Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 9:17 - ಕನ್ನಡ ಸಮಕಾಲಿಕ ಅನುವಾದ

17 ಇಜ್ರೆಯೇಲ್ ಪಟ್ಟಣದ ಗೋಪುರದಲ್ಲಿದ್ದ ಕಾವಲುಗಾರನು ಯೇಹುವಿನ ಗುಂಪಿನವರನ್ನು ಕಂಡು, “ಜನರ ಒಂದು ಗುಂಪು ಕಾಣಿಸುತ್ತಿದೆ,” ಎಂದು ಯೋರಾಮನಿಗೆ ತಿಳಿಸಿದನು. ಯೋರಾಮನು, “ನೀನು ಒಬ್ಬ ರಾಹುತನನ್ನು ಕರೆದು, ಬರುತ್ತಿರುವವರು ಶುಭವಾರ್ತೆಯನ್ನು ತರುತ್ತಾರೋ ಇಲ್ಲವೋ ಎಂದು ಕೇಳುವುದಕ್ಕೆ ಕಳುಹಿಸು,” ಎಂಬುದಾಗಿ ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಇಜ್ರೇಲಿನ ಬುರುಜಿನಲ್ಲಿದ್ದ ಕಾವಲುಗಾರರು ಯೇಹುವಿನ ಗುಂಪಿನವರನ್ನು ಕಂಡು, “ಜನರ ಒಂದು ಗುಂಪು ಬರುವುದು ಕಾಣಿಸುತ್ತದೆ” ಎಂದು ಯೋರಾಮನಿಗೆ ತಿಳಿಸಿದನು. ಯೋರಾಮನು ಅವನಿಗೆ, “ನೀನು ಒಬ್ಬ ರಾಹುತನನ್ನು ಕರೆದು ಬರುತ್ತಿರುವವರು ಶುಭವಾರ್ತೆಯನ್ನು ತರುತ್ತಿದ್ದಾರೊ? ಎಂದು ಕೇಳುವುದಕ್ಕಾಗಿ ಕಳುಹಿಸು” ಎಂಬುದಾಗಿ ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಜೆಸ್ರೀಲಿನ ಗೋಪುರದಲ್ಲಿದ್ದ ಕಾವಲುಗಾರನು ಯೇಹುವಿನ ಗುಂಪಿನವರನ್ನು ಕಂಡು, “ಜನರ ಒಂದು ಗುಂಪು ಕಾಣಿಸುತ್ತಿದೆ,” ಎಂದು ಯೋರಾಮನಿಗೆ ತಿಳಿಸಿದನು. ಯೋರಾಮನು, “ನೀನು ಒಬ್ಬ ರಾಹುತನನ್ನು ಕರೆದು, ಬರುತ್ತಿರುವವರು ಶುಭವಾರ್ತೆಯನ್ನು ತರುತ್ತಾರೋ ಇಲ್ಲವೋ ಎಂದು ಕೇಳುವುದಕ್ಕಾಗಿ ಕಳುಹಿಸು,” ಎಂಬುದಾಗಿ ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಇಜ್ರೇಲಿನ ಬುರುಜಿನಲ್ಲಿದ್ದ ಕಾವಲುಗಾರನು ಯೇಹುವಿನ ಗುಂಪಿನವರನ್ನು ಕಂಡು - ಜನರ ಒಂದು ಗುಂಪು ಕಾಣಿಸುತ್ತದೆ ಎಂದು ಯೋರಾಮನಿಗೆ ತಿಳಿಸಿದನು. ಯೋರಾಮನು ಅವನಿಗೆ - ನೀನು ಒಬ್ಬ ರಾಹುತನನ್ನು ಕರೆದು ಬರುತ್ತಿರುವವರು ಶುಭವಾರ್ತೆಯನ್ನು ತರುತ್ತಾರೋ ಎಂದು ಕೇಳುವದಕ್ಕಾಗಿ ಕಳುಹಿಸು ಎಂಬದಾಗಿ ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಇಜ್ರೇಲಿನ ಬುರುಜಿನಲ್ಲಿ ಒಬ್ಬ ಕಾವಲುಗಾರನು ನಿಂತಿದ್ದನು. ಅವನು ಯೇಹುವಿನ ದೊಡ್ಡಗುಂಪು ಬರುತ್ತಿರುವುದನ್ನು ನೋಡಿದನು. ಅವನು, “ನಾನು ಜನರ ದೊಡ್ಡ ಗುಂಪನ್ನು ನೋಡುತ್ತಿರುವೆನು” ಎಂದು ಹೇಳಿದನು. ಯೋರಾಮನು, “ಅವರನ್ನು ಸಂಧಿಸಲು ಯಾರನ್ನಾದರೂ ಕುದುರೆಯ ಮೇಲೆ ಕಳುಹಿಸಿ, ‘ಶುಭವಾರ್ತೆಯುಂಟೋ?’ ಎಂದು ಅವನು ಅವರನ್ನು ಕೇಳಲಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 9:17
17 ತಿಳಿವುಗಳ ಹೋಲಿಕೆ  

ಯೆಹೋವ ದೇವರು ಹೇಳಿದ ಪ್ರಕಾರ ಸಮುಯೇಲನು ಮಾಡಿ, ಬೇತ್ಲೆಹೇಮಿಗೆ ಬಂದನು. ಆಗ ಊರಿನ ಹಿರಿಯರು ಅವನ ಬರುವಿಕೆಯನ್ನು ಕಂಡು ನಡುಗಿ, ಅವನಿಗೆ, “ಸಮಾಧಾನವಾಗಿ ಬಂದೆಯೋ?” ಎಂದರು.


ಯೆರೂಸಲೇಮೇ, ನಿನ್ನ ಗೋಡೆಗಳ ಮೇಲೆ ಕಾವಲುಗಾರರನ್ನು ನೇಮಿಸಿದ್ದೇನೆ. ಅವರು ಹಗಲಿರುಳು ಮೌನವಾಗಿರುವುದೇ ಇಲ್ಲ. ಯೆಹೋವ ದೇವರಿಗೆ ಜ್ಞಾಪಕಪಡಿಸುವವರೇ, ನೀವೂ ಸುಮ್ಮನಿರಬೇಡಿರಿ.


ಇಸ್ರಾಯೇಲಿನ ಕಾವಲುಗಾರರು ಕುರುಡರು. ಅವರೆಲ್ಲರೂ ಅರಿವಿಲ್ಲದವರು. ಅವರೆಲ್ಲರೂ ಮೂಕ ನಾಯಿಗಳು, ಅವು ಬೊಗಳಲಾರವು, ಕನಸು ಕಾಣುತ್ತವೆ, ಬಿದ್ದುಕೊಂಡಿರುತ್ತವೆ. ನಿದ್ರೆಯನ್ನು ಪ್ರೀತಿಸುತ್ತವೆ.


ಆಗ ಅರಸನು ಇನ್ನೊಬ್ಬ ರಾಹುತನನ್ನು ಕಳುಹಿಸಿದನು. ಇವನು ಹೋಗಿ ಯೇಹುವನ್ನು ಎದುರುಗೊಂಡು, “ಅರಸನು, ‘ಶುಭವಾರ್ತೆ ಉಂಟೋ?’ ಎಂದು ಕೇಳುತ್ತಾನೆ,” ಎನ್ನಲು ಅವನು, “ಶುಭವಾರ್ತೆಯಿಂದ ನಿನಗೇನು? ನನ್ನ ಹಿಂದೆ ಬಾ,” ಎಂದನು.


ಆದ್ದರಿಂದ ಅವರು ಎರಡು ಜೋಡಿ ಕುದುರೆಗಳೊಂದಿಗೆ ಎರಡು ರಥಗಳನ್ನು ಆರಿಸಿಕೊಂಡರು ಮತ್ತು ಅರಸನು ಅರಾಮ್ಯರ ಸೈನ್ಯದ ಹಿಂದೆ ಅವರನ್ನು ಕಳುಹಿಸಿ, “ಹೋಗಿ ಏನಾಯಿತು ಎಂದು ತಿಳಿದುಕೊಳ್ಳಿ” ಎಂದು ಅವನು ರಾಹುತರಿಗೆ ಆಜ್ಞಾಪಿಸಿದನು.


ಆಗ ಅವನು, “ರಾಜ್ಯವು ನನ್ನದಾಗಿತ್ತೆಂದೂ, ನಾನು ಆಳುವ ಸಮಸ್ತ ಇಸ್ರಾಯೇಲರು ನನ್ನ ಮೇಲೆ ಕಣ್ಣಿಟ್ಟಿದ್ದರೆಂದೂ ನೀನು ಬಲ್ಲೆ. ಆದರೆ ಎಲ್ಲವೂ ಬದಲಾಗಿ, ರಾಜ್ಯವು ನನ್ನ ಸಹೋದರನಿಗೆ ದೊರಕಿತು. ಏಕೆಂದರೆ ಅದು ಅವನಿಗೆ ಯೆಹೋವ ದೇವರಿಂದ ಉಂಟಾಯಿತು.


ದಾವೀದನು ಒಳಗಣ ಮತ್ತು ಹೊರಗಣ ಬಾಗಿಲುಗಳ ಮಧ್ಯದಲ್ಲಿ ಕುಳಿತಿದ್ದನು. ಕಾವಲುಗಾರನು ಗೋಪುರದ ಮಾಳಿಗೆಯ ಮೇಲೆ ಏರಿ, ಕಣ್ಣುಗಳನ್ನೆತ್ತಿ ನೋಡಲಾಗಿ, ಒಬ್ಬ ಮನುಷ್ಯನು ಒಂಟಿಯಾಗಿ ಓಡಿಬರುವುದನ್ನು ಕಂಡನು.


ಅಬ್ಷಾಲೋಮನು ಓಡಿಹೋದನು. ಆಗ ಕಾವಲುಗಾರನು ಕಣ್ಣೆತ್ತಿ ನೋಡುವಾಗ, ಅವನ ಹಿಂಭಾಗದಲ್ಲಿ ಬೆಟ್ಟದ ಮಾರ್ಗವಾಗಿ ಅನೇಕ ಜನರು ಬರುತ್ತಿದ್ದರು. ಕಾವಲುಗಾರನು ಹೋಗಿ ಅರಸನಿಗೆ, “ನಾನು ಬೆಟ್ಟದ ಬದಿಯಲ್ಲಿರುವ ಹೋರೋನೈಮ್ ದಿಕ್ಕಿನಲ್ಲಿ ಮನುಷ್ಯರನ್ನು ಕಂಡೆನು,” ಎಂದು ಹೇಳಿದನು.


ಆಗ ದಾವೀದನು ತಾನು ತೆಗೆದುಕೊಂಡು ಬಂದದ್ದನ್ನು, ವಸ್ತುಗಳನ್ನು ಕಾಯುವವನ ಕೈಯಲ್ಲಿ ಇಟ್ಟುಬಿಟ್ಟು, ರಣರಂಗಕ್ಕೆ ಓಡಿಹೋಗಿ, ತನ್ನ ಸಹೋದರರ ಬಳಿಗೆ ಬಂದು, ಯೋಗಕ್ಷೇಮ ವಿಚಾರಿಸಿದನು.


ಆಗ ಯೇಹುವು ತನ್ನ ಯಜಮಾನನ ಸೇವಕರ ಬಳಿಗೆ ಬಂದನು. ಅವರು ಅವನಿಗೆ, “ಶುಭವೋ? ಆ ಹುಚ್ಚನು ನಿನ್ನ ಬಳಿಗೆ ಬಂದದ್ದೇನು?” ಎಂದರು. ಅವನು ಅವರಿಗೆ, “ಆ ಮನುಷ್ಯನನ್ನೂ ಅವನ ಮಾತನ್ನೂ ನೀವು ಬಲ್ಲಿರಿ,” ಎಂದನು.


ಯೇಹುವು ರಥದ ಮೇಲೆ ಏರಿ ಇಜ್ರೆಯೇಲಿಗೆ ಹೋದನು. ಏಕೆಂದರೆ ಯೋರಾಮನು ಅಲ್ಲಿ ವಿಶ್ರಾಂತಿಯಲ್ಲಿದ್ದನು. ಇದಲ್ಲದೆ ಯೋರಾಮನನ್ನು ನೋಡುವುದಕ್ಕೆ ಯೆಹೂದದ ಅರಸನಾದ ಅಹಜ್ಯನು ಅಲ್ಲಿಗೆ ಬಂದಿದ್ದನು.


ಒಬ್ಬ ರಾಹುತನು ಯೇಹುವನ್ನು ಎದುರುಗೊಂಡು, “ಅರಸನು, ‘ಶುಭವಾರ್ತೆ ಉಂಟೋ?’ ಎಂದು ಕೇಳುತ್ತಾನೆ,” ಎನ್ನಲು ಅವನು, “ಶುಭವಾರ್ತೆಯಿಂದ ನಿನಗೇನು? ನನ್ನ ಹಿಂದೆ ಬಾ,” ಎಂದನು. ಕಾವಲುಗಾರನು ಅರಸನಿಗೆ, “ರಾಹುತನು ಆ ಗುಂಪನ್ನು ಮುಟ್ಟಿದನು, ಆದರೆ ತಿರುಗಿ ಬರುವುದು ಕಾಣಿಸುವುದಿಲ್ಲ,” ಎಂದು ತಿಳಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು