Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 9:27 - ಕನ್ನಡ ಸಮಕಾಲಿಕ ಅನುವಾದ

27 ಯೆಹೂದದ ಅರಸನಾದ ಅಹಜ್ಯನು ಇದನ್ನೆಲ್ಲಾ ಕಂಡು, ಬೇತ್ ಹಗ್ಗನಿನ ಮಾರ್ಗವಾಗಿ ಓಡಿಹೋದನು. ಯೇಹುವು ಅವನ ಹಿಂದೆ ಹೋಗಿ ರಥದಲ್ಲಿ, “ಅವನನ್ನು ಸಹ ಸಂಹರಿಸಿರಿ,” ಎಂದನು. ಇಬ್ಲೆಯಾಮಿನ ಬಳಿಯಲ್ಲಿರುವ ಗೂರ್ ಎಂಬ ಸ್ಥಳಕ್ಕೆ ಏರಿಹೋಗುವ ಅಹಜ್ಯನನ್ನು ಮಾರ್ಗದಲ್ಲಿ ರಥದಲ್ಲಿ ಹೊಡೆದರು. ಅವನು ಮೆಗಿದ್ದೋವಿಗೆ ಓಡಿಹೋಗಿ ಅಲ್ಲಿ ಸತ್ತುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಯೆಹೂದ್ಯರ ಅರಸನಾದ ಅಹಜ್ಯನು ಇದನ್ನೆಲ್ಲಾ ಕಂಡು ಬೇತಹಗ್ಗನಿನ ಮಾರ್ಗವಾಗಿ ಓಡಿಹೋದನು. ಯೇಹುವು ಅವನನ್ನು ಹಿಂದಟ್ಟಿ, “ಅವನನ್ನೂ ರಥದಲ್ಲಿಯೇ ಹೊಡೆಯಿರಿ” ಎಂದು ಕೂಗಲು, ಅವನ ಜನರು ಇಬ್ಲೆಯಾಮಿನ ಬಳಿಯಲ್ಲಿರುವ ಗೂರ್ ಗಟ್ಟದ ಮೇಲೆ ಅವನನ್ನು ಗಾಯಪಡಿಸಿದರು. ಅಹಜ್ಯನು ಮೆಗಿದ್ದೋವಿಗೆ ಓಡಿಹೋಗಿ ಅಲ್ಲಿ ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಜುದೇಯದ ಅರಸನಾದ ಅಹಜ್ಯನು ಇದನ್ನೆಲ್ಲಾ ಕಂಡು ಬೇತ್‍ಹಗ್ಗನಿನ ಮಾರ್ಗವಾಗಿ ಓಡಿಹೋದನು. ಯೇಹುವು ಅವನನ್ನು ಹಿಂದಟ್ಟಿ, “ಅವನನ್ನೂ ರಥದಲ್ಲಿಯೇ ಹೊಡೆಯಿರಿ,” ಎಂದು ಕೂಗಲು ಅವನ ಜನರು ಇಬ್ಲೆಯಾಮಿನ ಬಳಿಯಲ್ಲಿರುವ ಗೂರ್ ಗಟ್ಟದ ಮೇಲೆ ಅವನನ್ನು ಗಾಯಪಡಿಸಿದರು. ಅಹಜ್ಯನು ಮೆಗಿದ್ದೋವಿಗೆ ಓಡಿಹೋಗಿ ಅಲ್ಲಿ ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಯೆಹೂದ್ಯರ ಅರಸನಾದ ಅಹಜ್ಯನು ಇದನ್ನೆಲ್ಲಾ ಕಂಡು ಬೇತ್‍ಹಗ್ಗನಿನ ಮಾರ್ಗವಾಗಿ ಓಡಿಹೋದನು. ಯೇಹುವು ಅವನನ್ನು ಹಿಂದಟ್ಟಿ - ಅವನನ್ನೂ ರಥದಲ್ಲಿಯೇ ಹೊಡಿಯಿರಿ ಎಂದು ಕೂಗಲು ಅವನ ಜನರು ಇಬ್ಲೆಯಾವಿುನ ಬಳಿಯಲ್ಲಿರುವ ಗೂರ್ ಗಟ್ಟದ ಮೇಲೆ ಅವನನ್ನು ಗಾಯಪಡಿಸಿದರು. ಅಹಜ್ಯನು ಮೆಗಿದ್ದೋವಿಗೆ ಓಡಿಹೋಗಿ ಅಲ್ಲಿ ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಯೆಹೂದದ ರಾಜನಾದ ಅಹಜ್ಯನು ಇದನ್ನು ಕಂಡು ತೋಟದ ಮನೆಯ ಮೂಲಕ ಓಡಿಹೋದನು. ಯೇಹು ಅವನನ್ನು ಹಿಂಬಾಲಿಸಿಕೊಂಡು ಹೋಗಿ, “ಅಹಜ್ಯನನ್ನೂ ಅವನ ರಥದಲ್ಲಿಯೇ ಹೊಡೆಯಿರಿ!” ಎಂದು ಹೇಳಿದನು. ಯೇಹುವಿನ ಜನರು ಅಹಜ್ಯನನ್ನು ಇಬ್ಲೆಯಾಮಿನ ಬಳಿಯಿರುವ ಗೂರ್‌ನಲ್ಲಿ ಹೊಡೆದುಹಾಕಿದರು. ಅಹಜ್ಯನು ಮೆಗಿದ್ದೋವಿಗೆ ಓಡಿಹೋದರೂ ಅಲ್ಲಿ ಸತ್ತುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 9:27
17 ತಿಳಿವುಗಳ ಹೋಲಿಕೆ  

