸಹಿತ ಹೋಗಿ, ಹಜಾಯೇಲನೊಡನೆ ಯುದ್ಧಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಹೀಗೆ ನಿಂಷಿಯ ಮೊಮ್ಮಗನೂ ಯೆಹೋಶಾಫಾಟನ ಮಗನೂ ಆದ ಯೆಹುವು ಯೋರಾಮನಿಗೆ ವಿರೋಧವಾಗಿ ಒಳಸಂಚುಮಾಡಿದನು. (ಅರಾಮ್ಯರ ಅರಸನಾದ ಹಜಾಯೇಲನು ರಾಮೋತ್‍ಗಿಲ್ಯಾದಿಗೆ ವಿರೋಧವಾಗಿ ಬರಲು ಯೋರಾಮನು ಅದನ್ನು ಕಾಪಾಡುವದಕ್ಕೋಸ್ಕರ ಎಲ್ಲಾ ಇಸ್ರಾಯೇಲ್ಯರ ಸಹಿತವಾಗಿ ಹೋಗಿ ಹಜಾಯೇಲನೊಡನೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಯೆಹೋಷಾಫಾಟನ ಮಗನೂ ನಿಂಷಿಯ ಮೊಮ್ಮಗನೂ ಆದ ಯೇಹುವು ಯೋರಾಮನ ವಿರುದ್ಧ ಒಳಸಂಚುಮಾಡಿದನು. ಆ ಸಮಯದಲ್ಲಿ ರಾಮೋತ್‌ಗಿಲ್ಯಾದನ್ನು ಅರಾಮ್ಯರ ರಾಜನಾದ ಹಜಾಯೇಲನಿಂದ ರಕ್ಷಿಸಲು, ಯೋರಾಮನೂ ಇಸ್ರೇಲರೂ ಪ್ರಯತ್ನಿಸಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 9:14
13 ತಿಳಿವುಗಳ ಹೋಲಿಕೆ  

ಅಹಜ್ಯನು ಅಹಾಬನ ಮಗ ಯೋರಾಮನ ಸಂಗಡ ಗಿಲ್ಯಾದಿನ ರಾಮೋತಿಗೆ ಅರಾಮಿನ ಅರಸನಾದ ಹಜಾಯೇಲನ ಮೇಲೆ ಯುದ್ಧಮಾಡಲು ಹೋದನು. ಆದರೆ ಅರಾಮ್ಯರು ಯೋರಾಮನನ್ನು ಹೊಡೆದು ಗಾಯಗೊಳಿಸಿದರು.


ಇಸ್ರಾಯೇಲಿನ ಅರಸನು ತನ್ನ ಸೇವಕರಿಗೆ, “ಗಿಲ್ಯಾದಿನ ರಾಮೋತ್ ನಮ್ಮದೆಂದು ನಿಮಗೆ ಗೊತ್ತುಂಟಲ್ಲಾ? ನಾವು ಅದನ್ನು ಅರಾಮಿನ ಅರಸನ ಕೈಯಿಂದ ತೆಗೆದುಕೊಳ್ಳದೆ ಸುಮ್ಮನೆ ಇದ್ದೇವೆ,” ಎಂದನು.


ಇದಲ್ಲದೆ ಏಲನ ಮಗ ಹೋಶೇಯನು ರೆಮಲ್ಯನ ಮಗ ಪೆಕಹನ ವಿರುದ್ಧ ಒಳಸಂಚುಮಾಡಿ, ಇವನನ್ನು ಉಜ್ಜೀಯನ ಮಗ ಯೋತಾಮನ ಆಳ್ವಿಕೆಯ ಇಪ್ಪತ್ತನೆಯ ವರ್ಷದಲ್ಲಿ ಸಂಹರಿಸಿ, ಅವನಿಗೆ ಬದಲಾಗಿ ಅರಸನಾದನು.


ಮರುದಿನ ಬೆಳಿಗ್ಗೆ ಯೇಹು ಹೊರಗೆ ಬಂದು, ಸಕಲ ಜನರ ಮುಂದೆ ನಿಂತು, “ನೀವು ನಿರಪರಾಧಿಗಳು. ನಾನು ನನ್ನ ಯಜಮಾನನ ಮೇಲೆ ಒಳಸಂಚುಮಾಡಿ, ಅವನನ್ನು ಕೊಂದುಹಾಕಿದೆನು. ಆದರೆ ಇವರೆಲ್ಲರನ್ನು ಸಂಹರಿಸಿದವರ‍್ಯಾರು?


ಯೇಹುವು ಬಾಗಿಲಲ್ಲಿ ಪ್ರವೇಶಿಸಿದಾಗ ಅವಳು, “ತನ್ನ ಯಜಮಾನನನ್ನು ಕೊಂದ ಜಿಮ್ರಿಗೆ ಸಮಾನನೇ, ಕ್ಷೇಮವೋ?” ಎಂದಳು.


ಜಿಮ್ರಿಯು ಒಳಸಂಚುಮಾಡಿ, ಅರಸನನ್ನು ಕೊಂದು ಹಾಕಿದ್ದಾನೆಂದು ಅಲ್ಲಿ ಇಳಿದಿರುವ ದಂಡಿನವರು ಕೇಳಿದ್ದರಿಂದ, ಇಸ್ರಾಯೇಲರೆಲ್ಲರು ಅದೇ ದಿವಸದಲ್ಲಿ ದಂಡಿನ ಅಧಿಪತಿಯಾದ ಒಮ್ರಿಯನ್ನು ಇಸ್ರಾಯೇಲಿನ ಮೇಲೆ ಅರಸನಾಗಿ ನೇಮಿಸಿದರು.


ಆದರೆ ತಿರ್ಚದಲ್ಲಿ ತನ್ನ ಮನೆಯ ಉಗ್ರಾಣಿಕನಾದ ಅರ್ಚನ ಮನೆಯಲ್ಲಿ ಅವನು ಕುಡಿದು ಮತ್ತನಾಗಿರುವಾಗ, ಅರ್ಧ ರಥಗಳಿಗೆ ಅಧಿಪತಿಯಾಗಿರುವ ಅವನ ಸೇವಕನಾದ ಜಿಮ್ರಿಯನು ಅವನಿಗೆ ವಿರೋಧವಾಗಿ ಒಳಸಂಚು ಮಾಡಿದನು.


ಬಾಷನು ಯಾರೊಬ್ಬಾಮನ ಮನೆಯವರ ಹಾಗಿದ್ದು, ಅವರನ್ನು ಸಂಹರಿಸಿದ್ದರಿಂದ ಯೆಹೋವ ದೇವರಿಗೆ ಕೋಪವನ್ನು ಎಬ್ಬಿಸಿ, ಯೆಹೋವ ದೇವರ ಸಮ್ಮುಖದಲ್ಲಿ ತಾನು ಮಾಡಿದ ಎಲ್ಲಾ ಕೆಟ್ಟತನದ ನಿಮಿತ್ತ ಅವನಿಗೆ ವಿರೋಧವಾಗಿಯೂ, ಅವನ ಮನೆಗೆ ವಿರೋಧವಾಗಿಯೂ ಹನಾನೀಯ ಮಗನಾಗಿರುವ ಪ್ರವಾದಿ ಯೇಹುವಿನ ಮುಖಾಂತರ ಯೆಹೋವ ದೇವರ ವಾಕ್ಯ ಬಂತು.


ನಾದಾಬನೂ, ಸಮಸ್ತ ಇಸ್ರಾಯೇಲರೂ ಫಿಲಿಷ್ಟಿಯರ ಪಟ್ಟಣವಾದ ಗಿಬ್ಬೆತೋನಿಗೆ ಮುತ್ತಿಗೆ ಹಾಕುತ್ತಾ ಇದ್ದರು. ಆದುದರಿಂದ ಇಸ್ಸಾಕಾರನ ಗೋತ್ರದ ಅಹೀಯನ ಮಗ ಬಾಷನು ನಾದಾಬನಿಗೆ ವಿರೋಧವಾಗಿ ಒಳಸಂಚುಮಾಡಿ, ನಾದಾಬನನ್ನು ಕೊಂದುಬಿಟ್ಟನು.


ನೀನು ಅಲ್ಲಿಗೆ ಸೇರಿದಾಗ ನಿಂಷಿಯ ಮಗನಾಗಿರುವ ಯೆಹೋಷಾಫಾಟನ ಮಗ ಯೇಹುವನ್ನು ಅಲ್ಲಿ ಕಂಡು, ಒಳಗೆ ಪ್ರವೇಶಿಸಿ, ಅವನನ್ನು ಅವರ ಸಹೋದರರ ಮಧ್ಯದಿಂದ ಎಬ್ಬಿಸಿ, ಒಳಗಿನ ಕೋಣೆಗೆ ಕರೆದುಕೊಂಡು ಹೋಗಿ,


ಆದ್ದರಿಂದ ಅರಸನಾದ ಯೋರಾಮನು ಅರಾಮ್ಯ ದೇಶದ ಅರಸನಾದ ಹಜಾಯೇಲನ ಮೇಲೆ ಯುದ್ಧಮಾಡಿದಾಗ, ರಾಮೋತಿನಲ್ಲಿ ಅರಾಮ್ಯರು ತನ್ನನ್ನು ಹೊಡೆದ ಗಾಯಗಳನ್ನು ಗುಣಪಡಿಸಿಕೊಳ್ಳುವುದಕ್ಕೆ ಇಜ್ರೆಯೇಲ್ ಪಟ್ಟಣಕ್ಕೆ ತಿರುಗಿಹೋದನು. ಆಗ ಅಹಾಬನ ಮಗ ಯೋರಾಮನು ಇಜ್ರೆಯೇಲಿನಲ್ಲಿ ಅಸ್ವಸ್ಥನಾಗಿದ್ದುದರಿಂದ ಯೆಹೂದದ ಅರಸನಾಗಿರುವ ಯೆಹೋರಾಮನ ಮಗ ಅಹಜ್ಯನು ಅವನನ್ನು ನೋಡಲು ಹೋದನು.


ಅವನ ಸೇವಕರಾದ ಶಿಮೆಯಾತನ ಮಗ ಯೋಜಾಬಾದ್ ಮತ್ತು ಶೋಮೇರನ ಮಗ ಯೆಹೋಜಾಬಾದ್ ಎಂಬವರು ಅರಸನನ್ನು ಕೊಂದರು. ಯೋವಾಷನ ಜನರು ಅವನ ಶವವನ್ನು ದಾವೀದನ ಪಟ್ಟಣದಲ್ಲಿ ಅವನ ಪಿತೃಗಳ ಬಳಿಯಲ್ಲಿ ಸಮಾಧಿಮಾಡಿದರು. ಅವನ ಮಗ ಅಮಚ್ಯನು ಅವನಿಗೆ ಬದಲಾಗಿ ಅರಸನಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು