2 ಅರಸುಗಳು 9:26 - ಕನ್ನಡ ಸಮಕಾಲಿಕ ಅನುವಾದ26 ನಾಬೋತನ ರಕ್ತವನ್ನೂ, ಅವನ ಪುತ್ರರ ರಕ್ತವನ್ನೂ ನಿನ್ನೆ ನಾನು ನಿಶ್ಚಯವಾಗಿ ನೋಡಿದೆನಲ್ಲಾ, ಎಂದು ಯೆಹೋವ ದೇವರು ಹೇಳುತ್ತಾರೆ. ಇದಲ್ಲದೆ ಇದೇ ಹೊಲದಲ್ಲಿ ನಿನಗೆ ಮುಯ್ಯಿಗೆ ಮುಯ್ಯಿ ಕೊಡುವೆನೆಂದು ಯೆಹೋವ ದೇವರು ಹೇಳುತ್ತಾರೆ. ಆದ್ದರಿಂದ ಯೆಹೋವ ದೇವರ ವಾಕ್ಯದ ಪ್ರಕಾರ ಎತ್ತಿಕೊಂಡು ಆ ಹೊಲದಲ್ಲಿ ಅವನನ್ನು ಹಾಕಿಬಿಡು,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಯೆಹೋವನು ಅಹಾಬನಿಗೆ, ‘ನನ್ನ ಮಾತನ್ನು ಕೇಳು, ನೀನು ನಿನ್ನೆ ಸುರಿಸಿದ ನಾಬೋತನ ಮತ್ತು ಅವನ ಮಕ್ಕಳ ರಕ್ತವನ್ನು ನಿಶ್ಚಯವಾಗಿ ನೋಡಿದ್ದೇನೆ. ನೀನು ಅವರ ರಕ್ತವನ್ನು ಸುರಿಸಿದ ಹೊಲದಲ್ಲೇ ನಿನಗೆ ಮುಯ್ಯಿತೀರಿಸುವೆನು’ ಎಂದು ಪ್ರವಾದಿಯಿಂದ ಹೇಳಿಸಿದ್ದು ನಿನಗೆ ನೆನಪಿರುತ್ತದಲ್ಲಾ, ಯೆಹೋವನ ಆ ಮಾತು ನೆರವೇರುವಂತೆ ಇವನ ಶವವನ್ನು ಆ ಹೊಲದಲ್ಲಿ ಬಿಸಾಡು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಅಹಾಬನಿಗೆ ಸರ್ವೇಶ್ವರ, ‘ನನ್ನ ಮಾತನ್ನು ಕೇಳು, ನೀನು ನಿನ್ನೆ ಸುರಿಸಿದ ನಾಬೋತನ ಮತ್ತು ಅವನ ಮಕ್ಕಳ ರಕ್ತವನ್ನು ನಿಶ್ಚಯವಾಗಿ ನೋಡಿದ್ದೇನೆ. ನೀನು ಅವರ ರಕ್ತವನ್ನು ಸುರಿಸಿದ ಹೊಲದಲ್ಲೇ ನಿನಗೆ ಮುಯ್ಯಿತೀರಿಸುವೆನು,’ ಎಂದು ಪ್ರವಾದಿಯಿಂದ ಹೇಳಿಸಿದ್ದು ನಿನಗೆ ನೆನಪಿರುತ್ತದಲ್ಲವೆ?’ ಎಂದಿದ್ದರು. ಸರ್ವೇಶ್ವರನ ಆ ನುಡಿ ನೆರವೇರುವಂತೆ ಇವನ ಶವವನ್ನು ಆ ಹೊಲದಲ್ಲೇ ಹಾಕಿಬಿಡು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ನನ್ನ ಮಾತನ್ನು ಕೇಳು, ನೀನು ನಿನ್ನೆ ಸುರಿಸಿದ ನಾಬೋತನ ಮತ್ತು ಅವನ ಮಕ್ಕಳ ರಕ್ತವನ್ನು ನಿಶ್ಚಯವಾಗಿ ನೋಡಿದ್ದೇನೆ. ನೀನು ಅವರ ರಕ್ತವನ್ನು ಸುರಿಸಿದ ಹೊಲದಲ್ಲೇ ನಿನಗೆ ಮುಯ್ಯಿತೀರಿಸುವೆನು ಎಂದು ಪ್ರವಾದಿಯಿಂದ ಹೇಳಿಸಿದ್ದು ನಿನಗೆ ನೆನಪಿರುತ್ತದಲ್ಲಾ; ಯೆಹೋವನ ಆ ಮಾತು ನೆರವೇರುವಂತೆ ಇವನ ಶವವನ್ನು ಆ ಹೊಲದಲ್ಲಿ ಹಾಕಿಬಿಡು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಯೆಹೋವನು, ‘ನೀನು ನಿನ್ನೆ ನಾಬೋತನ ಮತ್ತು ಅವನ ಮಕ್ಕಳ ರಕ್ತವನ್ನು ಯಾವ ಹೊಲದಲ್ಲಿ ಸುರಿಸಿದೆಯೋ ಅದೇ ಹೊಲದಲ್ಲಿ ನಿನಗೆ ಮುಯ್ಯಿ ತೀರಿಸುವೆನು’ ಎಂದು ಪ್ರವಾದಿಯಿಂದ ಹೇಳಿಸಿದ್ದು ನಿನಗೆ ನೆನಪಿರುವುದಲ್ಲವೇ? ಯೆಹೋವನ ಮಾತು ನೆರವೇರುವಂತೆ ಯೋರಾಮನ ದೇಹವನ್ನು ತೆಗೆದು ಅದೇ ಹೊಲದಲ್ಲಿ ಎಸೆದುಬಿಡು!” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |
ಯೋವಾಷನು ತೀವ್ರ ಗಾಯಗೊಂಡು ಬಿದ್ದಿರುವಾಗ, ಅರಾಮೀಯರು ಅವನನ್ನು ಬಿಟ್ಟುಹೋದರು. ಅವರು ಹೋದ ತರುವಾಯ ಯಾಜಕನಾದ ಯೆಹೋಯಾದಾವನ ಮಕ್ಕಳ ರಕ್ತಾಪರಾಧದ ನಿಮಿತ್ತವಾಗಿ ಯೋವಾಷನ ಸ್ವಂತ ಸೇವಕರೇ ಅವನಿಗೆ ವಿರೋಧವಾಗಿ ಒಳಸಂಚುಮಾಡಿ, ಅವನ ಮಂಚದ ಮೇಲೆಯೇ ಅವನನ್ನು ಕೊಂದುಹಾಕಿದರು. ಅವರು ಯೋವಾಷನನ್ನು ದಾವೀದನ ಪಟ್ಟಣದಲ್ಲಿ ಸಮಾಧಿಮಾಡಿದರು. ಆದರೆ ಅರಸರ ಸಮಾಧಿಯಲ್ಲಿ ಅವನನ್ನು ಸಮಾಧಿಮಾಡಲಿಲ್ಲ.