2 ಅರಸುಗಳು 9:24 - ಕನ್ನಡ ಸಮಕಾಲಿಕ ಅನುವಾದ24 ಆದರೆ ಯೇಹುವು ಪೂರ್ಣಬಲದಿಂದ ಬಿಲ್ಲನ್ನು ಬಗ್ಗಿಸಿ ತನ್ನ ಕೈಯಿಂದ ಯೋರಾಮನನ್ನು ಅವನ ತೋಳುಗಳ ನಡುವೆ ಹೊಡೆದನು. ಬಾಣ ಹೃದಯದಲ್ಲಿ ತೂರಿ ಹೊರಟಿತು. ಅವನು ರಥದಲ್ಲಿ ಕೆಳಗೆ ಮುದುರಿಕೊಂಡು ಬಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಯೇಹುವು ಪೂರ್ಣಬಲದಿಂದ ಬಿಲ್ಲನ್ನು ಬೊಗ್ಗಿಸಿ ಯೋರಾಮನ ಬೆನ್ನಿಗೆ ಬಾಣವನ್ನೆಸೆದನು. ಅದು ಅವನ ಹೃದಯದಿಂದ ಹೊರಗೆ ಬಂದಿತು. ಅವನು ಮುದುರಿ ರಥದಲ್ಲಿ ಬಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಯೇಹುವು ಪೂರ್ಣಬಲದಿಂದ ಬಿಲ್ಲನ್ನು ಬಗ್ಗಿಸಿ ಯೋರಾಮನ ಬೆನ್ನಿಗೆ ಬಾಣವನ್ನೆಸೆದನು; ಅದು ಅವನ ಹೃದಯದಿಂದ ಹೊರಗೆ ಬಂದಿತು. ಅವನು ರಥದಲ್ಲೇ ಕುಸಿದುಬಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಯೇಹುವು ಪೂರ್ಣಬಲದಿಂದ ಬಿಲ್ಲನ್ನು ಬೊಗ್ಗಿಸಿ ಯೋರಾಮನ ಬೆನ್ನಿಗೆ ಬಾಣವನ್ನೆಸೆದನು; ಅದು ಅವನ ಹೃದಯದಿಂದ ಹೊರಗೆ ಬಂದಿತು. ಅವನು ಮುದುರಿಕೊಂಡು ರಥದಲ್ಲಿ ಬಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಆದರೆ ಯೇಹು ತನ್ನ ಬಿಲ್ಲನ್ನು ಸೆಳೆದು, ಶಕ್ತಿಯನ್ನೆಲ್ಲ ಒಗ್ಗೂಡಿಸಿ ಯೋರಾಮನ ಬೆನ್ನಿಗೆ ಬಾಣದಿಂದ ಹೊಡೆದನು. ಬಾಣವು ಯೋರಾಮನ ಹೃದಯವನ್ನು ಛೇದಿಸಿತು. ಯೋರಾಮನು ತನ್ನ ರಥದಲ್ಲಿಯೇ ಸತ್ತುಬಿದ್ದನು. ಅಧ್ಯಾಯವನ್ನು ನೋಡಿ |