ಮನಸ್ಸೆಯ ಗೋತ್ರದವರು ಬೇತ್ ಷೆಯಾನರನ್ನೂ, ಅವರ ಊರುಗಳವರನ್ನೂ; ತಾನಕದವರನ್ನೂ, ಅವರ ಊರುಗಳವರನ್ನೂ; ದೋರಿನವರನ್ನೂ, ಅವರ ಊರುಗಳವರನ್ನೂ; ಇಬ್ಲೆಯಾಮಿನವರನ್ನೂ, ಅವರ ಊರುಗಳವರನ್ನೂ, ಮೆಗಿದ್ದೋನಿನವರನ್ನೂ, ಅವರ ಊರುಗಳವರನ್ನೂ ಹೊರಡಿಸಿಬಿಡಲಿಲ್ಲ. ಕಾನಾನ್ಯರಾದ ಇವರು ಆ ದೇಶದಲ್ಲಿ ವಾಸಿಸಬೇಕೆಂದಿದ್ದರು.


ಇಸ್ಸಾಕಾರನ ಮಧ್ಯದಲ್ಲಿಯೂ ಆಶೇರನ ಮಧ್ಯದಲ್ಲಿಯೂ ಇರುವ ಸೀಮೆಗಳಾದ ಬೇತ್ ಷೆಯಾನ, ಅದರ ಗ್ರಾಮಗಳೂ ಇಬ್ಲೆಯಾಮ್ ಅದರ ಗ್ರಾಮಗಳೂ ದೋರ್ ಎಂಬ ಪಟ್ಟಣಗಳೂ ಅವುಗಳ ಗ್ರಾಮಗಳೂ ಎಂದೋರ್, ತಾನಕ್, ಮೆಗಿದ್ದೋ ಎಂಬ ಪಟ್ಟಣಗಳೂ ಅವುಗಳ ಗ್ರಾಮಗಳೂ ಮನಸ್ಸೆಗೆ ಸೇರಿದವು. ಮೂರನೆಯ ಊರು ನಾಫೋತ್ ಆಗಿರುತ್ತದೆ.


ಆದ್ದರಿಂದ, “ಅವರ ನಡುವೆಯಿಂದ ಹೊರಟುಬಂದು ಪ್ರತ್ಯೇಕವಾಗಿರಿ. ಅಶುದ್ಧವಾದ ಯಾವುದನ್ನೂ ಮುಟ್ಟದಿರಿ, ನಾನು ನಿಮ್ಮನ್ನು ಸ್ವೀಕರಿಸುವೆನು ಎಂದು ಕರ್ತದೇವರು ಹೇಳುತ್ತಾರೆ.”


ಜ್ಞಾನವಂತರ ಜೊತೆಗೆ ನಡೆಯುವವನು ಜ್ಞಾನಿಯಾಗುವನು; ಆದರೆ ಮೂರ್ಖರ ಜೊತೆಗಾರನು ಸಂಕಟಪಡುವನು.


ಆದ್ದರಿಂದ ಅರಸನಾದ ಯೋರಾಮನು ಅರಾಮ್ಯ ದೇಶದ ಅರಸನಾದ ಹಜಾಯೇಲನ ಮೇಲೆ ಯುದ್ಧಮಾಡಿದಾಗ, ರಾಮೋತಿನಲ್ಲಿ ಅರಾಮ್ಯರು ತನ್ನನ್ನು ಹೊಡೆದ ಗಾಯಗಳನ್ನು ಗುಣಪಡಿಸಿಕೊಳ್ಳುವುದಕ್ಕೆ ಇಜ್ರೆಯೇಲ್ ಪಟ್ಟಣಕ್ಕೆ ತಿರುಗಿಹೋದನು. ಆಗ ಅಹಾಬನ ಮಗ ಯೋರಾಮನು ಇಜ್ರೆಯೇಲಿನಲ್ಲಿ ಅಸ್ವಸ್ಥನಾಗಿದ್ದುದರಿಂದ ಯೆಹೂದದ ಅರಸನಾಗಿರುವ ಯೆಹೋರಾಮನ ಮಗ ಅಹಜ್ಯನು ಅವನನ್ನು ನೋಡಲು ಹೋದನು.


ಅಹಾಬನು ನಾಬೋತನಿಗೆ, “ತೋಟವು ನನ್ನ ಮನೆಯ ಬಳಿಯಲ್ಲಿ ಇರುವುದರಿಂದ ಅದು ನನಗೆ ಕಾಯಿಪಲ್ಯದ ತೋಟವಾಗುವ ಹಾಗೆ ಅದನ್ನು ನನಗೆ ಕೊಡು. ನಾನು ಅದಕ್ಕೆ ಬದಲಾಗಿ ಅದಕ್ಕಿಂತ ಒಳ್ಳೆಯ ದ್ರಾಕ್ಷಿತೋಟವನ್ನು ನಿನಗೆ ಕೊಡುವೆನು. ಇಲ್ಲವೆ ನಿನ್ನ ದೃಷ್ಟಿಗೆ ಒಳ್ಳೆಯದಾಗಿದ್ದರೆ, ಹಣದಲ್ಲಿ ಅದರ ಬೆಲೆಯನ್ನು ಕೊಡುವೆನು,” ಎಂದನು.


ಅಹೀಲೂದನ ಮಗ ಬಾಣಾ ಎಂಬವನು ತಾನಕ್, ಮೆಗಿದ್ದೋ, ಬೇತ್ ಷೆಯಾನಿನ ಎಲ್ಲಾ ಕಡೆಗಳಲ್ಲಿಯೂ ಆಳಿಕೆಮಾಡುತ್ತಿದ್ದನು. ಬೇತ್ ಶಾನ್ ಚಾರೆತಾನಿನ ಪಕ್ಕದಲ್ಲಿದ್ದ ಇಜ್ರೆಯೇಲ್ ಎಂಬ ಪಟ್ಟಣದ ಕೆಳಗಿತ್ತು. ಅವನ ಪ್ರಾಂತವು ಬೇತ್ ಷೆಯಾನಿನಿಂದ ಆಬೇಲ್ ಮೆಹೋಲದವರೆಗೆ ಯೊಕ್ಮೆಯಾಮಿನಲ್ಲಿ ಅಂತ್ಯಗೊಂಡಿತ್ತು.


“ಅರಸರು ಬಂದು ಯುದ್ಧಮಾಡಿದರು; ಆಗ ಕಾನಾನ್ಯರ ಅರಸರು ಮೆಗಿದ್ದೋನಿನ ಜಲ ಸಮೀಪವಾದ ತಾನಕದಲ್ಲಿ ಯುದ್ಧಮಾಡಿದರು. ಅವರು ಬೆಳ್ಳಿ ದ್ರವ್ಯಗಳನ್ನು ತೆಗೆದುಕೊಳ್ಳಲಿಲ್ಲ.


ಅವನು ಸಮೂಹದವರಿಗೆ, “ನೀವು ಈ ದುಷ್ಟ ಮನುಷ್ಯರ ಡೇರೆಗಳ ಬಳಿಯಿಂದ ತೊಲಗಿಹೋಗಿರಿ. ನೀವು ಅವರ ಎಲ್ಲಾ ಪಾಪಗಳ ದೆಸೆಯಿಂದ ನಾಶವಾಗದಂತೆ ಅವರಿಗಿರುವ ಯಾವುದನ್ನು ಮುಟ್ಟಬೇಡಿರಿ,” ಎಂದನು.


ಆದರೆ ಅವರು ತುಂಬಾ ಭಯಪಟ್ಟು, “ಇಬ್ಬರೂ ಅರಸರು ಅವನ ಮುಂದೆ ನಿಲ್ಲಲು ಸಾಧ್ಯವಾಗದಿದ್ದಾಗ, ನಾವು ನಿಲ್ಲುವುದು ಹೇಗೆ?” ಎಂದರು.


ಅಹಜ್ಯನ ತಾಯಿಯಾದ ಅತಲ್ಯಳು ತನ್ನ ಮಗನು ಸತ್ತು ಹೋದದ್ದನ್ನು ಕಂಡಾಗ, ಅವಳು ಎದ್ದು ರಾಜಸಂತಾನದವರನ್ನೆಲ್ಲಾ ನಾಶಮಾಡಲು ಆರಂಭಿಸಿದಳು.


ಯೇಹುವಿನ ಆಳ್ವಿಕೆಯ ಏಳನೆಯ ವರ್ಷದಲ್ಲಿ ಯೋವಾಷನು ಅರಸನಾಗಿ, ಯೆರೂಸಲೇಮಿನಲ್ಲಿ ನಲವತ್ತು ವರ್ಷ ಆಳಿದನು. ಅವನ ತಾಯಿಯ ಹೆಸರು ಚಿಬ್ಯಳು. ಅವಳು ಬೇರ್ಷೆಬ ಊರಿನವಳು.


ಅವನ ಸೇವಕರಾದ ಶಿಮೆಯಾತನ ಮಗ ಯೋಜಾಬಾದ್ ಮತ್ತು ಶೋಮೇರನ ಮಗ ಯೆಹೋಜಾಬಾದ್ ಎಂಬವರು ಅರಸನನ್ನು ಕೊಂದರು. ಯೋವಾಷನ ಜನರು ಅವನ ಶವವನ್ನು ದಾವೀದನ ಪಟ್ಟಣದಲ್ಲಿ ಅವನ ಪಿತೃಗಳ ಬಳಿಯಲ್ಲಿ ಸಮಾಧಿಮಾಡಿದರು. ಅವನ ಮಗ ಅಮಚ್ಯನು ಅವನಿಗೆ ಬದಲಾಗಿ ಅರಸನಾದನು.


ಯೆರೂಸಲೇಮಿನವರು ಅಮಚ್ಯನ ವಿರೋಧವಾಗಿ ಒಳಸಂಚು ಮಾಡಿದ್ದರಿಂದ, ಅವನು ಲಾಕೀಷಿಗೆ ಓಡಿಹೋದನು. ಆದರೆ ಅವರು ಅವನ ಹಿಂದೆ ಲಾಕೀಷಿಗೆ ಜನರನ್ನು ಕಳುಹಿಸಿ, ಅಲ್ಲಿ ಅವನನ್ನು ಕೊಂದುಹಾಕಿದರು.


ಆಮೋನನ ಸೇವಕರು ಅವನ ವಿರುದ್ಧ ಒಳಸಂಚುಮಾಡಿ, ಅರಮನೆಯಲ್ಲಿಯೇ ಅವನನ್ನು ಕೊಂದುಹಾಕಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು